ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

“ಇಂದಿರಾ ಗಾಂಧಿ ಇರುತ್ತಿದ್ದರೆ ಬಿಜೆಪಿಯನ್ನು ನಿಷೇಧಿಸುತ್ತಿದ್ದರು”: ಭಾರೀ ವಿವಾದ ಸೃಷ್ಟಿಸಿದ ಮಾಜಿ ಸಿಎಂ ಹೇಳಿಕೆ

Ashok Gehlot's Remarks: ತಮ್ಮ 50 ವರ್ಷಗಳ ಸಾರ್ವಜನಿಕ ಜೀವನದಲ್ಲಿ ಇಂದು ದೇಶದಲ್ಲಿ ಅತ್ಯಂತ ಅಪಾಯಕಾರಿ ವಾತಾವರಣವಿದೆ ಎಂದು ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದರು. ಇಂದಿರಾ ಗಾಂಧಿಯವರಂತಹ ನಾಯಕಿ ಇಂದು ಬದುಕಿದ್ದರೆ, ಅವರು ಬಿಜೆಪಿಯಂತಹ ಪಕ್ಷವನ್ನು ನಿಷೇಧಿಸುತ್ತಿದ್ದರು ಎಂದು ಹೇಳಿದರು.

“ಇಂದಿರಾ ಗಾಂಧಿ ಇರುತ್ತಿದ್ದರೆ ಬಿಜೆಪಿಯನ್ನು ನಿಷೇಧಿಸುತ್ತಿದ್ದರು”

ರಾಜಸ್ಥಾನ ಮಾಜಿ ಸಿಎಂ ಅಶೋಕ್ ಗೆಹ್ಲೋಟ್ (ಸಂಗ್ರಹ ಚಿತ್ರ) -

Priyanka P
Priyanka P Jun 15, 2026 3:07 PM

ಜೈಪುರ, ಜೂ.15: ಬಿಜೆಪಿಯು ಕೋಮುವಾದಿ ರಾಜಕೀಯದ ಪಕ್ಷ ಎಂದು ಕಾಂಗ್ರೆಸ್ ಹಿರಿಯ ನಾಯಕ ಅಶೋಕ್ ಗೆಹ್ಲೋಟ್ (Ashok Gehlot) ಆರೋಪಿಸಿದ್ದಾರೆ. ದಿವಂಗತ ಪ್ರಧಾನಿ ಇಂದಿರಾ ಗಾಂಧಿ (Indira Gandhi) ಇಂದು ಬದುಕಿದ್ದರೆ ಅದನ್ನು ನಿಷೇಧಿಸುತ್ತಿದ್ದರು ಎಂದು ಅವರು ಹೇಳಿದ್ದಾರೆ. ಇದಕ್ಕೆ ಪ್ರತಿಯಾಗಿ, ಕಾಂಗ್ರೆಸ್ ಹಿಂದೂಗಳ ಬಗ್ಗೆ ದ್ವೇಷ ಸಾಧಿಸುತ್ತಿದೆ ಮತ್ತು ಮುಸ್ಲೀಮರ ಪರವಾಗಿ ನಿಂತಿದೆ ಎಂದು ಬಿಜೆಪಿ ಆರೋಪಿಸಿದೆ.

ರಾಜಸ್ಥಾನದ ಜೈಪುರದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದ ಗೆಹ್ಲೋಟ್, ತಮ್ಮ 50 ವರ್ಷಗಳ ಸಾರ್ವಜನಿಕ ಜೀವನದಲ್ಲಿ ಇಂದು ದೇಶದಲ್ಲಿ ಅತ್ಯಂತ ಅಪಾಯಕಾರಿ ವಾತಾವರಣವಿದೆ ಎಂದು ಹೇಳಿದರು. “ಇಂದಿರಾ ಗಾಂಧಿಯವರಂತಹ ನಾಯಕಿ ಇಂದು ಬದುಕಿದ್ದರೆ, ಅವರು ಬಿಜೆಪಿಯಂತಹ ಪಕ್ಷವನ್ನು ನಿಷೇಧಿಸುತ್ತಿದ್ದರು. ಇಂದಿನ ವಾತಾವರಣ ಅತ್ಯಂತ ಅಪಾಯಕಾರಿಯಾಗಿದೆ. ದೇಶ ಇನ್ನೂ ಎಚ್ಚರಗೊಳ್ಳದಿದ್ದರೆ, ಈ ದೇಶದ ಜನರು ನಂತರ ಅದರ ಪರಿಣಾಮಗಳನ್ನು ಅನುಭವಿಸುತ್ತಾರೆ” ಎಂದು ಅವರು ಹೇಳಿದರು.

ಇಂದು ಅಧಿಕಾರದಲ್ಲಿರುವವರು ಉದ್ದೇಶಪೂರ್ವಕವಾಗಿ ಧಾರ್ಮಿಕ ಧ್ರುವೀಕರಣವನ್ನು ಮಾಡುತ್ತಿದ್ದಾರೆ ಎಂದು ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಗೆಹ್ಲೋಟ್ ಆರೋಪಿಸಿದರು. ಉತ್ತರ ಪ್ರದೇಶ ಚುನಾವಣೆಯಲ್ಲಿ ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲು ಬಿಜೆಪಿ ಏಕೆ ವಿಫಲವಾಗಿದೆ ಎಂದು ಅವರು ಪ್ರಶ್ನಿಸಿದರು.

ಅಪರಾಧಿಗಳೊಂದಿಗೆ ಮದುವೆ ಸಂಭ್ರಮ; ರಾಜಸ್ಥಾನ ಕಾನ್ಸ್‌ಟೇಬಲ್ ಸೇವೆಯಿಂದ ವಜಾ

“ದೇಶದ ಜನರಿಗೆ ಸಂದೇಶ ನೀಡುವ ಉದ್ದೇಶದಿಂದಾದರೂ ನೀವು ಐದು ಸ್ಥಾನಗಳನ್ನು ನೀಡಬಹುದಿತ್ತು. ಆದರೆ, 'ನಾವು ಸಂಪೂರ್ಣ ಹಿಂದುತ್ವದ ಪಕ್ಷ' ಎಂಬುದನ್ನು ಬಿಂಬಿಸಲು ನೀವು ಬಯಸುತ್ತೀರಿ. ಹಿಂದುತ್ವ ಬೆಂಬಲಿಗರನ್ನು ಪ್ರಚೋದಿಸಿ ಅಧಿಕಾರ ನಡೆಸುವುದೇ ಉದ್ದೇಶವಾಗಿರುವವರ ವಿರುದ್ಧ, ಇಂದು ಇಂದಿರಾ ಗಾಂಧಿಯಂತಹ ಪ್ರಬಲ ನಾಯಕಿ ಜೀವಂತವಾಗಿದ್ದರೆ ಬಿಜೆಪಿಯಂತಹ ಪಕ್ಷವನ್ನು ನಿಷೇಧಿಸುತ್ತಿದ್ದರು. ಕೇವಲ ಹಿಂದುತ್ವದ ಅಜೆಂಡಾವನ್ನೇ ಮುಂದಿಟ್ಟುಕೊಂಡು ಪಕ್ಷವನ್ನು ನಡೆಸುತ್ತೀರಾ? ಹಿಂದೂಗಳ ಹೆಸರಿನಲ್ಲಿ ಮಾತ್ರ ರಾಜಕೀಯ ಮಾಡಲು ಬಯಸುತ್ತೀರಾ?” ಎಂದು ಅವರು ಪ್ರಶ್ನಿಸಿದರು.

ಇನ್ನು ಅಶೋಕ್ ಗೆಹ್ಲೋಟ್ ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿಯು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಕಾಂಗ್ರೆಸ್, ಹಿಂದೂಗಳು ಮತ್ತು ಹಿಂದುತ್ವದ ಬಗ್ಗೆ ಹೊಂದಿರುವ ದ್ವೇಷವನ್ನು ತೋರಿಸುತ್ತದೆ ಎಂದು ಪಕ್ಷದ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷವು ಹಿಂದೂಗಳು ಮತ್ತು ಹಿಂದುತ್ವವನ್ನು ದ್ವೇಷಿಸುತ್ತದೆ. ಅದಕ್ಕೆ ಮತ್ತೊಂದು ಪುರಾವೆ ಅಶೋಕ್ ಗೆಹ್ಲೋಟ್ ಅವರ ಮಾತಿನ ರೂಪದಲ್ಲಿ ಹೊರಬಂದಿದೆ. ಸುಪ್ರೀಂ ಕೋರ್ಟ್ ಪ್ರಕಾರ ಹಿಂದುತ್ವವು ಒಂದು ಜೀವನ ವಿಧಾನ. ಅವರು ಅದನ್ನು ಏಕೆ ನಿಷೇಧಿಸುತ್ತಾರೆ? ಎಂದು ಅವರು ಪ್ರಶ್ನಿಸಿದರು.

“ಇದು ಹಿಂದೂಗಳ ಬಗ್ಗೆ ಕಾಂಗ್ರೆಸ್ ಹೊಂದಿರುವ ದ್ವೇಷವನ್ನು ತೋರಿಸುತ್ತದೆ. ಇದು ಇಂಡಿಯನ್ ನ್ಯಾಷನಲ್ ಕ್ಯಾಲಿಫೇಟ್ ಪಕ್ಷ. ಇದು ಇನ್ನು ಮುಂದೆ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಅಲ್ಲ. ಇದು ಮುಸ್ಲಿಂ ಲೀಗ್ ಮಾವೋವಾದಿ ಕಾಂಗ್ರೆಸ್ ಆಗಿ ಮಾರ್ಪಟ್ಟಿದೆ. ಸಂಪನ್ಮೂಲಗಳ ಮೊದಲ ಹಕ್ಕು ಮುಸ್ಲಿಮರಿಗೆ ಎಂದು ಅವರು ಹೇಳುತ್ತಾರೆ. ಕಾಂಗ್ರೆಸ್‌ಗೆ ಮುಸ್ಲಿಮರು ಬೇಕು ಎಂದು ಅವರು ಹೇಳುತ್ತಾರೆ. ಆದರೆ ನೀವು ಹಿಂದುತ್ವದ ಬಗ್ಗೆ ಮಾತನಾಡಿದರೆ, ಅದನ್ನು ಮಹಾಪಾಪವೆಂದು ಪರಿಗಣಿಸಿ ನಿಮ್ಮ ವಿರುದ್ಧ ಕ್ರಮ ಕೈಗೊಳ್ಳುತ್ತಾರೆ” ಎಂದು ಅವರು ಆರೋಪಿಸಿದರು.