ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

"ಸುಳ್ಳು ಹೇಳಿಕೆಗಳಿಂದ ಇತಿಹಾಸ ಬದಲಾಗುವುದಿಲ್ಲ"; ಕಾಶ್ಮೀರದ ತಂಟೆಗೆ ಬಂದ ಪಾಕ್‌ಗೆ ಖಡಕ್‌ ಎಚ್ಚರಿಕೆ ನೀಡಿದ ಭಾರತ

ಜಮ್ಮು ಮತ್ತು ಕಾಶ್ಮೀರದ ವಿಚಾರವಾಗಿ ಸದಾ ಕಾಲು ಕೆರೆದು ಜಗಳಕ್ಕೆ ಬರುವ ಪಾಕಿಸ್ತಾನಕ್ಕೆ ಭಾರತದ ವಿಶ್ವ ಸಂಸ್ಥೆಯ ಖಾಯಂ ಪ್ರತಿನಿಧಿ ಪಿ. ಹರೀಶ್ ಅವರು ತಿರುಗೇಟು ನೀಡಿದ್ದಾರೆ. ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದ ಎಲ್ಲಾ ವಿಷಯಗಳು ಭಾರತದ ಆಂತರಿಕ ವಿಷಯವಾಗಿದೆ. ಸುಳ್ಳು ಹೇಳಿಕೆಗಳಿಂದ ಇತಿಹಾಸ ಬದಲಾಗುವುದಿಲ್ಲ ಎಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧಿವೇಶನದಲ್ಲಿ ಅವರು ಹೇಳಿದ್ದಾರೆ.

ಕಾಶ್ಮೀರ ವಿಚಾರವಾಗಿ ಪಾಕ್‌ಗೆ ಭಾರತದಿಂದ ಖಡಕ್‌ ಎಚ್ಚರಿಕೆ

ಸಂಗ್ರಹ ಚಿತ್ರ -

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ (Jammu and kashmir) ಸಂಬಂಧಿಸಿದ ಎಲ್ಲಾ ವಿಷಯಗಳು ಭಾರತದ ಆಂತರಿಕ ವಿಷಯವಾಗಿದೆ. ಸುಳ್ಳು, ಪಕ್ಷಪಾತದ ಹೇಳಿಕೆಗಳಿಂದ ಇದನ್ನು ಬದಲಾಯಿಸಲಾಗುವುದಿಲ್ಲ ಎಂದು ಭಾರತದ ವಿಶ್ವ ಸಂಸ್ಥೆಯ ಖಾಯಂ ಪ್ರತಿನಿಧಿ ಪಿ. ಹರೀಶ್ ಹೇಳಿದ್ದಾರೆ. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧಿವೇಶನದಲ್ಲಿ (United Nations General Assembly session) ಶುಕ್ರವಾರ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿ ಪಾಕಿಸ್ತಾನದ (pakistan) ಅನಗತ್ಯ ಹೇಳಿಕೆಗಳಿಗೆ ತಿರುಗೇಟು ನೀಡಿದರು. ಜಮ್ಮು ಕಾಶ್ಮೀರ ಭಾರತದ ಅವಿಭಾಜ್ಯ ಮತ್ತು ಬೇರ್ಪಡಿಸಲಾಗದ ಭಾಗವಾಗಿದೆ ಮತ್ತು ಯಾವಾಗಲೂ ಇದು ಹೀಗೆಯೇ ಉಳಿಯುತ್ತದೆ ಎಂದು ಹೇಳಿದರು.

ವಿಶ್ವವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ವಾರ್ಷಿಕ ವರದಿಯ ಚರ್ಚೆಯ ಸಂದರ್ಭದಲ್ಲಿ ಪಾಕಿಸ್ತಾನದ ಖಾಯಂ ಪ್ರತಿನಿಧಿ ಅಸಿಮ್ ಇಫ್ತಿಕರ್ ಅಹ್ಮದ್ ಅವರು ಕೇಂದ್ರಾಡಳಿತ ಪ್ರದೇಶದ ಬಗ್ಗೆ ನೀಡಿದ ಹೇಳಿಕೆಗಳಿಗೆ ಪ್ರತಿಕ್ರಿಯಿಸಿ, ಜಮ್ಮು, ಕಾಶ್ಮೀರದ ವಿಚಾರವಾಗಿ ಪಾಕಿಸ್ತಾನವು ಆಧಾರ ರಹಿತ ಹೇಳಿಕೆಗಳನ್ನು ನೀಡುತ್ತಲೇ ಇದೆ. ಅವುಗಳು ಐತಿಹಾಸಿಕ ಸಂಗತಿಗಳಿಂದ ದೂರವಾಗಿವೆ. ಇತಿಹಾಸಕ್ಕೆ ಇದು ಹೊಂದಿಕೆಯಾಗುವುದಿಲ್ಲ. ಪಾಕಿಸ್ತಾನದ ಸುಳ್ಳು ಮಾತುಗಳು, ಅಧಿಕಾರದ ಹೇಳಿಕೆಗಳು ವಾಸ್ತವವನ್ನು ಬದಲಾಯಿಸುವುದಿಲ್ಲ ಎಂದು ತಿಳಿಸಿದರು.

ಮತ್ತೆ ಶುರುವಾಯ್ತಾ ವಾರ್‌? ಇರಾನ್‌ ಡ್ರೋನ್‌ಗಳು, ರೇಡಾರ್ ಕೇಂದ್ರಗಳ ಮೇಲೆ ಅಮೆರಿಕ ದಾಳಿ

ಭದ್ರತಾ ಮಂಡಳಿಯ ಚುನಾಯಿತ ಸದಸ್ಯರಾಗಿ ಪಾಕಿಸ್ತಾನದ ಎರಡು ವರ್ಷಗಳ ಅವಧಿ ಈ ವರ್ಷ ಕೊನೆಗೊಳ್ಳಲಿದ್ದು, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಶಾಶ್ವತ ಸದಸ್ಯತ್ವ ದೊಡ್ಡ ಜವಾಬ್ದಾರಿಯಾಗಿದೆ. ಪಾಕಿಸ್ತಾನವು ಇದನ್ನು ತನ್ನ ವಿಭಜನಕಾರಿ ರಾಜಕೀಯ ಹಿತಾಸಕ್ತಿಗಳಿಗಾಗಿ ದುರುಪಯೋಗಪಡಿಸಿಕೊಳ್ಳುವುದು ನಿಶ್ಚಿತ ಎಂದು ಹೇಳಿದರು.



ಗಿಲ್ಗಿಟ್ -ಬಾಲ್ಟಿಸ್ತಾನ್ ಅಸೆಂಬ್ಲಿಗೆ ಜೂನ್ 7ರಂದು ಸಾರ್ವತ್ರಿಕ ಚುನಾವಣೆಗಳನ್ನು ನಡೆಸುವ ಉದ್ದೇಶಿಸಿದ್ದ ಪಾಕಿಸ್ತಾನದ ಯೋಜನೆಗಳನ್ನು ಖಂಡಿಸಿರುವ ಭಾರತದ ವಿದೇಶಾಂಗ ಸಚಿವಾಲಯ (ಎಂಇಎ) ಇದಕ್ಕೆ ತೀವ್ರ ಪ್ರತಿರೋಧವನ್ನು ಒಡ್ಡಿದೆ. ಈ ಪ್ರದೇಶವು ಭಾರತಕ್ಕೆ ಸೇರಿದ್ದು, ಪಾಕಿಸ್ತಾನ ಕಾನೂನುಬಾಹಿರವಾಗಿ ಮತ್ತು ಬಲವಂತವಾಗಿ ಅತಿಕ್ರಮಿಸಿಕೊಂಡಿದೆ ಎಂದು ಹೇಳಿದೆ.



ಪಾಕಿಸ್ತಾನದ ಈ ಪ್ರಯತ್ನಗಳು ಮಾನವ ಹಕ್ಕುಗಳ ಉಲ್ಲಂಘನೆ, ರಾಜಕೀಯ ದಮನ, ಆರ್ಥಿಕ ಶೋಷಣೆ ಮತ್ತು ಸ್ವಾತಂತ್ರ್ಯ ನಿರಾಕರಣೆಯಾಗಿದೆ. ಇದನ್ನು ಪಾಕಿಸ್ತಾನ ಮರೆಯಿಂದ ಮಾಡಲು ಸಾಧ್ಯವಿಲ್ಲ. ಆಕ್ರಮಿತ ಪ್ರದೇಶಗಳಲ್ಲಿ ಪಾಕಿಸ್ತಾನ ನಡೆಸುವ ಯಾವುದೇ ಭೌತಿಕ ಬದಲಾವಣೆಯ ಪ್ರಯತ್ನವನ್ನು ಭಾರತ ಸರ್ಕಾರ ತಿರಸ್ಕರಿಸುತ್ತದೆ ಮತ್ತು ಈ ಪ್ರದೇಶಗಳನ್ನು ತಕ್ಷಣ ಖಾಲಿ ಮಾಡಬೇಕು ಎನ್ನುವುದನ್ನು ದೃಢವಾದ ಧ್ವನಿಯಲ್ಲಿ ಹೇಳಿತ್ತದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ಪ್ರಧಾನಿ ನರೇಂದ್ರ ಮೋದಿ ಮೇಲೆ ಒತ್ತಡ ಅಂತಾರಾಷ್ಟ್ರೀಯ ಸಂಬಂಧಗಳಿಗೆ ಹಾನಿಕಾರಕ: ವ್ಲಾಡಿಮಿರ್ ಪುಟಿನ್

ಭಾರತದ ಹೇಳಿಕೆಗಳನ್ನು ತಿರಸ್ಕರಿಸಿರುವ ಪಾಕಿಸಾನ ಗಿಲ್ಗಿಟ್-ಬಾಲ್ಟಿಸ್ತಾನ್‌ನಲ್ಲಿ ಚುನಾವಣೆಗಳ ಕುರಿತು ಭಾರತ ಆಧಾರರಹಿತ ಹೇಳಿಕೆಗಳನ್ನು ನೀಡುತ್ತಿದೆ ಎಂದು ಆರೋಪಿಸಿದೆ.