ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಗುಡ್‌ನ್ಯೂಸ್‌; ಉಚಿತ ಆನ್‌ಲೈನ್ ತರಬೇತಿ ನೀಡಲು ಕೇಂದ್ರದಿಂದ ಸಿದ್ಧತೆ: ಇನ್ನಾದರೂ ಶಿಕ್ಷಣ ಮಾಫಿಯಾಕ್ಕೆ ಬೀಳುತ್ತಾ ಬ್ರೇಕ್‌?

Pralhad Joshi: ಪ್ರಧಾನಿ ನರೇಂದ್ರ ಮೋದಿ ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಉಚಿತ ಆನ್‌ಲೈನ್ ತರಬೇತಿ ಯೋಜನೆ ಘೋಷಿಸಿದ್ದು, ನಾಲ್ಕೇ ದಿನದಲ್ಲಿ ಶಿಕ್ಷಣ ಸಚಿವ ಪ್ರಲ್ಹಾದ್‌ ಜೋಶಿ ಅದನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ತ್ವರಿತ ಪ್ರಯತ್ನ ನಡೆಸಿದ್ದಾರೆ.

ಉಚಿತ ಆನ್‌ಲೈನ್ ತರಬೇತಿ ಅನುಷ್ಠಾನಕ್ಕೆ ಕೇಂದ್ರ ಸಿದ್ಧತೆ

ದೆಹಲಿಯಲ್ಲಿ ಶಿಕ್ಷಣ ಸಚಿವಾಲಯದ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಕೇಂದ್ರದ ನೂತನ ಶಿಕ್ಷಣ ಸಚಿವ ಪ್ರಲ್ಹಾದ್‌ ಜೋಶಿ. -

Profile
Siddalinga Swamy Aug 19, 2026 9:27 PM

ನವದೆಹಲಿ, ಆ. 19: ಪ್ರಧಾನಿ ನರೇಂದ್ರ ಮೋದಿ ಅವರ (PM Narendra Modi) ಘೋಷಣೆಯಂತೆ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಉಚಿತ ಆನ್‌ಲೈನ್ ತರಬೇತಿ ಯೋಜನೆ ಅನುಷ್ಠಾನಕ್ಕಾಗಿ ಕೇಂದ್ರ ಸರ್ಕಾರ ತ್ವರಿತ ಸಿದ್ಧತೆ ನಡೆಸುತ್ತಿದ್ದು, ಈ ನಿಟ್ಟಿನಲ್ಲಿ ನೂತನ ಶಿಕ್ಷಣ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ದೆಹಲಿಯಲ್ಲಿ ಬುಧವಾರ ಶಿಕ್ಷಣ ಸಚಿವಾಲಯದ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಉಚಿತ ಆನ್‌ಲೈನ್ ತರಬೇತಿ ಅನುಷ್ಠಾನ ಕುರಿತು ಮಹತ್ವದ ಚರ್ಚೆ ನಡೆಸಿದರು.

ಪ್ರಧಾನಿ ನರೇಂದ್ರ ಮೋದಿ ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಉಚಿತ ಆನ್‌ಲೈನ್ ತರಬೇತಿ ಯೋಜನೆ ಘೋಷಿಸಿದ್ದು, ನಾಲ್ಕೇ ದಿನದಲ್ಲಿ ಶಿಕ್ಷಣ ಸಚಿವ ಪ್ರಲ್ಹಾದ್‌ ಜೋಶಿ ಅವರು ಅದನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ತ್ವರಿತ ಪ್ರಯತ್ನ ನಡೆಸಿದ್ದಾರೆ.

ಈ ಉಚಿತ ಆನ್‌ಲೈನ್ ತರಬೇತಿ ಅನುಷ್ಠಾನದಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಮತ್ತವರ ಕುಟುಂಬಕ್ಕೆ ಆರ್ಥಿಕ ಹೊರೆ ತಪ್ಪುತ್ತದೆ ಎಂದು ಸಚಿವ ಪ್ರಲ್ಹಾದ್‌ ಜೋಶಿ ಸಭೆಯಲ್ಲಿ ಅಭಿಪ್ರಾಯಪಟ್ಟರು.

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಯುವಕರಿಗೆ ಉಚಿತ ಆನ್‌ಲೈನ್ ತರಬೇತಿಯಿಂದ ಹೆಚ್ಚಿನ ಅನುಕೂಲವಾಗುತ್ತದೆ. ಪರೀಕ್ಷೆ ಎದುರಿಸಲು ಸಹಕಾರಿ. ಉನ್ನತ ಶಿಕ್ಷಣ ಮತ್ತು ಆಡಳಿತಾತ್ಮಕವಾಗಿಯೂ ಇದು ಅತ್ಯುತ್ತಮ ಹೆಜ್ಜೆ ಎಂದು ಹೇಳಿದರು.

NTAಗೆ ಮೇಜರ್‌ ಸರ್ಜರಿ; 600 ಅಧಿಕಾರಿಗಳಿಗೆ ಗೇಟ್‌ಪಾಸ್‌

ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳ ಜತೆ ಅಭಿಪ್ರಾಯ ಹಂಚಿಕೊಂಡು ಸಮಗ್ರ ಚರ್ಚೆ, ಪರಿಶೀಲನೆ ನಡೆಸಿದ ಸಚಿವರು, ಈ ಉಚಿತ ಆನ್‌ಲೈನ್ ತರಬೇತಿಯಿಂದ ದೇಶಾದ್ಯಂತ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಕಲಿಕಾ ವಿಷಯ, ತಜ್ಞರ ಮಾರ್ಗದರ್ಶನ ಮತ್ತು ರಚನಾತ್ಮಕ ಸಿದ್ಧತೆ ಸಾಧ್ಯವಾಗುತ್ತದೆ ಎಂದು ಕೇಂದ್ರದ ನೂತನ ಶಿಕ್ಷಣ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.