ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

“2016ರಲ್ಲಿ ಬಿಜೆಪಿ ಟಿಕೆಟ್ ನೀಡಲು ಜ್ಞಾನೇಶ್ ಕುಮಾರ್ ಮುಂದಾಗಿದ್ದರು”: ಚುನಾವಣಾ ಆಯುಕ್ತರ ವಿರುದ್ಧ ಹೊಸ ಬಾಂಬ್ ಸಿಡಿಸಿದ ಕೇರಳಂ ಮಾಜಿ ಮುಖ್ಯ ಕಾರ್ಯದರ್ಶಿ

Jiji Thomson alleges Gyanesh Kumar: ಜ್ಞಾನೇಶ್ ಕುಮಾರ್ ಅವರು ಕೇರಳಂ ಕೇಡರ್‌ನ ಐಎಎಸ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ದೆಹಲಿಗೆ ತೆರಳುತ್ತಿದ್ದಾಗ ಜ್ಞಾನೇಶ್ ಕುಮಾರ್ ಅವರು 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ತನ್ನನ್ನು ಮನವೊಲಿಸಲು ಪ್ರಯತ್ನಿಸಿದ್ದರು ಎಂದು ಥಾಮ್ಸನ್ ಆರೋಪಿಸಿದ್ದಾರೆ.

ಚುನಾವಣಾ ಆಯುಕ್ತರ ವಿರುದ್ಧ ಹೊಸ ಬಾಂಬ್!

ಚುನಾವಣಾ ಆಯುಕ್ತರ ವಿರುದ್ಧ ಥಾಮ್ಸನ್ ಆರೋಪ -

Priyanka P
Priyanka P Sep 27, 2026 12:24 PM

ತಿರುವನಂತಪುರಂ, ಸೆ.27: ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ (Gyanesh Kumar) ವಿರುದ್ಧ ಕೇರಳಂ ಮಾಜಿ ಮುಖ್ಯ ಕಾರ್ಯದರ್ಶಿ ಜಿ.ಜಿ. ಥಾಮ್ಸನ್ (Jiji Thomson) ಹೊಸ ಬಾಂಬ್ ಸಿಡಿಸಿದ್ದಾರೆ. ಜ್ಞಾನೇಶ್ ಕುಮಾರ್ ಅವರು ಹಿಂದೆ ಐಎಎಸ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾಗ, 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಪಟ್ಟಣಂತಿಟ್ಟ ಕ್ಷೇತ್ರದಿಂದ ಸ್ಪರ್ಧಿಸಲು ಆಸಕ್ತಿ ಇದೆಯೇ ಎಂದು ತಮ್ಮನ್ನು ಕೇಳಿದ್ದರು ಎಂದು ಥಾಮ್ಸನ್ ಆರೋಪಿಸಿದ್ದಾರೆ.

ಚುನಾವಣಾ ಆಯೋಗ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ನಿರ್ವಹಿಸಿದ ರೀತಿಗೆ ಸಂಬಂಧಿಸಿದಂತೆ ದೊಡ್ಡ ವಿವಾದ ಎದುರಿಸುತ್ತಿದ್ದಾರೆ. ಅಲ್ಲದೆ, ಮೂವರು ಸದಸ್ಯರಿರುವ ಚುನಾವಣಾ ಆಯೋಗದೊಳಗೆ ಭಿನ್ನಾಭಿಪ್ರಾಯಗಳಿವೆ ಎಂಬ ಆರೋಪಗಳೂ ಕೇಳಿಬರುತ್ತಿವೆ. ಕಾಂಗ್ರೆಸ್, ಜ್ಞಾನೇಶ್ ಕುಮಾರ್ ಅವರ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ. ಈ ಸಂದರ್ಭದಲ್ಲಿ ಥಾಮ್ಸನ್ ಈ ಆರೋಪ ಮಾಡಿದ್ದಾರೆ.

ಥಾಮ್ಸನ್ ಅವರ ಹೇಳಿಕೆಯ ಪ್ರಕಾರ, ಈ ಘಟನೆ 2016ರಲ್ಲಿ ನಡೆದಿದೆ. ಆಗ ಜಿಜಿ ಥಾಮ್ಸನ್ ಅವರು ಕೇರಳಂನ ಮುಖ್ಯ ಕಾರ್ಯದರ್ಶಿಯಾಗಿದ್ದರು. ಜ್ಞಾನೇಶ್ ಕುಮಾರ್ ಅವರು ಕೇರಳಂ ಕೇಡರ್‌ನ ಐಎಎಸ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ದೆಹಲಿಗೆ ತೆರಳುತ್ತಿದ್ದ ವಿಮಾನದಲ್ಲಿ ಇಬ್ಬರ ನಡುವೆ ಈ ಮಾತುಕತೆ ನಡೆದಿದೆ ಎಂದು ಥಾಮ್ಸನ್ ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಜ್ಞಾನೇಶ್ ಕುಮಾರ್ ಅವರು 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ಮನವೊಲಿಸಲು ಪ್ರಯತ್ನಿಸಿದ್ದರು. ಆದರೆ ತಾನು ನಿರಾಕರಿಸಿದ್ದಾಗಿ ಥಾಮ್ಸನ್ ಹೇಳಿದ್ದಾರೆ.

SIR ವಿವಾದ: ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲು ಸುಪ್ರೀಂ ಕೋರ್ಟ್‌ಗೆ ಮನವಿ

2019 ರಲ್ಲಿ ಪತ್ತನಂತಿಟ್ಟ ಲೋಕಸಭಾ ಸ್ಥಾನವನ್ನು ಕಾಂಗ್ರೆಸ್‌ನ ಆಂಟೋ ಆಂಟನಿ ಗೆದ್ದರೆ, ಸಿಪಿಐ(ಎಂ) ನ ವೀಣಾ ಜಾರ್ಜ್ ಎರಡನೇ ಸ್ಥಾನ ಪಡೆದರು. ಬಿಜೆಪಿಯ ಪತ್ತನಂತಿಟ್ಟ ಅಭ್ಯರ್ಥಿ ಕೆ. ಸುರೇಂದ್ರನ್ ಅವರು ಶೇ. 28.95 ರಷ್ಟು ಮತಗಳೊಂದಿಗೆ ಮೂರನೇ ಸ್ಥಾನ ಪಡೆದರು.

ಈ ಆರೋಪಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಜ್ಞಾನೇಶ್ ಕುಮಾರ್ ಅವರು ಚುನಾವಣಾ ಮೇಲ್ವಿಚಾರಣೆ ಮಾಡುವ ಅಧಿಕಾರಿಯಾಗುವ ಮೊದಲು ಬಿಜೆಪಿಗಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಅಥವಾ ನೇಮಕ ಮಾಡುವ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದರು ಎಂದು ಆರೋಪಿಸಿದ್ದಾರೆ. ಆದರೆ, ಈ ಆರೋಪಗಳಿಗೆ ಜ್ಞಾನೇಶ್ ಕುಮಾರ್ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಜ್ಞಾನೇಶ್ ಕುಮಾರ್ ಅವರು ಫೆಬ್ರವರಿ 2025 ರಲ್ಲಿ 26ನೇ ಮುಖ್ಯ ಚುನಾವಣಾ ಆಯುಕ್ತರಾದರು. 1988 ರ ಐಎಎಸ್ ಬ್ಯಾಚ್‌ನ ಕೇರಳ-ಕೇಡರ್ ಅಧಿಕಾರಿಯಾದ ಅವರು ಐಐಟಿ ಕಾನ್ಪುರದಲ್ಲಿ ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಬಿಟೆಕ್ ಪದವಿ ಪಡೆದಿದ್ದಾರೆ. 2016 ರಲ್ಲಿ, ಕುಮಾರ್ ದೆಹಲಿಯಲ್ಲಿ ಕೇರಳಂ ಸರ್ಕಾರದ ದೆಹಲಿ ಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ್ದರು. ಆ ಸಮಯದಲ್ಲಿ ಉಮ್ಮನ್ ಚಾಂಡಿ ಕೇರಳಂನ ಮುಖ್ಯಮಂತ್ರಿಯಾಗಿದ್ದರು. ರಾಜ್ಯ ಮತ್ತು ಕೇಂದ್ರದ ನಡುವೆ ಸಂಪರ್ಕ ಸೇತುವೆಯಾಗಿ ಕೆಲಸ ಮಾಡುತ್ತಿದ್ದರು. ಉಮ್ಮನ್ ಚಾಂಡಿ ಅವರೇ ನೇಮಿಸಿದ್ದರು.