ಜಾರ್ಖಂಡ್ ಪರೀಕ್ಷೆ ರದ್ದು ಘೋಷಣೆ ಬಳಿಕ ಉಪವಾಸ ಸತ್ಯಾಗ್ರಹ ಕೊನೆಗೊಳಿಸಿದ ದೇವೇಂದ್ರ ಮಹ್ತೊ: ಜೆನ್ ಝೀ ಹೋರಾಟಕ್ಕೆ ಸಿಕ್ಕ ಮತ್ತೊಂದು ಗೆಲುವು
ಜಾರ್ಖಂಡ್ ಪರೀಕ್ಷೆ ರದ್ದುಗೊಳಿಸಲು ಆಗ್ರಹಿಸಿ ಜುಲೈ ತಿಂಗಳಾಂತ್ಯದಿಂದ ನಡೆಯುತ್ತಿರುವ ಪ್ರತಿಭಟನೆ ಸೋಮವಾರ ಸಂಜೆ ಕೊನೆಯಾಗಿದೆ.ಜಾರ್ಖಂಡ್ ಸರ್ಕಾರವು ಜಾರ್ಖಂಡ್ ಜೆಎಸ್‌ಎಸ್‌ಸಿ-ಸಿಜಿಎಲ್ ಪರೀಕ್ಷೆ ಮತ್ತು ಟಿಡಿಪಿಎಲ್ ನೇಮಕಾತಿ ಪ್ರಕ್ರಿಯೆಗಳನ್ನು ರದ್ದುಗೊಳಿಸಿದ ಬಳಿಕ ವಿದ್ಯಾರ್ಥಿ ನಾಯಕ ದೇವೇಂದ್ರ ಮಹ್ತೊ ಅವರು ತಮ್ಮ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದರು.
ಸಂಗ್ರಹ ಚಿತ್ರ -
ಜಾರ್ಖಂಡ್: ವಿದ್ಯಾರ್ಥಿ ನಾಯಕ ದೇವೇಂದ್ರ ಮಹ್ತೊ (Student leader Devendra Mahto) ಅವರು ಸೋಮವಾರ ಸಂಜೆ ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು (Hunger strike) ಕೊನೆಗೊಳಿಸಿದ ಬಳಿಕ ರಾಂಚಿಯಲ್ಲಿ (ranchi) ಇತರ ವಿದ್ಯಾರ್ಥಿ ಪ್ರತಿಭಟನಾಕಾರರು ಕೂಡ ತಮ್ಮ ಉಪವಾಸವನ್ನು ಮುರಿದರು. ಜಾರ್ಖಂಡ್ ಪರೀಕ್ಷೆ ರದ್ದುಗೊಳಿಸಲು (Jharkhand exam cancel) ಆಗ್ರಹಿಸಿ ಕಳೆದ ಜುಲೈ 25ರಿಂದ ನಡೆಯುತ್ತಿರುವ ಪ್ರತಿಭಟನೆ ಈ ಮೂಲಕ ಕೊನೆಗೊಂಡಿತು. ಮುಖ್ಯಮಂತ್ರಿ ಹೇಮಂತ್ ಸೊರೆನ್ (Chief Minister Hemant Soren) ನೇತೃತ್ವದ ಜಾರ್ಖಂಡ್ ಸರ್ಕಾರವು ಜಾರ್ಖಂಡ್ ಜೆಎಸ್‌ಎಸ್‌ಸಿ-ಸಿಜಿಎಲ್ ಪರೀಕ್ಷೆ ಮತ್ತು ಟಿಡಿಪಿಎಲ್ ನೇಮಕಾತಿ ಪ್ರಕ್ರಿಯೆಗಳನ್ನು ರದ್ದುಗೊಳಿಸಿದ ಬಳಿಕ ವಿದ್ಯಾರ್ಥಿಗಳು ಉಪವಾಸ ಸತ್ಯಾಗ್ರಹವನ್ನು ಕೈಬಿಟ್ಟಿದ್ದಾರೆ.
ಪರೀಕ್ಷೆಯಲ್ಲಿ ನಡೆಯುವ ವಂಚನೆಯನ್ನು ತಡೆಗಟ್ಟಲು ಕಠಿಣ ಕಾನೂನು ಜಾರಿಗೆ ತರಲು ಒತ್ತಾಯಿಸಿರುವ ದೇವೇಂದ್ರ ಮಹ್ತೊ ಅವರು ಈಗಾಗಲೇ ನಡೆದಿರುವ ಪರೀಕ್ಷೆಗಳಲ್ಲಿ ಆಗಿರುವ ವಂಚನೆಯ ತನಿಖೆಯನ್ನು ಸಿಬಿಐ ನಡೆಸುವಂತೆ ಆಗ್ರಹಿಸಿದ್ದಾರೆ. ಅವರ ಬೇಡಿಕೆಯನ್ನು ಈಡೇರಿಸುವ ಭರವಸೆಯನ್ನು ಮುಖ್ಯಮಂತ್ರಿ ಹೇಮಂತ್ ಸೊರೆನ್ ನೀಡಿದ್ದಾರೆ.
ಸಚಿವ ನಾಗೇಂದ್ರ ರಾಜೀನಾಮೆಗೆ ಪ್ರತಿಪಕ್ಷ ಪಟ್ಟು: ಭ್ರಷ್ಟ ಸಚಿವರಿಂದ ಉತ್ತರ ಪಡೆಯುವ ಅಗತ್ಯವಿಲ್ಲ
ಜಾರ್ಖಂಡ್ ಸರ್ಕಾರವು 2014ರಿಂದ ಟಿಡಿಪಿಎಲ್ ನಡೆಸಿರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಫಲಿತಾಂಶಗಳನ್ನು ರದ್ದುಗೊಳಿಸಿದ್ದು, ಇದರಲ್ಲಿ ಸುಧಾರಣೆಗಳನ್ನು ತರುವ ಭರವಸೆಯನ್ನು ವಿದ್ಯಾರ್ಥಿಗಳಿಗೆ ನೀಡಿದೆ. ರದ್ದಾಗಿರುವ ಪರೀಕ್ಷೆಗಳ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂಬ ವಿದ್ಯಾರ್ಥಿಗಳ ಬೇಡಿಕೆ ಈಡೇರುವವರೆಗೆ ಹೋರಾಟ ಮುಂದುವರಿಸುವುದಾಗಿ ಪ್ರತಿಭಟನಾಕಾರರು ತಿಳಿಸಿದ್ದಾರೆ.
ಉಪವಾಸ ಸತ್ಯಾಗ್ರಹ ಕೊನೆಗೊಳಿಸಿದ ಬಳಿಕ ಮಾತನಾಡಿದ ಮಹ್ತೊ, ಯಾವುದೇ ವಿದ್ಯಾರ್ಥಿಗೆ ವಂಚನೆಯಾಗದಂತೆ ಕಾನೂನುಗಳನ್ನು ರೂಪಿಸಬೇಕು ಎಂದು ತಿಳಿಸಿದ್ದಾರೆ. ಅಲ್ಲದೇ ಪ್ರತಿಭಟನೆಯನ್ನು ಬೆಂಬಲಿಸಿದ ವಿದ್ಯಾರ್ಥಿಗಳು, ಪೋಷಕರು, ಮಾಧ್ಯಮ, ಪೊಲೀಸರು, ಜಾರ್ಖಂಡ್ ಸರ್ಕಾರ ಮತ್ತು ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದರು.
ಅಕ್ರಮಗಳ ಬಗ್ಗೆ ತನಿಖೆ ನಡೆಯುತ್ತಿದ್ದು, ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವವರನ್ನು ಬಂಧಿಸಲಾಗುತ್ತಿದೆ. ಉಪವಾಸ ಸತ್ಯಾಗ್ರಹದ 16ನೇ ದಿನ ನಾವು ನಮ್ಮ ಉಪವಾಸವನ್ನು ಅತ್ಯಂತ ಗೌರವಯುತ ರೀತಿಯಲ್ಲಿ ಕೊನೆಗೊಳಿಸುತ್ತಿದ್ದೇವೆ. ಜಾರ್ಖಂಡ್ ಆರೋಗ್ಯ ಸಚಿವ ಇರ್ಫಾನ್ ಅನ್ಸಾರಿ, ಸಚಿವೆ ದೀಪಿಕಾ ಪಾಂಡೆ ಮತ್ತು ಶಾಸಕ ಜೈರಾಮ್ ಮಹತೋ ಅವರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಅವರ ಜಂಟಿಯಾಗಿ ಕಾರ್ಯನಿರ್ವಹಿಸಿದ್ದಾರೆ ಎಂದರು.
ನಮ್ಮ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ. ನಾವು ಮತ್ತಷ್ಟು ಸುಧಾರಣೆಗಳಿಗಾಗಿ ಹೋರಾಟವನ್ನು ಮುಂದುವರಿಸುತ್ತೇವೆ ಎಂದ ಅವರು, ಸರ್ಕಾರವು ಪ್ರಾಮಾಣಿಕ ಮತ್ತು ನಿಷ್ಪಕ್ಷಪಾತ ವಿಚಾರಣೆ ನಡೆಸಿದೆ ಎಂದು ಹೇಳಿದರು.
ವಿದ್ಯಾರ್ಥಿ ನಾಯಕ ಪಿಯೂಷ್ ಕುಮಾರ್ ಮಾತನಾಡಿ, ಇದು ಕೇವಲ ಮೊದಲ ಹೆಜ್ಜೆ. ನಮ್ಮ ಸಂಪೂರ್ಣ ಬೇಡಿಕೆಗಳು ಈಡೇರುವವರೆಗೆ ಹೋರಾಟ ಮುಂದುವರಿಯುತ್ತದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಐತಿಹಾಸಿಕ ಮತ್ತು ದಿಟ್ಟ ನಿರ್ಧಾರ ತೆಗೆದುಕೊಂಡಿರುವ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮತ್ತು ರಾಜ್ಯ ಸರ್ಕಾರಕ್ಕೆ ರವೀಂದ್ರ ಪಾಸ್ವಾನ್ ಅವರಿಗೆ ಧನ್ಯವಾದಗಳು ಎಂದರು.
#WATCH | Ranchi, Jharkhand: Student leader Devendra Nath Mahato breaks his hunger strike in the presence of Jharkhand Ministers Dipika Pandey Singh and Irfan Ansari at the Sadar Hospital after the CM's announcement to cancel the JSSC-CGL exam and all exams conducted by TDPL https://t.co/UmBlF7BQwH pic.twitter.com/oEY8YnahVd
— Indian Observer (@ag_Journalist) August 18, 2026
ಟಿಡಿಪಿಎಲ್ ಪರೀಕ್ಷೆ ರದ್ದು
ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರು ಸೋಮವಾರ ಟಿಡಿಪಿಎಲ್ ಮೂಲಕ ನಡೆಸಲಾದ ಎಲ್ಲಾ ಪರೀಕ್ಷೆಗಳು ಮತ್ತು ಸಂಸ್ಥೆ ಪ್ರಕಟಿಸಿದ ಫಲಿತಾಂಶಗಳನ್ನು ರದ್ದುಗೊಳಿಸಲಾಗುವುದು ಎಂದು ಘೋಷಿಸಿ, 2014ರಿಂದ ನಡೆಸಿರುವ ಎಲ್ಲಾ ಪರೀಕ್ಷೆಗಳನ್ನು ಅಪರಾಧ ತನಿಖಾ ಇಲಾಖೆ (ಸಿಐಡಿ) ತನಿಖೆ ನಡೆಸಲಿದೆ ಎಂದು ತಿಳಿಸಿದರು.
ಜೆಎಸ್‌ಎಸ್‌ಸಿ-ಸಿಜಿಎಲ್ ಮತ್ತು ಇತರ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮಗಳು ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪಗಳ ಕುರಿತು ರಾಂಚಿಯ ಜೈಪಾಲ್ ಸಿಂಗ್ ಮುಂಡಾ ಮೈದಾನದಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದರು.
ಸಂಭ್ರಮಾಚರಣೆ
ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರು ಘೋಷಣೆಯ ಬಳಿಕ ಪ್ರತಿಭಟನಾ ಸ್ಥಳದಲ್ಲಿ ವಿದ್ಯಾರ್ಥಿಗಳು ಸಂಭ್ರಮಾಚರಣೆ ಮಾಡಿದರು. ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿ, ಪರಸ್ಪರ ಅಭಿನಂದಿಸಿದರು ಮತ್ತು ಸಂತೋಷದ ಕಣ್ಣೀರು ಹಾಕಿದರು. ವಿದ್ಯಾರ್ಥಿ ನಾಯಕರಾದ ಉಮ್ಮೆ ಹಬೀಬಾ ಮತ್ತು ರಾಹುಲ್ ಕ್ರಾಂತಿ ಅವರು ಜಾರ್ಖಂಡ್ ಸಚಿವರಾದ ದೀಪಿಕಾ ಪಾಂಡೆ ಸಿಂಗ್ ಮತ್ತು ಇರ್ಫಾನ್ ಅನ್ಸಾರಿ ಅವರ ಸಮ್ಮುಖದಲ್ಲಿ ಸದರ್ ಆಸ್ಪತ್ರೆಯಲ್ಲಿ ತಮ್ಮ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದರು.
ನಡುವೆ ಬಂದರೆ ಒಮಾನ್ ಮೇಲೆಯೂ ದಾಳಿ: ಹಾರ್ಮೊಜ್ ಜಲಸಂಧಿ ಬಿಕ್ಕಟ್ಟಿನ ನಡುವೆ ಟ್ರಂಪ್ ಖಡಕ್ ವಾರ್ನಿಂಗ್!
ಸೋನಮ್ ವಾಂಗ್ಚುಕ್ ಅಭಿನಂದನೆ
ಸಾಮಾಜಿಕ ಕಾರ್ಯಕರ್ತೆ ಸೋನಮ್ ವಾಂಗ್ಚುಕ್ ಅವರು ವಿಡಿಯೊ ಕರೆ ಮೂಲಕ ಪ್ರತಿಭಟನಾಕಾರರೊಂದಿಗೆ ಮಾತನಾಡಿ ಮಹತೋ ಮತ್ತು ಅವರ ತಂಡವನ್ನು ಅಭಿನಂದಿಸಿದರು. ವಿದ್ಯಾರ್ಥಿಗಳ ಬೇಡಿಕೆಗಳನ್ನು ಸ್ವೀಕರಿಸಿದ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಕ್ರಮಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು.