ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಕಾಂಗ್ರೆಸ್ ನಾಯಕರು ಪೊಲೀಸ್ ವಶಕ್ಕೆ; ಪ್ರಧಾನಿ ನಿವಾಸದ ಮುಂದೆ ಹೈಡ್ರಾಮ
Rahul Gandhi: ದೆಹಲಿಯ 7 ಲೋಕ್ ಕಲ್ಯಾಣ ಮಾರ್ಗ್‌ನಲ್ಲಿರುವ ಪ್ರಧಾನಿಯ ಅಧಿಕೃತ ನಿವಾಸದ ಹೊರಗೆ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಪ್ರಧಾನಿ ನಿವಾಸದ ಬಳಿ ಹೈಡ್ರಾಮಾ ಮುಂದುವರಿದಿದೆ.
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು -
ದೆಹಲಿ, ಜು. 21: ನೀಟ್ ಪ್ರಶ್ನೆ ಪತ್ರಿಕೆ ಹಗರಣದ ವಿರುದ್ದ ನಡೆಯುತ್ತಿರುವ ಪ್ರತಿಭಟನೆ ತಾರಕಕ್ಕೇರಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi) ನಿವಾಸದ ಬಳಿಗೂ ತಲುಪಿದೆ. ದೆಹಲಿಯ 7 ಲೋಕ್ ಕಲ್ಯಾಣ ಮಾರ್ಗ್‌ನಲ್ಲಿರುವ ಪ್ರಧಾನಿಯ ಅಧಿಕೃತ ನಿವಾಸದ ಹೊರಗೆ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ (Rahul Gandhi), ಪ್ರಿಯಾಂಕಾ ಗಾಂಧಿ (Priyanka Gandhi) ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನೆ ನಡೆಸುತ್ತಿದ್ದ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸದ್ಯ ಸ್ಥಳದಿಂದ ತೆರಳಿದ್ದಾರೆ. ಸದ್ಯ ಪ್ರಧಾನಿ ನಿವಾಸದ ಬಳಿ ಹೈಡ್ರಾಮ ಮುಂದುವರಿದಿದೆ.
ಇನ್ನು ಪ್ರತಿಭಟನೆ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, ʼʼಸೋಮವಾರ ವಿದ್ಯಾರ್ಥಿಗಳ ಮೇಲೆ ನಡೆದ ದೌರ್ಜನ್ಯಕ್ಕೆ ಪ್ರಧಾನಿ ಮೋದಿ ಅವರಿಂದ ಉತ್ತರದಾಯಿತ್ವವನ್ನು ಕೇಳಲು ನಾವು ಅವರ ನಿವಾಸಕ್ಕೆ ಪ್ರತಿಭಟನಾ ಮೆರವಣಿಗೆ ನಡೆಸಿದ್ದೇವೆ. ಸರ್ಕಾರವು ಯಾವುದೇ ಹೊಣೆಗಾರಿಕೆಯನ್ನು ತೆಗೆದುಕೊಳ್ಳಲು ಬಯಸುವುದಿಲ್ಲ ಅಥವಾ ಸಂಸತ್ತಿನಲ್ಲಿ ಈ ಕುರಿತು ಚರ್ಚೆ ನಡೆಸಲು ಸಿದ್ಧವಿಲ್ಲ. ಭಾರತದ ಯುವಕರ ಭವಿಷ್ಯವನ್ನು ಹಾಳುಮಾಡುತ್ತಿರುವ ಪ್ರಧಾನಿ ಹಾಗೂ ಗೃಹ ಸಚಿವರು ತಕ್ಷಣವೇ ರಾಜೀನಾಮೆ ನೀಡಬೇಕುʼʼ ಎಂದು ಆಗ್ರಹಿಸಿದ್ದಾರೆ.
ಪೊಲೀಸ್ ವಶದಲ್ಲಿ ರಾಹುಲ್ ಗಾಂಧಿ:
#WATCH | Delhi: Lok Sabha LoP and Congress MP Rahul Gandhi seen inside a bus after being detained by police from the protest site at Lok Kalyan Marg.
— ANI (@ANI) July 21, 2026
(Source: Congress) pic.twitter.com/RZS81IbIRw
ಪ್ರಧಾನಿ ರಾಜೀನಾಮೆ ನೀಡಬೇಕು
ಇನ್ನು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರಿಗೆ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ. ವೇಣುಗೋಪಾಲ್, ಪವನ್ ಖೇರಾ, ಅಮರಿಂದರ್ ಸಿಂಗ್ ರಾಜ, ದೀಪೇಂದರ್ ಹೂಡ, ಡಿ.ಕೆ. ಶಿವಕುಮಾರ್ ಮತ್ತಿತರರು ಬೆಂಬಲ ನೀಡಿದರು.
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆಯುವ ವಿಡಿಯೊ ವೈರಲ್:
#WATCH | Delhi: Visuals of Lok Sabha LoP Rahul Gandhi, protesting with Opposition leaders and workers at Lok Kalyan Marg being detained by Delhi Police.
— ANI (@ANI) July 21, 2026
(Source: Congress) pic.twitter.com/j9cOkbJrwW
ವಿಡಿಯೊ ವೈರಲ್
ರಾಹುಲ್ ಗಾಂಧಿ ಅವರನ್ನು ವಶಕ್ಕೆ ಪಡೆಯಲು ಆಗಮಿಸಿದ ಪೊಲೀಸರು ಇದಕ್ಕಾಗಿ ಹರಸಾಹಸಪಡಬೇಕಾಯ್ತು. ಕಾಂಗ್ರೆಸ್ ಕಾರ್ಯಕರ್ತರು ಸುತ್ತುವರೆದು ಅವರಿಗೆ ರಕ್ಷಾ ಕವಚವಾಗಿ ನಿಂತಿದ್ದರಿಂದ ಪೊಲೀಸರು ಒದ್ದಾಡಬೇಕಾಯ್ತು. ಸದ್ಯ ರಾಹುಲ್ ಗಾಂಧಿ ಅವರನ್ನು ಪೊಲೀಸರು ವದಕ್ಕೆ ಪಡೆಯುತ್ತಿರುವ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪೊಲೀಸರು ವಸಕ್ಕೆ ಪಡೆಯುವ ವೇಳೆ ರಾಹುಲ್ ಗಾಂಧಿ ಮೂಗಿನಲ್ಲಿ ರಕ್ತ ಸೀರಿದ್ದು, ಕೆಲ ಹೊತ್ತು ಆತಂಕ ಸೃಷ್ಟಿಯಾಯಿತು.
ಹಿಂಸೆಗೆ ತಿರುಗಿದ ಸಿಜೆಪಿ ಪ್ರತಿಭಟನೆ; ಗಂಭೀರ ಗಾಯಗೊಂಡ 20 ವರ್ಷದ ಮಹಿಳೆ ಐಸಿಯುಗೆ ದಾಖಲು
ಪೊಲೀಸರು ವಶಕ್ಕೆ ತೆಗೆದುಕೊಳ್ಳುವ ಮುನ್ನ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು. ʼʼವಿದ್ಯಾರ್ಥಿಗಳ ವಿರುದ್ಧದ ಹಲ್ಲೆ ಪ್ರತಿ ಭಾರತೀಯನ ಮೇಲೆನಿ ಹಲ್ಲೆಗೆ ಸಮ. ಪ್ರಧಾನಿ ಮೋದಿ ಹೊಣೆಯಿಂದ ತಪ್ಪಿಸಿಕೊಳ್ಳಬಹುದು ಎಂದುಕೊಂಡಿದ್ದಾರೆ. ಆದರೆ ಈ ಬಾರಿ ಇದು ಸಾಧ್ಯವಿಲ್ಲ. ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದುಕೊಳ್ಳುವ ಪ್ರತಿ ದೇಶಭಕ್ತ ಭಾರತೀಯ ಪ್ರಧಾನಿ ನಿವಾಸದ ಮುಂದೆ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕು. ಭಾರತೀಯ ವಿದ್ಯಾರ್ಥಿಗಳ ಧ್ವನಿ ಹತ್ತಿಕ್ಕಲು ಬಿಡಬಾರದುʼʼ ಎಂದು ಕರೆ ನೀಡಿದರು.
ಪ್ರಧಾನಿ ನಿವಾಸದ ಬಳಿಯಿಂದ ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆದು ಅಪರಿಚಿತ ಜಾಗಕ್ಕೆ ಸ್ಥಳಾಂತರಿಸಲಾಗಿದೆ ಎಂದು ಪಕ್ಷದ ವಕ್ತಾರ ಗೌರವ್ ಪಾಂಡಿ ತಿಳಿಸಿದ್ದಾರೆ. ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಸಹಿಸಲು ಸಾಧ್ಯವಿಲ್ಲ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.
ದೆಹಲಿಯಲ್ಲಿ ಹಿಂಸಾಚಾರಕ್ಕೆ ತಿರುಗಿದ ಸಿಜೆಪಿ ಪ್ರತಿಭಟನೆ: 4 ಎಫ್‌ಐಆರ್ ದಾಖಲು
ಕೇಂದ್ರದ ಪ್ರಕಾರ ಕಾಂಗ್ರೆಸ್ ಪ್ರತಿಭಟನೆಗೆ ಆಯ್ದುಕೊಂಡಿರುವ ಸ್ಥಳ ಪ್ರತಿಭಟನೆಗೆ ಸೂಕ್ತವಲ್ಲ. ಪ್ರಧಾನಿ ನಿವಾಸದ ಬಳಿ ಪ್ರತಿಭಟನೆ ನಡೆಸುವಂತಿಲ್ಲ. ಇದೇ ಕಾರಣಕ್ಕೆ ಪ್ರತಿಭಟನಾಕಾರರನ್ನು ಸ್ಥಳಾಂತರಿಸಲಾಗಿದೆ.
ದೇಶದ ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.