Pahalgam Terror Attack: ಪಾಕಿಸ್ತಾನದೊಂದಿಗಿನ ಎಲ್ಲಾ ಅಂಚೆ ಸೇವೆಗಳನ್ನು ಸ್ಥಗಿತಗೊಳಿಸಿದ ಭಾರತ
ಭಾರತವು ಪಾಕಿಸ್ತಾನದಿಂದ ಎಲ್ಲಾ ಆಮದು ಹಾಗೂ ರಫ್ತನ್ನು ನಿಷೇಧಿಸಿದ ನಂತರ ಇದೀಗ ಪಾಕಿಸ್ತಾನದೊಂದಿಗೆ ಸಂಪೂರ್ಣ ಸಂವಹನವನ್ನು ಕಡಿತಗೊಳಿಸಿದೆ. ಪಾಕಿಸ್ತಾನಕ್ಕೆ ಅಂಚೆ ಸೇವೆಯನ್ನು ಸ್ಥಗಿತಗೊಳಿಸಿ ಆದೇಶ ಹೊರಡಿಸಲಾಗಿದೆ. ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಜನಿಕ ನೀತಿಯ ಹಿತದೃಷ್ಟಿಯಿಂದ ಈ ನಿರ್ಬಂಧವನ್ನು ವಿಧಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.


ನವದೆಹಲಿ: ಭಾರತವು ಪಾಕಿಸ್ತಾನದಿಂದ ಎಲ್ಲಾ ಆಮದು ಹಾಗೂ ರಫ್ತನ್ನು ನಿಷೇಧಿಸಿದ ನಂತರ ಇದೀಗ ಪಾಕಿಸ್ತಾನದೊಂದಿಗೆ ಸಂಪೂರ್ಣ ಸಂವಹನವನ್ನು (Pahalgam Terror Attack) ಕಡಿತಗೊಳಿಸಿದೆ. ಪಾಕಿಸ್ತಾನಕ್ಕೆ ಅಂಚೆ ಸೇವೆಯನ್ನು ಸ್ಥಗಿತಗೊಳಿಸಿ ಆದೇಶ ಹೊರಡಿಸಲಾಗಿದೆ. ಈ ಸಂಬಂಧ ಆದೇಶ ಹೊರಡಿಸಿರುವಂತ ಭಾರತೀಯ ಸಂವಹನ ಸಚಿವಾಲಯವು ಪಾಕಿಸ್ತಾನದಿಂದ ವಾಯು ಮತ್ತು ಮೇಲ್ಮೈ ಮಾರ್ಗಗಳ ಮೂಲಕ ಎಲ್ಲಾ ರೀತಿಯ ಒಳಬರುವ ಮೇಲ್ ಮತ್ತು ಪಾರ್ಸೆಲ್ಗಳ ವಿನಿಮಯವನ್ನು ಸ್ಥಗಿತಗೊಳಿಸಲು ಭಾರತ ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದೆ. ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಜನಿಕ ನೀತಿಯ ಹಿತದೃಷ್ಟಿಯಿಂದ ಈ ನಿರ್ಬಂಧವನ್ನು ವಿಧಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಮತ್ತೊಂದು ಮಹತ್ವದ ಆದೇಶ ಹೊರಡಿಸಿರುವ ಭಾರತ ಪಾಕಿಸ್ತಾನ ಧ್ವಜ ಹೊಂದಿರುವ ಹಡಗುಗಳು ಭಾರತೀಯ ಬಂದರುಗಳಿಗೆ ಪ್ರವೇಶಿಸುವುದನ್ನು ನಿಷೇಧಿಸಿದೆ ಮತ್ತು ಭಾರತೀಯ ಧ್ವಜ ಹೊಂದಿರುವ ಹಡಗುಗಳು ಪಾಕಿಸ್ತಾನದ ಬಂದರುಗಳಿಗೆ ತೆರಳಬಾರದು ಎಂಬ ಸೂಚನೆಯನ್ನು ನೀಡಿದೆ. ಭಾರತೀಯ ಆಸ್ತಿಗಳು, ಸರಕು ಮತ್ತು ಬಂದರು ಮೂಲಸೌಕರ್ಯಗಳನ್ನು ರಕ್ಷಿಸಲು 1958 ರ ಮರ್ಚೆಂಟ್ ಶಿಪ್ಪಿಂಗ್ ಕಾಯ್ದೆಯ ಸೆಕ್ಷನ್ 411 ರ ಅಡಿಯಲ್ಲಿ ತಕ್ಷಣದಿಂದ ಜಾರಿಗೆ ಬರುವ ಈ ನಿರ್ಬಂಧಗಳನ್ನು ವಿಧಿಸಲಾಗಿದೆ.
ಪಾಕಿಸ್ತಾನದಿಂದ ನೇರ ಅಥವಾ ಪರೋಕ್ಷ ಸರಕುಗಳ ಆಮದನ್ನು ನಿಷೇಧಿಸಿದೆ ಎಂದು ವಾಣಿಜ್ಯ ಸಚಿವಾಲಯ ತಿಳಿಸಿದೆ. ಪಾಕಿಸ್ತಾನದಿಂದ ನೇರ ಆಮದುಗಳು ಕಡಿಮೆಯಿದ್ದರೂ, ಅಫ್ಘಾನಿಸ್ತಾನ ಹಾಗೂ ಇತರ ದೇಶಗಳಿಂದ ಪಾಕಿಸ್ತಾನದ ಮಾರ್ಗವೇ ಭಾರತಕ್ಕೆ ಆಮದಾಗುತ್ತಿತ್ತು. ಪಾಕಿಸ್ತಾನದಿಂದ ಸಾಗಣೆಯಾಗುವ ಎಲ್ಲಾ ಉತ್ಪನ್ನಗಳಿಗೆ ಅನ್ವಯಿಸುತ್ತದೆ ಎಂದು ಸಚಿವಾಲಯ ಹೇಳಿದೆ. ಈ ನಿರ್ಬಂಧವನ್ನು ವಿಧಿಸಲಾಗಿದೆ. ಈ ನಿಷೇಧಕ್ಕೆ ಯಾವುದೇ ವಿನಾಯಿತಿ ನೀಡಬೇಕಾದರೆ ಭಾರತ ಸರ್ಕಾರದ ಪೂರ್ವಾನುಮೋದನೆ ಅಗತ್ಯ" ಎಂದು ವಾಣಿಜ್ಯ ಸಚಿವಾಲಯದ ಅಧಿಸೂಚನೆ ತಿಳಿಸಿದೆ. ಪಹಲ್ಗಾಮ್ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಏಕೈಕ ವ್ಯಾಪಾರ ಮಾರ್ಗವಾದ ವಾಘಾ-ಅಟ್ಟಾರಿ ಗಡಿಯನ್ನು ಈಗಾಗಲೇ ಮುಚ್ಚಲಾಗಿದೆ.
ಈ ಸುದ್ದಿಯನ್ನೂ ಓದಿ: Ballistic Missile: ಯುದ್ಧದ ಭೀತಿ ನಡುವೆ ಪಾಕಿಸ್ತಾನದಿಂದ 450 ಕಿ.ಮೀ. ವ್ಯಾಪ್ತಿಯ ಖಂಡಾಂತರ ಕ್ಷಿಪಣಿ ಪರೀಕ್ಷೆ
ಭಾರತದ ರಾಜತಾಂತ್ರಿಕ ನಡೆಗೆ ಪಾಕಿಸ್ತಾನಕ್ಕೆ ಭಯ ಹುಟ್ಟಿಸಿದ್ದು, ಪಾಕ್ ರಕ್ಷಣಾ ಮಂತ್ರಿ ಭಾರತದ ಮೇಲೆ ಆಕ್ರಮಣ ಮಾಡುವುದಾಗಿ ಹೇಳಿಕೆ ನೀಡಿದ್ದಾರೆ. 1960 ರಲ್ಲಿ ನಡೆದಿದ್ದ ಸಿಂಧೂ ನದಿ ಒಪ್ಪಂದವನ್ನು ರದ್ದುಗೊಳಿಸಿದೆ. ಇದೀಗ ಪಾಕಿಸ್ತಾನದ ರಕ್ಷಣಾ ಮಂತ್ರಿ ಭಾರತಕ್ಕೆ ಬೆದರಿಕೆ ಹಾಕಿದ್ದಾನೆ. ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್, ಭಾರತವು ಸಿಂಧೂ ಒಪ್ಪಂದದಡಿಯಲ್ಲಿ ದೇಶದ ಪಾಲಿನ ನೀರನ್ನು ಬೇರೆಡೆಗೆ ತಿರುಗಿಸಲು ಬೇರೆ ಯಾವುದೇ ರೀತಿಯ ಪ್ರಯತ್ನವನ್ನು ಮಾಡಿದರೆ ಅದನ್ನು ಧ್ವಂಸಗೊಳಿಸುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ.