ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Rajasthan Fire Tragedy: ರಾಜಸ್ಥಾನದಲ್ಲಿ ಬಸ್‌ ಬೆಂಕಿಗೆ ಆಹುತಿ; 20 ಜನರ ಸಾವಿಗೆ ಕಾರಣವಾದ ಅಂಶ ಯಾವುದು?

ಅಕ್ಟೋಬರ್‌ 14ರಂದು ರಾಜಸ್ಥಾನದಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್‌ ಬೆಂಕಿಗೆ ಆಹುತಿಯಾಗಿ 20 ಮಂದಿ ಸಾವನ್ನಪ್ಪಿದ್ದಾರೆ. ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಬಸ್‌ ಅನ್ನು 5 ದಿನಗಳ ಹಿಂದೆಯಷ್ಟೇ ಖರೀದಿಸಲಾಗಿತ್ತು ಎನ್ನಲಾಗಿದೆ.

ರಾಜಸ್ಥಾನದಲ್ಲಿ ಬಸ್‌ ಬೆಂಕಿಗೆ ಆಹುತಿ; ದುರುಂತಕ್ಕೆ ಕಾರಣವೇನು?

-

Ramesh B Ramesh B Oct 15, 2025 3:29 PM

ಜೈಪುರ, ಅ. 15: ರಾಜಸ್ಥಾನದ ಜೈಸಲ್ಮೇರ್‌ ಮತ್ತು ಜೋಧ್‌ಪುರ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬಸ್‌ ಬೆಂಕಿಗಾಹುತಿಯಾಗಿ 20 ಮಂದಿ ಮೃತಪಟ್ಟ ಧಾರುಣ ಘಟನೆ ಅಕ್ಟೋಬರ್‌ 14ರಂದು ನಡೆದಿದೆ. ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಈ ದುರಂತ ಸಂಭವಿಸಿದೆ. ಈ ಬಸ್‌ನಲ್ಲಿ ಒಟ್ಟು 57 ಮಂದಿ ಪ್ರಯಾಣಿಕರಿದ್ದರು. ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಬಸ್‌ ಅನ್ನು 5 ದಿನಗಳ ಹಿಂದೆಯಷ್ಟೇ ಖರೀದಿಸಲಾಗಿತ್ತು (Rajasthan Fire Tragedy). ಆದರೆ ಬಸ್‌ನಲ್ಲಿ ಸೂಕ್ತ ತುರ್ತು ನಿರ್ಗಮನ ದ್ವಾರವಿಲ್ಲದಿದ್ದುದೇ ಸಾವಿನ ಸಂಖ್ಯೆ ಹೆಚ್ಚಳಕ್ಕೆ ಕಾರಣ ಎನ್ನಲಾಗಿದೆ.

ಈ ದುರಂತವು ಸಾರ್ವಜನಿಕ ವಾಹನಗಳಲ್ಲಿ ತುರ್ತು ನಿರ್ಗಮನ ದ್ವಾರದ ಮಹತ್ವವನ್ನು ಸಾರಿ ಹೇಳಿದೆ. ಬಸ್‌ಗೆ ಒಂದೇ ಡೋರ್‌ ಇದ್ದು, ಅದು ಕೂಡ ಜಾಮ್‌ ಆಗಿತ್ತು ಎನ್ನಲಾಗಿದೆ.

ರಾಜಸ್ಥಾನ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಅವರ ಎಕ್ಸ್‌ ಪೋಸ್ಟ್‌:



ಈ ಸುದ್ದಿಯನ್ನೂ ಓದಿ: Ski Resort Fire: ಟರ್ಕಿಯ ಸ್ಕೀ ರೆಸಾರ್ಟ್‌ನಲ್ಲಿ ಬೆಂಕಿ ದುರಂತ; 66 ಸಾವು, 51 ಜನರಿಗೆ ಗಂಭೀರ ಗಾಯ

ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

ʼʼಜೈಸಲ್ಮೇರ್‌ನಿಂದ ಜೋಧ್‌ಪುರಕ್ಕೆ ಹೋಗುತ್ತಿದ್ದ ಖಾಸಗಿ ಬಸ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿತು. ಪ್ರಯಾಣಿಕರು ಒಂದೇ ಬಾಗಿಲಿನ ಮೂಲಕ ತಪ್ಪಿಸಿಕೊಳ್ಳಲು ಪ್ರಯತ್ನಿಸಿದಾಗ ಅದು ಜಾಮ್‌ ಆಗಿರುವುದು ಕಂಡಬಂತುʼʼ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಕೊನೆಗೆ ಬಾಗಿಲು ತೆರೆಯಲು ಯಂತ್ರವನ್ನು ಕರೆ ತರಬೇಕಾಯಿತು. ಈ ವೇಳೆಗಾಗಲೇ ಅನೇಕರು ಸಾವನ್ನಪ್ಪಿದ್ದರು. ಕಿಟಕಿಗಳನ್ನು ಮುರಿದು ಹೊರಗೆ ಹಾರಿದ ಕೆಲವು ಪ್ರಯಾಣಿಕರು ಬದುಕುಳಿದಿದ್ದಾರೆ.

ಬಸ್ ಅನ್ನು ಮಾರ್ಪಾಡು ಮಾಡಲಾಗಿದ್ದು, ಅದರಲ್ಲಿ ಬಹಳಷ್ಟು ದಹಿಸುವ ವಸ್ತುಗಳು ಇದ್ದವು, ಅದು ದುರಂತಕ್ಕೆ ಕಾರಣವಾಯಿತು ಎನ್ನಲಾಗಿದೆ. ದೊಡ್ಡ ಸ್ಫೋಟ ಸಂಭವಿಸಿದ ಬೆನ್ನಲ್ಲೇ ಇಡೀ ಬಸ್‌ಗೆ ಬೆಂಕಿ ವ್ಯಾಪಿಸಿತು. ಬೆಂಕಿಗೆ ಕಾರಣವೇನು ಎಂಬುದರ ನಿಖರ ಕಾರಣ ತನಿಖೆಯ ಬಳಿಕವಷ್ಟೇ ಬೆಳಕಿಗೆ ಬರಲಿದೆ.

ಥೈಯಾಟ್‌ ಗ್ರಾಮದಲ್ಲಿರುವ 1971ರ ಯುದ್ಧದಲ್ಲಿ ವಸ್ತು ಸಂಗ್ರಹಾಲಯದ ಬಳಿ ಈ ಘಟನೆ ನಡೆದಿದೆ. ಮೃತರ ಪೈಕಿ ಅನೇಕರ ದೇಹಗಳು ಗುರುತಿಸಲಾಗದಷ್ಟು ಸುಟ್ಟುಹೋಗಿವೆ ಮತ್ತು ಡಿಎನ್‌ಎ ಪರೀಕ್ಷೆಯ ಬಳಿಕವಷ್ಟೆ ಅವರ ಗುರುತು ಗೊತ್ತಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಅಪರಾಹ್ನ 3 ಗಂಟೆ ಸುಮಾರಿಗೆ ಬಸ್ ಬೆಂಕಿಗೆ ಆಹುತಿಯಾಯಿತು. ಜೈಸಲ್ಮೇರ್‌ನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಭಾರತೀಯ ಸೇನೆಯ 12ನೇ RAPID ವಿಭಾಗದ ಸಿಬ್ಬಂದಿ ಧಾವಿಸಿ ರಕ್ಷಣಾ ಕಾರ್ಯಾಚರಣೆಗೆ ಕೈ ಜೋಡಿಸಿದರು.

ರಾಜಸ್ಥಾನ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. "ಜೈಸಲ್ಮೇರ್‌ನಲ್ಲಿ ಬಸ್‌ ಬೆಂಗೆ ಆಹುತಿಯಾದ ಘಟನೆ ಹೃದಯ ವಿದ್ರಾವಕವಾಗಿದೆ. ಈ ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳಿಗೆ ಸರಿಯಾದ ಚಿಕಿತ್ಸೆ ನೀಡಲು ಮತ್ತು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಗಿದೆ" ಎಂದು ತಿಳಿಸಿದ್ದಾರೆ.

2 ಲಕ್ಷ ರೂ. ಪರಿಹಾರ

ಈ ದುರ್ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ.