ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಜಾರ್ಖಂಡ್ ಪ್ರತಿಭಟನೆಗೆ ಸಿಜೆಪಿಯ ಅಭಿಜಿತ್ ದೀಪ್ಕೆ ಬೆಂಬಲ: ಮುಂದುವರಿದ ವಿದ್ಯಾರ್ಥಿಗಳ ಉಪವಾಸ ಸತ್ಯಾಗ್ರಹ

CJP's Abhijit Dipke: ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳು ತಿಂಗಳಿನಿಂದ ಧರಣಿ ನಡೆಸುತ್ತಿದ್ದಾರೆ. ಈ ಪೈಕಿ ಕೆಲವರು ಆರೋಪಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ರಾಂಚಿಯಲ್ಲಿ ಪ್ರತಿಭಟನಾಕಾರರು 14ನೇ ಜೆಪಿಎಸ್‌ಸಿ ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ ಅಕ್ರಮಗಳನ್ನು ಆರೋಪಿಸಿದ್ದಾರೆ.

ಜಾರ್ಖಂಡ್ ಪ್ರತಿಭಟನೆಗೆ ಸಿಜೆಪಿಯ ಅಭಿಜಿತ್ ದೀಪ್ಕೆ ಬೆಂಬಲ

ಜಾರ್ಖಂಡ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದ ವಿದ್ಯಾರ್ಥಿಗಳು -

Priyanka P
Priyanka P Aug 5, 2026 2:46 PM

ರಾಂಚಿ, ಆ. 5: ದೆಹಲಿ ಬಳಿಕ ಇದೀಗ ಜಾರ್ಖಂಡ್‌ನಲ್ಲಿ (Jharkhand) ವಿದ್ಯಾರ್ಥಿಗಳು ಪ್ರತಿಭಟನೆ (Students Protest) ನಡೆಸುತ್ತಿದ್ದಾರೆ. ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳು ಕಳೆದ ತಿಂಗಳಿನಿಂದ ಧರಣಿ ನಡೆಸುತ್ತಿದ್ದಾರೆ. ಅವರಲ್ಲಿ ಕೆಲವರು ಪರೀಕ್ಷಾ ಅಕ್ರಮಗಳನ್ನು ಆರೋಪಿಸಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾರೆ. ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ(CJP) ನೇತೃತ್ವದ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಹಿಂತೆಗೆದುಕೊಂಡ ಕೆಲವು ದಿನಗಳ ನಂತರ ಪ್ರಾರಂಭವಾದ ಈ ಆಂದೋಲನವು ಜುಲೈ 29ರಿಂದ ರಾಂಚಿಯ ಜೈಪಾಲ್ ಸಿಂಗ್ ಮುಂಡಾ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.

ರಾಂಚಿಯಲ್ಲಿ ಪ್ರತಿಭಟನಾಕಾರರು 14ನೇ ಜೆಪಿಎಸ್‌ಸಿ ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ ಅಕ್ರಮಗಳನ್ನು ಆರೋಪಿಸಿದ್ದಾರೆ. ಕೆಲವು ಪ್ರತಿಭಟನಾಕಾರರು ಉಪವಾಸ ಸತ್ಯಾಗ್ರಹ ನಡೆಸುತ್ತಿರುವುದರಿಂದ ಮಂಗಳವಾರ (ಆ. 4) ಇನ್ನೂ ಐದು ಮಂದಿ ತಮ್ಮ ಬೇಡಿಕೆಗಳನ್ನು ಈಡೇರಿಸಲು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ನಂತರ ಪ್ರತಿಭಟನೆ ತೀವ್ರಗೊಂಡಿತು. ವಿದ್ಯಾರ್ಥಿಗಳ ಆಂದೋಲನದ ನಂತರ ಉಪವಾಸ ಸತ್ಯಾಗ್ರಹ ಪ್ರಾರಂಭವಾಯಿತು.

ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ವಿದ್ಯಾರ್ಥಿಗಳಿಗೆ ಬೆಂಬಲ ನೀಡುವುದರೊಂದಿಗೆ ರಾಂಚಿಯ ಪ್ರತಿಭಟನೆ ಇನ್ನಷ್ಟು ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್‌ಎಸ್‌ಸಿ) ನಡೆಸಿದ ನೇಮಕಾತಿ ಪರೀಕ್ಷೆಗಳಲ್ಲಿ ನಡೆದ ಅಕ್ರಮಗಳ ಬಗ್ಗೆ ಕೇಂದ್ರ ಸಂಸ್ಥೆಗಳಿಂದ ತನಿಖೆ ನಡೆಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸುತ್ತಿರುವುದರಿಂದ ಕಳೆದ ಒಂದು ವಾರದಿಂದ ರಾಂಚಿಯಲ್ಲಿ ಪ್ರತಿಭಟನೆಗಳು ತೀವ್ರಗೊಂಡಿವೆ.

ಸಿಎಂ ಸುವೇಂದು ಅಧಿಕಾರಿ ಮೇಲೆ ನಿಗಾ, ಸಿಜೆಪಿ ಪ್ರತಿಭಟನೆಯಲ್ಲಿ ಸೇರಿಕೊಳ್ಳಲು ಪ್ರಯತ್ನ

ಅಕ್ರಮಗಳ ಆರೋಪ ಎದುರಿಸುತ್ತಿರುವ ಖಾಸಗಿ ಸಂಸ್ಥೆ ಟಿಡಿಪಿಎಲ್ ನಡೆಸುವ ಎಲ್ಲ ಪರೀಕ್ಷೆಗಳನ್ನು ರದ್ದುಗೊಳಿಸುವಂತೆಯೂ ಅವರು ಒತ್ತಾಯಿಸುತ್ತಿದ್ದಾರೆ. ಒಎಂಆರ್ ಶೀಟ್‌ನಲ್ಲೂ ಅಕ್ರಮ ನಡೆದಿದೆ ಎಂಬುದನ್ನೂ ಪ್ರತಿಭಟನಾನಿರತ ವಿದ್ಯಾರ್ಥಿಗಳು ಹಾಗೂ ಪರೀಕ್ಷಾ ಅಭ್ಯರ್ಥಿಗಳು ಆರೋಪಿಸಿದ್ದಾರೆ.

ಜಾರ್ಖಂಡ್ ಕ್ರಾಂತಿಕಾರಿ ಲೋಕತಾಂತ್ರಿಕ ಮೋರ್ಚಾ (ಜೆಕೆಎಲ್‌ಎಂ) ನಾಯಕ ದೇವೇಂದ್ರನಾಥ್ ಮಹತೋ ಈ ವಾರದ ಆರಂಭದಲ್ಲಿ ರಾಂಚಿಯ ಜೈಪಾಲ್ ಸಿಂಗ್ ಮುಂಡಾ ಕ್ರೀಡಾಂಗಣದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದರು. ತೀವ್ರಗೊಂಡ ಆಂದೋಲನದ ಎಚ್ಚರಿಕೆಗಳ ನಡುವೆಯೂ ಇತರ ಪ್ರತಿಭಟನಾಕಾರರು ಅವರೊಂದಿಗೆ ಸೇರಿಕೊಂಡರು.

ಅಕ್ರಮಗಳ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವರ್ತನೆಯು ವಿದ್ಯಾರ್ಥಿಗಳು, ಯುವಕರು ಮತ್ತು ಆಕಾಂಕ್ಷಿಗಳ ಮನೋಸ್ಥೈರ್ಯ ಕುಗ್ಗಿಸುತ್ತಿದೆ ಎಂದು ಉಪವಾಸ ಸತ್ಯಾಗ್ರಹ ಆರಂಭಿಸುವ ಮುನ್ನ ಹೇಳಿದರು. ವಿದ್ಯಾರ್ಥಿಗಳನ್ನು ಪ್ರೇರೇಪಿಸಲು ನಾನು ಉಪವಾಸ ಸತ್ಯಾಗ್ರಹವನ್ನು ಪ್ರಾರಂಭಿಸುತ್ತಿದ್ದೇನೆ ಎಂದು ಅವರು ತಿಳಿಸಿದರು. ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ವಿಧಾನಸಭಾ ಮಾರ್ಚ್ ನಡೆಸುವುದಾಗಿ ವಿದ್ಯಾರ್ಥಿಗಳು ಘೋಷಿಸಿದರು.

ಇನ್ನು ದೆಹಲಿಯ ಜಂತರ್ ಮಂತರ್‌ನಲ್ಲಿ ನೀಟ್ ಪತ್ರಿಕೆ ಸೋರಿಕೆ ವಿರುದ್ಧ ನಡೆದ ಬೃಹತ್ ವಿದ್ಯಾರ್ಥಿಗಳ ನೇತೃತ್ವದ ಪ್ರತಿಭಟನೆ ವಹಿಸಿದ್ದ ಸಿಜೆಪಿ, ರಾಂಚಿ ಪ್ರತಿಭಟನೆಗಳಿಗೂ ಬೆಂಬಲ ನೀಡಿತು. ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ವಿಡಿಯೊ ಕಾಲ್ ಮೂಲಕ ವಿದ್ಯಾರ್ಥಿ ನಾಯಕರೊಂದಿಗೆ ಮಾತನಾಡಿದ್ದಾಗಿ ಹೇಳಿದ್ದಾರೆ.