ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

BJP MP Khagen: ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದ ಬಿಜೆಪಿ ಸಂಸದನ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ತೆರಳುತ್ತಿದ್ದ ಬಿಜೆಪಿ ನಾಯಕರ ಮೇಲೆ ಕೆಲ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಈ ಅಹಿತಕರ ಘಟನೆಯಲ್ಲಿ ಬಿಜೆಪಿ ಸಂಸದ ಖಗೆನ್ ಮುರ್ಮು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಬಿಜೆಪಿ ಸಂಸದ ಖಗೆನ್ ಮುರ್ಮುಗೆ ಗಂಭೀರ ಗಾಯ

ಗಾಯಗೊಂಡ ಬಿಜೆಪಿ ಸಂಸದ -

Profile Sushmitha Jain Oct 6, 2025 11:42 PM

ಕೋಲ್ಕತಾ: ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯಲ್ಲಿ ಪ್ರದೇಶದಲ್ಲಿ ಬಿಜೆಪಿ ನಾಯಕರ ನಿಯೋಗದ ಮೇಲೆ ದಾಳಿ ನಡೆದಿದ್ದು ಈ ದುರ್ಘಟನೆಯಲ್ಲಿ ಬಿಜೆಪಿ ಸಂಸದ ಖಗೆನ್ ಮುರ್ಮು (Khagen Murmu) ಗಂಭೀರವಾಗಿ ಗಾಯಗೊಂಡಿದ್ದಾರೆ. ಪಶ್ಚಿಮ ಬಂಗಾಳದ ಕಳೆದ ಕೆಲ ದಿನಗಳಿಂದ ಮಳೆ ಸುರಿಯುತ್ತಲೇ ಇದ್ದು, ವರುಣನ ಆರ್ಭಟದಿಂದ ಉಂಟಾದ ಪ್ರವಾಹ ಮತ್ತು ಭೂಕುಸಿತದಲ್ಲಿ ಹಲವಾರು ಜನರು ಸಾವನ್ನಪ್ಪಿದ್ದಾರೆ. ಇದಲ್ಲದೆ, ಅತಿಯಾದ ಮಳೆಯಿಂದಾಗಿ, ಕಬ್ಬಿಣದ ಸೇತುವೆ ಕೂಡ ಕುಸಿದಿದೆ. 

ಈ ಹಿನ್ನಲೆ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಪರಿಹಾರ ಕಾರ್ಯಾಚರಣೆ ಹಾಗೂ  ಮೇಲ್ವಿಚಾರಣೆ ನಡೆಸಲು ನಾಗರಕಟಕ್ಕೆ ತೆರಳುತ್ತಿದ್ದ ವೇಳೆ ಅಪರಿಚಿತ ದುಷ್ಕರ್ಮಿಗಳು ಬಿಜೆಪಿ ನಾಯಕರು ಸಾಗುತ್ತಿದ್ದ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ಈ ದಾಳಿಯಲ್ಲಿ ಸಂಸದ ಮುರ್ಮು ಹಾಗೂ ಸಿಲಿಗುರಿ ಶಾಸಕ ಶಂಕರ್ ಘೋಷ್ ಗಾಯಗೊಂಡಿದ್ದು, ಅವರ ವಾಹನಗಳು ಹಾನಿಗೊಳಗಾಗಿವೆ. ಇಬ್ಬರನ್ನೂ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಓದಿ: Viral Video: ಭಾರತದ ಪ್ರಸಿದ್ಧ ಕೊಳಕು ಬೀದಿಬದಿ ಆಹಾರವಿದು ಎಂದ ವಿದೇಶಿ ಪ್ರವಾಸಿಗ; ನೆಟ್ಟಿಗರು ಪ್ರತಿಕ್ರಿಯಿಸಿದ್ದು ಹೀಗೆ

ಇನ್ನು ಘಟನೆ ವಿರುದ್ಧ ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವೀಯ ಆಕ್ರೋಶ ವ್ಯಕ್ತಪಡಿಸಿದ್ದು, "ಮಮತಾ ಬ್ಯಾನರ್ಜಿ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಟಿಎಂಸಿ ಬೆಂಬಲಿತ ಗೂಂಡಾಗಳು ಜನರಿಗೆ ಸಹಾಯ ಮಾಡಲು ಹೊರಟಿದ್ದ ಬಿಜೆಪಿ ನಾಯಕರ ಮೇಲೆ ಹಲ್ಲೆ ಮಾಡಿದ್ದಾರೆ" ಎಂದು ತಮ್ಮ ಸೋಶಿಯಲ್ ಮೀಡಿಯಾ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಅಲ್ಲದೇ ಅವರು ಮಮತಾ ಬ್ಯಾನರ್ಜಿ ಆಡಳಿತ ವೈಖರಿಯ ಬಗ್ಗೆ ಟೀಕಾ ಪ್ರಹಾರ ನಡೆಸಿದ್ದು, ʼʼರಾಜ್ಯದ ಜನರು ಪ್ರಕೃತಿ ವಿಕೋಪಕ್ಕೆ ಸಿಲುಕಿ ಪರದಾಡುತ್ತಿದ್ದಾರೆ. ಆದರೆ ರಾಜ್ಯದ ಮುಖ್ಯಮಂತ್ರಿ ಕೋಲ್ಕತ್ತಾ ಕಾರ್ನಿವಲ್‌ನಲ್ಲಿ ಮೋಜು ಮಸ್ತಿ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಕ್ರೌರ್ಯ ಅಟ್ಟಹಾಸ ಮೆರೆಯುತ್ತಿದ್ದು, ಜನರಿಗೆ ಶಿಕ್ಷೆ ದೊರೆಯುತ್ತಿದೆ” ಎಂದು ಆರೋಪಿಸಿದ್ದಾರೆ.