ಫೋಟೋ ಗ್ಯಾಲರಿ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಇದೊಂದು ಕ್ಷುಲ್ಲಕ ಅರ್ಜಿಯಾಗಿದೆ. ನೀವೇನು ಮಂಗಳ ಗ್ರಹದಲ್ಲಿ ವಾಸವಾಗಿದ್ದೀರಾ?: ದೆಹಲಿ ಹೈಕೋರ್ಟ್ ಗರಂ

ಇದೊಂದು ಕ್ಷುಲ್ಲಕ ಅರ್ಜಿಯಾಗಿದೆ. ನೀವೇನು ಮಂಗಳ ಗ್ರಹದಲ್ಲಿ ವಾಸವಾಗಿದ್ದೀರಾ?: ದೆಹಲಿ ಹೈಕೋರ್ಟ್ ಗರಂ

Profile Vishwavani News Jan 31, 2022 5:45 PM
image-a1bd2e48-044f-4209-a858-494fa0bd38cd.jpg
ನವದೆಹಲಿ: ಇದೊಂದು ಕ್ಷುಲ್ಲಕ ಅರ್ಜಿಯಾಗಿದೆ. ನೀವೇನು ಮಂಗಳ ಗ್ರಹದಲ್ಲಿ ವಾಸವಾಗಿದ್ದೀರಾ? ದೆಹಲಿಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಮುಖವಾಗುತ್ತಿದೆ, ನೀವು ಈ ಅರ್ಜಿಯನ್ನು ಹಿಂಪಡೆಯಬೇಕು ಅಥವಾ ನಾವು ದಂಡ ವಿಧಿಸಿ ಅರ್ಜಿಯನ್ನು ವಜಾಗೊಳಿಸಬೇಕೋ ಎಂದು ದೆಹಲಿ ಹೈಕೋರ್ಟ್‌ ಅರ್ಜಿದಾರರನ್ನು ತರಾಟೆಗೆ ತೆಗೆದುಕೊಂಡ ಪರಿ ಇದು. ಕೋವಿಡ್ 19 ಸೋಂಕು ಮತ್ತು ಒಮಿಕ್ರಾನ್ ಕ್ಷಿಪ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಬರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ಮುಂದೂಡ ಬೇಕೆಂದು ಕಾಂಗ್ರೆಸ್ ಮುಖಂಡರೊಬ್ಬರು ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಲು ಅಸಾಧ್ಯ ಎಂದು ದೆಹಲಿ ಹೈಕೋರ್ಟ್ ಗರಂ ಆಯಿತು. ಚುನಾವಣೆ ನಡೆಯಲಿರುವ ಐದು ರಾಜ್ಯಗಳಲ್ಲಿ ಕೆಲವು ವಾರಗಳು ಅಥವಾ ತಿಂಗಳ ಕಾಲ ಚುನಾವಣೆ ಮುಂದೂಡಬೇಕೆಂದು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಹೈಕೋರ್ಟ್ ಗೆ ಸಲ್ಲಿಸಿರುವ ಅರ್ಜಿಯಲ್ಲಿ ತಿಳಿಸಿದ್ದಾರೆ. ಪಿಐಎಲ್ ಬಗ್ಗೆ ಅಸಮಧಾನ ವ್ಯಕ್ತಪಡಿಸಿರುವ ಹೈಕೋರ್ಟ್ ಪೀಠದ ಜಸ್ಟೀಸ್ ವಿಪಿನ್ ಸಾಂಘ್ವಿ ಮತ್ತು ಜಸ್ಮೀತ್ ಸಿಂಗ್, ಇದೊಂದು ಕ್ಷುಲ್ಲಕ ಅರ್ಜಿಯಾಗಿದೆ. ನೀವೇನು (ಅರ್ಜಿದಾರ) ಮಂಗಳ ಗ್ರಹದಲ್ಲಿ ವಾಸವಾಗಿದ್ದೀರಾ? ದೆಹಲಿಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಮುಖವಾಗುತ್ತಿದೆ, ನೀವು ಈ ಅರ್ಜಿಯನ್ನು ಹಿಂಪಡೆಯಬೇಕು ಅಥವಾ ನಾವು ದಂಡ ವಿಧಿಸಿ ಅರ್ಜಿಯನ್ನು ವಜಾಗೊಳಿಸಬೇಕೋ ಎಂಬುದಾಗಿ ತರಾಟೆಗೆ ತೆಗೆದುಕೊಂಡಿತ್ತು. ಬಳಿಕ ಅರ್ಜಿದಾರರ ಪರ ವಕೀಲರು ಅರ್ಜಿಯನ್ನು ಹಿಂಪಡೆದಿರುವುದಾಗಿ ವರದಿ ತಿಳಿಸಿದೆ. ಉತ್ತರಪ್ರದೇಶ, ಗೋವಾ, ಪಂಜಾಬ್, ಉತ್ತರಾಖಂಡ್ ಮತ್ತು ಮಣಿಪುರದಲ್ಲಿ ಫೆಬ್ರುವರಿ 17ರಿಂದ ವಿಧಾನಸಭಾ ಚುನಾವಣೆ ನಡೆಯಲಿದ್ದು, ಮಾರ್ಚ್ 7ರಂದು ಮುಕ್ತಾಯಗೊಳ್ಳಲಿದೆ. ಮಾರ್ಚ್ 10ರಂದು ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಬಹಿರಂಗವಾಗಲಿದೆ.