ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟು; ಸರ್ಕಾರ ನಾಳೆಯವರೆಗೆ ಸಮಯ ಕೋರಿದೆ ಎಂದ CJP

ಕೇಂದ್ರ ಸರ್ಕಾರದೊಂದಿಗೆ ಕಾಕ್ರೋಚ್‌ ಜನತಾ ಪಾರ್ಟಿ ಇಂದು ಮತ್ತೊಂದು ಸುತ್ತಿನ ಮಾತುಕತೆ ನಡೆಸಿದೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ನೀಡದಿದ್ದರೆ ಮಾತುಕತೆ ನಡೆಸಿ ಯಾವುದೇ ಪ್ರಯೋಜನವಿಲ್ಲ ಎಂದು ಸಿಜೆಪಿ ನಾಯಕ ಅಭಿಜಿತ್‌ ದೀಪ್ಕೆ ಹೇಳಿದ್ದಾರೆ.

ಪ್ರಧಾನ್‌ ರಾಜೀನಾಮೆಗೆ ಸರ್ಕಾರ ನಾಳೆಯವರೆಗೆ ಸಮಯ ಕೋರಿದೆ ಎಂದ CJP

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Jul 24, 2026 3:32 PM

ನವದೆಹಲಿ: ಕೇಂದ್ರ ಸರ್ಕಾರದೊಂದಿಗೆ ಕಾಕ್ರೋಚ್‌ ಜನತಾ ಪಾರ್ಟಿ (CJP) ಇಂದು ಮತ್ತೊಂದು ಸುತ್ತಿನ ಮಾತುಕತೆ ನಡೆಸಿದೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ನೀಡದಿದ್ದರೆ ಮಾತುಕತೆ ನಡೆಸಿ ಯಾವುದೇ ಪ್ರಯೋಜನವಿಲ್ಲ (Dharmendra Pradhan resignation) ಎಂದು ಸಿಜೆಪಿ ನಾಯಕ ಅಭಿಜಿತ್‌ ದೀಪ್ಕೆ ಹೇಳಿದ್ದಾರೆ. ಅಷ್ಟೇ ಅಲ್ಲದೇ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ನೀಡಬೇಕು ಎಂದು ಆಗ್ರಹಿಸಲಾಗಿದೆ.

ಕಾನ್ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ಸುಮಾರು ಎರಡು ಗಂಟೆಗಳ ಕಾಲ ನಡೆದ ಸಭೆಯ ನಂತರ, ಸಿಜೆಪಿ ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ, ಸರ್ಕಾರವು ತಮ್ಮ ಎರಡು ಬೇಡಿಕೆಗಳಿಗೆ ಒಪ್ಪಿಕೊಂಡಿದೆ ಎಂದು ಹೇಳಿದ್ದಾರೆ. ಆತ್ಮಹತ್ಯೆಯಿಂದ ಸಾವನ್ನಪ್ಪಿದ ನೀಟ್ ಆಕಾಂಕ್ಷಿಗಳ ಕುಟುಂಬಗಳಿಗೆ ಪರಿಹಾರ ಮತ್ತು ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಸರ್ಕಾರ ತಿಳಿಸಿದೆ ಎಂದು ಅವರು ಹೇಳಿದ್ದಾರೆ.

"ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ನಮ್ಮ ಬೇಡಿಕೆಯ ಮೇರೆಗೆ ಸರ್ಕಾರ ನಾಳೆ ಮಧ್ಯಾಹ್ನದವರೆಗೆ ಸಮಯ ಕೇಳಿದೆ. ಸರ್ಕಾರ ಶೀಘ್ರದಲ್ಲೇ ಅವರನ್ನು ತೆಗೆದುಹಾಕುತ್ತದೆ ಎಂದು ನಾವು ಭಾವಿಸುತ್ತೇವೆ" ಎಂದು ರಾಂಕಾ ಹೇಳಿದ್ದಾರೆ. ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ಮತ್ತು ಸಿಜೆಪಿ ನಾಯಕರ ನಡುವಿನ ಮೂರನೇ ಸುತ್ತಿನ ಸಭೆ ಶನಿವಾರ ನಡೆಯಲಿದೆ. ಸೋನಮ್ ವಾಂಗ್ಚುಕ್ ಅವರು ಉಪವಾಸ ಕೊನೆಗೊಳಿಸಿದರೂ, ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್​​ ಜನತಾ ಪಕ್ಷ) ಪ್ರತಿಭಟನೆಯು ಮುಂದುವರಿಯುತ್ತದೆ. ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ, ‘ಧರ್ಮೇಂದ್ರ ಪ್ರಧಾನ್ ಅವರು ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೂ ನಮ್ಮ ಶಾಂತಿಯುತ ಪ್ರತಿಭಟನೆ ಮುಂದುವರಿಯುತ್ತದೆ’ ಎಂದು ಸ್ಪಷ್ಟಪಡಿಸಿದ್ದಾರೆ.

ಅಭಿಜೀತ್ ದೀಪ್ಕೆ ‘ಸೋನಮ್ ಸರ್ ಅವರ ಜೀವನ ದೇಶಕ್ಕೆ ಬಹಳ ಅಮೂಲ್ಯವಾದುದು. ಅವರು ಉಪವಾಸ ಮುರಿದಿದ್ದು ನಮಗೆ ಸಂತೋಷ ಮತ್ತು ಸಮಾಧಾನ ತಂದಿದೆ. ಆದರೆ ಅವರ 26 ದಿನಗಳ ತ್ಯಾಗ ವ್ಯರ್ಥವಾಗಲು ನಾವು ಬಿಡುವುದಿಲ್ಲ. ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾವು ಮುಂದುವರಿಸುತ್ತೇವೆ’ ಎಂದಿದ್ದಾರೆ.

ಸಿಜೆಪಿ ಪ್ರತಿಭಟನೆ ಹಿನ್ನೆಲೆ: ಸತತ ಮೂರನೇ ದಿನವೂ ಮುಚ್ಚಿದ ದೆಹಲಿಯ 17 ಮೆಟ್ರೋ ನಿಲ್ದಾಣಗಳು

ಸದ್ಯ ಕೇಂದ್ರ ಸರ್ಕಾರ ಶಾಂತಿಯುತ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ಭರವಸೆ ನೀಡಿದೆ. ಪರೀಕ್ಷಾ ಸುಧಾರಣೆಗಳು, ನೀಟ್ ಪತ್ರಿಕೆ ಸೋರಿಕೆಯಿಂದ ಪ್ರಭಾವಿತರಾದ ವಿದ್ಯಾರ್ಥಿಗಳ ಕುಟುಂಬಗಳಿಗೆ ಪರಿಹಾರ ಒದಗಿಸುವುದು ಸೇರಿದಂತೆ ಕೆಲವು ಮುಖ್ಯ ಬೇಡಿಕೆಗಳನ್ನು ಪರಿಗಣಿಸುವುದಾಗಿ ಸರ್ಕಾರ ಭರವಸೆ ನೀಡಿದ್ದರಿಂದ ಸೋನಮ್ ವಾಂಗ್ಚುಕ್ ಉಪವಾಸವನ್ನು ಕೊನೆಗೊಳಿಸಿದ್ದಾರೆ.