Rajnath Singh: ಭಾರತ- ಪಾಕ್ ಉದ್ವಿಗ್ನತೆ; ಸಿಡಿಎಸ್, 3 ಸೇನಾ ಮುಖ್ಯಸ್ಥರನ್ನು ಭೇಟಿಯಾದ ರಕ್ಷಣಾ ಸಚಿವ ರಾಜನಾಥ ಸಿಂಗ್
ಭಾರತ ಹಾಗೂ ಪಾಕಿಸ್ತಾನದ ನಡುವೆ ಸಂಪೂರ್ಣವಾಗಿ ಯುದ್ಧದ ವಾತಾವರಣ ಏರ್ಪಟ್ಟಿದೆ. ಸೇನಾ ನೆಲೆಗಳು ಮತ್ತು ಇತರ ನಗರಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದಿಂದ ಬಂದ ಕ್ಷಿಪಣಿ ಮತ್ತು ಡ್ರೋನ್ ದಾಳಿಯನ್ನು ಭಾರತ ಸಂಪೂರ್ಣ ವಿಫಲಗೊಳಿಸಿದೆ. ಶುಕ್ರವಾರ ಬೆಳಿಗ್ಗೆ ದೆಹಲಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಅನಿಲ್ ಚೌಹಾಣ್ ಮತ್ತು ಮೂರು ಸೇನಾ ಮುಖ್ಯಸ್ಥರನ್ನು ಭೇಟಿಯಾದರು.


ನವದೆಹಲಿ: ಭಾರತ ಹಾಗೂ ಪಾಕಿಸ್ತಾನದ ನಡುವೆ ಸಂಪೂರ್ಣವಾಗಿ (Operation Sindoor) ಯುದ್ಧದ ವಾತಾವರಣ ಏರ್ಪಟ್ಟಿದೆ. ಸೇನಾ ನೆಲೆಗಳು ಮತ್ತು ಇತರ ನಗರಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದಿಂದ ಬಂದ ಕ್ಷಿಪಣಿ ಮತ್ತು ಡ್ರೋನ್ ದಾಳಿಯನ್ನು ಭಾರತ ಸಂಪೂರ್ಣ ವಿಫಲಗೊಳಿಸಿದೆ. ಶುಕ್ರವಾರ ಬೆಳಿಗ್ಗೆ ದೆಹಲಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಅವರು ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಅನಿಲ್ ಚೌಹಾಣ್ ಮತ್ತು ಮೂರು ಸೇನಾ ಮುಖ್ಯಸ್ಥರನ್ನು ಭೇಟಿಯಾದರು. ಆಪರೇಷನ್ ಸಿಂಧೂರ್ ಅಡಿಯಲ್ಲಿ ಭಾರತ ಇತ್ತೀಚೆಗೆ ನಡೆಸಿದ ಗಡಿಯಾಚೆಗಿನ ದಾಳಿಯ ನಂತರದ ಭದ್ರತಾ ಪರಿಸ್ಥಿತಿಯನ್ನು ನಿರ್ಣಯಿಸಲು ಈ ಸಭೆ ನಡೆಯಿತು.
ನಿನ್ನೆ ರಾತ್ರಿ 8:30 ರ ಸುಮಾರಿಗೆ ರಾಜಸ್ಥಾನ, ಗುಜರಾತ್ ಮತ್ತು ಪಂಜಾಬ್‌ನ ಹಲವಾರು ನಗರಗಳು ಮತ್ತು ಸೇನಾ ನೆಲೆಗಳ ಮೇಲೆ ಪಾಕಿಸ್ತಾನ ನಡೆಸಿದ ಎರಡನೇ ಸುತ್ತಿನ ವಾಯುದಾಳಿಯನ್ನು ಭಾರತ ವಿಫಲಗೊಳಿಸಿತು. ಜಮ್ಮು, ಪಠಾಣ್‌ಕೋಟ್ ಮತ್ತು ಉಧಂಪುರದಲ್ಲಿರುವ ಸೇನಾ ನೆಲೆಗಳನ್ನು ಸಹ ಪಾಕಿಸ್ತಾನ ಗುರಿಯಾಗಿಸಿಕೊಂಡಿತ್ತು. ಇದಕ್ಕೆ ಪ್ರತಿಕ್ರಿಯೆಯಾಗಿ ಭಾರತ ಪಾಕಿಸ್ತಾನದ ಪ್ರಮುಖ 16 ನಗರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ನಿಯಂತ್ರಣ ರೇಖೆಯ ಉದ್ದಕ್ಕೂ ಇರುವ ಅನೇಕ ಪಾಕಿಸ್ತಾನಿ ಮಿಲಿಟರಿ ಪೋಸ್ಟ್‌ಗಳು ನಾಶವಾಗಿವೆ ಎಂದು ಮೂಲಗಳು ತಿಳಿಸಿವೆ.
"ಪಾಕಿಸ್ತಾನ ಸಶಸ್ತ್ರ ಪಡೆಗಳು ಮೇ 08 ಮತ್ತು 09, 2025 ರ ಮಧ್ಯರಾತ್ರಿ ಇಡೀ ಪಶ್ಚಿಮ ಗಡಿಯಲ್ಲಿ ಡ್ರೋನ್‌ಗಳು ಮತ್ತು ಇತರ ಯುದ್ಧಸಾಮಗ್ರಿಗಳನ್ನು ಬಳಸಿ ಅನೇಕ ದಾಳಿಗಳನ್ನು ನಡೆಸಿದವು. LOC ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದೆ ಎಂದು ಭಾರತೀಯ ಸೇನೆ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಡ್ರೋನ್ ದಾಳಿಯನ್ನು ಪರಿಣಾಮಕಾರಿಯಾಗಿ ಹಿಮ್ಮೆಟ್ಟಿಸಲಾಯಿತು ಮತ್ತು ಸೇನೆಯಿಂದ ಕದನ ವಿರಾಮ ಉಲ್ಲಂಘನೆಗಳಿಗೆ "ಸೂಕ್ತ ಪ್ರತ್ಯುತ್ತರ" ನೀಡಲಾಯಿತು ಹೇಳಿಕೆ ಬಂದಿದೆ. ಭಾರತೀಯ ಸೇನೆಯು ರಾಷ್ಟ್ರದ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಕಾಪಾಡಲು ಬದ್ಧವಾಗಿದೆ. ಎಲ್ಲಾ ದುಷ್ಟ ಪ್ರಯತ್ನಗಳಿಗೆ ಬಲದಿಂದ ಪ್ರತಿಕ್ರಿಯಿಸಲಾಗುತ್ತದೆ ಎಂದು ಸೇನೆ ಟ್ವೀಟ್‌ನಲ್ಲಿ ತಿಳಿಸಿದೆ.
ಈ ಸುದ್ದಿಯನ್ನೂ ಓದಿ: Operation Sindoor: ಪಾಕಿಸ್ತಾನದ ಎಫ್- 16 ಯುದ್ಧವಿಮಾನ, ಕ್ಷಿಪಣಿ ಹೊಡೆದುರುಳಿಸಿದ ಭಾರತ
ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿ ಗಡಿಯುದ್ದಕ್ಕೂ ನುಸುಳುವಿಕೆ ಪ್ರಯತ್ನವನ್ನು ಭಾರತದ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ವಿಫಲಗೊಳಿಸಿದೆ. ಗಡಿ ಪ್ರದೇಶಗಳ ಸಮೀಪವಿರುವ ಅನೇಕ ನಗರಗಳಲ್ಲಿ ವಿದ್ಯುತ್ ಕಡಿತಗೊಳಿಸಲಾಗಿದೆ. ಶ್ರೀನಗರ, ಜಮ್ಮು ಮತ್ತು ಪಂಜಾಬ್ ಮತ್ತು ರಾಜಸ್ಥಾನದ ಹಲವಾರು ಸ್ಥಳಗಳಲ್ಲಿ ರಾತ್ರಿಯಿಡೀ ವಿದ್ಯುತ್ ಕಡಿತಗೊಂಡ ವರದಿಯಾಗಿದೆ.