ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Terrorist Encounter: ಜಮ್ಮು-ಕಾಶ್ಮೀರದ ಕುಲ್ಗಾಮ್‌ನಲ್ಲಿ ಭಯೋತ್ಪಾದಕನ ಎನ್‌ಕೌಂಟರ್‌; ಓರ್ವ ಸೈನಿಕನಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನ ಗುಡಾರ್ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯ ಸಂದರ್ಭದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ. ಭದ್ರತಾ ಪಡೆಗಳು ಭಯೋತ್ಪಾದಕರನ್ನು ಸುತ್ತುವರಿದಿವೆ ಎಂದು ತಿಳಿದು ಬಂದಿದೆ.

ಕುಲ್ಗಾಮ್‌ನಲ್ಲಿ ಭಯೋತ್ಪಾದಕನ ಎನ್‌ಕೌಂಟರ್‌

-

Vishakha Bhat Vishakha Bhat Sep 8, 2025 9:50 AM

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Terrorist Encounter) ಕುಲ್ಗಾಮ್‌ನ ಗುಡಾರ್ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯ ಸಂದರ್ಭದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ. ಭದ್ರತಾ ಪಡೆಗಳು ಭಯೋತ್ಪಾದಕರನ್ನು ಸುತ್ತುವರಿದಿವೆ ಎಂದು ತಿಳಿದು ಬಂದಿದೆ. ಗುಂಡಿನ ಚಕಮಕಿಯಲ್ಲಿ ಓರ್ವ ಸೈನಿಕನಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ. ಜಮ್ಮು ಮತ್ತು ಕಾಶ್ಮೀರ ಪೊಲೀಸ್, ಭಾರತೀಯ ಸೇನೆ ಮತ್ತು ಸಿಆರ್‌ಪಿಎಫ್‌ನ ಸಿಬ್ಬಂದಿ ಜಂಟಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು ಎಂದು ಕಾಶ್ಮೀರ ವಲಯ ಪೊಲೀಸರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಪ್ರಸ್ತುತ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಮೂರರಿಂದ ನಾಲ್ಕು ಭಯೋತ್ಪಾದಕರು ಅರಣ್ಯದಲ್ಲಿ ಅಡಗಿರಬಹುದು ಎಂದು ಅಧಿಕಾರಿಗಳು ಊಹಿಸಿದ್ದಾರೆ. ಆ. 28 ರಂದು ಜಮ್ಮು-ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೆಜ್ ಸೆಕ್ಟರ್‌ನಲ್ಲಿ ನಿಯಂತ್ರಣ ರೇಖೆಯ ಉದ್ದಕ್ಕೂ ಉಗ್ರಗಾಮಿಗಳ ಒಳನುಸುಳುವಿಕೆ ಪ್ರಯತ್ನವನ್ನು ಭದ್ರತಾ ಪಡೆಗಳು ವಿಫಲಗೊಳಿಸಿದ್ದು, ಇಬ್ಬರನ್ನು ಹೊಡೆದುರುಳಿಸಿತ್ತು.

ಉಗ್ರರ ಒಳನುಸುಳುವಿಕೆ ಪ್ರಯತ್ನದ ಬಗ್ಗೆ ಜಮ್ಮು -ಕಾಶ್ಮೀರ ಪೊಲೀಸರು ನೀಡಿದ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಭಾರತೀಯ ಸೇನೆ ಮತ್ತು ಜಮ್ಮು- ಕಾಶ್ಮೀರ ಪೊಲೀಸರು ಗುರೆಜ್ ಸೆಕ್ಟರ್‌ನಲ್ಲಿ ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. ಶನಿವಾರವೂ ಸೇನೆ ಕಾರ್ಯಾಚರಣೆ ನಡೆಸಿದೆ. ಅಜಮಾಬಾದ್​ನಲ್ಲಿರುವ ಶೇಖ್​ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು, ಆತನನ್ನು ಹಾಗೂ ಆತನ ಸಹಚರ ಅಹ್ಮದ್​ನನ್ನು ಬಂಧಿಸಿದರು. ಅಜಮಾಬಾದ್​ನ ತಾರಿಕ್​ ಶೇಖ್​ ಮತ್ತು ಚೇಂಬರ್​ ಗ್ರಾಮದ ರಿಯಾಜ್​ ಅಹ್ಮದ್​ ಅವರನ್ನು ಕಸ್ಟಡಿಗೆ ಪಡೆಯಲಾಗಿದೆ. ಅವರಿಂದ ಎರಡು ಅಸಾಲ್ಟ್​ ರೈಫಲ್​ಗಳು ಹಾಗೂ ಕೆಲವು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಈ ಸುದ್ದಿಯನ್ನೂ ಓದಿ: Terrorist Encounter: ಸೇನೆಯಿಂದ ಭರ್ಜರಿ ಕಾರ್ಯಾಚರಣೆ; ಇಬ್ಬರು ಭಯೋತ್ಪಾದಕರ ಎನ್‌ಕೌಂಟರ್‌

ದಕ್ಷಿಣ ಕಾಶ್ಮೀರದ ಕುಲ್ಗಾಮ್​ನಲ್ಲಿ ಆಗಸ್ಟ್​ 1 ರಿಂದ ಆರಂಭಗೊಂಡು ಸತತವಾಗಿ 10 ದಿನಗಳವರೆಗೆ ಮುಂದುವರಿದ ಭದ್ರತಾ ಪಡೆ ಹಾಗೂ ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೈನಿಕರು ಹುತಾತ್ಮರಾಗಿದ್ದರೆ, ಕನಿಷ್ಠ ಒಂಬತ್ತು ಮಂದಿ ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದರು. ಮೊದಲ ಎರಡು ದಿನಗಳಲ್ಲಿ ಇಬ್ಬರು ಭಯೋತ್ಪಾದಕರನ್ನು ಗುಂಡಿಕ್ಕಿ ಬೇಟೆ ಆಡಲಾಗಿತ್ತು. ಈ ಕಾರ್ಯಾಚರಣೆ ಸಂದರ್ಭದಲ್ಲಿ ಲ್ಯಾನ್ಸ್​ ನಾಯಕ್​ ಪ್ರೀತ್​ಪಾಲ್​ ಸಿಂಗ್​ ಹಾಗೂ ಸಿಪಾಯಿ ಹರ್ಮಿಂದರ್​ ಸಿಂಗ್​ ಹುತಾತ್ಮರಾಗಿದ್ದರು.