ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ; ಕಚ್ಚಾ ತೈಲ, ಅನಿಲ, ವಿದ್ಯುತ್, ರಸಗೊಬ್ಬರ ಲಭ್ಯತೆ ಕುರಿತು ಚರ್ಚೆ
High-Level Meeting: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಪೆಟ್ರೋಲಿಯಂ, ಕಚ್ಚಾ ತೈಲ, ಅನಿಲ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳಿಗೆ ಸಂಬಂಧಿಸಿದ ಪರಿಸ್ಥಿತಿಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಸಭೆ ನಡೆಸಿದರು. ಪ್ರಧಾನಮಂತ್ರಿ ನಿವಾಸದಲ್ಲಿ ನಡೆದ ಈ ಸಭೆಯಲ್ಲಿ ವಿವಿಧ ಇಲಾಖೆಗಳ ಸಚಿವರು ಭಾಗವಹಿಸಿದ್ದರು.
ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆ -
ನವದೆಹಲಿ, ಮಾ. 22: ಪಶ್ಚಿಮ ಏಷ್ಯಾ ಸಂಘರ್ಷದ (West Asia conflict) ಮಧ್ಯೆ ಪೆಟ್ರೋಲಿಯಂ, ಕಚ್ಚಾ ತೈಲ, ಅನಿಲ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳಿಗೆ ಸಂಬಂಧಿಸಿದ ಪರಿಸ್ಥಿತಿಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ (PM Narendra Modi) ಉನ್ನತ ಮಟ್ಟದ ಸಭೆ ನಡೆಸಿದರು. ದೇಶಾದ್ಯಂತ ಅಗತ್ಯ ಸಂಪನ್ಮೂಲಗಳ ನಿರಂತರ ಸರಬರಾಜು, ಸಂಪನ್ಮೂಲಗಳ ಪರಿಣಾಮಕಾರಿ ವಿತರಣೆ ಖಚಿತಪಡಿಸಲು ಗಮನಹರಿಸಲಾಯಿತು.
ಪ್ರಧಾನಮಂತ್ರಿ ನಿವಾಸದಲ್ಲಿ ನಡೆದ ಈ ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಆರೋಗ್ಯ ಸಚಿವ ಜೆ.ಪಿ. ನಡ್ಡಾ, ವಿದೇಶಾಂಗ ಸಚಿವ ಎಸ್. ಜೈಶಂಕರ್, ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿ ಹಿರಿಯ ಸಚಿವರು ಭಾಗವಹಿಸಿದ್ದರು.
ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ:
Delhi: Prime Minister Narendra Modi chaired a high-level meeting to review the situation in the petroleum, crude oil, gas, power, and fertiliser sectors amid the evolving West Asia situation, focusing on ensuring uninterrupted supply, stable logistics, and efficient distribution… pic.twitter.com/8kfxs5UzQS
— IANS (@ians_india) March 22, 2026
ಇಂಧನ ಭದ್ರತೆಯನ್ನು ಕಾಪಾಡಲು ಮತ್ತು ಸಾಕಷ್ಟು ಲಭ್ಯತೆಯನ್ನು ಕಾಯ್ದುಕೊಳ್ಳಲು ಸರ್ಕಾರ ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಗ್ರಾಹಕರು ಮತ್ತು ಕೈಗಾರಿಕಾ ಹಿತಾಸಕ್ತಿಗಳನ್ನು ರಕ್ಷಿಸಲು ಜಾಗತಿಕ ಬೆಳವಣಿಗೆಗಳನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದೆ ಎಂದು ಸರ್ಕಾರ ಹೇಳಿದೆ.
ಇಸ್ರೇಲ್‌ನ ಲಿಟಲ್ ಇಂಡಿಯಾ ಮೇಲೆ ದಾಳಿ: ಭಾರತ ಸೇರಿವಿಶ್ವಕ್ಕೆ ಆಘಾತ ನೀಡಿದ ಇರಾನ್
ತಕ್ಷಣದ ಕ್ರಮಗಳ ಭಾಗವಾಗಿ, ಸರ್ಕಾರವು ರಾಜ್ಯಗಳಿಗೆ ವಾಣಿಜ್ಯ ಎಲ್‌ಪಿಜಿ ಹಂಚಿಕೆಯನ್ನು ಹೆಚ್ಚಿಸಿದೆ. ಶಿಕ್ಷಣ ಸಂಸ್ಥೆಗಳು ಮತ್ತು ಆಸ್ಪತ್ರೆಗಳಂತಹ ಪ್ರಮುಖ ವಲಯಗಳಿಗೆ ಆದ್ಯತೆ ನೀಡಿದೆ. ಗೃಹ ಬಳಕೆ ಮತ್ತು ವಾಣಿಜ್ಯ ಗ್ರಾಹಕರಿಗೆ ಹೊಸ ಪಿಎನ್‌ಜಿ ಸಂಪರ್ಕಗಳನ್ನು ಒದಗಿಸುವಂತೆ ರಾಜ್ಯಗಳಿಗೆ ಸೂಚಿಸಲಾಗಿದೆ. ಎಲ್‌ಪಿಜಿ ಸಂಗ್ರಹಣೆ ಮತ್ತು ಕಾಳಸಂತೆ ನಿಯಂತ್ರಣಕ್ಕೆ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಅಧಿಕಾರಿಗಳು ದಾಳಿಗಳನ್ನು ಮುಂದುವರಿಸಿದ್ದಾರೆ.
ಅಧಿಕಾರಿಗಳು ತಿಳಿಸಿರುವಂತೆ, ಭಾರತದೆಲ್ಲೆಡೆ ಬಂದರು ಕಾರ್ಯಾಚರಣೆಗಳು ಸಾಮಾನ್ಯವಾಗಿದ್ದು, ಯಾವುದೇ ದಟ್ಟಣೆ ವರದಿಯಾಗಿಲ್ಲ. ಪೂರೈಕೆಯನ್ನು ಹೆಚ್ಚಿಸುವ ಸಲುವಾಗಿ, ಅಮೆರಿಕದ ಟೆಕ್ಸಾಸ್‌ನಿಂದ ದ್ರವೀಕೃತ ಪೆಟ್ರೋಲಿಯಂ ಅನಿಲ (LPG) ಹೊತ್ತ ಸರಕು ಹಡಗು ನವ ಮಂಗಳೂರು ಬಂದರಿಗೆ ಆಗಮಿಸಿದೆ. ಇದಕ್ಕೂ ಮೊದಲು, ಮಾರ್ಚ್ 14ರಿಂದ ಮಾರ್ಚ್ 31ರವರೆಗೆ ಕಚ್ಚಾ ತೈಲ ಮತ್ತು ಎಲ್‌ಪಿಜಿಗೆ ಸಂಬಂಧಿಸಿದ ಸರಕು ಶುಲ್ಕಗಳನ್ನು ಮನ್ನಾ ಮಾಡಲಾಗಿದೆ ಎಂದು ಶಿಪ್ಪಿಂಗ್ ಸಚಿವಾಲಯ ತಿಳಿಸಿತ್ತು.
ಅಂತರ-ಸಚಿವಾಲಯ ಸಭೆಯಲ್ಲಿ, ಶಿಪ್ಪಿಂಗ್ ಸಚಿವಾಲಯದ ವಿಶೇಷ ಕಾರ್ಯದರ್ಶಿ ರಾಜೇಶ್ ಕುಮಾರ್ ಸಿನ್ಹಾ, ಪರ್ಷಿಯನ್ ಕೊಲ್ಲಿಯ ಪ್ರದೇಶದಲ್ಲಿರುವ ಎಲ್ಲ 22 ಭಾರತೀಯ ಹಡಗುಗಳು ಮತ್ತು 611 ನಾವಿಕರು ಸುರಕ್ಷಿತರಾಗಿದ್ದು, ಕಳೆದ 24 ಗಂಟೆಗಳಲ್ಲಿ ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ ಎಂದು ತಿಳಿಸಿದ್ದಾರೆ. ಇದಲ್ಲದೆ, ಪರಿಸ್ಥಿತಿಯನ್ನು ಅಧಿಕಾರಿಗಳು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದೂ ಅವರು ಹೇಳಿದ್ದಾರೆ.
ಅಮೆರಿಕವು ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ಭಾರತವನ್ನು ಸುಮ್ಮನೆ ಬಿಡುವುದಿಲ್ಲ: ಪಾಕ್ ಮಾಜಿ ರಾಯಭಾರಿ
ಪಶ್ಚಿಮ ಏಷ್ಯಾ ಸಂಘರ್ಷವು ನಾಲ್ಕನೇ ವಾರಕ್ಕೆ ಪ್ರವೇಶಿಸಿದ್ದು, ಫೆಬ್ರವರಿ 28ರಂದು ಅಮೆರಿಕ ಮತ್ತು ಇಸ್ರೇಲ್ ಜಂಟಿ ಮಿಲಿಟರಿ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ (86) ಹತ್ಯೆಯಾದ ನಂತರ ಸಂಘರ್ಷ ಹೆಚ್ಚಾಯಿತು.
ದಾಳಿಗೆ ಪ್ರತೀಕಾರವಾಗಿ, ಇರಾನ್ ಹಲವು ಗಲ್ಫ್ ದೇಶಗಳಲ್ಲಿ ಇಸ್ರೇಲಿ ಮತ್ತು ಅಮೆರಿಕದ ಮಿಲಿಟರಿ ನೆಲೆಗಳ ಮೇಲೆ ದಾಳಿ ಮಾಡಿತು. ಅಷ್ಟೇ ಅಲ್ಲ, ಹೊರ್ಮುಜ್ ಜಲಮಾರ್ಗವನ್ನು ಮುಚ್ಚಿತು. ಇದು ಅಂತಾರಾಷ್ಟ್ರೀಯ ಇಂಧನ ಮಾರುಕಟ್ಟೆಗಳು ಮತ್ತು ಜಾಗತಿಕ ಆರ್ಥಿಕ ಸ್ಥಿರತೆಯ ಮೇಲೆ ಪರಿಣಾಮ ಬೀರಿತು.