ಫೋಟೋ ಗ್ಯಾಲರಿ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Pralhad Joshi: ಜಗತ್ತಿನ ಮೊದಲ ಸಂಸತ್‌ ರಚನೆಗೆ ಶ್ರೀಕಾರ ಹಾಡಿದ್ದು ಬಸವಣ್ಣ: ಪ್ರಲ್ಹಾದ್‌ ಜೋಶಿ

ಜಗಜ್ಯೋತಿ ಬಸವಣ್ಣನವರು ಸಾಮಾಜಿಕ ಕ್ರಾಂತಿಯ ಹರಿಕಾರರು. ಅವರ ತತ್ವಾದರ್ಶಗಳು ಆಚರಣೆಗಷ್ಟೇ ಸೀಮಿತವಾಗಬಾರದು. ಪ್ರತಿಯೊಬ್ಬರೂ ಅನುಸರಿಸಬೇಕು ಎಂದು ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಕರೆ ನೀಡಿದ್ದಾರೆ. ನವದೆಹಲಿಯಲ್ಲಿ ಬುಧವಾರ ಬಸವೇಶ್ವರರ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

ಮೊದಲ ಸಂಸತ್‌ ರಚನೆಗೆ ಶ್ರೀಕಾರ ಹಾಡಿದ್ದು ಬಸವಣ್ಣ: ಪ್ರಲ್ಹಾದ್‌ ಜೋಶಿ

Profile Siddalinga Swamy Apr 30, 2025 8:57 PM

ನವದೆಹಲಿ: ಹನ್ನೆರಡನೇ ಶತಮಾನದಲ್ಲೇ ಜಗಜ್ಯೋತಿ ಬಸವಣ್ಣನವರು ಅನುಭವ ಮಂಟಪದ ಮೂಲಕ ಮೊದಲ ಸಂಸತ್‌ ರಚನೆಗೆ ಶ್ರೀಕಾರ ಹಾಡಿದರು ಎಂದು ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ‌ (Pralhad Joshi) ತಿಳಿಸಿದರು. ನವದೆಹಲಿಯಲ್ಲಿ ಬುಧವಾರ ಬಸವ ಜಯಂತಿ ಪ್ರಯುಕ್ತ ಜಗಜ್ಯೋತಿ ಬಸವೇಶ್ವರರ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿ, ಬಳಿಕ ಮಾತನಾಡಿದರು. ಪ್ರಸ್ತುತ ಸಮಾಜಕ್ಕೆ ಬಸವೇಶ್ವರರ ತತ್ವಾದರ್ಶಗಳು ಅತ್ಯಗತ್ಯ. ಬಸವಣ್ಣನವರು 12ನೇ ಶತಮಾನದಲ್ಲಿಯೇ ಜಗತ್ತಿನ ಮೊದಲ ಸಂಸತ್ ಆಗಿ ಅನುಭವ ಮಂಟಪ ನಿರ್ಮಿಸಿ ವಿವಿಧ ಕ್ಷೇತ್ರಗಳಲ್ಲಿ ಅನುಭವ ಹಂಚಿಕೊಳ್ಳಲು ಅನುವು ಮಾಡಿಕೊಟ್ಟ ಕೀರ್ತಿಗೆ ಪಾತ್ರರಾದವರು. ಅಂದಿನ ಅನುಭವ ಮಂಟಪದಲ್ಲಿ ಸಮಾಜ ಸುಧಾರಣೆ ಬಗ್ಗೆ ನಡೆಸುತ್ತಿದ್ದ ಚಿಂತನ-ಮಂಥನ, ಚರ್ಚೆ ಅವಿಸ್ಮರಣೀಯ ಎಂದು ಹೇಳಿದರು.

ಸಮಾಜದಲ್ಲಿನ ಶೋಷಣೆ, ಜಾತೀಯತೆ ತೊಡೆದು ಹಾಕಿ, ಕಾಯಕ ತತ್ವ, ಸ್ತ್ರೀ ಸಮಾನತೆ, ಲಿಂಗಪೂಜೆ ಹೀಗೆ ಸಾಮಾಜಿಕ, ಸಾಂಸ್ಕೃತಿಕ-ಧಾರ್ಮಿಕ ಸೌಹಾರ್ದತೆಗೆ ಒತ್ತು ನೀಡಿ ಲೋಕೋದ್ಧಾರಕ್ಕೆ ಶ್ರಮಿಸಿದ ಮತ್ತು ಪ್ರಜಾಪ್ರಭುತ್ವವನ್ನು ಪ್ರತಿಪಾದಿಸಿದ ನಿಜ ಶರಣ ಕಾಯಕಯೋಗಿ, ಜಗಜ್ಯೋತಿ ಬಸವೇಶ್ವರರು ಎಂದು ಸಚಿವ ಜೋಶಿ ತಿಳಿಸಿದರು.

ದಾರ್ಶನಿಕ ಬಸವಣ್ಣನವರು ಸಾಮಾಜಿಕ ಕ್ರಾಂತಿಯ ಹರಿಕಾರರು. ಅವರ ತತ್ವಾದರ್ಶಗಳು ಆಚರಣೆಗಷ್ಟೇ ಸೀಮಿತವಾಗಬಾರದು. ಪ್ರತಿಯೊಬ್ಬರೂ ಅನುಸರಿಸಬೇಕು. ಜಾತಿ ರಹಿತ ಸಮಾಜ ನಿರ್ಮಾಣಕ್ಕೆ ಮೇಲ್ಪಂಕ್ತಿ ಹಾಕಿದ್ದಲ್ಲದೆ, ಸಮ ಸಮಾಜದ ಪರಿಕಲ್ಪನೆ ಹೊಂದಿದ್ದರು. ಅಂಥವರ ಜೀವನಾದರ್ಶ ನಮಗೆ ಮಾದರಿ ಎಂದು ಹೇಳಿದರು.

ಈ ಸುದ್ದಿಯನ್ನೂ ಓದಿ | Pralhad Joshi: ಕರ್ನಾಟಕದ ಮೂವರಿಗೆ ಪದ್ಮಶ್ರೀ ಪುರಸ್ಕಾರ; ಸನ್ಮಾನ ಮಾಡಿದ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ

ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ಕೇಂದ್ರ ಸಚಿವರಾದ ಅಶ್ವಿನ್ ವೈಷ್ಣವ್, ಕಿರಣ್ ರಿಜಿಜು, ರಾಜ್ಯ‌ ಖಾತೆ ಸಚಿವರಾದ ವಿ. ಸೋಮಣ್ಣ, ಶೋಭಾ ಕರಂದ್ಲಾಜೆ ಮತ್ತಿತರರು ಉಪಸ್ಥಿತರಿದ್ದರು.