ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Brahmos missile: ಸೇನೆಗೆ ಮತ್ತೊಂದು ಬಲ; ಬ್ರಹ್ಮೋಸ್ ಕ್ಷಿಪಣಿ ಉತ್ಪಾದನಾ ಘಟಕ ಉದ್ಘಾಟಿಸಿದ ರಾಜನಾಥ್ ಸಿಂಗ್

ಭಾರತ ಹಾಗೂ ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆಯಾದರೂ, ಉದ್ವಿಗ್ನತೆ ಹೆಚ್ಚಾಗುತ್ತಲೇ ಇದೆ. ಮಿಲಿಟರಿ ಉದ್ವಿಗ್ನತೆಯ ನಡುವೆಯೂ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ( Rajnath Singh) ಅವರು ಮೇ 11 ರ ಭಾನುವಾರದಂದು ಲಕ್ನೋದ ಉತ್ತರ ಪ್ರದೇಶ ರಕ್ಷಣಾ ಕೈಗಾರಿಕಾ ಕಾರಿಡಾರ್‌ನಲ್ಲಿ ಬ್ರಹ್ಮೋಸ್ ಸೂಪರ್‌ಸಾನಿಕ್ ಕ್ರೂಸ್ ಕ್ಷಿಪಣಿ (Brahmos missile) ಉತ್ಪಾದನಾ ಘಟಕವನ್ನು ಉದ್ಘಾಟಿಸಿದ್ದಾರೆ.

ಬ್ರಹ್ಮೋಸ್ ಕ್ಷಿಪಣಿ ಉತ್ಪಾದನಾ ಘಟಕ ಉದ್ಘಾಟಿಸಿದ ರಾಜನಾಥ್ ಸಿಂಗ್

Profile Vishakha Bhat May 11, 2025 1:53 PM

ಲಖನೌ: ಭಾರತ ಹಾಗೂ ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆಯಾದರೂ, ಉದ್ವಿಗ್ನತೆ ಹೆಚ್ಚಾಗುತ್ತಲೇ ಇದೆ. ಮಿಲಿಟರಿ ಉದ್ವಿಗ್ನತೆಯ ನಡುವೆಯೂ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ( Rajnath Singh) ಅವರು ಮೇ 11 ರ ಭಾನುವಾರದಂದು ಲಕ್ನೋದ ಉತ್ತರ ಪ್ರದೇಶ ರಕ್ಷಣಾ ಕೈಗಾರಿಕಾ ಕಾರಿಡಾರ್‌ನಲ್ಲಿ ಬ್ರಹ್ಮೋಸ್ ಸೂಪರ್‌ಸಾನಿಕ್ ಕ್ರೂಸ್ ಕ್ಷಿಪಣಿ (Brahmos missile) ಉತ್ಪಾದನಾ ಘಟಕವನ್ನು ಉದ್ಘಾಟಿಸಿದ್ದಾರೆ. ವಾರ್ಷಿಕವಾಗಿ 80 ರಿಂದ 100 ಬ್ರಹ್ಮೋಸ್ ಕ್ಷಿಪಣಿಗಳನ್ನು ತಯಾರಿಸಲು ಈ ಘಟಕವನ್ನು ನಿರ್ಮಿಸಲಾಗಿದೆ. 300 ಕೋಟಿ ರೂ. ವೆಚ್ಚದಲ್ಲಿ ಬ್ರಹ್ಮೋಸ್ ಸೂಪರ್‌ಸಾನಿಕ್ ಕ್ರೂಸ್ ಕ್ಷಿಪಣಿ ಘಟಕ ನಿರ್ಮಾಣಗೊಂಡಿದೆ.

ಇದು 290-400 ಕಿ.ಮೀ ವ್ಯಾಪ್ತಿಯ ಮತ್ತು ಮ್ಯಾಕ್ 2.8 ರ ಗರಿಷ್ಠ ವೇಗದಲ್ಲಿ ಹಾರುವ ಸಾಮರ್ಥ್ಯವನ್ನು ಹೊಂದಿರುವ ನಿಖರ-ದಾಳಿಯ ಆಯುಧವಾಗಿದೆ. ಭಾರತದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಮತ್ತು ರಷ್ಯಾದ NPO ಮಶಿನೋಸ್ಟ್ರೋಯೆನಿಯಾ ನಡುವಿನ ಜಂಟಿ ಉದ್ಯಮವಾದ ಬ್ರಹ್ಮೋಸ್ ಏರೋಸ್ಪೇಸ್ ಅಭಿವೃದ್ಧಿಪಡಿಸಿದ ಈ ಕ್ಷಿಪಣಿಯನ್ನು ಭೂಮಿ, ಸಮುದ್ರ ಅಥವಾ ಗಾಳಿಯಿಂದ ಉಡಾಯಿಸಬಹುದು. ಲಕ್ನೋದಲ್ಲಿ ಹೊಸದಾಗಿ ಸ್ಥಾಪಿಸಲಾದ ಏರೋಸ್ಪೇಸ್ ಇಂಟಿಗ್ರೇಷನ್ ಮತ್ತು ಟೆಸ್ಟಿಂಗ್ ಫೆಸಿಲಿಟಿಯಿಂದ, ವಾರ್ಷಿಕವಾಗಿ ಅಂದಾಜು 80 ರಿಂದ 100 ಬ್ರಹ್ಮೋಸ್ ಕ್ಷಿಪಣಿಗಳನ್ನು ತಯಾರಿಸಲಾಗುವುದು. ಇದರ ಜೊತೆಗೆ, ಈ ಘಟಕವು ಪ್ರತಿ ವರ್ಷ 100 ರಿಂದ 150 ಮುಂದಿನ ಪೀಳಿಗೆಯ ಬ್ರಹ್ಮೋಸ್ ಕ್ಷಿಪಣಿಗಳನ್ನು ಉತ್ಪಾದಿಸುವ ಗುರಿ ಹೊಂದಿದೆ ಎಂದು ತಿಳಿದು ಬಂದಿದೆ.

ಮುಂದಿನ ಪೀಳಿಗೆಯ ಆವೃತ್ತಿಯಲ್ಲಿ ಕೆಲ ನವೀಕರಣ ಮಾಡಲಾಗಿದೆ. ಅದರ ತೂಕ ಪ್ರಸ್ತುತ 2,900 ಕಿಲೋಗ್ರಾಂಗಳಿಂದ 1,290 ಕಿಲೋಗ್ರಾಂಗಳಿಗೆ ಇಳಿಸಲಾಗಿದೆ. ಇದು 300 ಕಿ.ಮೀ ವ್ಯಾಪ್ತಿಯಲ್ಲಿ ದಾಳಿ ಮಾಡುವ ಸಾಮರ್ಥ್ಯವನ್ನು ಹೊಂದಿದೆ. . ಉತ್ಪಾದನಾ ಘಟಕವು 2018 ರ ಜಾಗತಿಕ ಹೂಡಿಕೆದಾರರ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ರಕ್ಷಣಾ ಕೈಗಾರಿಕಾ ಕಾರಿಡಾರ್ ಉಪಕ್ರಮದ ಪ್ರಮುಖ ಭಾಗವಾಗಿದೆ. ಇದರ ಅಡಿಪಾಯವನ್ನು 2021 ರಲ್ಲಿ ಹಾಕಲಾಯಿತು.

ಈ ಸುದ್ದಿಯನ್ನೂ ಓದಿ: ʻನಮ್ಮ ಯುದ್ದತಂತ್ರದ ನೈಪುಣ್ಯತೆʼ:ಪುಲ್ವಾಮಾ ದಾಳಿಯಲ್ಲಿ ನಮ್ಮ ಪಾತ್ರವಿದೆ ಎಂದು ಒಪ್ಪಿಕೊಂಡ ಪಾಕಿಸ್ತಾನ!

ಉತ್ತರ ಪ್ರದೇಶ ಸರ್ಕಾರವು ಉಚಿತವಾಗಿ ನೀಡಿದ 80 ಹೆಕ್ಟೇರ್‌ಗಳಿಗೂ ಹೆಚ್ಚು ಭೂಮಿಯನ್ನು ನಿರ್ಮಿಸಲಾಗಿದ್ದು, ಈ ಘಟಕವು ಕೇವಲ ಮೂರುವರೆ ವರ್ಷಗಳಲ್ಲಿ ಪೂರ್ಣಗೊಂಡಿದೆ. ಉದ್ಘಾಟನೆಗೆ ಮುನ್ನ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಉತ್ಪಾದನಾ ಘಟಕದ ಜೊತೆಗೆ ಬ್ರಹ್ಮೋಸ್ ಏರೋಸ್ಪೇಸ್ ಇಂಟಿಗ್ರೇಷನ್ ಮತ್ತು ಟೆಸ್ಟಿಂಗ್ ಫೆಸಿಲಿಟಿಯನ್ನು ಸಹ ತೆರೆಯಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಸೌಲಭ್ಯವು ಕ್ಷಿಪಣಿ ಜೋಡಣೆ ಮತ್ತು ಪರೀಕ್ಷಾ ಪ್ರಕ್ರಿಯೆಗಳನ್ನು ನಿರ್ವಹಿಸುತ್ತದೆ, ಉತ್ಪಾದನೆಯಲ್ಲಿ ಉತ್ತಮ ಗುಣಮಟ್ಟದ ಮಾನದಂಡಗಳನ್ನು ಖಚಿತಪಡಿಸುತ್ತದೆ.