India-Pakistan ceasefire: ಮಂಗಳವಾರದಿಂದ ಜಮ್ಮು ವಿಮಾನ ನಿಲ್ದಾಣದಲ್ಲಿ ಸೇವೆ ಪುನರಾರಂಭ
ಯುದ್ಧ ಸ್ಥಿತಿ ಹಿನ್ನೆಲೆಯಲ್ಲಿ ಗಡಿಭಾಗದಿಂದ ಭಾರೀ ಪ್ರಮಾಣದಲ್ಲಿ ಜನ ಸುರಕ್ಷಿತ ಸ್ಥಳಕ್ಕೆ ತೆರಳಿದ್ದರು. ಸದ್ಯ ಕದನ ವಿರಾಮ ಘೋಷಣೆಯಾಗಿದ್ದರೂ ಅವರು ಇನ್ನೂ ಒಂದೆರಡು ದಿನ ಕಾದು ನೋಡಲು ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ. ಒಟ್ಟಾರೆ ಕದನ ವಿರಾಮದಿಂದ ಗಡಿಭಾಗದ ಜನ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.


ಶ್ರೀನಗರ: ಭಾರತ-ಪಾಕಿಸ್ತಾನ(India-Pakistan ceasefire) ನಡುವೆ ಶನಿವಾರ ಸಂಜೆ ಕದನ ವಿರಾಮ ಘೋಷಣೆಯಾದ ಬಳಿಕ ಮತ್ತೆ ಗಡಿಯಲ್ಲಿ ಶಾಂತಿ ಪರಿಸ್ಥಿತಿ ನೆಲೆಸಿದ್ದು ದೈನಂದಿನ ಜೀವನ ಮಾತ್ರ ಸಹಜ ಸ್ಥಿತಿಗೆ ಮರಳಿದೆ. ಸಂಘರ್ಷದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ವಾಯವ್ಯ ರೈಲ್ವೆ ಸೇವೆಯು ಭಾನುವಾರ ಮತ್ತೆ ಆರಂಭವಾಗಿತ್ತು. ಇದೀಗ ಜಮ್ಮು ವಿಮಾನ(Jammu airport) ನಿಲ್ದಾಣ ಕೂಡ ಮತ್ತೆ ತೆರೆಯಲಾಗಿದೆ. ಜಮ್ಮು ವಿಮಾನ ನಿಲ್ದಾಣದಲ್ಲಿ ವಿಮಾನ ಕಾರ್ಯಾಚರಣೆಗಳು ಮಂಗಳವಾರದಿಂದ ಪ್ರಾರಂಭವಾಗಲಿವೆ. ಒಟ್ಟಾರೆ ಸ್ಥಗಿತಗೊಂಡಿದ್ದ 32ವಿಮಾನ ನಿಲ್ದಾಣಗಳನ್ನು ಮತ್ತೆ ತೆರೆಯಲಾಗಿದೆ.
ಯುದ್ಧ ಸ್ಥಿತಿ ಹಿನ್ನೆಲೆಯಲ್ಲಿ ಗಡಿಭಾಗದಿಂದ ಭಾರೀ ಪ್ರಮಾಣದಲ್ಲಿ ಜನ ಸುರಕ್ಷಿತ ಸ್ಥಳಕ್ಕೆ ತೆರಳಿದ್ದರು. ಸದ್ಯ ಕದನ ವಿರಾಮ ಘೋಷಣೆಯಾಗಿದ್ದರೂ ಅವರು ಇನ್ನೂ ಒಂದೆರಡು ದಿನ ಕಾದು ನೋಡಲು ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ. ಒಟ್ಟಾರೆ ಕದನ ವಿರಾಮದಿಂದ ಗಡಿಭಾಗದ ಜನ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
‘ಕದನವಿರಾಮ ಜಾರಿಗೆ ಬದ್ಧ’ ಎಂದು ಭಾನುವಾರ ಬೆಳಗ್ಗೆ ಪಾಕ್ ಸೇನೆ ಕೂಡ ಅಧಿಕೃತ ಹೇಳಿಕೆ ನೀಡಿತ್ತು. ಕಾಶ್ಮೀರ ಸೇರಿದಂತೆ ಗಡಿಯ 4 ರಾಜ್ಯಗಳಲ್ಲಿ ಎಲ್ಲೂ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸುವ ಗೋಜಿಗೆ ಹೋಗಿಲ್ಲ ಎಂದು ಭಾರತೀಯ ಸೇನೆ ಮಾಹಿತಿ ನೀಡಿದೆ.
ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮ ಘೋಷಣೆಯ ಕುರಿತು ಉಭಯ ರಾಷ್ಟ್ರಗಳ ಮಿಲಿಟರಿ ಕಾರ್ಯಾಚರಣೆಯ ಸೇನಾ ಜನರಲ್‌ಗಳ ಸಭೆ ಇಂದು (ಸೋಮವಾರ) ಸಂಜೆ ನಡೆಯಲಿದೆ. ಹಾಟ್‌ಲೈನ್ ಮೂಲಕ ನಡೆಯಲಿರುವ ಸಭೆಯು ಈ ಮೊದಲು ಮಧ್ಯಾಹ್ನ 12ಕ್ಕೆ ನಿಗದಿಯಾಗಿತ್ತು. ಆದರೆ ಆ ಬಳಿಕ ಸಭೆಯನ್ನು ಮುಂದೂಡಲಾಗಿತ್ತು.
ಸಭೆಯಲ್ಲಿ ಕದನವಿರಾಮದ ಮರುಜಾರಿ, ಸದ್ಯದ ಪರಿಸ್ಥಿತಿ ಮತ್ತು ಗಡಿಯಲ್ಲಿನ ಪ್ರಸ್ತುತ ಉದ್ವಿಗ್ನತೆಯನ್ನು ಕಡಿಮೆ ಮಾಡುವ ಕ್ರಮಗಳ ಬಗ್ಗೆ ಚರ್ಚೆಯಾಗುವ ನಿರೀಕ್ಷೆಯಿದೆ. ಕದನ ವಿರಾಮ ಘೋಷಣೆಯಾಗಿದ್ದರೂ ಸದ್ಯ ಉಭಯ ದೇಶಗಳ ಗಡಿಯುದ್ದಕ್ಕೂ ಮಿಲಿಟರಿ ನಿಯೋಜನೆ ಯಥಾ ಸ್ಥಿತಿಯಲ್ಲಿದೆ.
ಇದನ್ನೂ ಓದಿ India-Pakistan Tensions: ಮೇ.15 ವರೆಗೆ ಬಂದ್ ಆಗಿದ್ದ 32 ಏರ್‌ಪೋರ್ಟ್‌ಗಳು ರೀ ಓಪನ್
'ಅಪರೇಷನ್ ಸಿಂದೂರ್' ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ 9 ಉಗ್ರ ನೆಲೆ ಮತ್ತು ಹಲವು ಸೇನಾ ನೆಲೆಗಳನ್ನು ಧ್ವಂಸಗೊಳಿಸಲಾಗಿದೆ. ಈ ವೇಳೆ ಪಾಕಿಸ್ತಾನ ಕೆಲವು ಹಿರಿಯ ಸೇನಾಧಿಕಾರಿಗಳೂ ಸೇರಿದಂತೆ ಸೇನೆಯ 40 ಯೋಧರು ಸಾವನ್ನಪ್ಪಿದ್ದಾರೆ. ಎಂದು ಭಾರತೀಯ ಸೇನಾ ಭಾನುವಾರ ನಡೆದಿದ್ದ ಸುದ್ದಿಗೋಷ್ಠಿಯಲ್ಲಿ ಸೇನಾಪಡೆ, ನೌಕಾಪಡೆ ಮತ್ತು ವಾಯುಪಡೆ 3 ಡಿಜಿಎಂಒಗಳು ಅಂಕಿ ಸಂಕಿ ಸಮೇತ ಮಾಹಿತಿ ನೀಡಿದ್ದರು.