ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Mann Ki Baat: ಸೇನೆ ಉಗ್ರರನ್ನು ಸೆದೆಬಡೆದಿದೆ; ಮನ್‌ ಕೀ ಬಾತ್‌ನಲ್ಲಿ ಭಯೋತ್ಪಾದಕ ಶಿಬಿರ ನಾಶವಾದ ಚಿತ್ರ ತೋರಿಸಿದ ಮೋದಿ

ಪ್ರಧಾನಿ ನರೇಂದ್ರ ಮೋದಿ(PM Narendra Modi)ಯವರ ಮನ್‌ ಕೀ ಬಾತ್‌(Mann Ki Baat) ಕಾರ್ಯಕ್ರಮದ 122 ನೇ ಸಂಚಿಕೆಯಲ್ಲಿ ಮಾತನಾಡಿದ್ದಾರೆ. ಆಪರೇಷನ್ ಸಿಂದೂರ್ ಯಶಸ್ಸಿನ ನಂತರದ ಮೊದಲ ಮಾಸಿಕ ರೇಡಿಯೋ ಕಾರ್ಯಕ್ರಮ ಇದಾಗಿದ್ದು, ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡುವಲ್ಲಿ ಭಾರತದ ಅಚಲ ನಿರ್ಧಾರದ ಕುರಿತು ಪ್ರಧಾನಿ ಮಾತನಾಡಿದ್ದಾರೆ.

ಭಯೋತ್ಪಾದಕ ಶಿಬಿರಗಳನ್ನು ಹೊಡೆದುರುಳಿಸಿದ ಚಿತ್ರ ತೋರಿಸಿದ ಮೋದಿ

Profile Vishakha Bhat May 25, 2025 2:13 PM

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ(PM Narendra Modi)ಯವರ ಮನ್‌ ಕೀ ಬಾತ್‌(Mann Ki Baat) ಕಾರ್ಯಕ್ರಮದ 122 ನೇ ಸಂಚಿಕೆಯಲ್ಲಿ ಮಾತನಾಡಿದ್ದಾರೆ. ಆಪರೇಷನ್ ಸಿಂದೂರ್ ಯಶಸ್ಸಿನ ನಂತರದ ಮೊದಲ ಮಾಸಿಕ ರೇಡಿಯೋ ಕಾರ್ಯಕ್ರಮ ಇದಾಗಿದ್ದು, ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡುವಲ್ಲಿ ಭಾರತದ ಅಚಲ ನಿರ್ಧಾರದ ಕುರಿತು ಪ್ರಧಾನಿ ಮಾತನಾಡಿದ್ದಾರೆ. ತಮ್ಮ ಭಾಷಣದಲ್ಲಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಭಾರತೀಯ ಸಶಸ್ತ್ರ ಪಡೆಗಳಿಂದ ನಾಶವಾದ ಭಯೋತ್ಪಾದಕ ತಾಣಗಳ ಚಿತ್ರಗಳನ್ನು ಅವರು ತೋರಿಸಿದ್ದಾರೆ.

ಮೇ 7 ರಂದು ಆಪರೇಷನ್ ಸಿಂದೂರ್ ಅನ್ನು ಪ್ರಾರಂಭಿಸಿ ಲಷ್ಕರ್-ಎ-ತೈಬಾ (ಎಲ್‌ಇಟಿ), ಜೈಶ್-ಎ-ಮೊಹಮ್ಮದ್ (ಜೆಇಎಂ) ಮತ್ತು ಹಿಜ್ಬುಲ್ ಮುಜಾಹಿದ್ದೀನ್‌ನ ಭಯೋತ್ಪಾದಕ ತಾಣಗಳನ್ನು ನಾಶಪಡಿಸಿದೆ. ರಾತ್ರಿಯಿಡೀ ನಡೆದ ದಾಳಿಯಲ್ಲಿ, ಭಾರತೀಯ ಸಶಸ್ತ್ರ ಪಡೆಗಳು ಪಾಕಿಸ್ತಾನದ ನಾಲ್ಕು ಭಯೋತ್ಪಾದಕ ಶಿಬಿರಗಳು ಮತ್ತು ಪಿಒಕೆಯಲ್ಲಿ ಐದು ಭಯೋತ್ಪಾದಕ ಶಿಬಿರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಈ ಕುರಿತು ಮೋದಿ ಮಾತನಾಡಿದ್ದಾರೆ.



ಭಯೋತ್ಪಾದನೆಯ ವಿರುದ್ಧದ ಜಾಗತಿಕ ಹೋರಾಟಕ್ಕೆ ಆಪರೇಷನ್ ಸಿಂದೂರ್‌ ಹೊಸ ಭರವಸೆಯನ್ನು ನೀಡಿದೆ ಎಂದು ಅವರು ಹೇಳಿದ್ದಾರೆ. ಆಪರೇಷನ್ ಸಿಂದೂರ್‌ ನಮ್ಮ ದೃಢನಿಶ್ಚಯ, ಧೈರ್ಯ ಮತ್ತು ಬದಲಾಗುತ್ತಿರುವ ಭಾರತದ ಚಿತ್ರಣವಾಗಿದೆ" ಎಂದು ಮೋದಿ ಹೇಳಿದರು. ಇಡೀ ರಾಷ್ಟ್ರವು ಭಯೋತ್ಪಾದನೆಯ ವಿರುದ್ಧ ಒಗ್ಗಟ್ಟಾಗಿದೆ. ಭಯೋತ್ಪಾದನೆಯನ್ನು ಬೇರು ಸಹಿತ ಕಿತ್ತು ಹಾಕುವ ದೃಢನಿಶ್ಚಯ ಹೊಂದಿದೆ. ಇಂದು, ಪ್ರತಿಯೊಬ್ಬ ಭಾರತೀಯರ ಸಂಕಲ್ಪವು ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡುವುದಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು. ನಮ್ಮ ಪಡೆಗಳು ಗಡಿಯುದ್ದಕ್ಕೂ ಭಯೋತ್ಪಾದಕ ಅಡಗುತಾಣಗಳನ್ನು ಹೊಡೆದುರುಳಿಸಿದ್ದಾರೆ ಎಂದು ಪ್ರಧಾನಿ ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ: PM Narendra Modi: ಆಪರೇಷನ್‌ ಸಿಂದೂರ್‌ ಯಶಸ್ವಿ ಬಳಿಕ ಮೊದಲ ಮನ್‌ ಕೀ ಬಾತ್‌; ಪ್ರಧಾನಿ ಮೋದಿ ಭಾಷಣದ ಹೈಲೈಟ್ಸ್‌ ಇಲ್ಲಿವೆ

ಸರ್ವ ಪಕ್ಷ ನಿಯೋಗದ ಕುರಿತು ಮಾತನಾಡಿರುವ ಪ್ರಧಾನಿ, ನಮ್ಮ ನಿಯೋಗ ಆಯ್ದ 33 ದೇಶಗಳಿಗೆ ತೆರಳಿ ಭಯೋತ್ಪಾನೆ ವಿರುದ್ಧ ಹೋರಾಡಲು ಮನವಿ ಮಾಡುತ್ತಿದೆ ಎಂದು ಅವರು ಹೇಳಿದ್ದಾರೆ. ಭಾರತದಲ್ಲಿ ತಯಾರಾದ ಶಸ್ತ್ರಾಸ್ತ್ರಗಳು, ಉಪಕರಣಗಳು ಮತ್ತು ತಂತ್ರಜ್ಞಾನದ ಇಂದು ನಮ್ಮಲ್ಲಿದೆ. ನಮ್ಮನ ಸೈನ್ಯದ ಶಕ್ತಿ ಜಗತ್ತಿಗೆ ತಿಳಿದಿದೆ ಎಂದು ಮೋದಿ ಹೇಳಿದ್ದಾರೆ.