ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

India Pakistan Ceasefire: ಕದನ ವಿರಾಮಕ್ಕೆ ಪಾಕ್‌ನಿಂದ ಭಾರತಕ್ಕೆ ಕರೆ; ಯುದ್ಧಕ್ಕೆ ಬಿತ್ತು ಬ್ರೇಕ್‌

ಭಾರತ ಹಾಗೂ ಪಾಕಿಸ್ತಾನ ಸಂಘರ್ಷಕ್ಕೆ ಕೊನೆಗೂ ತೆರೆ ಬಿದ್ದಿದ್ದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನೇತೃತ್ವದಲ್ಲಿ ಉಭಯ ದೇಶಗಳು ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿವೆ. ಇದೀಗ ಭಾರತ ಸರ್ಕಾರ ಅಧಿಕೃತವಾಗಿ ಕದನ ವಿರಾಮವನ್ನು ಖಚಿತಪಡಿಸಿದೆ. ಎಲ್ಲಾ ರೀತಿಯ ದಾಳಿಯನ್ನೂ ನಿಲ್ಲುಸುವುದಾಗಿ ಭಾರತ ಹೇಳಿದೆ. ಇಂದು ಸಂಜೆ 5 ಗಂಟೆಯಿಂದಲೇ ಕದನ ವಿರಾಮ ಜಾರಿಗೆ ಬರಲಿದೆ.

ಕದನ ವಿರಾಮಕ್ಕಾಗಿ ಪಾಕ್‌ ಕರೆ; ಯುದ್ಧಕ್ಕೆ ಬ್ರೇಕ್‌!

Profile Vishakha Bhat May 10, 2025 6:21 PM

ನವದೆಹಲಿ: ಭಾರತ ಹಾಗೂ ಪಾಕಿಸ್ತಾನ ಸಂಘರ್ಷಕ್ಕೆ ಕೊನೆಗೂ ತೆರೆ ಬಿದ್ದಿದ್ದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನೇತೃತ್ವದಲ್ಲಿ ಉಭಯ ದೇಶಗಳು ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿವೆ. ಇದೀಗ ಭಾರತ ಸರ್ಕಾರ ಅಧಿಕೃತವಾಗಿ ಕದನ ವಿರಾಮವನ್ನು ಖಚಿತಪಡಿಸಿದೆ. ಎಲ್ಲಾ ರೀತಿಯ ದಾಳಿಯನ್ನೂ ನಿಲ್ಲುಸುವುದಾಗಿ ಭಾರತ ಹೇಳಿದೆ. ಇಂದು ಸಂಜೆ 5 ಗಂಟೆಯಿಂದಲೇ ಕದನ ವಿರಾಮ ಜಾರಿಗೆ ಬರಲಿದೆ. ಕದನ ವಿರಾಮದ ಕುರಿತು ವಿದೇಶಾಂಗ ಇಲಾಖೆ ಮಾಹಿತಿಯನ್ನು ನೀಡಿದೆ. ಮೇ 12 ರಂದು ಪಾಕಿಸ್ತಾನ ಹಾಗೂ ಭಾರತ ಅಮೆರಿಕದ ನೇತೃತ್ವದಲ್ಲಿ ಮಾತುಕತೆ ನಡೆಸಲಿವೆ.

ಕದನ ವಿರಾಮ ಜಾರಿ ಬಳಿಕ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಟ್ವೀಟ್‌ ಮಾಡಿ ತಿಳಿಸಿದ್ದಾರೆ. ಎಕ್ಸ್‌ನಲ್ಲಿ ಟ್ವೀಟ್‌ ಮಾಡಿದ ಟ್ರಂಪ್‌ ಭಾರತ ಹಾಗೂ ಪಾಕಿಸ್ತಾನ ಪೂರ್ಣ ಪ್ರಮಾಣದ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿದೆ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ ವಿಕ್ರಮ್‌ ಮಿಸ್ರಿ, ಪಾಕಿಸ್ತಾನವು ಭಾರತದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರಿಗೆ ಕರೆ ಮಾಡಿದೆ. ಈ ಸಮಯದಲ್ಲಿ ಉಭಯ ರಾಷ್ಟ್ರಗಳು ಸಂಜೆ 5 ಗಂಟೆಯಿಂದ ಭೂಮಿ, ಸಮುದ್ರ ಮತ್ತು ಗಾಳಿಯಲ್ಲಿ ಎಲ್ಲಾ ಮಿಲಿಟರಿ ಕಾರ್ಯಾಚರಣೆಗಳನ್ನು ನಿಲ್ಲಿಸಲು ಒಪ್ಪಿಕೊಂಡರು ಎಂದು ತಿಳಿಸಿದರು.

ಈ ಒಪ್ಪಂದವನ್ನು ತಕ್ಷಣದಿಂದ ಜಾರಿಗೆ ತರಲು ಎರಡೂ ಕಡೆಯಿಂದಲೂ ಸೂಚನೆಗಳನ್ನು ನೀಡಲಾಗಿದೆ. ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು ಮೇ 12 ರಂದು ಮಧ್ಯಾಹ್ನ 12:00 ಗಂಟೆಗೆ ಮತ್ತೆ ಮಾತನಾಡಲಿದ್ದಾರೆ" ಎಂದು ವಿದೇಶಾಂಗ ಕಾರ್ಯದರ್ಶಿ ಹೇಳಿದರು. ಪಾಕಿಸ್ತಾನದ ಡಿಜಿಎಂಒ ಇಂದು ಮಧ್ಯಾಹ್ನ ಕರೆಯನ್ನು ಪ್ರಾರಂಭಿಸಿದರು, ನಂತರ ಚರ್ಚೆಗಳು ನಡೆದವು ಮತ್ತು ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಭಾರತ ಹೇಳಿದೆ. ಬೇರೆ ಯಾವುದೇ ಸ್ಥಳದಲ್ಲಿ ಬೇರೆ ಯಾವುದೇ ವಿಷಯದ ಕುರಿತು ಮಾತುಕತೆ ನಡೆಸುವ ನಿರ್ಧಾರವಿಲ್ಲ.



ಕದನ ವಿರಾಮದ ಬಗ್ಗೆ ಖಚಿತಪಡಿಸಿದ ಜೈಶಂಕರ್‌

ವಿದೇಶಾಂಗ ಸಚಿವ ಎಸ್ ಜೈಶಂಕರ್ ಕೂಡ ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡುವ ಮೂಲಕ ಇದನ್ನು ದೃಢಪಡಿಸಿದ್ದಾರೆ. ಭಾರತ ಮತ್ತು ಪಾಕಿಸ್ತಾನ ಇಂದು ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವ ಬಗ್ಗೆ ಒಪ್ಪಂದ ಮಾಡಿಕೊಂಡಿವೆ. ಭಾರತವು ಭಯೋತ್ಪಾದನೆಯ ವಿರುದ್ಧ ದೃಢ ಮತ್ತು ರಾಜಿಯಾಗದ ನಿಲುವನ್ನು ನಿರಂತರವಾಗಿ ಕಾಯ್ದುಕೊಂಡಿದೆ. ಅದು ಹಾಗೆಯೇ ಮುಂದುವರಿಯುತ್ತದೆ" ಎಂದು ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ಇಎಎಂ ಜೈಶಂಕರ್ ಹೇಳಿದ್ದಾರೆ.