Operation Mahadev: ಪಹಲ್ಗಾಮ್ ದಾಳಿಯ ಹಿಂದಿನ 3 ಶಂಕಿತ ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ; ಮುಂದುವರಿದ ಆಪರೇಷನ್ ಮಾಹಾದೇವ್ ಕಾರ್ಯಾಚರಣೆ
ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ಸಮೀಪದ ಲಿಡ್ವಾಸ್‌ನಲ್ಲಿ ಭದ್ರತಾ ಪಡೆಗಳು 3 ಉಗ್ರರನ್ನು ಹೊಡೆದುರುಳಿಸಿವೆ. ಆಪರೇಷನ್ ಮಾಹಾದೇವ್ ಹೆಸರಿನಲ್ಲಿ ಕಾರ್ಯಾಚರಣೆ ನಡೆಸಿದ ಸೇನೆಯ ವಿರುದ್ಧ ಅವಿತುಕೊಂಡಿದ್ದ ಉಗ್ರರು ದಾಳಿ ನಡೆಸಿದ ಬಳಿಕ ಎನ್‌ಕೌಂಟರ್ ಆರಂಭವಾಯ್ತು. ಈ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ.

ಸಾಂದರ್ಭಿಕ ಚಿತ್ರ.

ಶ್ರೀನಗರ: ಪಹಲ್ಗಾಮ್ ದಾಳಿಯ ಬಳಿಕ ಭಾರತೀಯ ಸೇನೆ ಉಗ್ರರ ವಿರುದ್ಧ ತೀವ್ರ ಕಾರ್ಯಾಚರಣೆ ಕೈಗೊಂಡಿದೆ. ಇದೀಗ ಜಮ್ಮು ಮತ್ತು ಕಾಶ್ಮೀರದ (Jammu and Kashmir) ಶ್ರೀನಗರ ಸಮೀಪದ ಲಿಡ್ವಾಸ್‌ನಲ್ಲಿ ಭದ್ರತಾ ಪಡೆಗಳು ಪಹಲ್ಗಾಮ್ ದಾಳಿ ನಡೆಸಿದರೆನ್ನಲಾದ 3 ಉಗ್ರರನ್ನು ಹೊಡೆದುರುಳಿಸಿವೆ. ಆಪರೇಷನ್ ಮಾಹಾದೇವ್ (Operation Mahadev) ಹೆಸರಿನಲ್ಲಿ ಕಾರ್ಯಾಚರಣೆ ನಡೆಸಿದ ಸೇನೆಯ ವಿರುದ್ಧ ಅವಿತುಕೊಂಡಿದ್ದ ಉಗ್ರರು ದಾಳಿ ನಡೆಸಿದ ಬಳಿಕ ಎನ್‌ಕೌಂಟರ್ ಆರಂಭವಾಯ್ತು. ಈ ವೇಳೆ ಕನಿಷ್ಠ 3 ಉಗ್ರರು ಹತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ.
ಸೇನೆ, ಸಿಆರ್‌ಪಿಎಫ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ಕೈಗೊಂಡಿದ್ದು, ಗುಂಡಿನ ಚಕಮಕಿ ಮುಂದುವರಿದಿದೆ. ವರದಿಗಳ ಪ್ರಕಾರ, ಗುಪ್ತಚರ ಮಾಹಿತಿಯ ಮೇರೆಗೆ ಭದ್ರತಾ ಪಡೆಗಳು ಹರ್ವಾನ್‌ನ ಮುಲ್ನಾರ್ ಪ್ರದೇಶದಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ಈ ವೇಳೆ ಉಗ್ರರು ದಾಳಿ ನಡೆಸಲು ಮುಂದಾಗಿದ್ದರು. ಹೆಚ್ಚುವರಿ ಭದ್ರತಾ ಪಡೆಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ.
OP MAHADEV - Update
— Chinar Corps🍁 - Indian Army (@ChinarcorpsIA) July 28, 2025
Three terrorist have been neutralised in an intense firefight. Operation Continues.#Kashmir@adgpi@NorthernComd_IA pic.twitter.com/5LToapGKuf
ಭಾರತೀಯ ಸೇನೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗಿದೆ. ʼʼಎನ್‌ಕೌಂಟರ್ ವೇಳೆ 3 ಉಗ್ರರನ್ನು ಹೊಡೆದುರುಳಿಸಲಾಗಿದೆ. ಕಾರ್ಯಾಚರಣೆ ಮುಂದುವರಿದಿದೆʼʼ ಎಂದು ಎಕ್ಸ್‌ನಲ್ಲಿ ತಿಳಿಸಲಾಗಿದೆ.
ಈ ಸುದ್ದಿಯನ್ನೂ ಓದಿ: Encounter In Kishtwar: ಜಮ್ಮು ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ಮತ್ತೆ ಎನ್‌ಕೌಂಟರ್; ಭಯೋತ್ಪಾದಕರ ವಿರುದ್ಧ ಭದ್ರತಾ ಪಡೆಗಳಿಂದ ಗುಂಡಿನ ದಾಳಿ
ಕೆಲವು ದಿನಗಳ ಹಿಂದೆ ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ (Kishtwar) ಜಿಲ್ಲೆಯ ಹದಲ್ ಗಲ್ ಪ್ರದೇಶದಲ್ಲಿ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿತ್ತು. ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ಭಾರತೀಯ ಸೇನೆಯು ಕಿಶ್ತ್ವಾರ್ ಸೆಕ್ಟರ್‌ನ ಹದಲ್ ಗಲ್ ಪ್ರದೇಶದಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು.
ಭಯೋತ್ಪಾದಕರ ಚಲನವಲನದ ಬಗ್ಗೆ ಮಾಹಿತಿ ಪಡೆದ ಪೊಲೀಸರು, ಭಾರತೀಯ ಸೇನೆಯ ಸಹಾಯದಿಂದ ಡಚ್ಚನ್ ಮತ್ತು ನಾಗಸೇನಿ ನಡುವಿನ ಖಾಂಕೂ ಅರಣ್ಯ ಸುತ್ತುವರಿದು ಶೋಧ ಕಾರ್ಯಾಚರಣೆಯನ್ನು ಆರಂಭಿಸಿದಾಗ ಗುಂಡಿನ ಚಕಮಕಿ ಆರಂಭವಾಗಿತ್ತು.