ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

13 ವರ್ಷದ ವಿದ್ಯಾರ್ಥಿಯಿಂದ ಗರ್ಭಿಣಿಯಾದ 23 ವರ್ಷದ ಶಿಕ್ಷಕಿಯ ಗರ್ಭಪಾತಕ್ಕೆ ಕೋರ್ಟ್‌ ಅನುಮತಿ

13 ವರ್ಷದ ವಿದ್ಯಾರ್ಥಿಯೊಂದಿಗೆ ಓಡಿ ಹೋಗಿ, ಆತನಿಂದಲೇ ಗರ್ಭಿಣಿಯಾಗಿ ಸದ್ಯ ಪೋಕ್ಸೊ ಕಾಯ್ದೆಯಡಿ ಬಂಧನದಲ್ಲಿರುವ 23 ವರ್ಷದ ಶಿಕ್ಷಕಿಯ ಗರ್ಭಪಾತಕ್ಕೆ ಗುಜರಾತ್‌ನ ಸೂರತ್‌ನ ವಿಶೇಷ ಪೋಕ್ಸೋ ನ್ಯಾಯಾಲಯ ಅನುಮತಿ ನೀಡಿದೆ. ಶಿಕ್ಷಕಕಿಯ ಮಾನಸಿಕ ತೊಂದರೆಗಳನ್ನು ಗಣನೆಗೆ ತೆಗೆದುಕೊಂಡು ಈ ತೀರ್ಪು ನೀಡಲಾಗಿದೆ ಎಂದು ನ್ಯಾಯಾಲಯ ತಿಳಿಸಿದೆ.

ವಿದ್ಯಾರ್ಥಿಯಿಂದ ಗರ್ಭಿಣಿಯಾದ ಶಿಕ್ಷಕಿಯ ಗರ್ಭಪಾತಕ್ಕೆ ಅನುಮತಿ

Profile Ramesh B May 16, 2025 5:59 PM

ಗಾಂಧಿನಗರ: 13 ವರ್ಷದ ವಿದ್ಯಾರ್ಥಿಯೊಂದಿಗೆ ಓಡಿ ಹೋಗಿ, ಆತನಿಂದಲೇ ಗರ್ಭಿಣಿಯಾಗಿ ಸದ್ಯ ಪೋಕ್ಸೊ ಕಾಯ್ದೆಯಡಿ ಬಂಧನದಲ್ಲಿರುವ 23 ವರ್ಷದ ಶಿಕ್ಷಕಿಯ ಗರ್ಭಪಾತಕ್ಕೆ ಗುಜರಾತ್‌ನ ಸೂರತ್‌ನ ವಿಶೇಷ ಪೋಕ್ಸೋ ನ್ಯಾಯಾಲಯ ಅನುಮತಿ ನೀಡಿದೆ. ಅಪ್ರಾಪ್ತ ವಯಸ್ಕನನ್ನು ಅಪಹರಿಸಿದ ಕೇಸ್‌ನಲ್ಲಿ ಶಿಕ್ಷಕಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ದೂರು ದಾಖಲಾಗಿದ್ದು, ಸದ್ಯ ಸೂರತ್‌ನ ಜೈಲಿನಲ್ಲಿದ್ದಾಳೆ. ಕೆಲವು ದಿನಗಳ ಹಿಂದೆ ಬೆಳಕಿಗೆ ಬಂದ ಈ ಪ್ರಕರಣ ದೇಶಾದ್ಯಂತ ಸಂಚಲನ ಸೃಷ್ಟಿಸಿತ್ತು. ಆಕೆಯ ಮಾನಸಿಕ ತೊಂದರೆಗಳನ್ನು ಗಣನೆಗೆ ತೆಗೆದುಕೊಂಡು ಈ ತೀರ್ಪು ನೀಡಲಾಗಿದೆ ಎಂದು ನ್ಯಾಯಾಲಯ ತಿಳಿಸಿದೆ.

ಬಾಲಕ ನಾಪತ್ತೆಯಾದ ಬಳಿಕ ಈ ಬಗ್ಗೆ ಆತನ ತಂದೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಸೂರತ್ ನಗರದ ಪುಣೆ ಠಾಣೆಯ ಪೊಲೀಸರು ಇವರನ್ನು ದೂರು ದಾಖಲಾದ 6 ದಿನಗಳ ಬಳಿಕ ಗುಜರಾತ್‌-ರಾಜಸ್ಥಾನ ಗಡಿಯಲ್ಲಿ ಪತ್ತೆ ಹಚ್ಚಿದ್ದರು. ಈ ವೇಳೆ ಶಿಕ್ಷಕಿ 20 ವಾರಗಳ ಗರ್ಭಿಣಿಯಾಗಿದ್ದಳು.



ಈ ಸುದ್ದಿಯನ್ನೂ ಓದಿ: Viral Video: 13 ವರ್ಷದ ವಿದ್ಯಾರ್ಥಿ ಜೊತೆ 23 ವರ್ಷದ ಶಿಕ್ಷಕಿ ಪರಾರಿ! ಈ ಕಿʼಲೇಡಿʼ ಸಿಕ್ಕಿ ಬಿದ್ದಿದ್ದೇ ರೋಚಕ

ಪ್ರಕರಣದ ಹಿನ್ನೆಲೆ

ಸೂರತ್ ನಗರದ ಪುಣೆ ಪೊಲೀಸ್ ಠಾಣೆಯಲ್ಲಿ ಏಪ್ರಿಲ್‌ನಲ್ಲಿ 13 ವರ್ಷದ ಬಾಲಕನನ್ನು ಅಪಹರಣ ಮಾಡಲಾಗಿದೆ ಎಂದು ದೂರು ದಾಖಲಿಸಲಾಗಿತ್ತು. ಬಾಲಕನ ತಂದೆಯೇ ಈ ದೂರನ್ನು ನೀಡಿದ್ದರು. ಆ ಮೂಲಕ ಪ್ರಕರಣ ಸುಳಿ ಬಿಚ್ಚತೊಡಗಿತು. ಈ ದೂರಿನಲ್ಲಿ ಶಾಲೆ ಮತ್ತು ಟ್ಯೂಷನ್ ಶಿಕ್ಷಕಿ ಮೇಲೆಯೇ ಬಾಲಕನ ತಂದೆ ಅನುಮಾನ ವ್ಯಕ್ತಪಡಿಸಿದ್ದರು. ದೂರಿನ ಅನ್ವಯ ಪೊಲೀಸರು ನಗರದ ಸಿಸಿಟಿವಿ ಕ್ಯಾಮೆರಾ ಪರಿಶೀಲಿಸಿದ್ದರು. ಕೊನೆಗೆ ಏ. 30ರಂದು ಜೈಪುರದಿಂದ ಹಿಂದಿರುಗುತ್ತಿದ್ದಾಗ ಶಮ್ಲಾಜಿ ಗಡಿ ಬಳಿಯಲ್ಲಿ ಶಿಕ್ಷಕಿ ಮತ್ತು ಅಪ್ರಾಪ್ತ ಬಾಲಕನನ್ನು ಬಂಧಿಸಲಾಯ್ತು. ಇಬ್ಬರು ಬಸ್‌ನಲ್ಲಿದ್ದಾಗಲೇ ಪೊಲೀಸರ ಬಲೆಗೆ ಬಿದ್ದಿದ್ದರು.

ವಿದ್ಯಾರ್ಥಿಗೆ ಶಾಲೆಯಲ್ಲಿ ಮತ್ತು ಟ್ಯೂಷನ್ ತರಗತಿಯಲ್ಲಿ ಕಲಿಸುತ್ತಿದ್ದ ಶಿಕ್ಷಕಿ ಮತ್ತು ವಿದ್ಯಾರ್ಥಿ ಮಾಗೋಬ್ ಪ್ರದೇಶದ ಒಂದೇ ಹೌಸಿಂಗ್ ಸೊಸೈಟಿಯಲ್ಲಿ ವಾಸಿಸುತ್ತಿದ್ದರು. ವಿದ್ಯಾರ್ಥಿಯ ಕುಟುಂಬವು ರಾಜಸ್ಥಾನ ಮೂಲದವರಾಗಿದ್ದರೆ, ಶಿಕ್ಷಕಿ ಮೆಹ್ಸಾನಾ ಮೂಲದವಳು. ಒಂದೇ ಕಟ್ಟಡದ 3ನೇ ಮಹಡಿಯಲ್ಲಿ ಶಿಕ್ಷಕಿ ಮತ್ತು 2ನೇ ಮಹಡಿಯಲ್ಲಿ ವಿದ್ಯಾರ್ಥಿಯ ಕುಟುಂಬ ವಾಸಿಸುತ್ತಿತ್ತು. ಶಿಕ್ಷಕಿ ಕಳೆದ 3 ವರ್ಷಗಳಿಂದ ಆ ವಿದ್ಯಾರ್ಥಿಗೆ ಪಾಠ ಹೇಳಿಕೊಡುತ್ತಿದ್ದಳು.

ಪೋಕ್ಸೊ ಕಾಯ್ದೆಯಡಿ ಪ್ರಕರಣ

ಬಂಧನದ ಬಳಿಕ ಶಿಕ್ಷಕಿಯನ್ನು ವಿಚಾರಣೆಗೊಳಿಪಡಿಸಿದಾಗ, ಬಾಲಕನೊಂದಿಗೆ ದೈಹಿಕ ಸಂಬಂಧ ಬೆಳೆಸಿರುವುದನ್ನು ಒಪ್ಪಿಕೊಂಡಿದ್ದಳು. ಶಿಕ್ಷಕಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಆಕೆ 20 ವಾರ, 4 ದಿನದ ಗರ್ಭಿಣಿ ಎಂಬುದು ದೃಢವಾಗಿತ್ತು. ವಿದ್ಯಾರ್ಥಿ ಕಳೆದ 3 ವರ್ಷಗಳಿಂದ ಶಿಕ್ಷಕಿಯಿಂದ ಟ್ಯೂಷನ್ ತೆಗೆದುಕೊಳ್ಳುತ್ತಿದ್ದ. ಈ ಹಿಂದೆ ಮೂವರು ವಿದ್ಯಾರ್ಥಿಗಳು ಟ್ಯೂಷನ್‍ಗೆ ಬರುತ್ತಿದ್ದರು. ಆದರೆ ಕಳೆದ ಒಂದು ವರ್ಷದಿಂದ ಈ ವಿದ್ಯಾರ್ಥಿ ಮಾತ್ರ ಟ್ಯೂಷನ್‍ಗಾಗಿ ಶಿಕ್ಷಕಿಯ ಮನೆಗೆ ಹೋಗುತ್ತಿದ್ದ. ಇದರಿಂದ ಇವರಿಬ್ಬರ ನಡುವೆ ಸಂಬಂಧ ಬೆಳೆದಿತ್ತು ಎನ್ನಲಾಗಿದೆ.

ಪೊಲೀಸರ ಪ್ರಕಾರ, 23 ವರ್ಷದ ಶಿಕ್ಷಕಿ ಮದುವೆಯ ಕುರಿತು ಒತ್ತಡದಲ್ಲಿದ್ದಳು. ವಿದ್ಯಾರ್ಥಿಯು ಓದುವ ವಿಚಾರಕ್ಕೆ ತನ್ನ ಕುಟುಂಬದಿಂದ ಬೈಗುಳವನ್ನು ಕೇಳುತ್ತಿದ್ದನಂತೆ. ಹೀಗಾಗಿ ಇದು ಶಿಕ್ಷಕಿ ಹಾಗೂ ವಿದ್ಯಾರ್ಥಿಗೆ ಓಡಿ ಹೋಗಲು ಪ್ರೇರೇಪಿಸಿತು ಎನ್ನಲಾಗಿದೆ.