ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

BrahMos Missiles: ಪಾಕ್ ವಾಯುನೆಲೆಗಳನ್ನು ಧ್ವಂಸಗೊಳಿಸಲು ಬ್ರಹ್ಮೋಸ್ ಕ್ಷಿಪಣಿ ಬಳಕೆ: ಅಮಿತ್ ಶಾ ಸ್ಪಷ್ಟನೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಭಾರತದ ಆಪರೇಷನ್ ಸಿಂದೂರ್‌ ನಂತರದ ಸಂಘರ್ಷದಲ್ಲಿ ಪಾಕಿಸ್ತಾನದ ವಾಯುನೆಲೆಗಳನ್ನು ಧ್ವಂಸಗೊಳಿಸಲು ಸ್ವದೇಶಿ ನಿರ್ಮಿತ ಬ್ರಹ್ಮೋಸ್ ಕ್ಷಿಪಣಿಗಳನ್ನು ಬಳಸಲಾಗಿದೆ ಎಂಬುದನ್ನು ದೃಢಪಡಿಸಿದ್ದಾರೆ. ಗುಜರಾತ್‌ನ ಅಹಮದಾಬಾದ್‌ನಲ್ಲಿ ಮಾತನಾಡಿದ ಅವರು, ಪಾಕಿಸ್ತಾನದ ವಾಯು ರಕ್ಷಣಾ ವ್ಯವಸ್ಥೆ ಚೀನಾದಿಂದ ಪಡೆದದ್ದು. ಇದು ಆಪರೇಷನ್ ಸಿಂದೂರ್ ಸಂದರ್ಭದಲ್ಲಿ ಧ್ವಂಸವಾಗಿದೆ ಎಂದಿದ್ದಾರೆ.

ಪಾಕಿಸ್ತಾನ ವಿರುದ್ಧ ಭಾರತ ಬಳಸಿದ್ದು ಬ್ರಹ್ಮೋಸ್‌ ಮಿಸೈಲ್‌ ಬ್ರಹ್ಮಾಸ್ತ್ರ

ಕೇಂದ್ರ ಗೃಹ ಸಚಿವ ಅಮಿತ್ ಶಾ.

Profile Sushmitha Jain May 19, 2025 5:19 PM

ಗಾಂಧಿನಗರ: ಕೇಂದ್ರ ಗೃಹ ಸಚಿವ ಅಮಿತ್ ಶಾ (Union home minister Amit Shah) ಭಾನುವಾರ ಭಾರತದ ಆಪರೇಷನ್ ಸಿಂದೂರ್(Operation Sindoor) ನಂತರದ ಸಂಘರ್ಷದಲ್ಲಿ ಪಾಕಿಸ್ತಾನದ ವಾಯುನೆಲೆಗಳನ್ನು (Pakistani Air Bases) ಧ್ವಂಸಗೊಳಿಸಲು ಸ್ವದೇಶಿ ನಿರ್ಮಿತ ಬ್ರಹ್ಮೋಸ್ (BrahMos) ಕ್ಷಿಪಣಿಗಳನ್ನು ಬಳಸಲಾಗಿದೆ ಎಂದು ದೃಢಪಡಿಸಿದ್ದಾರೆ. ಗುಜರಾತ್‌ನ ಅಹಮದಾಬಾದ್‌ನಲ್ಲಿ ಮಾತನಾಡಿದ ಅವರು, ಪಾಕಿಸ್ತಾನದ ವಾಯು ರಕ್ಷಣಾ ವ್ಯವಸ್ಥೆ, ಚೀನಾದಿಂದ ಪಡೆದದ್ದು, ಆಪರೇಷನ್ ಸಿಂಧೂರ್ ಸಂದರ್ಭದಲ್ಲಿ ಅದು ಸಮರ್ಪಕವಾಗಿ ಕಾರ್ಯ ನಿರ್ವಹಿಸಲಿಲ್ಲ ಎಂದು ಶಾ ತಿಳಿಸಿದ್ದಾರೆ.

“ನಮ್ಮ ಸ್ವದೇಶಿ ನಿರ್ಮಿತ ಬ್ರಹ್ಮೋಸ್ (ಸೂಪರ್‌ ಸಾನಿಕ್ ಕ್ರೂಸ್ ಕ್ಷಿಪಣಿ) ಪಾಕಿಸ್ತಾನದ ವಾಯುನೆಲೆಗಳನ್ನು ಧ್ವಂಸಗೊಳಿಸಿತು. ಆದರೆ ಚೀನಾದಿಂದ ಪಡೆದ ಅವರ ವಾಯು ರಕ್ಷಣಾ ವ್ಯವಸ್ಥೆಯು ಸರಿಯಾಗಿ ಕೆಲಸ ಮಾಡಲಿಲ್ಲ. ನಮ್ಮ ವಾಯುಪಡೆಯು ನಿಖರವಾದ ದಾಳಿಗಳನ್ನು ನಡೆಸಿ, ಪಾಕಿಸ್ತನಾದಲ್ಲಿದ ಅನೇಕ ಸ್ಥಳಗಳಿಗೆ ಭಾರಿ ಹಾನಿ ಮಾಡಿದೆ. ಗಡಿ ರಕ್ಷಣೆಯ ಇತಿಹಾಸದಲ್ಲಿ ಆಪರೇಷನ್ ಸಿಂದೂರ್ ಸುವರ್ಣ ಅಕ್ಷರಗಳಲ್ಲಿ ಬರೆಯಲ್ಪಡಲಿದೆ” ಎಂದು ಅಮಿತ್ ಶಾ ಹೇಳಿದ್ದಾರೆ.

ಹಿಂದಿನ ಸರ್ಜಿಕಲ್ ಸ್ಟ್ರೈಕ್‌ಗಳು ಮತ್ತು ಏರ್ ಸ್ಟ್ರೈಕ್‌ಗಳು ಪಾಕ್ ಆಕ್ರಮಿತ ಕಾಶ್ಮೀರ (PoK)ಕ್ಕೆ ಸೀಮಿತವಾಗಿದ್ದವು. ಆದರೆ ಆಪರೇಷನ್ ಸಿಂದೂರ್ ಅಡಿಯಲ್ಲಿ ಭಾರತವು ಪಾಕಿಸ್ತಾನದ ಗಡಿಯೊಳಗೆ 100 ಕಿ.ಮೀ. ಒಳನುಗ್ಗಿ ಭಯೋತ್ಪಾದಕರನ್ನು ಮತ್ತು ಅವರ ಕೇಂದ್ರಗಳನ್ನು ನಾಶಪಡಿಸಿದೆ ಎಂದು ಅಮಿತ್ ಶಾ ತಿಳಿಸಿದ್ದಾರೆ.

ಈ ಸುದ್ದಿಯನ್ನು ಓದಿ: Operation Sindoor: ಆಪರೇಷನ್‌ ಸಿಂದೂರ್‌ ಬಗ್ಗೆ ಆಕ್ಷೇಪಾರ್ಹ ಹೇಳಿಕೆ; ಪ್ರಾಧ್ಯಾಪಕ ಅಲಿ ಖಾನ್ ಅರೆಸ್ಟ್‌

“ಪಾಕಿಸ್ತಾನ ತನ್ನ ದೇಶದಲ್ಲಿ ಯಾವುದೇ ಭಯೋತ್ಪಾದಕ ಚಟುವಟಿಕೆಗಳಿಲ್ಲ, ಭಾರತ ಸುಳ್ಳು ಆರೋಪಗಳನ್ನು ಮಾಡುತ್ತಿದೆ ಎಂದು ವಿಶ್ವಕ್ಕೆ ಹೇಳುತ್ತಿತ್ತು. ಆದರೆ ಆಪರೇಷನ್ ಸಿಂದೂರ್‌ ಕಾರ್ಯಾಚರಣೆಯಲ್ಲಿ ಕ್ಷಿಪಣಿಗಳ ಮೂಲಕ ಭಯೋತ್ಪಾದಕರನ್ನು ಕೊನೆಗೊಳಿಸಲಾಯಿತು. ಪಾಕಿಸ್ತಾನದ ಕೃತ್ಯ ವಿಶ್ವದ ಮುಂದೆ ಬಯಲಾಯಿತು” ಎಂದು ಅಮಿತ್ ಶಾ ಹೇಳಿದ್ದಾರೆ.

ಮರುದಿನ ಪಾಕಿಸ್ತಾನದ ಸೇನೆಯ ಹಿರಿಯ ಅಧಿಕಾರಿಗಳು ಭಯೋತ್ಪಾದಕರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ಪ್ರಾರ್ಥನೆ ಸಲ್ಲಿಸಿದ್ದರು. “ಇದು ಪಾಕಿಸ್ತಾನದ ಸೇನೆ, ಪಾಕಿಸ್ತಾನ ಮತ್ತು ಭಯೋತ್ಪಾದನೆಯ ನಡುವಿನ ಸಂಬಂಧವನ್ನು ಬಯಲಿಗೆ ತಂದಿದೆ. ಪಾಕಿಸ್ತಾನವು ಭಯೋತ್ಪಾದಕರಿಗೆ ನೆಲೆಗಳನ್ನು ನೀಡುತ್ತಿದೆ ಎಂಬುದು ವಿಶ್ವಕ್ಕೆ ತಿಳಿದಿದೆ” ಎಂದು ಅವರು ಹೇಳಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಭಾರತದ ಸಶಸ್ತ್ರ ಪಡೆಗಳು ಆಪರೇಷನ್ ಸಿಂಧೂರ್ ಆರಂಭಿಸಿದವು. ಮೇ 7ರಂದು ಭಾರತವು PoK ಮತ್ತು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಭಯೋತ್ಪಾದಕ ಕೇಂದ್ರಗಳನ್ನು ಗುರಿಯಾಗಿಸಿ, ಒಂಬತ್ತು ಸ್ಥಳಗಳಲ್ಲಿ ದಾಳಿ ನಡೆಸಿ 100ಕ್ಕೂ ಹೆಚ್ಚು ಭಯೋತ್ಪಾದಕರನ್ನು ಕೊಂದಿತ್ತು.