ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಬ್ಲಾಸ್ಟ್: 17 ಮಂದಿ ಸಾವು, 18 ಜನರಿಗೆ ಗಾಯ
Explosive factory blast: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, 17 ಮಂದಿ ಸಾವಿಗೀಡಾಗಿದ್ದು, 18 ಮಂದಿ ಗಾಯಗೊಂಡಿದ್ದಾರೆ. ಕಟೋಲ್ ತಹಸಿಲ್‌ನ ರೌಲ್ಗಾಂವ್‌ನಲ್ಲಿರುವ ಗಣಿಗಾರಿಕೆ ಮತ್ತು ಕೈಗಾರಿಕಾ ಸ್ಫೋಟಕ ತಯಾರಕರಾದ ಎಸ್‌ಬಿಎಲ್ ಎನರ್ಜಿ ಲಿಮಿಟೆಡ್ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ.
ಸ್ಫೋಟಕ ತಯಾರಿಕೆಯ ಕಾರ್ಖಾನೆಯಲ್ಲಿ ಬ್ಲಾಸ್ಟ್ -
ಮುಂಬೈ, ಮಾ.1: ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಇಂದು (ಮಾರ್ಚ್ 1) ಬೆಳಗ್ಗೆ ಭೀಕರ ಸ್ಫೋಟ (Explosion) ಸಂಭವಿಸಿದ್ದು, 17 ಮಂದಿ ಸಾವಿಗೀಡಾಗಿದ್ದು, 18 ಮಂದಿ ಗಾಯಗೊಂಡಿದ್ದಾರೆ. ಮಹಾರಾಷ್ಟ್ರದ (Maharashtra) ನಾಗ್ಪುರ ಜಿಲ್ಲೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.
ಕಟೋಲ್ ತಹಸಿಲ್‌ನ ರೌಲ್ಗಾಂವ್‌ನಲ್ಲಿರುವ ಗಣಿಗಾರಿಕೆ ಮತ್ತು ಕೈಗಾರಿಕಾ ಸ್ಫೋಟಕ ತಯಾರಕರಾದ ಎಸ್‌ಬಿಎಲ್ ಎನರ್ಜಿ ಲಿಮಿಟೆಡ್ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ. ರಕ್ಷಣಾ ಕಾರ್ಯಾಚರಣೆ ನಡೆಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡ ಸ್ಥಳಕ್ಕೆ ತಲುಪಿದೆ.
ಕಂಪನಿಯ ಡಿಟೋನೇಟರ್ ಪ್ಯಾಕಿಂಗ್ ಘಟಕದಲ್ಲಿ ಬೆಳಿಗ್ಗೆ 7 ರಿಂದ 7:15 ರ ನಡುವೆ ಈ ಘಟನೆ ಸಂಭವಿಸಿದೆ ಎಂದು ಎಸ್‌ಬಿಎಲ್ ಎನರ್ಜಿ ಲಿಮಿಟೆಡ್‌ನ ಪ್ರತಿನಿಧಿಗಳು ಮಾಹಿತಿ ನೀಡಿದ್ದಾರೆ. ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದ್ದು, ಶೀಘ್ರದಲ್ಲೇ ಹೇಳಿಕೆ ಬಿಡುಗಡೆ ಮಾಡುವುದಾಗಿ ಕಂಪನಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದುಬೈ ವಿಮಾನ ನಿಲ್ದಾಣದ ಬಳಿ ಸ್ಫೋಟ: ಸಂಕಷ್ಟಕ್ಕೆ ಸಿಲುಕಿದ ಸಿಂಧು, ಮಹಿಳಾ ಕುಸ್ತಿಪಟುಗಳು
ಸ್ಫೋಟದ ನಂತರ ಗಾಯಾಳುಗಳನ್ನು ನಾಗ್ಪುರದ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲಾಧಿಕಾರಿ ವಿಪಿನ್ ಇಟಂಕರ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಹರ್ಷ್ ಪೋದಾರ್ ಸ್ಥಳದಲ್ಲಿದ್ದರು.
ಸ್ಫೋಟವನ್ನು ಅತ್ಯಂತ ದುರಂತ ಮತ್ತು ದುರದೃಷ್ಟಕರ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. ಅಲ್ಲದೆ ಘಟನೆಯ ಬಗ್ಗೆ ಸಮಗ್ರ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದರು. ಕಟೋಲ್ ತಹಸಿಲ್‌ನ ರೌಲ್ಗಾಂವ್‌ನಲ್ಲಿರುವ ಗಣಿಗಾರಿಕೆ ಮತ್ತು ಕೈಗಾರಿಕಾ ಸ್ಫೋಟಕ ತಯಾರಕರಾದ ಎಸ್‌ಬಿಎಲ್ ಎನರ್ಜಿ ಲಿಮಿಟೆಡ್ ಕಾರ್ಖಾನೆಯ ಡಿಟೋನೇಟರ್ ಪ್ಯಾಕಿಂಗ್ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 17 ಜನರು ಸಾವನ್ನಪ್ಪಿದ್ದಾರೆ ಮತ್ತು 18 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಥಳೀಯ ಆಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸ್ಫೋಟದ ನಂತರ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಮುಖ್ಯಮಂತ್ರಿ ಹೇಳಿದರು.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ತಂಡಗಳು, ಪೆಟ್ರೋಲಿಯಂ ಮತ್ತು ಸ್ಫೋಟಕ ಸುರಕ್ಷತಾ ಸಂಸ್ಥೆ (ಪಿಇಎಸ್‌ಒ) ಮತ್ತು ರಕ್ಷಣಾ ಮಾಹಿತಿ ವ್ಯವಸ್ಥೆ (ಡಿಐಎಸ್‌ಎಸ್) ಅಧಿಕಾರಿಗಳು ಸ್ಥಳದಲ್ಲಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ಯುದ್ಧೋಪಾದಿಯಲ್ಲಿ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.
ಮಂಡ್ಯದಲ್ಲಿ ಕೆಮಿಕಲ್ ಟ್ಯಾಂಕ್ ಸ್ಫೋಟ, ಇಬ್ಬರು ಕಾರ್ಮಿಕರು ಸಾವು
ಸಂತ್ರಸ್ತರು ಮತ್ತು ಅವರ ಕುಟುಂಬಗಳಿಗೆ ಮುಖ್ಯಮಂತ್ರಿ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ನಾಗ್ಪುರಕ್ಕೆ ಸ್ಥಳಾಂತರಿಸಲಾಯಿತು. ಅವರಿಗೆ ಸಾಧ್ಯವಾದಷ್ಟು ಉತ್ತಮ ವೈದ್ಯಕೀಯ ಆರೈಕೆಯನ್ನು ಒದಗಿಸಲಾಗುತ್ತಿದೆ ಎಂದು ಅವರು ಹೇಳಿದರು. ಹಾಗೂ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು.
ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ಪಟಾಕಿ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ 21 ಜನರು ಮೃತಪಟ್ಟ ಒಂದು ದಿನದ ನಂತರ ಈ ದುರ್ಘಟನೆ ನಡೆದಿದೆ. ಸಮರ್ಲಕೋಟ ಮಂಡಲದ ವೆಟ್ಲಕ್‌ಪಲೆಂ ಗ್ರಾಮದಲ್ಲಿ ಸಂಭವಿಸಿದ ಈ ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ, ದೇಹಗಳು ಹತ್ತಿರದ ಭತ್ತದ ಗದ್ದೆಗಳಿಗೆ ಎಸೆಯಲ್ಪಟ್ಟಿದ್ದವು.