ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

India-Pak Tensions: ಪಾಕ್‌ ಪುಂಡಾಟಕ್ಕೆ ಭಾರತ ಬ್ರೇಕ್‌; ಒಳನುಸುಳುವಿಕೆ ಪ್ರಯತ್ನ ವಿಫಲ

Infiltration Bid Foiled: ನಿನ್ನೆ ತಡರಾತ್ರಿ ಪಾಕಿಸ್ತಾನದ ಅಂತಾರಾಷ್ಟ್ರೀಯ ಗಡಿಯಲ್ಲಿರುವ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಲಾಗಿದೆ ಎಂದು ಗಡಿ ಭದ್ರತಾ ಪಡೆ ತಿಳಿಸಿದೆ. ಜಮ್ಮು, ಆರ್‌ಎಸ್ ಪುರ, ಸಾಂಬಾ, ಹಿರಾನಗರ ಮತ್ತು ಅರ್ನಿಯಾ ಪ್ರದೇಶಗಳಲ್ಲಿ ಪಾಕಿಸ್ತಾನ ಮತ್ತು ಭಾರತದಿಂದ ಭಾರಿ ಗುಂಡಿನ ದಾಳಿ ನಡೆದಿದ್ದು, ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿ ನಡೆಸಿರುವ ಪಾಕ್‌ ನಡೆಸಿರುವ ದಾಳಿ ಸಂಪೂರ್ಣವಾಗಿ ವಿಫಲವಾಗಿದೆ.

ಗಡಿಯಲ್ಲಿ ಪಾಕ್‌ ಒಳನುಸುಳುವಿಕೆ ಪ್ರಯತ್ನ ವಿಫಲ

Profile Rakshita Karkera May 9, 2025 2:18 AM

ಶ್ರೀನಗರ: ಅಂತಾರಾಷ್ಟ್ರೀಯ ಗಡಿಯಲ್ಲಿರುವ ಜಮ್ಮು ಮತ್ತು ಕಾಶ್ಮೀರದ ಸಾಂಬಾದಲ್ಲಿ ಪಾಕಿಸ್ತಾನದಿಂದ ಭಾರಿ ಡ್ರೋನ್ ಮತ್ತು ಕ್ಷಿಪಣಿ ದಾಳಿಗಳು ನಡೆದಿದ್ದು(India-Pak Tensions), ಇದರ ಜೊತೆಗೆ ಒಳನುಸುಳುವಿಕೆ ಯತ್ನವೂ(Infiltration Bid Foiled) ನಡೆದಿದೆ. ನಿನ್ನೆ ತಡರಾತ್ರಿ ಪಾಕಿಸ್ತಾನದ ಅಂತಾರಾಷ್ಟ್ರೀಯ ಗಡಿಯಲ್ಲಿರುವ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಲಾಗಿದೆ ಎಂದು ಗಡಿ ಭದ್ರತಾ ಪಡೆ ತಿಳಿಸಿದೆ. ಜಮ್ಮು, ಆರ್‌ಎಸ್ ಪುರ, ಸಾಂಬಾ, ಹಿರಾನಗರ ಮತ್ತು ಅರ್ನಿಯಾ ಪ್ರದೇಶಗಳಲ್ಲಿ ಪಾಕಿಸ್ತಾನ ಮತ್ತು ಭಾರತದಿಂದ ಭಾರಿ ಗುಂಡಿನ ದಾಳಿ ನಡೆದಿದ್ದು, ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿ ನಡೆಸಿರುವ ಪಾಕ್‌ ನಡೆಸಿರುವ ದಾಳಿ ಸಂಪೂರ್ಣವಾಗಿ ವಿಫಲವಾಗಿದೆ. ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಪಾಕಿಸ್ತಾನಿ ಡ್ರೋನ್‌ಗಳನ್ನು ತಡೆಹಿಡಿಯಲಾಗಿದೆ. ಗುಜರಾತ್‌ನ ಸರ್ ಕ್ರೀಕ್ ಬಳಿ ಪಾಕಿಸ್ತಾನಿ ಡ್ರೋನ್ ಅನ್ನು ಹೊಡೆದುರುಳಿಸಲಾಗಿದೆ.

ಈ ಸುದ್ದಿಯನ್ನೂ ಓದಿ: Operation Sindoor: ಭಾರತದ ದಾಳಿಗೆ ಬೆಚ್ಚಿಬಿದ್ದ ಪಾಕ್‌; ಪ್ರಧಾನಿ ಶೆಹಬಾಜ್ ಷರೀಫ್ ಅಡಗುತಾಣಕ್ಕೆ ಶಿಫ್ಟ್‌

ಜಮ್ಮು, ಪಠಾಣ್‌ಕೋಟ್ ಮತ್ತು ಉಧಂಪುರದಲ್ಲಿರುವ ಸೇನಾ ನೆಲೆಗಳನ್ನು ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿಯಲ್ಲಿರುವ ಪಾಕಿಸ್ತಾನಿ ಮೂಲದ ಡ್ರೋನ್‌ಗಳು ಮತ್ತು ಕ್ಷಿಪಣಿಗಳು ಗುರಿಯಾಗಿಸಿಕೊಂಡಿವೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.ಇನ್ನು ಇದುವರೆಗೂ ಯಾವುದೇ ಸಾವುನೋವುಗಳು ಅಥವಾ ವಸ್ತು ನಷ್ಟಗಳು ವರದಿಯಾಗಿಲ್ಲ ಎಂದು ಸಚಿವಾಲಯವು ಈ ಹಿಂದೆ ಟ್ವಿಟರ್‌ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದೆ. ಭಾರತವು ತನ್ನ ಸಾರ್ವಭೌಮತ್ವವನ್ನು ರಕ್ಷಿಸಲು ಮತ್ತು ತನ್ನ ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸಂಪೂರ್ಣವಾಗಿ ಸಿದ್ಧವಾಗಿದೆ.



ಪಂಜಾಬ್, ರಾಜಸ್ಥಾನ, ಗುಜರಾತ್‌ನಲ್ಲಿ ನಿರ್ಬಂಧಗಳು

ಜಮ್ಮು ಮತ್ತು ಕಾಶ್ಮೀರದ ಗಡಿ ಪ್ರದೇಶಗಳ ಮೇಲೆ ಈಗ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ಪಾಕಿಸ್ತಾನದೊಂದಿಗೆ ಗಡಿಯನ್ನು ಹಂಚಿಕೊಂಡಿರುವ ಮತ್ತೊಂದು ರಾಜ್ಯವಾದ ಪಂಜಾಬ್‌ನ ಚಂಡೀಗಢ, ಫಿರೋಜ್‌ಪುರ, ಮೊಹಾಲಿ ಮತ್ತು ಗುರುದಾಸ್ಪುರ ಮತ್ತು ರಾಜಸ್ಥಾನದ ಕೆಲವು ಭಾಗಗಳಲ್ಲಿ ನಿರ್ಬಂಧವನ್ನು ಘೋಷಿಸಲಾಗಿದೆ. ಗುಜರಾತ್‌ನಲ್ಲಿಯೂ ಈ ನಿರ್ಬಂಧ ಮುಂದುವರಿದಿದೆ.