ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

India Pakistan Ceasefire: ಭಾರತ- ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಗೆ; ಡೊನಾಲ್ಡ್‌ ಟ್ರಂಪ್‌ ಹೇಳಿಕೆ

ಭಾರತ ಹಾಗೂ ಪಾಕಿಸ್ತಾನದ ನಡುವೆ ನಡೆಯುತ್ತಿದ್ದ ಉದ್ವಿಗ್ನತೆಗೆ ಇದೀಗ ಬ್ರೇಕ್‌ ಬಿದ್ದಿದೆ. ವಾರಗಳಿಂದ ನಡೆಯುತ್ತಿದ್ದ ಭಾರತ ಹಾಗೂ ಪಾಕಿಸ್ತಾನ ನಡುವೆ ಕೊನೆಗೂ ಕದನ ವಿರಾಮ ಘೋಷಣೆ ಆಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಟ್ವೀಟ್‌ ಮಾಡಿ ತಿಳಿಸಿದ್ದಾರೆ.

ಭಾರತ- ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಗೆ

Profile Vishakha Bhat May 10, 2025 5:44 PM

ನವದೆಹಲಿ: ವಾರಗಳಿಂದ ನಡೆಯುತ್ತಿದ್ದ ಭಾರತ ಹಾಗೂ ಪಾಕಿಸ್ತಾನ (India Pakistan Ceasefire) (Operation Sindoor) ನಡುವೆ ಕೊನೆಗೂ ಕದನ ವಿರಾಮ ಘೋಷಣೆ ಆಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಟ್ವೀಟ್‌ ಮಾಡಿ ತಿಳಿಸಿದ್ದಾರೆ. ಎಕ್ಸ್‌ನಲ್ಲಿ ಟ್ವೀಟ್‌ ಮಾಡಿದ ಟ್ರಂಪ್‌ ಭಾರತ ಹಾಗೂ ಪಾಕಿಸ್ತಾನ ಪೂರ್ಣ ಪ್ರಮಾಣದ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿದೆ ಎಂದು ಹೇಳಿದ್ದಾರೆ.

ಅಮೆರಿಕದ ಮಧ್ಯಸ್ಥಿಕೆಯಲ್ಲಿ ರಾತ್ರಿಯಿಡೀ ನಡೆದ ಸುದೀರ್ಘ ಮಾತುಕತೆಯ ನಂತರ, ಭಾರತ ಮತ್ತು ಪಾಕಿಸ್ತಾನಗಳು ಸಂಪೂರ್ಣ ಮತ್ತು ತಕ್ಷಣದ ಒಪ್ಪಂದಕ್ಕೆ ಒಪ್ಪಿಕೊಂಡಿವೆ ಎಂದು ಘೋಷಿಸಲು ನನಗೆ ಸಂತೋಷವಾಗಿದೆ. ಸಾಮಾನ್ಯ ಜ್ಞಾನ ಮತ್ತು ಉತ್ತಮ ಬುದ್ಧಿವಂತಿಕೆಯನ್ನು ಬಳಸಿದ್ದಕ್ಕಾಗಿ ಎರಡೂ ದೇಶಗಳಿಗೆ ಅಭಿನಂದನೆಗಳು ಎಂದು ಟ್ರಂಪ್‌ ತಮ್ಮ ಸೋಷಿಯಲ್‌ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.



ಕದನ ವಿರಾಮದ ಕುರಿತು ಅಮೆರಿಕ ವಿದೇಶಾಂಗ ಇಲಾಖೆಯ ಕಾರ್ಯದರ್ಶಿ ಕೂಡ ಟ್ರಂಪ್‌ ಹೇಳಿಯನ್ನು ಟ್ವೀಟ್‌ ಮಾಡಿದ್ದು, ನಾನು ಹಾಗೂ ಉಪಾಧ್ಯಕ್ಷ ವ್ಯಾನ್ಸ್‌ ಅವರು ರಾತ್ರಿ ಇಡೀ ಉಭಯ ದೇಶಗಳ ಜೊತೆ ಮಾತು ಕತೆ ನಡೆಸಿದ್ದೇವೆ. ಉಭಯ ದೇಶಗಳು ಅದಕ್ಕೆ ಒಪ್ಪಿಕೊಂಡಿವೆ ಎಂದು ಅವರು ಹೇಳಿದ್ದಾರೆ.

ಕದನ ವಿರಾಮ ಘೋಷಣೆಯಾಗುತ್ತಿದ್ದಂತೆ ಪಾಕಿಸ್ತಾನದ ವಿದೇಶಾಂಗ ಸಚಿವ ಇಶಾಕ್ ದಾರ್ ಟ್ವೀಟ್‌ ಮಾಡಿ , ಸರ್ಕಾರವು ದೇಶದ "ಶಾಂತಿ ಮತ್ತು ಭದ್ರತೆ" ಗಾಗಿ ಯಾವಾಗಲೂ ಶ್ರಮಿಸಿದೆ ಎಂದು ಹೇಳಿದ್ದಾರೆ. ಪಾಕಿಸ್ತಾನವು ತನ್ನ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಗೆ ಧಕ್ಕೆಯಾಗದಂತೆ ಈ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಗಾಗಿ ಯಾವಾಗಲೂ ಶ್ರಮಿಸುತ್ತಿದೆ ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.