ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ; ದೇಶಾದ್ಯಂತ ಪ್ರತಿಭಟನೆಯ ಎಚ್ಚರಿಕೆ ನೀಡಿದ ಸಿಜೆಪಿ

CJP Demands CEC Resignation: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರಿಗೆ 48 ಗಂಟೆಗಳ ಒಳಗೆ ರಾಜೀನಾಮೆ ನೀಡಬೇಕು ಎಂದು ಕಾಕ್ರೋಚ್ ಜನತಾ ಪಾರ್ಟಿ ಗಡುವು ವಿಧಿಸಿದೆ. ಜ್ಞಾನೇಶ್ ಕುಮಾರ್ ಅವರನ್ನು ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಿದ ನಂತರ ಹಲವು ರಾಜ್ಯಗಳಲ್ಲಿ ಬಿಜೆಪಿಯ ಮತಗಳ ಪಾಲು ಹೆಚ್ಚಾಗಿದೆ ಎಂದು ಸಿಜೆಪಿ ಆರೋಪಿಸಿದೆ.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ಪ್ರತಿಕಾಗೋಷ್ಠಿ ನಡೆಸಿ ದೇಶಾದ್ಯಂತ ಪ್ರತಿಭಟನೆಯ ಎಚ್ಚರಿಕೆ ನೀಡಿದ ಸಿಜೆಪಿ ನಾಯಕರು -

Priyanka P
Priyanka P Sep 24, 2026 4:31 PM

ನವದೆಹಲಿ, ಸೆ. 24: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ (Gyanesh Kumar) ಅವರಿಗೆ 48 ಗಂಟೆಗಳ ಒಳಗೆ ರಾಜೀನಾಮೆ ನೀಡಬೇಕು ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಗಡುವು ನೀಡಿದೆ. ರಾಜೀನಾಮೆ ನೀಡದಿದ್ದರೆ ದೇಶಾದ್ಯಂತ ಪ್ರತಿಭಟನೆ ನಡೆಸುವುದಾಗಿ ಸಂಘಟನೆ ಎಚ್ಚರಿಸಿದೆ. ಅಲ್ಲದೆ, ಮುಂಬರುವ ಎಲ್ಲ ರಾಜ್ಯ ವಿಧಾನಸಭಾ ಚುನಾವಣೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಬೇಕು ಎಂಬ ಬೇಡಿಕೆಯನ್ನೂ ಸಿಜೆಪಿ ಮುಂದಿಟ್ಟಿದೆ.

ಚುನಾವಣಾ ಆಯುಕ್ತರ ನಡುವಿನ ಭಿನ್ನಾಭಿಪ್ರಾಯದ ಕುರಿತು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ನಡೆಸಿದ ತನಿಖಾ ವರದಿ ಪ್ರಕಟವಾದ ಹಿನ್ನೆಲೆಯಲ್ಲಿ, ನವದೆಹಲಿಯಲ್ಲಿ ಸಿಜೆಪಿ ಪತ್ರಿಕಾಗೋಷ್ಠಿ ನಡೆಸಿ ಈ ಬೇಡಿಕೆಗಳನ್ನು ಮುಂದಿಟ್ಟಿದೆ. ಬೇಡಿಕೆ ಈಡೇರದಿದ್ದರೆ, ತಮ್ಮ ಸಂಘಟನೆ ನವದೆಹಲಿ ಮತ್ತು ದೇಶಾದ್ಯಂತ ಧರಣಿ ನಡೆಸಲಿದೆ ಎಂದು ಸಿಜೆಪಿ ಸಂಸ್ಥಾಪಕ ಮತ್ತು ಸಂಚಾಲಕ ಅಭಿಜಿತ್ ದೀಪ್ಕೆ ಹೇಳಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಸಿಜೆಪಿ ಆಗ್ರಹ:



ಸಿಜೆಪಿ ಸಹ-ಸಂಚಾಲಕ ಸೌರವ್ ದಾಸ್ ಮೂರು ಬೇಡಿಕೆಗಳನ್ನು ಮುಂದಿಟ್ಟರು. ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು. ಜ್ಞಾನೇಶ್ ಕುಮಾರ್ ಹಾಗೂ ಅವರಿಗೆ ನಿರ್ದೇಶನ ನೀಡಿದರೆಂದು ಆರೋಪಿಸಲಾಗಿರುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಮುಂಬರುವ ಎಲ್ಲ ಚುನಾವಣೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಬೇಕು ಎಂಬುದು ಅವರ ಬೇಡಿಕೆ.

ಮತ್ತೆ ಹೊಸ ಅಭಿಯಾನ ಘೋಷಿಸಿದ ಸಿಜೆಪಿ: ಸೆಪ್ಟೆಂಬರ್ 17ರಿಂದ ʼಬುಡಕಟ್ಟು ಶಾಲೆಗಳನ್ನು ಸುಧಾರಿಸಿ’ ಅಭಿಯಾನ ಪ್ರಾರಂಭ

ಇದರ ಜತೆಗೆ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಹಿಂಪಡೆದು, 2025ರ ಮತದಾರರ ಪಟ್ಟಿಯನ್ನು ಮತ್ತೆ ಆಧಾರವಾಗಿಸಬೇಕು. ಎಸ್ಐಆರ್‌ಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಸುಪ್ರೀಂ ಕೋರ್ಟ್ ನೇತೃತ್ವದ ಸಮಿತಿಯ ವಶಕ್ಕೆ ನೀಡಬೇಕು. ಚುನಾವಣಾ ಆಯುಕ್ತರ ನೇಮಕಾತಿಯನ್ನು ನಿಯಂತ್ರಿಸುವ ಪ್ರಸ್ತುತ ಕಾನೂನನ್ನು ರದ್ದುಗೊಳಿಸಬೇಕು ಎಂದು ಸಂಘಟನೆ ಒತ್ತಾಯಿಸಿತು.

ʼದಿ ಇಂಡಿಯನ್ ಎಕ್ಸ್‌ಪ್ರೆಸ್ʼ ಪತ್ರಿಕೆಯ ತನಿಖಾ ವರದಿ ಪ್ರಕಟವಾದ ಮರುದಿನವೇ ಈ ಬೇಡಿಕೆಗಳನ್ನು ಮುಂದಿಡಲಾಗಿದೆ. ಆ ವರದಿಯಲ್ಲಿ, ಚುನಾವಣಾ ಆಯುಕ್ತರಾದ ಸುಖಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಚುನಾವಣಾ ಆಯೋಗದೊಳಗಿನ ನಿರ್ಧಾರಗಳು ಮತ್ತು ಕ್ರಮಗಳ ಬಗ್ಗೆ ಕನಿಷ್ಠ 14 ಬಾರಿ ಆಕ್ಷೇಪಗಳನ್ನು ದಾಖಲಿಸಿದ್ದರು ಎಂದು ವರದಿಯಾಗಿತ್ತು.

ಆದರೆ ಈ ಭಿನ್ನಾಭಿಪ್ರಾಯಗಳು ಕೇವಲ ಚುನಾವಣಾ ಆಯೋಗದ ಚರ್ಚಾ ಪ್ರಕ್ರಿಯೆಯ ಸಾಮಾನ್ಯ ಭಾಗವೇ ಆಗಿವೆ ಎಂದು ಚುನಾವಣಾ ಆಯೋಗ ಹೇಳಿದೆ. ಇದಲ್ಲದೆ, ಕಳೆದ ಒಂದು ವರ್ಷದ ಅವಧಿಯಲ್ಲಿ ತೆಗೆದುಕೊಂಡ ನಿರ್ಧಾರಗಳು, ಎಸ್ಐಆರ್ ಕುರಿತ ನಿರ್ಧಾರವೂ ಸೇರಿ, ಸರ್ವಾನುಮತದಿಂದ ತೆಗೆದುಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

ಪಾಕಿಸ್ತಾನದ ಜತೆ ಸಿಜೆಪಿ ಸಂಬಂಧ; ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಬಿಚ್ಚಿಟ್ಟ ರಹಸ್ಯವೇನು?

ಜ್ಞಾನೇಶ್ ಕುಮಾರ್ ಅವರನ್ನು ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಿದ ನಂತರ ಹಲವು ರಾಜ್ಯಗಳಲ್ಲಿ ಬಿಜೆಪಿಯ ಮತಗಳ ಪಾಲು ಹೆಚ್ಚಾಗಿದೆ ಎಂದು ಸಿಜೆಪಿ ಆರೋಪಿಸಿದೆ. “ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆಯ ಉತ್ತುಂಗದ ಅವಧಿಯಲ್ಲಿಯೂ ಬಿಜೆಪಿ ಇಷ್ಟು ಪ್ರಮಾಣದ ಮತ ಹಂಚಿಕೆಯನ್ನು ಪಡೆಯಲು ಸಾಧ್ಯವಾಗಿರಲಿಲ್ಲ. ಮೋದಿ ಅವರಿಂದಲೂ ಸಾಧಿಸಲಾಗದಷ್ಟು ಮತ ಹಂಚಿಕೆಯನ್ನು ಬಿಜೆಪಿಗೆ ತಂದುಕೊಡಲು ಜ್ಞಾನೇಶ್ ಕುಮಾರ್ ಶ್ರಮಿಸಿದ್ದಾರೆ” ಎಂದು ದೀಪ್ಕೆ ಆರೋಪಿಸಿದ್ದಾರೆ.

ಜ್ಞಾನೇಶ್ ಕುಮಾರ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸೂಚನೆಯ ಮೇರೆಗೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಅಭಿಜಿತ್ ದೀಪ್ಕೆ ತಿಳಿಸಿದ್ದಾರೆ.