ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Assembly Election 2026 LIVE Counting and Results: ಪಂಚ ರಾಜ್ಯ ಚುನಾವಣಾ ಫಲಿತಾಂಶ; ತಮಿಳುನಾಡಿನಲ್ಲಿ ಟಿವಿಕೆ ಕಮಾಲ್‌, ಕೇರಳಂನಲ್ಲಿ ಕೆಂಪು ಕೋಟೆ ಛಿದ್ರ, ಪಶ್ಚಿಮ ಬಂಗಾಳದಲ್ಲಿ ಟಿಎಂಸಿಗೆ ಆಘಾತ

Bagalkot and Davangere By Election and 5 State Assembly Election 2026 Live Counting and Updates Online: ಪಂಚ ವಿಧಾನಸಭಾ ಚುನಾವಣೆಗಳ ಫಲಿತಾಂಶ ಇಂದು (May 4) ರಂದು ಪ್ರಕಟಗೊಳ್ಳಲಿದೆ. ಸೋಮವಾರ ಸಂಜೆಯ ವೇಳೆಗೆ ಸಂಪೂರ್ಣ ಫಲಿತಾಂಶದ ನಿರೀಕ್ಷೆಯಿದ್ದು, ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಾರಂಭವಾಗುತ್ತದೆ.

ಪಂಚ ರಾಜ್ಯ ಚುನಾವಣಾ ಫಲಿತಾಂಶ

ಪಂಚ ರಾಜ್ಯ ಚುನಾವಣಾ ಫಲಿತಾಂಶ -

Vishakha Bhat Heggar
Vishakha Bhat Heggar May 4, 2026 6:48 AM

ಅಸ್ಸಾಂ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ಫಲಿತಾಂಶ ಇಂದು (May 4) ರಂದು ಪ್ರಕಟಗೊಳ್ಳಲಿದೆ. ಸೋಮವಾರ ಸಂಜೆಯ ವೇಳೆಗೆ ಸಂಪೂರ್ಣ ಫಲಿತಾಂಶದ ನಿರೀಕ್ಷೆಯಿದ್ದು, ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಾರಂಭವಾಗುತ್ತದೆ. ಮೊದಲು ಅಂಚೆ ಮತಗಳ ಎಣಿಕೆ ನಡೆಸಿ ಬಳಿಕ ಇವಿಎಂಗಳಲ್ಲಿ ದಾಖಲಾಗಿರುವ ಮತಗಳನ್ನು ಎಣಿಕೆ ಮಾಡುವ ಪ್ರಮಾಣಿತ ಪ್ರಕ್ರಿಯೆಯನ್ನು ನಡೆಯುತ್ತದೆ. ಸದ್ಯ ಮತ ಎಣಿಕೆ ಕೇಂದ್ರದತ್ತ ಬಿಗಿ ಭದ್ರತೆಯನ್ನು ಒದಗಿಸಲಾಗಿದೆ. ಇನ್ನು ಕಾರ್ನಾಟಕದ ದಾವಣಗೆರೆ ಹಾಗೂ ಬಾಲಕೋಟೆಯ ಉಪ ಚುನಾವಣೆಯ ಫಲಿತಾಂಶವೂ ಇಂದು ಹೊರ ಬೀಳಲಿದೆ. ವಿಧಾನಸಭಾ ಚುನಾವಣೆಯ ಅಧಿಕೃತ ಫಲಿತಾಂಶಗಳನ್ನು ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ (eci.gov.in) ವೀಕ್ಷಿಸಬಹುದು. ಪಂಚ ರಾಜ್ಯಗಳ ಫಲಿತಾಂಶದಲ್ಲಿ ಬಂಗಾಳದ ರಿಸಲ್ಟ್‌ ಹೆಚ್ಚು ಕುತೂಹಲ ಕೆರಳಿಸಿದೆ. ಆಡಳಿತಾರೂಢ ಟಿಎಂಸಿ ಹಾಗೂ ಬಿಜೆಪಿ ನಡುವೆ ಜಿದ್ದಾಜಿದ್ದಿನ ಫೈಟ್‌ ಏರ್ಪಟ್ಟಿತ್ತು. ಎಕ್ಸಿಟ್ ಪೋಲ್ ವರದಿ ಪ್ರಕಾರ ಈ ಬಾರಿ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಲಾಗಿದೆ. ಹೀಗಾಗಿ ಫಲಿತಾಂಶ ಭಾರೀ ಕುತೂಹಲ ಕೆರಳಿಸಿದೆ.

Live News
May 4, 2026, 11:06 a.m.

ಕೇರಳಂನಲ್ಲಿ ಯುಡಿಎಫ್‌ ಸರ್ಕಾರ

ಕೇರಳಂನಲ್ಲಿ ಆಡಳಿತರೂಢ, ಎಡಪಕ್ಷಗಳ ನೇತೃತ್ವದ ಎಲ್‌ಡಿಎಫ್‌ ಹಿನ್ನಡೆಯಲ್ಲಿದ್ದು, ಕಾಂಗ್ರೆಸ್‌ ನೇತ್ವತ್ವದ ಯುಡಿಎಫ್‌ ಮುನ್ನಡೆಯಲ್ಲಿದೆ. ಇಲ್ಲಿ ಯುಡಿಎಫ್‌ 92, ಎಲ್‌ಡಿಎಫ್‌ 46 ಮತ್ತು ಎನ್‌ಡಿಎ 2 ಕಡೆಗಳಲ್ಲಿ ಮುನ್ನಡೆಯಲ್ಲಿದೆ.

May 4, 2026, 10:27 a.m.

ಎರಡೂ ಕಡೆಗಳಲ್ಲಿ ವಿಜಯ್‌ ಮುನ್ನಡೆ

ತಮಿಳುನಾಡಿನಲ್ಲಿ ಟಿವಿಕೆ ಅಚ್ಚರಿ ಫಲಿತಾಂಶ ದಾಖಲಿಸುತ್ತಿದ್ದು, ಮುನ್ನಡೆ ಸಾಧಿಸಿದೆ. ಟಿವಿಕೆ ಸಂಸ್ಥಾಪಕ, ನಟ ದಳಪತಿ ಪೆರಂಬೂರ್‌ ಮತ್ತು ತಿರುಚಿರಪಳ್ಳಿಯಲ್ಲಿ ಮುಂದಿದ್ದಾರೆ.

May 4, 2026, 9:48 a.m.

ಬಾಗಲಕೋಟೆಯಲ್ಲಿ ಮೇಟಿ ಮುನ್ನಡೆ

ಬಾಗಲಕೋಟೆ ನಾಲ್ಕನೆ ಸುತ್ತಿನಲ್ಲಿ ಮತ ಎಣಿಕೆ ಪೂರ್ಣಗೊಂಡಿದ್ದು ಕಾಂಗ್ರೆಸ್ ಭಾರಿ ಮುನ್ನಡೆ ಕಾಯ್ದುಕೊಂಡಿದೆ. ‌
ಕಾಂಗ್ರೆಸ್ - 21835
ಬಿಜೆಪಿ - 10968 ಮತಗಳನ್ನು ಗಳಿಸಿದೆ. 10,867 ಮತಗಳಿಂದ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಮುನ್ನಡೆ ಸಾಧಿಸಿದ್ದಾರೆ.

May 4, 2026, 9:48 a.m.

ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್‌ಗೆ ಹಿನ್ನಡೆ

ದಾವಣಗೆರೆಯಲ್ಲಿ ಮೊದಲ ಸುತ್ತು ಮುಕ್ತಾಯಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್‌ ದಾಸಕರಿಯಪ್ಪ ಮುನ್ನಡೆ ಕಾಯ್ದುಕೊಂಡಿದ್ದು, ಸಮರ್ಥ ಶಾಮನೂರು ಹಿನ್ನಡೆಯಲ್ಲಿದ್ದಾರೆ. ಸಮರ್ಥ್ ಶ್ಯಾಮನೂರು, 3134 ಶ್ರೀನಿವಾಸ್ ದಾಸ್ ಕರಿಯಪ್ಪ ಮತಗಳಿಸಿದ್ದಾರೆ.

May 4, 2026, 9:30 a.m.

ತಮಿಳುನಾಡಿನಲ್ಲಿ ಟಿವಿಕೆ ಕಮಾಲ್‌

ತಮಿಳುನಾಡು ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಅಚ್ಚರಿ ಬೆಳವಣಿಗೆ ನಡೆಯುತ್ತಿದೆ. ವಿಜಯ್‌ ನೇತೃತ್ವದ ಟಿವಿಕೆ ಪಕ್ಷವು ಬರೋಬ್ಬರಿ 76 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಆಡಳಾರೂಢ ಎಐಡಿಎಂಕೆ 59 ಹಾಗೂ ಡಿಎಂಕೆ 54 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.

May 4, 2026, 8:52 a.m.

ಎರಡೂ ಕ್ಷೇತ್ರದಲ್ಲಿಯೂ ಟಿವಿಕೆ ವಿಜಯ್‌ಗೆ ಹಿನ್ನಡೆ

ತಮಿಳುನಾಡಿನಲ್ಲಿ 56 ಕ್ಷೇತ್ರದಲ್ಲಿ ಡಿಎಂಕೆ ಮುಂದಿದ್ದರೆ, 26 ಕ್ಷೇತ್ರಗಳಲ್ಲಿ ಎಐಎಡಿಎಂ ಮುಂದಿದೆ. ಇನ್ನು ಎರಡು ಕ್ಷೇತ್ರಗಳಿಂದ ಟಿವಿಕೆ ಪಕ್ಷದಿಂದ ಸ್ಪರ್ಧಿಸಿದ್ದ ವಿಜಯ್‌ ಹಿನ್ನಡೆಯಲ್ಲಿದ್ದಾರೆ.

May 4, 2026, 8:39 a.m.

ಭವಾನಿಪುರದಲ್ಲಿ ಮಮತಾ ಬ್ಯಾನರ್ಜಿಗೆ ಹಿನ್ನಡೆ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಹಾಗೂ ಟಿಎಂಸಿ ನಡುವೆ ಜಿದ್ದಾ ಜಿದ್ದಿನ ಸ್ಪರ್ಧೆ ಏರ್ಪಟ್ಟಿದ್ದು, 106 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಬಿಜೆಪಿ 100 ಸ್ಥಾನಗಳಲ್ಲಿ ಮುಂದಿದೆ. ಇನ್ನು ಭವಾನಿಪುರದಲ್ಲಿ ಮಮತಾ ಬ್ಯಾನರ್ಜಿ ಹಿನ್ನಡೆಯಲ್ಲಿದ್ದು, ಬಿಜೆಪಿಯ ಸುವೇಂದು ಅಧಿಕಾರಿ ಮುನ್ನಡೆ ಸಾಧಿಸಿದ್ದಾರೆ.

May 4, 2026, 8:35 a.m.

ಕೇರಳದಲ್ಲಿ ಬಿಜೆಪಿ!

ಕೇರಳದಲ್ಲಿ ಮೊದಲ ಬಾರಿಗೆ ಬಿಜೆಪಿ ಎರಡು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಮಂಜೇಶ್ವರದಲ್ಲಿ ಕೆ. ಸುರೇಂದ್ರನ್ ಆರಂಭಿಕ ಹಂತದಲ್ಲಿ ಮುನ್ನಡೆಯಲ್ಲಿದ್ದಾರೆ. ಕಾಸರಗೋಡು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅಶ್ವಿನಿ ಮುಂದಿದ್ದಾರೆ.

May 4, 2026, 8:08 a.m.

ಮತ ಎಣಿಕೆ ಪ್ರಾರಂಭ

ಪಂಚ ರಾಜ್ಯಗಳಲ್ಲಿ ಮತ ಎಣಿಕೆ ಪ್ರಾರಂಭವಾಗಿದ್ದು, ಪಶ್ಚಿಮ ಬಂಗಾಳದಲ್ಲಿ 6 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದರೆ, 3 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಇನ್ನು ಅಸ್ಸಾಂನಲ್ಲಿ ಬಿಜೆಪಿ ಮುಂದಿದೆ.

May 4, 2026, 7:02 a.m.

ರಾಜ್ಯದಲ್ಲಿ ಫಲಿತಾಂಶ ಏನಾಗಬಹುದು?

ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣಾ ಫಲಿತಾಂಶ ಭಾರೀ ಕುತೂಹಲವನ್ನು ಮೂಡಿಸಿದೆ. ಶಾಸಕರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಏಪ್ರಿಲ್ 9ರಂದು ಮತದಾನ ನಡೆದಿತ್ತು. ಬಾಗಲಕೋಟೆಯಲ್ಲಿ ಕಾಂಗ್ರೆಸ್‌ನಿಂದ ಉಮೇಶ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ಸ್ಪರ್ಧಿಸಿದ್ದರು. ಉಳಿದಂತೆ ಏಳು ಅಭ್ಯರ್ಥಿಗಳು ಕಣದಲ್ಲಿದ್ದರು. ಇನ್ನು ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಹಾಗೂ ಬಿಜೆಪಿ ಉಮೇದುವಾರ ಟಿ. ಶ್ರೀನಿವಾಸ ದಾಸಕರಿಯಪ್ಪ ಸೇರಿ 25 ಅಭ್ಯರ್ಥಿಗಳು ಕಣದಲ್ಲಿದ್ದರು.

May 4, 2026, 6:56 a.m.

ಮತ ಎಣಿಕೆ ಕೇಂದ್ರದಲ್ಲಿ ಬಿಗಿ ಭದ್ರತೆ

ಎಣಿಕೆ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಮಾಡಲಾಗಿದೆ. ಅಭ್ಯರ್ಥಿಗಳ ಏಜೆಂಟ್‌ಗಳು ಮತಗಟ್ಟೆ ಪ್ರವೇಶಕ್ಕೆ ಕ್ಯೂಆರ್‌ ಕೋಡ್‌ ಆಧಾರಿತ ಗುರುತಿನ ಚೀಟಿ ವ್ಯವಸ್ಥೆ ಮಾಡಿದೆ. ಬೆಳಗ್ಗೆ 8 ಗಂಟೆಗೆ ಭದ್ರತಾ ಕೊಠಡಿ ತೆರೆಯಲಾಗುತ್ತದೆ. ಮೊದಲಿಗೆ ಅಂಚೆ ಮತಗಳ ಎಣಿಕೆ ನಡೆಯಲಿದ್ದು, 8.30ರ ಬಳಿಕ ಎವಿಎಂಗಳ ಮತ ಎಣಿಕೆ ಆರಂಭವಾಗಲಿದೆ.

May 4, 2026, 6:48 a.m.

ಕೆಲವೇ ಕ್ಷಣಗಳಲ್ಲಿ ಮತ ಎಣಿಕೆ ಪ್ರಾರಂಭ

ಪಂಚ ರಾಜ್ಯಗಳಾದ ಅಸ್ಸಾಂ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಪುದುಚೇರಿ ವಿಧಾನಸಭಾ ಫಲಿತಾಂಶ ಇಂದು ಹೊರ ಬೀಳಲಿದ್ದು ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಾರಂಭವಾಗುತ್ತದೆ.