ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಹೈದರಾಬಾದ್ ರಸ್ತೆಗೆ ತಮ್ಮ ಹೆಸರಿಟ್ಟಿದ್ದಕ್ಕೆ ಭಾರತಕ್ಕೆ ಧನ್ಯವಾದ ಸಮರ್ಪಿಸಿದ ಡೊನಾಲ್ಡ್ ಟ್ರಂಪ್

ಹೈದರಾಬಾದ್‌ನಲ್ಲಿರುವ ಯುಎಸ್ ರಾಯಭಾರಿ ಕಚೇರಿಗೆ ಹೊಂದಿಕೊಂಡಿರುವ ರಸ್ತೆಯನ್ನು ತೆಲಂಗಾಣ ಸರ್ಕಾರವು ಅಧಿಕೃತವಾಗಿ ಡೊನಾಲ್ಡ್ ಟ್ರಂಪ್ ಅವೆನ್ಯೂ ಎಂದು ಮರುನಾಮಕರಣ ಮಾಡಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಶುಕ್ರವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತಕ್ಕೆ ಧನ್ಯವಾದ ಸಲ್ಲಿಸಿ ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ.

ಡೊನಾಲ್ಡ್ ಟ್ರಂಪ್ ರಿಂದ ಭಾರತಕ್ಕೆ ಧನ್ಯವಾದ

ಸಂಗ್ರಹ ಚಿತ್ರ -

ನವದೆಹಲಿ: ಭಾರತದಲ್ಲಿ ರಸ್ತೆಗೆ ತಮ್ಮ ಹೆಸರು ಇಟ್ಟಿರುವುದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (US President Donald Trump) ಅವರು ಧನ್ಯವಾದ ಸಲ್ಲಿಸಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಮಾಧ್ಯಮ ಖಾತೆ ಟ್ರೂತ್ ಸೋಷಿಯಲ್‌ನಲ್ಲಿ (Truth Social) ಪೋಸ್ಟ್ ಮಾಡಿರುವ ಅವರು ಇದೊಂದು ತಮಗೆ ದೊರೆತ ಅಭೂತಪೂರ್ವ ಗೌರವ ಎಂದು ಹೇಳಿದ್ದಾರೆ. ತೆಲಂಗಾಣದ ಹೈದರಾಬಾದ್‌ನಲ್ಲಿರುವ (Hyderabad) ಯುಎಸ್ ರಾಯಭಾರ (US Consulate) ಕಚೇರಿಗೆ ಹೊಂದಿಕೊಂಡಿರುವ ರಸ್ತೆಗೆ ಅಧಿಕೃತವಾಗಿ ಡೊನಾಲ್ಡ್ ಟ್ರಂಪ್ ಅವೆನ್ಯೂ (Donald Trump Avenue) ಎಂದು ಮರುನಾಮಕರಣ ಮಾಡಲಾಗಿದೆ. ಇದನ್ನು ಅನಾವರಣಗೊಳಿಸಿದ ಬಳಿಕ ಡೊನಾಲ್ಡ್ ಟ್ರಂಪ್ ಧನ್ಯವಾದ ಸಮರ್ಪಿಸಿದ್ದಾರೆ.

ಜಾಗತಿಕ ಮಟ್ಟದಲ್ಲಿ ಭಾರತ ಮತ್ತು ಅಮೆರಿಕದ ಸಂಬಂಧವನ್ನು ಬಲಪಡಿಸುವ ನಿಟ್ಟಿನಲ್ಲಿ ತನ್ನ ಪಾತ್ರವನ್ನು ಎತ್ತಿ ತೋರಿಸುವ ವ್ಯಾಪಕ ಪ್ರಯತ್ನಗಳ ಭಾಗವಾಗಿ ಹೈದರಾಬಾದ್ ನ ರಸ್ತೆಗೆ ಡೊನಾಲ್ಡ್ ಟ್ರಂಪ್ ಹೆಸರನ್ನು ಇಡಲಾಗಿದೆ. ಇದನ್ನು ಔಪಚಾರಿಕವಾಗಿ ಅನಾವರಣಗೊಳಿಸಿದ ಬಳಿಕ ಶುಕ್ರವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಟ್ರೂತ್ ಸೋಷಿಯಲ್‌ನಲ್ಲಿ ಭಾರತಕ್ಕೆ ಧನ್ಯವಾದ ಅರ್ಪಿಸಿದರು.

ಕೇತನ್ ಅಗರ್ವಾಲ್ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್..! ಸಿಯಾ-ಚೇತನ್ ಸಂಬಂಧದ ಶಾಕಿಂಗ್ ಮಾಹಿತಿ ಬಹಿರಂಗ

ರಸ್ತೆಯ ಹೆಸರು ಅನಾವರಣ ಸಮಾರಂಭದ ಚಿತ್ರವನ್ನು ಹಂಚಿಕೊಂಡ ಅವರು, ಭಾರತದ ಹೈದರಾಬಾದ್‌ನಲ್ಲಿರುವ ಹೊಸ ಡೊನಾಲ್ಡ್ ಟ್ರಂಪ್ ಅವೆನ್ಯೂ. ಈ ರೀತಿ ಗೌರವಿಸಲ್ಪಟ್ಟ ಮೊದಲ ಯುಎಸ್ ಅಧ್ಯಕ್ಷ. ಧನ್ಯವಾದಗಳು ಎಂದು ಬರೆದಿದ್ದಾರೆ.

ಹೈದರಾಬಾದ್‌ನಲ್ಲಿರುವ ಯುಎಸ್ ರಾಯಭಾರ ಕಚೇರಿಗೆ ಹೊಂದಿಕೊಂಡಿರುವ ರಸ್ತೆಯನ್ನು ತೆಲಂಗಾಣ ಅಧಿಕೃತವಾಗಿ ಡೊನಾಲ್ಡ್ ಟ್ರಂಪ್ ಅವೆನ್ಯೂ ಎಂದು ಮರುನಾಮಕರಣ ಮಾಡಿದ ಕೆಲವು ದಿನಗಳ ಬಳಿಕ ಡೊನಾಲ್ಡ್ ಟ್ರಂಪ್ ಈ ಪೋಸ್ಟ್ ಹಂಚಿಕೊಂಡಿದ್ದಾರೆ. ಟ್ರಂಪ್ ಅವರ ಈ ಪೋಸ್ಟ್ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಮಂದಿಯ ಗಮನ ಸೆಳೆದಿದ್ದು, ಅವರ ಪೋಸ್ಟ್‌ನಲ್ಲಿ ಭಾರತದಲ್ಲಿ ಅಮೆರಿಕದ ಅಧ್ಯಕ್ಷರಿಗೆ ಸಿಗುವ ಈ ರೀತಿಯ ಮೊದಲ ಗೌರವ ಎಂದು ಬಣ್ಣಿಸಿದ್ದಾರೆ.

ಡೊನಾಲ್ಡ್ ಟ್ರಂಪ್ ಅವೆನ್ಯೂ ಹೈದರಾಬಾದ್‌ನ ನಾನಕ್ರಾಮ್‌ಗುಡದಲ್ಲಿದೆ. ಇದು ಅಮೆರಿಕದ ರಾಜತಾಂತ್ರಿಕ ಕಾರ್ಯಾಚರಣೆ ಮತ್ತು ಹಲವಾರು ಪ್ರಮುಖ ಅಂತಾರಾಷ್ಟ್ರೀಯ ತಂತ್ರಜ್ಞಾನ ಕಂಪೆನಿಗಳನ್ನು ಹೊಂದಿರುವ ಪ್ರದೇಶವಾಗಿದೆ. ಇದನ್ನು ಹೈದರಾಬಾದ್ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವಿನ ಸಂಬಂಧದ ಸಾಂಕೇತಿಕ ಗುರುತಿಸುವಿಕೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಅಮೆರಿಕ ಸ್ವಾತಂತ್ರ್ಯದ 250 ವರ್ಷಗಳನ್ನು ಗುರುತಿಸುವ ಸ್ಮರಣಾರ್ಥ ನಡೆದ ಕಾರ್ಯಕ್ರಮದಲ್ಲಿ ಭಾರತಕ್ಕೆ ಆಗಮಿಸಿದ್ದ ಅಮೆರಿಕದ ರಾಯಭಾರಿ ಸೆರ್ಗಿಯೊ ಗೋರ್ ಮತ್ತು ತೆಲಂಗಾಣ ಸರ್ಕಾರದ ಹಿರಿಯ ಪ್ರತಿನಿಧಿಗಳ ಸಮ್ಮುಖದಲ್ಲಿ ಡೊನಾಲ್ಡ್ ಟ್ರಂಪ್ ಅವೆನ್ಯೂ ಫಲಕವನ್ನು ಅನಾವರಣಗೊಳಿಸಲಾಗಿತ್ತು.

ಅಯೋಧ್ಯೆ ರಾಮಮಂದಿರ ದೇಣಿಗೆ ಹಗರಣ: ತಪ್ಪಿತಸ್ಥರಿಗೆ ಯಾವುದೇ ಕ್ಷಮೆ ಇಲ್ಲ; ಭಕ್ತರ ನಂಬಿಕೆಗೆ ಧಕ್ಕೆ ತಂದವರ ವಿರುದ್ಧ ಕಠಿಣ ಕ್ರಮ – ಸಿಎಂ ಯೋಗಿ

ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ, ತೆಲಂಗಾಣ ಸರ್ಕಾರವು ಹೈದರಾಬಾದ್‌ನ ಪ್ರಮುಖ ರಸ್ತೆಗಳು ಮತ್ತು ಸಾರ್ವಜನಿಕ ಮೂಲಸೌಕರ್ಯಗಳನ್ನು ಜಾಗತಿಕವಾಗಿ ಗುರುತಿಸಲ್ಪಟ್ಟ ವ್ಯಕ್ತಿಗಳು ಮತ್ತು ಸಂಸ್ಥೆಗಳ ಹೆಸರಿಡಲು ನಿರ್ಧರಿಸಿದೆ. ಇದರ ಭಾಗವಾಗಿ ಮೊದಲಿಗೆ ಡೊನಾಲ್ಡ್ ಟ್ರಂಪ್ ಅವೆನ್ಯೂ ಅನ್ನು ಉದ್ಘಾಟಿಸಲಾಗಿದೆ. ಮುಂದಿನ ದಿನಗಳಲ್ಲಿ ನಗರದಲ್ಲಿ ಅಂತಾರಾಷ್ಟ್ರೀಯವಾಗಿ ಗುರುತಿಸಬಹುದಾದ ಹೆಗ್ಗುರುತುಗಳನ್ನು ರಚಿಸುವ ಉದ್ದೇಶ ಹೊಂದಿರುವುದಾಗಿ ತಿಳಿಸಿದರು.