ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಸಿಎಂ ಹುದ್ದೆ ಬಿಟ್ಟು ಬೇರೆ ಯಾವುದೂ ಬೇಡ: ಕೇರಳಂ ಕಾಂಗ್ರೆಸ್ ನಾಯಕ ಸತೀಶನ್ ಪಟ್ಟು, ಇಕ್ಕಟ್ಟಿನಲ್ಲಿ ಹೈಕಮಾಂಡ್

Congress leader VD Satheesan: ಕೇರಳಂನ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿ ಕಾಂಗ್ರೆಸ್ ನಾಯಕ ವಿ.ಡಿ. ಸತೀಶನ್ ತಮ್ಮ ನಿಲುವನ್ನು ಮತ್ತಷ್ಟು ಕಠಿಣಗೊಳಿಸಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ಮುಖ್ಯಮಂತ್ರಿ ಹುದ್ದೆಯನ್ನು ಹೊರತುಪಡಿಸಿ ಬೇರೆ ಯಾವುದೇ ಸ್ಥಾನವನ್ನು ಸ್ವೀಕರಿಸಲು ತಾವು ಸಿದ್ಧರಿಲ್ಲ ಎಂಬುದನ್ನು ಅವರು ಸ್ಪಷ್ಟಪಡಿಸಿದ್ದಾರೆ.

ಸಿಎಂ ಹುದ್ದೆ ಬಿಟ್ಟು ಬೇರೆ ಯಾವುದೂ ಬೇಡ: ಕಾಂಗ್ರೆಸ್‌ ನಾಯಕ ಸತೀಶನ್ ಪಟ್ಟು

ಸತೀಶನ್, ರಾಹುಲ್ ಗಾಂಧಿ (ಸಂಗ್ರಹ ಚಿತ್ರ) -

Priyanka P
Priyanka P May 11, 2026 8:07 PM

ತಿರುವನಂತಪುರಂ, ಮೇ 11: ಕೇರಳಂನ (Keralam) ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿ, ಕಾಂಗ್ರೆಸ್ ನಾಯಕ ವಿ.ಡಿ. ಸತೀಶನ್ (VD Satheesan) ತಮ್ಮ ನಿಲುವನ್ನು ಮತ್ತಷ್ಟು ಬಿಗಿಗೊಳಿಸಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ಮುಖ್ಯಮಂತ್ರಿ ಹುದ್ದೆಯನ್ನು ಹೊರತುಪಡಿಸಿ ಬೇರೆ ಯಾವುದೇ ಸ್ಥಾನವನ್ನು ಸ್ವೀಕರಿಸಲು ತಾವು ಸಿದ್ಧವಿಲ್ಲ ಎಂಬುದನ್ನು ಅವರು ಸ್ಪಷ್ಟಪಡಿಸಿದ್ದಾರೆ. ಇದು ಕಾಂಗ್ರೆಸ್ ಹೈಕಮಾಂಡ್‍ಗೆ (Congress high command) ಕಗ್ಗಂಟಾಗಿ ಪರಿಣಮಿಸಿದೆ. ಇದೇ ಕಾರಣಕ್ಕೆ ಚುನಾವಣೆ ಫಲಿತಾಂಶ ಪ್ರಕಟಗೊಂಡು ವಾರವಾದರೂ ಮುಖ್ಯಮಂತ್ರಿ ಯಾರೆನ್ನುವುದು ಇನ್ನೂ ತೀರ್ಮಾನವಾಗಿಲ್ಲ.

ಒಂದು ವಾರದಿಂದ ನಡೆಯುತ್ತಿರುವ ಈ ಬಿಕ್ಕಟ್ಟು ಕರ್ನಾಟಕದಲ್ಲಿ ನಡೆದಿದ್ದ ಪರಿಸ್ಥಿತಿಯನ್ನು ನೆನಪಿಸಿದೆ. ಸಿಎಂ ಹುದ್ದೆಗಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ತೀವ್ರ ಪೈಪೋಟಿ ನಡೆಯುತ್ತಿದ್ದು, ಇದು ಅವರ ಬೆಂಬಲಿಗರ ನಡುವೆ ನಿರಂತರ ಘರ್ಷಣೆಗೆ ಕಾರಣವಾಗಿದೆ.

ರಾಹುಲ್ ಗಾಂಧಿ ಹಾಗೂ ರಾಜ್ಯದ ಶಾಸಕರಿಂದ ಆಯ್ಕೆಯಾಗಿರುವ ಕೆ.ಸಿ. ವೇಣುಗೋಪಾಲ್ ನೇತೃತ್ವದ ಸರ್ಕಾರದಲ್ಲಿ ಸತೀಶನ್ ಅವರಿಗೆ ಪ್ರಮುಖ ಸಚಿವ ಸ್ಥಾನ ನೀಡಲು ಹೈಕಮಾಂಡ್ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ. ಮುಖ್ಯಮಂತ್ರಿ ಹುದ್ದೆಯ ಮತ್ತೊಬ್ಬ ಆಕಾಂಕ್ಷಿ ರಮೇಶ್ ಚೆನ್ನಿತ್ತಲ ಅವರನ್ನು ವಿಧಾನಸಭೆಯ ಸ್ಪೀಕರ್ ಆಗಿ ನೇಮಿಸುವ ಸಾಧ್ಯತೆಯಿದೆ. ಆದರೆ ಸತೀಶನ್ ಸಿಎಂ ಹುದ್ದೆ ಬಿಟ್ಟು ಬೇರೆ ಸ್ಥಾನ ತೆಗೆದುಕೊಳ್ಳಲು ತಯಾರಿಲ್ಲ.

ಇನ್ನೂ ಬಗೆ ಹರಿಯದ ಕೇರಳಂ ಸಿಎಂ ಆಯ್ಕೆ ಕಗ್ಗಂಟು: ಕಾಂಗ್ರೆಸ್‌ ಮನೆಯೊಂದು ಮೂರು ಭಾಗವಾಗುತ್ತ?

ಇದು ಕಾಂಗ್ರೆಸ್ ಅನ್ನು ಇಕ್ಕಟ್ಟಿನಲ್ಲಿ ಸಿಲುಕಿಸಿದೆ. ಶಾಸಕಾಂಗ ಪಕ್ಷದೊಳಗಿನ ಬಹುಮತದ ಅಭಿಪ್ರಾಯವನ್ನು ನಿರ್ಲಕ್ಷಿಸುವುದು ಸುಲಭವಲ್ಲ. ಅಲ್ಲದೆ, ಮಿತ್ರಪಕ್ಷಗಳ ಅಭಿಪ್ರಾಯಗಳನ್ನು ಪರಿಗಣಿಸಬೇಕಾಗುತ್ತದೆ. ಈ ಬಿಕ್ಕಟ್ಟನ್ನು ಪರಿಹರಿಸಲು ರಾಹುಲ್ ಗಾಂಧಿ ನಾಳೆ (ಮೇ 12) ಕೇರಳ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷರು ಮತ್ತು ಕಾರ್ಯಕಾರಿ ಅಧ್ಯಕ್ಷರೊಂದಿಗೆ ಸಭೆ ಕರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಒತ್ತಡದಲ್ಲಿ ಹೈಕಮಾಂಡ್‌

ಸತೀಶನ್ ಮತ್ತು ಚೆನ್ನಿತ್ತಲ ಅವರ ಒತ್ತಡವು ಪಕ್ಷದ ಹೈಕಮಾಂಡ್‌ಗೆ ತಲೆಬಿಸಿಯಾಗಿದೆ. ಇವರಿಬ್ಬರ ವಿರುದ್ಧ ಮುಖಂಡರು ಅಸಮಾಧಾನಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ತಿರುವನಂತಪುರಂನಲ್ಲಿರುವ ಪಕ್ಷದ ಕಚೇರಿಗಳಲ್ಲಿ ವೇಣುಗೋಪಾಲ್ ಅವರ ಪೋಸ್ಟರ್‌ಗಳು ಮತ್ತು ಕಟೌಟ್‌ಗಳು ರಾರಾಜಿಸುತ್ತಿದ್ದರೆ, ಸತೀಶನ್ ಅವರ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ.

ಕೇರಳಂನ ಈ ಗೊಂದಲ ಅಥವಾ ಕಗ್ಗಂಟನ್ನು ಬಗೆಹರಿಸಲು ಇನ್ನೂ ಹೆಚ್ಚಿನ ಸಮಯ ಬೇಕಾಗುತ್ತದೆ. ಆದರೆ ಕಾಂಗ್ರೆಸ್‌ಗೆ ಅಷ್ಟು ಸಮಯ ಕಾಯುವ ಅವಕಾಶವಿಲ್ಲ. ಏಕೆಂದರೆ, ಈ ಸುತ್ತಿನಲ್ಲಿ ಚುನಾವಣೆಗಳು ನಡೆದ ಇತರ ಎರಡು ಪ್ರಮುಖ ರಾಜ್ಯಗಳಲ್ಲಿ ಈಗಾಗಲೇ ಹೊಸ ಮುಖ್ಯಮಂತ್ರಿಗಳು ಪ್ರಮಾಣವಚನ ಸ್ವೀಕರಿಸಿ ಅಧಿಕಾರ ವಹಿಸಿಕೊಂಡಿದ್ದಾರೆ.

ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿದ ಹೆಸರು ಬಹಿರಂಗಪಡಿಸಲು ಇಚ್ಛಿಸದ ಉನ್ನತ ಕಾಂಗ್ರೆಸ್ ನಾಯಕರೊಬ್ಬರು, ಈ ನಿರ್ಧಾರವು ಅತ್ಯಂತ ಮಹತ್ವದ್ದಾಗಿದೆ. ಇದರ ಎಲ್ಲ ಆಯಾಮಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಲು ಸಮಯ ಬೇಕಾಗುತ್ತದೆ. ಆದರೆ, ಈ ವಿಳಂಬದಿಂದ ಯಾವುದೇ ಹಾನಿಯಾಗುವುದಿಲ್ಲ ಎಂಬ ಭರವಸೆ ನಮಗಿದೆ ಎಂದು ಹೇಳಿದ್ದಾರೆ.