ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಸಿಬಿಐ ನಿರ್ದೇಶಕ ಪ್ರವೀಣ್ ಸೂದ್ ಅಧಿಕಾರಾವಧಿ 2027ರ ಮೇವರೆಗೆ ವಿಸ್ತರಣೆ

ಸಿಬಿಐ ನಿರ್ದೇಶಕ ಪ್ರವೀಣ್ ಸೂದ್ ಅವರ ಅಧಿಕಾರಾವಧಿಯನ್ನು 2027ರ ಮೇ ವರೆಗೆ ವಿಸ್ತರಿಸಲಾಗಿದೆ. ಈ ಕುರಿತು ಕೇಂದ್ರ ಸರ್ಕಾರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಹೊರಡಿಸಿದ್ದು, ಆಯ್ಕೆ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಸಂಪುಟದ ನೇಮಕಾತಿ ಸಮಿತಿಯು ಸಿಬಿಐ ನಿರ್ದೇಶಕ ಪ್ರವೀಣ್ ಸೂದ್ ಅವರ ಅಧಿಕಾರಾವಧಿ ವಿಸ್ತರಣೆಗೆ ಅನುಮೋದನೆ ನೀಡಿದೆ.

ಸಿಬಿಐ ನಿರ್ದೇಶಕ ಪ್ರವೀಣ್ ಸೂದ್ ಅಧಿಕಾರಾವಧಿ ವಿಸ್ತರಣೆ

ಸಂಗ್ರಹ ಚಿತ್ರ -

ನವದೆಹಲಿ: ಕೇಂದ್ರ ತನಿಖಾ ದಳದ (Central Bureau of Investigation) ನಿರ್ದೇಶಕರಾಗಿರುವ (CBI Director) ಪ್ರವೀಣ್ ಸೂದ್ (Praveen Sood) ಅವರ ಅಧಿಕಾರವಧಿಯನ್ನು ಒಂದು ವರ್ಷದವರೆಗೆ ವಿಸ್ತರಿಸಲಾಗಿದೆ. ಮುಂದಿನ ಸಿಬಿಐ ಮುಖ್ಯಸ್ಥರ ಆಯ್ಕೆ ಬಗ್ಗೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (rahul gandhi) ಅವರು ಆಕ್ಷೇಪ ವ್ಯಕ್ತಪಡಿಸಿದ ಮರುದಿನವೇ ಕೇಂದ್ರ ಸರ್ಕಾರವು ಪ್ರವೀಣ್ ಸೂದ್ ಅವರ ಅಧಿಕಾರಾವಧಿಯನ್ನು 2027ರ ಮೇ ವರೆಗೆ ವಿಸ್ತರಿಸಲು ಕೇಂದ್ರ ಸರ್ಕಾರ ಬುಧವಾರ ಅನುಮೋದನೆ ನೀಡಿದೆ. ಹೀಗಾಗಿ 1986ರ ಬ್ಯಾಚ್ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿ ಸೂದ್ ಅವರು ಇನ್ನೊಂದು ವರ್ಷದವರೆಗೆ ಏಜೆನ್ಸಿಯ ಮುಖ್ಯಸ್ಥರಾಗಿ ಮುಂದುವರಿಯಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಉನ್ನತ ಅಧಿಕಾರದ ಆಯ್ಕೆ ಸಮಿತಿಯ ಮಂಗಳವಾರ ನಡೆದ ಸಭೆಯಲ್ಲಿ ರಾಹುಲ್ ಗಾಂಧಿ ಅವರು ಎರಡು ಪುಟಗಳ ಭಿನ್ನಾಭಿಪ್ರಾಯ ಟಿಪ್ಪಣಿಯನ್ನು ಮಂಡಿಸಿದ್ದರು.

3 ಆಸ್ಪತ್ರೆಗಳಿಗೆ ಹೋದರೂ ಉಳಿಯಲಿಲ್ಲ ದಿಲೀಪ್‌ ರಾಜ್‌ ಜೀವ; ಪ್ರತಿಭಾವಂತ ನಟನ ಆ ಕೊನೆಯ ಕ್ಷಣಗಳು ಹೇಗಿದ್ದವು?

ಇದರಲ್ಲಿ ಅವರು ಮುಂದಿನ ಸಿಬಿಐ ಮುಖ್ಯಸ್ಥರ ಆಯ್ಕೆ ಪ್ರಕ್ರಿಯೆಯ ಬಗ್ಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇದರ ಮರುದಿನವೇ ಕೇಂದ್ರ ಸರ್ಕಾರವು ಕೇಂದ್ರ ತನಿಖಾ ದಳದ ನಿರ್ದೇಶಕರಾದ ಪ್ರವೀಣ್ ಸೂದ್ ಅವರ ಅಧಿಕಾರಾವಧಿಯನ್ನು ಒಂದು ವರ್ಷದವರೆಗೆ ವಿಸ್ತರಿಸಿ ಅನುಮೋದನೆ ನೀಡಿದೆ. ಸಮಿತಿ ಸಭೆಯಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಕೂಡ ಇದ್ದರು.

ಸಿಬಿಐ ನಿರ್ದೇಶಕರ ನೇಮಕಾತಿಯನ್ನು ಮೂವರು ಸದಸ್ಯರ ಆಯ್ಕೆ ಸಮಿತಿಯ ಶಿಫಾರಸಿನ ಮೇರೆಗೆ ನಡೆಯುತ್ತದೆ. ಪ್ರಧಾನ ಮಂತ್ರಿಯವರ ನೇತೃತ್ವದಲ್ಲಿ ಈ ಸಮಿತಿಯು ಲೋಕಸಭೆಯ ವಿರೋಧ ಪಕ್ಷದ ನಾಯಕ, ಭಾರತದ ಮುಖ್ಯ ನ್ಯಾಯಾಧೀಶರನ್ನು ಒಳಗೊಂಡಿರುತ್ತದೆ.

ಈ ಕುರಿತು ಕೇಂದ್ರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಬುಧವಾರ ಆದೇಶ ಹೊರಡಿಸಿದ್ದು, ಆಯ್ಕೆ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಸಂಪುಟದ ನೇಮಕಾತಿ ಸಮಿತಿಯು ಪ್ರವೀಣ್ ಸೂದ್ ಅವರ ಅಧಿಕಾರ ವಿಸ್ತರಣೆಯನ್ನು ಅನುಮೋದಿಸಿದೆ.

ಇದು ಸಿಬಿಐ ನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ಎರಡನೇ ವಿಸ್ತರಣೆಯಾಗಿದೆ. ಈ ಹಿಂದೆ ಅವರ ಅಧಿಕಾರವಧಿಯನ್ನು 2025ರ ಮೇ ತಿಂಗಳಲ್ಲಿ ಅವರ ಉತ್ತರಾಧಿಕಾರಿ ನೇಮಕ ಸಾಧ್ಯವಾಗದೇ ಇದ್ದುದರಿಂದ ಅವರ ಅಧಿಕಾರವಧಿಯನ್ನು ಒಂದು ವರ್ಷದವರೆಗೆ ವಿಸ್ತರಣೆ ಮಾಡಲಾಗಿತ್ತು. ಇದೀಗ ಸೂದ್ ಅವರಿಗೆ ಮತ್ತೊಂದು ವರ್ಷ ಅಧಿಕಾರವಧಿಯನ್ನು ವಿಸ್ತರಿಸಲಾಗಿದೆ. ಅವರ ಅಧಿಕಾರಾವಧಿಯು ಕಳೆದ ವರ್ಷ ಮೇ 24 ರಂದು ಕೊನೆಯಾಗಬೇಕಿತ್ತು.

ಗೊಂದಲಕ್ಕೆ ಕೊನೆಗೂ ತೆರೆ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್‌ಗೆ ಪಟ್ಟ

ಕರ್ನಾಟಕದ ಮಾಜಿ ಡಿಜಿಪಿಯಾಗಿದ್ದ ಪ್ರವೀಣ್ ಸೂದ್ ಅವರನ್ನು 2023ರ ಮೇ ತಿಂಗಳಲ್ಲಿ ಎರಡು ವರ್ಷಗಳ ಅವಧಿಗೆ ಸಿಬಿಐ ನಿರ್ದೇಶಕರಾಗಿ ನೇಮಿಸಲಾಗಿತ್ತು. ಇವರಿಗೂ ಮೊದಲು ಸುಬೋಧ್ ಜೈಸ್ವಾಲ್ ಅವರು ಸಿಬಿಐ ನಿರ್ದೇಶಕರಾಗಿದ್ದರು.