ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

India Pakistan Tensions: S-400 ಏರ್‌ ಡಿಫೆನ್ಸ್‌ ಸಿಸ್ಟಂಗೆ ಹಾನಿಯಾಗಿಲ್ಲ; ರಕ್ಷಣಾ ಇಲಾಖೆ

ಈಗಾಗಲೇ ಪಿಐಬಿ ದೇಶದ ಜನರಲ್ಲಿ ಕ್ಷಿಪಣಿ, ಡ್ರೋನ್‌ ಸೇರಿ ವೈಮಾನಿಕ ದಾಳಿಗಳ ಕುರಿತು ನಿಖರವಾದ ಮಾಹಿತಿಗಳಿಗಾಗಿ ಭಾರತ ಸರ್ಕಾರ ಅಧಿಕೃತ ಖಾತೆಗಳನ್ನು ಮಾತ್ರ ಅವಲಂಬಿಸಿ ಎಂದು ಹೇಳಿದೆ. ಜತೆಗೆ ಪರಿಶೀಲಿಸದೇ ಯಾವುದೇ ಮಾಹಿತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಬೇಡಿ ಮತ್ತು ಅಂತಹ ನಕಲಿ ಸುದ್ದಿಗಳನ್ನು ನಂಬಬೇಡಿ ಎಂದು ತಿಳಿಸಿದೆ.

S-400  ಏರ್‌ ಡಿಫೆನ್ಸ್‌ ಸಿಸ್ಟಂಗೆ ಹಾನಿಯಾಗಿಲ್ಲ; ರಕ್ಷಣಾ ಇಲಾಖೆ

Profile Abhilash BC May 10, 2025 11:34 AM

ನವದೆಹಲಿ: ಪಾಕಿಸ್ತಾನದ(India Pakistan Tension) ಅಪ್ರಚೋದಿತ ಆಕ್ರಮಣಕ್ಕೆ ಭಾರತ ಪ್ರತೀಕಾರ ತೀರಿಸಿಕೊಳ್ಳುತ್ತಲೇ ಇದೆ. ಈ ಮಧ್ಯೆ ಸುದರ್ಶನ ಚಕ್ರ ಎಂದು ಕರೆಯಲ್ಪಡುವ S-400 ಏರ್‌ ಡಿಫೆನ್ಸ್‌ ಸಿಸ್ಟಂ(S-400 system) ಕ್ಷಿಪಣಿಗೆ ಹಾನಿಯಾಗಿದೆ ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆದರೆ ಈ ಸುದ್ದಿಗಳು ಆಧಾರರಹಿತ, ಸುಳ್ಳು ಸುದ್ದಿ ಎಂದು ರಕ್ಷಣಾ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ರಷ್ಯಾ ನಿರ್ಮಿತ ಎಸ್-400 ಸಿಸ್ಟಮ್ ವಿಶ್ವದಲ್ಲೇ ಅತ್ಯಂತ ಅಡ್ವಾನ್ಸ್‌ಡ್‌ ಸಿಸ್ಟಮ್ ಗಳಲ್ಲಿ ಒಂದಾಗಿದ್ದು, 600 ಕಿಲೋಮೀಟರ್ ದೂರದವರೆಗಿನ ಗುರಿಗಳನ್ನು ಪತ್ತೆಹಚ್ಚುವ ಮತ್ತು 400 ಕಿಲೋಮೀಟರ್‌ಗಳವರೆಗಿನ ಗುರಿಗಳನ್ನು ತಡೆಯುವ ಸಾಮರ್ಥ್ಯವನ್ನು ಹೊಂದಿವೆ. ಗುರುವಾರ ರಾತ್ರಿ ಪಾಕಿಸ್ತಾನ ವಂತಿಪೋರಾ, ಶ್ರೀನಗರ, ಜಮ್ಮು, ಪಠಾಣ್‌ಕೋಟ್, ಅಮೃತಸರ, ಲುಧಿಯಾನ ಮತ್ತು ಭುಜ್‌ನಲ್ಲಿರುವ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಲು ಮುಂದಾಗಿತ್ತು. ಆದರೆ ಈ ಎಲ್ಲ ಕ್ಷಿಪಣಿಗಳನ್ನು S-400 ಏರ್‌ ಡಿಫೆನ್ಸ್‌ ಸಿಸ್ಟಂ ಕ್ಷಣ ಮಾತ್ರದಲ್ಲೇ ಹೊಡೆದುರುಳಿಸಿತ್ತು.



ಈಗಾಗಲೇ ಪಿಐಬಿ ದೇಶದ ಜನರಲ್ಲಿ ಕ್ಷಿಪಣಿ, ಡ್ರೋನ್‌ ಸೇರಿ ವೈಮಾನಿಕ ದಾಳಿಗಳ ಕುರಿತು ನಿಖರವಾದ ಮಾಹಿತಿಗಳಿಗಾಗಿ ಭಾರತ ಸರ್ಕಾರ ಅಧಿಕೃತ ಖಾತೆಗಳನ್ನು ಮಾತ್ರ ಅವಲಂಬಿಸಿ ಎಂದು ಹೇಳಿದೆ. ಜತೆಗೆ ಪರಿಶೀಲಿಸದೇ ಯಾವುದೇ ಮಾಹಿತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಬೇಡಿ ಮತ್ತು ಅಂತಹ ನಕಲಿ ಸುದ್ದಿಗಳನ್ನು ನಂಬಬೇಡಿ ಎಂದು ತಿಳಿಸಿದೆ.

ಇದನ್ನೂ ಓದಿ Operation Sindoor: ಪಾಕಿಸ್ತಾನದ ಡ್ರೋನ್‌ಗಳನ್ನು ಹೊಡೆದುರುಳಿಸಿದ ಭಾರತೀಯ ಸೇನೆ; ವಿಡಿಯೋ ನೋಡಿ

ಯಾವುದೇ ತಪ್ಪು ಮಾಹಿತಿ ಕಂಡುಬಂದರೆ, ಅದರಲ್ಲೂ ಸಶಸ್ತ್ರ ಪಡೆ ಕುರಿತಾದ ಅಥವಾ ಸದ್ಯದ ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಕುರಿತಂತೆ ಸುಳ್ಳು ಮಾಹಿತಿ ಗಮನಕ್ಕೆ ಬಂದರೆ #PIBFactCheckಗೆ ರಿಪೋರ್ಟ್ ಮಾಡಿ. ಈ ಕೆಳಗಿನ ವಾಟ್ಸ್‌ಆ್ಯಪ್ ಸಂಖ್ಯೆ,(+91 8799711259) ಇಮೇಲ್(Email: factcheck@pib.gov.in) ಮೂಲಕ ಮಾಹಿತಿ ಹಂಚಿಕೊಳ್ಳಲು ಕೋರಲಾಗಿದೆ.