Janardhan Reddy: ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್; ಹೈಕೋರ್ಟ್‌ನಿಂದ ಜಾಮೀನು ಮಂಜೂರು
ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ(Obulapuram mining case) (janardhan reddy) 7 ವರ್ಷಗಳ ಶಿಕ್ಷೆಗೆ ಒಳಗಾಗಿದ್ದ ಜನಾರ್ದನ ರೆಡ್ಡಿ ತೆಲಂಗಾಣ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಸಿಬಿಐ ಕೋರ್ಟ್ ವಿಧಿಸಿದ್ದ ಶಿಕ್ಷೆಯನ್ನು ಹೈ ಕೋರ್ಟ್ ರದ್ದುಗೊಳಿಸಿದೆ.


ಹೈದರಾಬಾದ್: ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ(Obulapuram mining case) (janardhan reddy) 7 ವರ್ಷಗಳ ಶಿಕ್ಷೆಗೆ ಒಳಗಾಗಿದ್ದ ಜನಾರ್ದನ ರೆಡ್ಡಿ ತೆಲಂಗಾಣ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಸಿಬಿಐ ಕೋರ್ಟ್ ವಿಧಿಸಿದ್ದ ಶಿಕ್ಷೆಯನ್ನು ಹೈ ಕೋರ್ಟ್ ರದ್ದುಗೊಳಿಸಿದೆ. ಈ ಮೂಲಕ ಹಲವು ಷರತ್ತು ವಿಧಿಸಿ ಜನಾರ್ದನ ರೆಡ್ಡಿಗೆ ಜಾಮೀನು ಮಂಜೂರು ಮಾಡಿದೆ. ತಲಾ 10 ಲಕ್ಷ ಮೌಲ್ಯದ ಇಬ್ಬರು ಶ್ಯೂರಿಟಿಗಳನ್ನ ಸಲ್ಲಿಸುವಂತೆ ಹೈ ಕೋರ್ಟ್ ಸೂಚನೆ ನೀಡಿದೆ.
ಓಬಳಾಪುರಂ ಮೈನಿಂಗ್ ಕಂಪನಿ (OMC) ಪ್ರಕರಣದಲ್ಲಿ ಶಿಕ್ಷೆಗೊಳಗಾದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮತ್ತು ಇತರರು ಸಲ್ಲಿಸಿರುವ ಅರ್ಜಿಗಳ ಕುರಿತು ತೆಲಂಗಾಣ ಹೈಕೋರ್ಟ್ ಇಂದು ತೀರ್ಪು ಪ್ರಕಟಿಸಿದ್ದು, ಆರೋಪಿಗಳಾದ ಗಾಲಿ ಜನಾರ್ದನ ರೆಡ್ಡಿ, ಬಿ.ವಿ. ಶ್ರೀನಿವಾಸ ರೆಡ್ಡಿ, ವಿ.ಡಿ. ರಾಜಗೋಪಾಲ್ ಮತ್ತು ಅಲಿ ಖಾನ್ ಸಲ್ಲಿಸಿರುವ ಜಾಮೀನು ಅರ್ಜಿಗಳ ಜೊತೆಗೆ ಗಾಲಿ ಜನಾರ್ದನ ರೆಡ್ಡಿ ಪ್ರತ್ಯೇಕವಾಗಿ ಸಲ್ಲಿಸಿರುವ ಜೈಲು ಶಿಕ್ಷೆಯ ಅರ್ಜಿಗಳ ಮೇಲಿನ ಶಿಕ್ಷೆಯನ್ನು ರದ್ದುಗೊಳಿಸಿ ಹೈಕೋರ್ಟ್ ತೀರ್ಪು ನೀಡಿದೆ.
ಮಂಗಳವಾರ ರೆಡ್ಡಿ ಪರ ವಕೀಲರು ಕೋರ್ಟ್‌ನಲ್ಲಿ ವಾದ ಮಂಡಿಸಿದ್ದು. ಅರ್ಜಿದಾರರು ಈಗಾಗಲೇ ತಮ್ಮ ಜೈಲು ಶಿಕ್ಷೆಯ ಶೇಕಡಾ 50 ಕ್ಕಿಂತ ಹೆಚ್ಚು ಅಂದರೆ ಮೂರುವರೆ ವರ್ಷಗಳನ್ನು ಅನುಭವಿಸಿದ್ದಾರೆ ಎಂದು ಅವರು ಹೇಳಿದ್ದರು.
ನ್ಯಾಯಮೂರ್ತಿ ಕೆ. ಲಕ್ಷ್ಮಣ್ ಅವರ ಪೀಠವು ಜನಾರ್ದನ ರೆಡ್ಡಿಗೆ ಹಲವು ಶರತ್ತು ವಿಧಿಸಿ ಜಾಮೀನು ಮಂಜೂರು ಮಾಡಿದೆ 10 ಲಕ್ಷ ರೂಪಾಯಿ ಶೂರಿಟಿ ಹಾಗೂ ಪಾಸ್ಪೋರ್ಟ್ ವಶಕ್ಕೆ ನೀಡಲು ಸೂಚನೆ ನೀಡಿದೆ. ಅಲ್ಲದೆ ದೇಶ ಬಿಟ್ಟು ಹೋಗದಂತೆ ಜನಾರ್ಧನ ರೆಡ್ಡಿಗೆ ಹೈಕೋರ್ಟ್ ಸೂಚನೆ ನೀಡಿದೆ.
ಈ ಸುದ್ದಿಯನ್ನೂ ಓದಿ: Madenuru Manu: ನಟ ಮಡೆನೂರು ಮನುಗೆ ಜಾಮೀನು, ಇಂದು ರಿಲೀಸ್
ಏನಿದು ಪ್ರಕರಣ?
ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಗಾಲಿ ಜನಾರ್ದನ ರೆಡ್ಡಿ ಅವರನ್ನು ದೋಷಿ ಎಂದು ಮೇ 8 ರಂದು ತೀರ್ಪು ನೀಡಿದ್ದ ಸಿಬಿಐ ಕೋರ್ಟ್ 7 ವರ್ಷಗಳ ಕಾಲ ಶಿಕ್ಷೆಯನ್ನು ವಿಧಿಸಿತ್ತು. ಗಣಿಗಾರಿಕೆ ಪ್ರಕರಣ ಸುದೀರ್ಘ ವಿಚಾರಣೆ ನಡೆಸಿದ್ದ ಹೈದರಾಬಾದ್ ಸಿಬಿಐ ಕೋರ್ಟ್, ಏಳು ವರ್ಷಗಳ ಶಿಕ್ಷೆ ನೀಡಿ ತೀರ್ಪು ನೀಡಿತ್ತು. . ಪ್ರಕರಣವು ಬಳ್ಳಾರಿ ಜಿಲ್ಲೆಯ ಓಬಳಾಪುರಂ ಗಣಿಗಾರಿಕೆಯಲ್ಲಿ ನಡೆದಿದ್ದ ಅಕ್ರಮ ಚಟುವಟಿಕೆಗಳಿಗೆ ಸಂಬಂಧಿಸಿದ್ದು, ರೆಡ್ಡಿ ಅವರ ವಿರುದ್ಧ ಭ್ರಷ್ಟಾಚಾರ ಮತ್ತು ಗಣಿಗಾರಿಕೆ ನಿಯಮಗಳ ಉಲ್ಲಂಘನೆಯ ಆರೋಪಗಳು ಹೊರಿಸಲಾಗಿತ್ತು. ಗಾಲಿ ಜನಾರ್ದನ ರೆಡ್ಡಿ ಅವರು ಬಳ್ಳಾರಿ ಜಿಲ್ಲೆಯ ಗಂಗಾವತಿ ಕ್ಷೇತ್ರದ ಶಾಸಕರಾಗಿದ್ದರು. ಈ ಆದೇಶದಿಂದ ಅವರ ಶಾಸಕ ಸ್ಥಾನ ಕಳೆದುಕೊಂಡಿದ್ದರು.