ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Anti-Maoist operation: ನಕ್ಸಲರ ವಿರುದ್ಧ ಕಾರ್ಯಾಚರಣೆ; ಕೋಬ್ರಾ ಕಮಾಂಡೋ ಹುತಾತ್ಮ, ಓರ್ವ ಮಾವೋಮವಾದಿಯ ಹತ್ಯೆ

ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಗುರುವಾರ ನಡೆದ (Anti-Maoist operation) ಮಾವೋವಾದಿ ವಿರೋಧಿ ಕಾರ್ಯಾಚರಣೆಯಲ್ಲಿ ಸಿಆರ್‌ಪಿಎಫ್‌ನ ಕೋಬ್ರಾ ಕಮಾಂಡೋ ಒಬ್ಬರು ಹುತಾತ್ಮರಾಗಿದ್ದಾರೆ. ತುಮ್ರೆಲ್ ಗ್ರಾಮ ಪ್ರದೇಶದಲ್ಲಿ ಕಾರ್ಯಾಚರಣೆ ಮುಂದುವರೆದಿದೆ. ಕಾರ್ಯಾಚರಣೆಯಲ್ಲಿ ಓರ್ವ ನಕ್ಸಲ್‌ನನ್ನು ಹೊಡೆದುರುಳಿಸಲಾಗಿದೆ ಎಂದು ತಿಳದು ಬಂದಿದೆ.

ನಕ್ಸಲರ ವಿರುದ್ಧ ಕಾರ್ಯಾಚರಣೆ;  ಕೋಬ್ರಾ ಕಮಾಂಡೋ ಹುತಾತ್ಮ

Profile Vishakha Bhat May 22, 2025 4:52 PM

ರಾಯ್ಪುರ್‌: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಗುರುವಾರ ನಡೆದ (Anti-Maoist operation) ಮಾವೋವಾದಿ ವಿರೋಧಿ ಕಾರ್ಯಾಚರಣೆಯಲ್ಲಿ ಸಿಆರ್‌ಪಿಎಫ್‌ನ ಕೋಬ್ರಾ ಕಮಾಂಡೋ ಒಬ್ಬರು ಹುತಾತ್ಮರಾಗಿದ್ದಾರೆ. ತುಮ್ರೆಲ್ ಗ್ರಾಮ ಪ್ರದೇಶದಲ್ಲಿ ಕಾರ್ಯಾಚರಣೆ ಮುಂದುವರೆದಿದೆ. ಕಾರ್ಯಾಚರಣೆಯನ್ನು ಸಿಆರ್‌ಪಿಎಫ್‌ನ ಕೋಬ್ರಾದ 210 ನೇ ಬೆಟಾಲಿಯನ್ ನೇತೃತ್ವ ವಹಿಸಿದ್ದು, ಛತ್ತೀಸ್‌ಗಢ ಪೊಲೀಸ್ ಡಿಆರ್‌ಜಿ ಮತ್ತು ಎಸ್‌ಟಿಎಫ್‌ನ ಪಡೆಗಳು ಜಂಟಿ ಕಾರ್ಯಾಚರಣೆ ನಡೆಸುತ್ತಿವೆ. ಕಾರ್ಯಾಚರಣೆಯಲ್ಲಿ ಓರ್ವ ನಕ್ಸಲ್‌ನನ್ನು ಹೊಡೆದುರುಳಿಸಲಾಗಿದೆ ಎಂದು ತಿಳದು ಬಂದಿದೆ.

ಕಾರ್ಯಾಚರಣೆಯಲ್ಲಿ 3 ಕೋಬ್ರಾ ಕಮಾಂಡೋಗಳಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ. ಗಾಯಾಳುಗಳನ್ನು ಸ್ಥಳಾಂತರಿಸಲು ಐಎಎಫ್ ಹೆಲಿಕಾಪ್ಟರ್ ಅನ್ನು ಸೇವೆಗೆ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೇ 21 ರಂದು ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ನಕ್ಸಲರು ಮತ್ತು ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್ಜಿ) ಯೋಧರ ನಡುವೆ ಗುಂಡಿನ ಚಕಮಕಿ ನಡೆದಿದೆ. ಘಟನೆಯಲ್ಲಿ ಪ್ರಮುಖ ನಕ್ಸಲ್ ನಾಯಕ ನಂಬಲ ಕೇಶವ್ ರಾವ್ ಅಲಿಯಾಸ್ ಬಸವ್ ರಾಜ್ ಸೇರಿದಂತೆ 30 ನಕ್ಸಲರು ಹತರಾಗಿದ್ದಾರೆ.

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯ ತೆಲಂಗಾಣ ಗಡಿಯಲ್ಲಿರುವ ಕರ್ರೆಗುಟ್ಟ ಬೆಟ್ಟಗಳ ಬಳಿಯ ಅರಣ್ಯದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ 15 ನಕ್ಸಲರು ಹತರಾದ ಕೇವಲ ಎರಡು ವಾರಗಳ ನಂತರ ಇದು ಸಂಭವಿಸಿದೆ. ಭದ್ರತಾ ಪಡೆಗಳು ಛತ್ತೀಸ್‌ಗಢದಾದ್ಯಂತ ನಕ್ಸಲರ ವಿರುದ್ಧ ಕಾರ್ಯಾಚರಣೆ ಶುರು ಮಾಡಿದ್ದಾರೆ.

ಏ.21 ರಿಂದ ಮೇ 11 ರ ನಡುವೆ ಛತ್ತೀಸ್‌ಗಢ ಹಾಗೂ ತೆಲಂಗಾಣ ಗಡಿಯಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಮತ್ತು ರಾಜ್ಯ ಪೊಲೀಸರ ಜಂಟಿ ಪಡೆಗಳು ನಡೆಸಿದ್ದ ಕಾರ್ಯಾಚರಣೆಯಲ್ಲಿ 31 ನಕ್ಸಲರನ್ನು ಹತ್ಯೆ ಮಾಡಲಾಗಿತ್ತು. ಕಾರ್ಯಾಚರಣೆಯಲ್ಲಿ ಒಟ್ಟು 214 ನಕ್ಸಲ್ ಅಡಗುತಾಣಗಳನ್ನು ನಾಶಮಾಡಲಾಗಿತ್ತು.ಈ ಕಾರ್ಯಾಚರಣೆಯಲ್ಲಿ ಒಟ್ಟು 450 ಐಇಡಿಗಳು, 818 ಬಿಜಿಎಲ್ ಶೆಲ್‌ಗಳು, 899 ಬಂಡಲ್ ಕೋಡೆಕ್ಸ್, ಡಿಟೋನೇಟರ್‌ಗಳು ಮತ್ತು ಅಪಾರ ಪ್ರಮಾಣದ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ಈ ಸುದ್ದಿಯನ್ನೂ ಓದಿ: Naxal Encounter‌: ಭದ್ರತಾ ಪಡೆಗಳಿಂದ ಭರ್ಜರಿ ಕಾರ್ಯಾಚರಣೆ; ನಕ್ಸಲ್‌ ಕಮಾಂಡರ್‌ ಸೇರಿ 30 ಮಾವೋವಾದಿಗಳ ಎನ್‌ಕೌಂಟರ್‌

ಮಾರ್ಚ್‌ನಲ್ಲಿ ದಂತೇವಾಡದಲ್ಲಿ ತಲೆಗೆ 25 ಲಕ್ಷ ರೂ. ಇನಾಮು ಹೊಂದಿದ್ದ ಮಹಿಳಾ ನಕ್ಸಲ್‌ ಹತಳಾಗಿದ್ದಾಳೆ. ರೇಣುಕಾ ಅಲಿಯಾಸ್ ಬಾನು ಎಂದು ಗುರುತಿಸಲಾದ ಮಹಿಳೆ ಇಂದು ಬೆಳಿಗ್ಗೆ 9 ಗಂಟೆಯಿಂದ ಮಾವೋವಾದಿಗಳು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ನಿರಂತರ ಗುಂಡಿನ ಚಕಮಕಿಯಲ್ಲಿ ಹತಳಾಗಿದ್ದಾಳೆ. ಬಾನು ನಕ್ಸಲರ ಮಾಧ್ಯಮ ತಂಡದ ಉಸ್ತುವಾರಿ ವಹಿಸಿದ್ದಳು. ಆಕೆ ತೆಲಂಗಾಣದ ವಾರಂಗಲ್ ಜಿಲ್ಲೆಯ ನಿವಾಸಿಯಾಗಿದ್ದಳು ಎಂದು ತಿಳಿದು ಬಂದಿದೆ. ಎನ್‌ಕೌಂಟರ್ ಸ್ಥಳದಿಂದ ಒಂದು INSAS ರೈಫಲ್ ಜೊತೆಗೆ ಇತರ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.