ಎಲ್.ಕೆ. ಅಡ್ವಾಣಿ 99ನೇ ಹುಟ್ಟುಹಬ್ಬ ವಿಶೇಷವಾಗಿ ಅಚರಿಸಲು ಮುಂದಾದ ಬಿಜೆಪಿ; ಪ್ರಧಾನಿ ನರೇಂದ್ರ ಮೋದಿ ಭಾಗಿ
LK Advani’s 99th birthday: ಮಾಜಿ ಉಪಪ್ರಧಾನಿ ಲಾಲ್ಕೃಷ್ಣ ಅಡ್ವಾಣಿ ನವೆಂಬರ್ 8ರಂದು 99ನೇ ವರ್ಷಕ್ಕೆ ಕಾಲಿಡುತ್ತಿದ್ದು, ಇದನ್ನು ಬಿಜೆಪಿ ವಿಶೇಷವಾಗಿ ಆಚರಿಸಲಿದೆ. ದೆಹಲಿಯಲ್ಲಿರುವ ಕೇಂದ್ರ ಕಚೇರಿಯಲ್ಲಿ ಇದಕ್ಕಾಗಿ ವ್ಯಾಪಕ ಸಿದ್ಧತೆ ನಡೆಸಲಾಗುತ್ತಿದೆ. ಹೋಮವನ್ನೂ ನಡೆಸಲಗುತ್ತದೆ ಎಂದು ಮೂಲಗಳು ತಿಳಿಸಿ ವೆ.
ನರೇಂದ್ರ ಮೋದಿ ಜತೆ ಎಲ್.ಕೆ. ಅಡ್ವಾಣಿ (ಸಂಗ್ರಹ ಚಿತ್ರ) -
ದೆಹಲಿ, ನ. 6: ಭಾರತ ರತ್ನ ಪ್ರಶಸ್ತಿ ಪುರಸ್ಕೃತ, ಮಾಜಿ ಉಪಪ್ರಧಾನಿ ಲಾಲ್ಕೃಷ್ಣ ಅಡ್ವಾಣಿ (LK Advani) ನವೆಂಬರ್ 8ರಂದು 99ನೇ ವರ್ಷಕ್ಕೆ ಕಾಲಿಡುತ್ತಿದ್ದು, ಇದ್ದನ್ನು ವಿಶೇಷವಾಗಿ ಆಚರಿಸಲು ಬಿಜೆಪಿ ಮುಂದಾಗಿದೆ. ದೆಹಲಿಯಲ್ಲಿರುವ ಕೇಂದ್ರ ಕಚೇರಿಯಲ್ಲಿ ಇದಕ್ಕಾಗಿ ವ್ಯಾಪಕ ಸಿದ್ಧತೆ ನಡೆಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಇದೇ ವೇಳೆ ಅಡ್ವಾಣಿ ಅವರನ್ನು ಭೇಟಿಯಾಗಲಿದ್ದಾರೆ. ಜತೆಗೆ ಹೋಮ-ಹವನ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಮತ್ತು ಅಡ್ವಾಣಿ ಅವರೊಂದಿಗೆ ಒಡನಾಟ ಹೊಂದಿರುವ ಪಕ್ಷದ ಹಿರಿಯ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅಖಂಡ ಭಾರತದ ಕರಾಚಿಯಲ್ಲಿ ಸ್ವಾತಂತ್ರ್ಯಪೂರ್ವದಲ್ಲಿ ಜನಿಸಿದ ಅಡ್ವಾಣಿ ಅವರಿಗೆ 2024ಯಲ್ಲಿ ಭಾರತದ ಅತ್ಯುನ್ನತ ನಾಗಿಕ ಪ್ರಶಸ್ತಿಯಾದ ಭಾರತ ರತ್ನ ನೀಡಲಾಯಿತು. ಆರ್ಎಸ್ಎಸ್ನಲ್ಲಿ ಸಕ್ರಿಯರಾಗಿದ್ದ ಅವರು, ಪ್ರಮುಖ ಹಿಂದೂ ನಾಯಕರಲ್ಲಿ ಒಬ್ಬಎನಿಸಿಕೊಂಡಿದ್ದಾರೆ. ರಾಮಜನ್ಮಭೂಮಿ ಹೋರಾಟದ ಮುಂಚೂಣಿಯಲ್ಲಿದ್ದ ಅವರು ರಥಯಾತ್ರೆ ಮೂಲಕ ದೇಶಾದ್ಯಂತ ಸಂಚಲನ ಮೂಡಿಸಿದ್ದರು.
ಎಲ್.ಕೆ. ಅಡ್ವಾಣಿ ದೇಶಕ್ಕೆ ಸಲ್ಲಿಸಿದ ಸೇವೆ ಸ್ಮರಣೀಯ; 98ನೇ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಪ್ರಧಾನಿ ಮೋದಿ
ಬಿಜೆಪಿಯ ಪ್ರಮುಖ ಶಕ್ತಿ
ಬಿಜೆಪಿ ಸಹ ಸಂಸ್ಥಾಪಕರಲ್ಲಿ ಒಬ್ಬರಾಗಿರುವ ಎಲ್.ಕೆ. ಅಡ್ವಾಣಿ 1927ರ ನವೆಂಬರ್ 8ರಂದು ಬ್ರಿಟಿಷ್ ಭಾರತದ ಕರಾಚಿಯಲ್ಲಿ ಸಿಂಧಿ ಹಿಂದೂ ಲೋಹನ ಕುಟುಂಬದ ಕಿಶನ್ಚಂದ್ ಡಿ . ಅಡ್ವಾಣಿ ಮತ್ತು ಗ್ಯಾನಿ ದೇವಿ ದಂಪತಿಯ ಮಗನಾಗಿ ಜನಿಸಿದರು. ದೇಶದ 7ನೇ ಉಪ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದ ಇವರು ಲೋಕಸಭೆಯಲ್ಲಿ ಅತಿ ಹೆಚ್ಚು ಕಾಲ ವಿರೋಧ ಪಕ್ಷದ ನಾಯಕರಾಗಿಯೂ ಗಮನ ಸೆಳೆದರು.
ಭಾರತ ವಿಭಜನೆಯ ಸಂದರ್ಭದಲ್ಲಿ ವಲಸೆ ಬಂದು ಬಾಂಬೆಯಲ್ಲಿ ನೆಲೆಸಿದರು. ಕರಾಚಿಯ ಸೇಂಟ್ ಪ್ಯಾಟ್ರಿಕ್ ಶಾಲೆಯ ವಿದ್ಯಾರ್ಥಿಯಾಗಿದ್ದಾಗಲೇ ದೇಶಭಕ್ತಿ ಇವರಲ್ಲಿ ಚಿಗುರೊಡೆದಿತ್ತು. ಬಾಂಬೆಗೆ ವಲಸೆ ಬಂದ ಬಳಿಕ ಇಲ್ಲೇ ತಮ್ಮ ಕಾಲೇಜು ಶಿಕ್ಷಣವನ್ನು ಪೂರ್ಣಗೊಳಿಸುವುದರೊಂದಿಗೆ 1941ರಲ್ಲಿ ಅಂದರೆ ಹದಿನಾಲ್ಕನೇ ವಯಸ್ಸಿನಲ್ಲಿ ಆರ್ಎಸ್ಎಸ್ಗೆ ಸೇರಿ ರಾಜಸ್ಥಾನದ ಪ್ರಚಾರಕ್ ತೊಡಗಿಸಿಕೊಂಡರು.
1975ರ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಬಿಜೆಎಸ್ ಸದಸ್ಯರೊಂದಿಗೆ ಬೆಂಗಳೂರು ಕೇಂದ್ರ ಜೈಲಿನಲ್ಲಿ ಸೆರೆಮನೆ ವಾಸ ಅನುಭವಿಸಿದ ಅವರು ಅತಿ ಹೆಚ್ಚು ಕಾಲ ಬಿಜೆಪಿ ಅಧ್ಯಕ್ಷರಾಗಿದ್ದರು. 1989, 1991 ಮತ್ತು 2009ರ ಸಾರ್ವತ್ರಿಕ ಚುನಾವಣೆಗಳಲ್ಲಿ ಪಕ್ಷದ ಪ್ರಧಾನಿ ಅಭ್ಯರ್ಥಿಯಾಗಿ ಗುರುತಿಸಿಕೊಂಡಿದ್ದರು.
ಎಲ್.ಕೆ.ಅಡ್ವಾಣಿ ಮನೆಗೆ ಭೇಟಿ ನೀಡಿದ ಗಾಯಕ ಸೋನು ನಿಗಮ್
ಆರ್ಎಸ್ಎಸ್ ರಾಷ್ಟ್ರೀಯ ಕಾರ್ಯಕಾರಿಣಿಯ ಸದಸ್ಯರಾಗಿ 1970ರವರೆಗೆ ಸೇವೆ ಸಲ್ಲಿಸಿದ ಅಡ್ವಾಣಿ 1970ರಲ್ಲಿ ಮೊದಲ ಬಾರಿಗೆ ರಾಜ್ಯಸಭೆಯ ಸದಸ್ಯರಾದರು. ಇವರು ಜನಸಂಘದ ಅಧ್ಯಕ್ಷರಾಗಿದ್ದಾಗಲೇ ಅದು 1977ರ ಸಾರ್ವತ್ರಿಕ ಚುನಾವಣೆಗೆ ಮೊದಲು ಜನತಾ ಪಕ್ಷದಲ್ಲಿ ವಿಲೀನಗೊಂಡಿತು. ಈ ಬಳಿಕ ಅಡ್ವಾಣಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ವಿವಾದಿತ ಆಯೋಧ್ಯೆಯ ರಾಮ ಜನ್ಮಭೂಮಿ ಸ್ಥಳದಲ್ಲೇ ದೇವಾಲಯ ನಿರ್ಮಿಸಬೇಕು ಎನ್ನುವ ಪ್ರಬಲ ಪ್ರತಿಪಾದಕರು ಇವರಾಗಿದ್ದರು. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದ ಅಡ್ವಾಣಿ ಇದೀಗ ವಯಸ್ಸಿನ ಕಾರಣದಿಂದ ರಾಜಕೀಯ ಚಟುವಟಿಕೆಯಿಂದ ದೂರವುಳಿದಿದ್ದಾರೆ.
ದೇಶದ ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ʼಪ್ರವಾಸಿ ಪ್ರಪಂಚʼ ವೆಬ್ಸೈಟ್ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.