ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ವಿದ್ಯಾರ್ಥಿ ಸಾವಿನ ಬಗ್ಗೆ ಹಿಂದಿನ ಹೇಳಿಕೆಗಳಿಗೆ ಕ್ಷಮೆಯಾಚಿಸಿದ ಐಐಟಿ ಬಾಂಬೆ: ನಿರ್ದೇಶಕರ ರಾಜೀನಾಮೆ ನಿರಾಕರಣೆ

IIT Bombay Apologizes: ಐಐಟಿ ಬಾಂಬೆಯ ಪೊವಾಯ್ ಕ್ಯಾಂಪಸ್‌ನಲ್ಲಿ ಶುಕ್ರವಾರ (ಸೆ.18) ನಡೆದ ಪರೀಕ್ಷೆಯೊಂದರಲ್ಲಿ ನಕಲು ಮಾಡಿದ ಆರೋಪದ ಮೇಲೆ ಸಿಕ್ಕಿಬಿದ್ದಿದ್ದ ದ್ವಿತೀಯ ವರ್ಷದ ಬಿ. ಟೆಕ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಆಘಾತಕಾರಿ ಘಟನೆಯ ಹಿನ್ನೆಲೆಯಲ್ಲಿ, ಸಂಸ್ಥೆಯ ಆಡಳಿತ ಮಂಡಳಿಯ ವಿರುದ್ಧ ವಿದ್ಯಾರ್ಥಿಗಳು ಕಳೆದ ಮೂರು ದಿನಗಳಿಂದ ನಿರಂತರ ಪ್ರತಿಭಟನೆ ನಡೆಸುತ್ತಿದ್ದಾರೆ.

ವಿದ್ಯಾರ್ಥಿ ಸಾವಿನ ಬಗ್ಗೆ ಹಿಂದಿನ ಹೇಳಿಕೆಗಳಿಗೆ ಕ್ಷಮೆಯಾಚಿಸಿದ ಐಐಟಿ ಬಾಂಬೆ

ಸಾಂದರ್ಭಿಕ ಚಿತ್ರ -

Priyanka P
Priyanka P Sep 21, 2026 3:21 PM

ಮುಂಬೈ, ಸೆ,21: ವಿದ್ಯಾರ್ಥಿಯ ಸಾವಿನ ಕುರಿತು ನೀಡಿದ್ದ ಹೇಳಿಕೆಗೆ ಐಐಟಿ ಬಾಂಬೆ (IIT Bombay) ಕ್ಷಮೆಯಾಚಿಸಿದೆ. ಇದೇ ವೇಳೆ, ಐಐಟಿ-ಬಾಂಬೆ ನಿರ್ದೇಶಕ ಶಿರೀಶ್ ಕೇದಾರೆ (Shireesh Kedare) ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂಬ ವರದಿಗಳನ್ನು ಸಂಸ್ಥೆ ತಳ್ಳಿಹಾಕಿದೆ. ವಿದ್ಯಾರ್ಥಿ ಸಾಹಿಲ್ ಅವರ ದುರದೃಷ್ಟಕರ ಸಾವಿನ ಸುತ್ತಲಿನ ಪರಿಸ್ಥಿತಿಗಳ ಕುರಿತು ನಾವು ಈ ಹಿಂದೆ ನೀಡಿದ್ದ ಹೇಳಿಕೆಗಾಗಿ ಕ್ಷಮೆಯಾಚಿಸುತ್ತೇವೆ. ಈ ಘಟನೆಗೆ ಕಾರಣವಾದ ವಿವರಗಳು ಮತ್ತು ಸಂದರ್ಭಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ತನಿಖೆ ಪ್ರಗತಿಯಲ್ಲಿರುವಾಗ, ಅದಕ್ಕೂ ಮುನ್ನ ನಡೆದ ಘಟನೆಗಳ ವಿವರಗಳನ್ನು ಅಧಿಕೃತ ತನಿಖಾ ಪ್ರಕ್ರಿಯೆಯ ಮೂಲಕ ದೃಢೀಕರಿಸುವ ಮುಂಚೆಯೇ ಅದರ ಬಗ್ಗೆ ವಿವರಣೆ ನೀಡುವುದು ಸೂಕ್ತವಲ್ಲ ಎಂದು ಎಂದು ಸಂಸ್ಥೆಯು ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಮಾಡಿದೆ.

ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಶುಕ್ರವಾರ (ಸೆ.18) ನಡೆದ ವಿದ್ಯಾರ್ಥಿಯೊಬ್ಬನ ಆತ್ಮಹತ್ಯೆಯ ನಂತರ, ಪ್ರತಿಭಟನಾ ನಿರತ ವಿದ್ಯಾರ್ಥಿಗಳು ತಮ್ಮ ಹೋರಾಟದಿಂದ ಹಿಂದೆ ಸರಿಯಲು ನಿರಾಕರಿಸಿದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ. ವಿದ್ಯಾರ್ಥಿಗಳ ತೀವ್ರ ಆಕ್ರೋಶಕ್ಕೆ ಮಣಿದಿರುವ ಸಂಸ್ಥೆಯು, ಅವರು ಎತ್ತಿರುವ ಪ್ರಮುಖ ಸಮಸ್ಯೆಗಳು ಮತ್ತು ಬೇಡಿಕೆಗಳ ಕುರಿತು ಚರ್ಚಿಸಲು ಸೋಮವಾರ (ಸೆ.21) ತನ್ನ ಆಡಳಿತ ಮಂಡಳಿಯ ವಿಶೇಷ ತುರ್ತು ಸಭೆಯನ್ನು ಕರೆದಿದೆ.

ಇಲ್ಲಿದೆ ಪೋಸ್ಟ್:



ಪರೀಕ್ಷೆಯಲ್ಲಿ ಚಾಟ್ ಜಿಪಿಟಿ ಬಳಸಿ ಸಿಕ್ಕಿಬಿದ್ದ ಐಐಟಿ ವಿದ್ಯಾರ್ಥಿ ಆತ್ಮಹತ್ಯೆ

ಈ ಸಭೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪ್ರಭಾರಿ ಹಂಗಾಮಿ ನಿರ್ದೇಶಕರಾದ ಕೇದಾರೆ ಅವರ ರಾಜೀನಾಮೆ ಸೇರಿದಂತೆ ಒಟ್ಟು 18 ಬೇಡಿಕೆಗಳ ಪಟ್ಟಿಯನ್ನು ಮಂಡಿಸಿದ್ದಾರೆ. ವಿದ್ಯಾರ್ಥಿಗಳು ನೀಡಿದ ಬೇಡಿಕೆಗಳ ಪಟ್ಟಿಯನ್ನು ಆಡಳಿತ ಮಂಡಳಿಯು ಸ್ವೀಕರಿಸಿದೆಯಾದರೂ, ನಿರ್ದೇಶಕರು ತಮ್ಮ ಹುದ್ದೆಯಿಂದ ಕೆಳಗಿಳಿಯುತ್ತಾರೆಯೇ ಅಥವಾ ಇಲ್ಲವೇ ಎಂಬುದು ಇನ್ನೂ ಕೂಡ ಸ್ಪಷ್ಟವಾಗಿಲ್ಲ.

ಐಐಟಿ ಬಾಂಬೆಯ ಪೊವಾಯ್ ಕ್ಯಾಂಪಸ್‌ನಲ್ಲಿ ಶುಕ್ರವಾರ (ಸೆ.18) ನಡೆದ ಪರೀಕ್ಷೆಯೊಂದರಲ್ಲಿ ನಕಲು ಮಾಡಿದ ಆರೋಪದ ಮೇಲೆ ಸಿಕ್ಕಿಬಿದ್ದಿದ್ದ ದ್ವಿತೀಯ ವರ್ಷದ ಬಿ.ಟೆಕ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಆಘಾತಕಾರಿ ಘಟನೆಯ ಹಿನ್ನೆಲೆಯಲ್ಲಿ, ಸಂಸ್ಥೆಯ ಆಡಳಿತ ಮಂಡಳಿಯ ವಿರುದ್ಧ ವಿದ್ಯಾರ್ಥಿಗಳು ಕಳೆದ ಮೂರು ದಿನಗಳಿಂದ ನಿರಂತರ ಪ್ರತಿಭಟನೆ ನಡೆಸುತ್ತಿದ್ದಾರೆ.

ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದ ಮೃತ ವಿದ್ಯಾರ್ಥಿಯ ಪೋಷಕರು, ಐಐಟಿ ಬಾಂಬೆಯ ವಿದ್ಯಾರ್ಥಿ ವ್ಯವಹಾರಗಳ ಮಾಜಿ ಡೀನ್ ಹಾಗೂ ಪ್ರೊಫೆಸರ್ ಸೂರ್ಯನಾರಾಯಣ ದೂಲ್ಲಾ ವಿರುದ್ಧ ಜಾತಿ ತಾರತಮ್ಯದ ಆಧಾರದ ಮೇಲೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಎಫ್‌ಐಆರ್ ದಾಖಲಿಸಿದ್ದಾರೆ.