ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಮಧ್ಯಪ್ರಾಚ್ಯ ಶಾಂತಿ ಪ್ರಯತ್ನಗಳಿಗೆ ಭಾರತ ಬೆಂಬಲ ನೀಡಲಿದೆ: ಪ್ರಧಾನಿ ಮೋದಿ

ಮಧ್ಯಪ್ರಾಚ್ಯ ಭಾಗದಲ್ಲಿ ಶಾಂತಿ ಪ್ರಯತ್ನಗಳಿಗೆ ಬೆಂಬಲ ನೀಡಲು ಭಾರತ ಸದಾ ಸಿದ್ಧವಾಗಿದೆ ಎಂದು ಯುಎಇ ಅಧ್ಯಕ್ಷರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಯುಎಇ ಮೇಲಿನ ದಾಳಿಯನ್ನು ಖಂಡಿಸಿರುವ ಅವರು, ಪಶ್ಚಿಮ ಏಷ್ಯಾದಲ್ಲಿ ಶಾಂತಿ ಮತ್ತು ಸ್ಥಿರತೆ ಕಾಪಾಡಲು ಸಾಧ್ಯವಿರುವ ಎಲ್ಲ ಬೆಂಬಲವನ್ನು ಭಾರತ ನೀಡಲಿದೆ ಎಂದು ಅವರು ಹೇಳಿದ್ದಾರೆ.

ಯುಎಇ ಮೇಲಿನ ದಾಳಿಗೆ ಪ್ರಧಾನಿ ನರೇಂದ್ರ ಮೋದಿ ಖಂಡನೆ

ಸಂಗ್ರಹ ಚಿತ್ರ -

ಯುಎಇ: ಇರಾನ್ ಮತ್ತು ಯುಎಸ್ ನಡುವಿನ ಸಂಘರ್ಷದಿಂದ (iran war) ಉಂಟಾಗಿರುವ ಉದ್ವಿಗ್ನತೆಯನ್ನು ನಿಯಂತ್ರಿಸಲು, ಮಧ್ಯಪ್ರಾಚ್ಯದಲ್ಲಿ ಶಾಂತಿ ಕಾಪಾಡುವ ಪ್ರಯತ್ನಗಳಿಗೆ ಬೆಂಬಲ ನೀಡಲು ಭಾರತ ಸದಾ ಸಿದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಹೇಳಿದ್ದಾರೆ. ಸವಾಲಿನ ಸಮಯದಲ್ಲಿ ದೇಶದಲ್ಲಿರುವ ಭಾರತೀಯ ಸಮುದಾಯದವರನ್ನು ನೋಡಿಕೊಂಡಿರುವ ಯುಎಇ (UAE) ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ (UAE President Sheikh Mohammed bin Zayed Al Nahyan) ಅವರಿಗೆ ಧನ್ಯವಾದ ಸಲ್ಲಿಸಿದ ಅವರು ಯುನೈಟೆಡ್ ಅರಬ್ ಎಮಿರೇಟ್ಸ್ ಮೇಲಿನ ಇತ್ತೀಚಿನ ದಾಳಿಗಳನ್ನು ಬಲವಾಗಿ ಖಂಡಿಸಿದರು.

ಅಬುಧಾಬಿಯಲ್ಲಿ ಶುಕ್ರವಾರ ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗಿನ ಸಭೆಯಲ್ಲಿ ಮಾತನಾಡಿದ ಅವರು, ಪಶ್ಚಿಮ ಏಷ್ಯಾದಲ್ಲಿ ಶಾಂತಿ ಮತ್ತು ಸ್ಥಿರತೆಯ ಪುನಃಸ್ಥಾಪನೆಗೆ ಭಾರತ ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡಲು ಸಿದ್ಧವಾಗಿದೆ. ಯುಎಇ ಮೇಲಿನ ದಾಳಿಯನ್ನು ನಾವು ಬಲವಾಗಿ ಖಂಡಿಸುತ್ತೇವೆ. ಇದು ಯಾವುದೇ ರೀತಿಯಲ್ಲಿ ಸ್ವೀಕಾರಾರ್ಹವಲ್ಲ ಎಂದು ತಿಳಿಸಿದರು.

UAE ಜೊತೆ ಮಹತ್ವದ ತೈಲ ಒಪ್ಪಂದ; ಭಾರತಕ್ಕೇನು ಲಾಭವಾಗಲಿದೆ?

ಇತ್ತೀಚೆಗೆ ಫುಜೈರಾ ಪೆಟ್ರೋಲಿಯಂ ಕೈಗಾರಿಕಾ ವಲಯದ ಮೇಲೆ ನಡೆದ ದಾಳಿಯಲ್ಲಿ ಮೂವರು ಭಾರತೀಯರು ಗಾಯಗೊಂಡಿದ್ದರು. ಈ ದಾಳಿಗೆ ಇರಾನ್ ಕಾರಣ ಎಂದು ಯುಎಇ ರಕ್ಷಣಾ ಸಚಿವಾಲಯ ಹೇಳಿದೆ. ಹೆಚ್ಚುತ್ತಿರುವ ಅಸ್ಥಿರ ಪರಿಸ್ಥಿತಿಯ ನಡುವೆಯೂ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅವರ ಸಾವಧಾನದ ಪ್ರತಿಕ್ರಿಯೆಗಾಗಿ ಅವರನ್ನು ಶ್ಲಾಘಿಸಿದ ಪ್ರಧಾನಿ ಮೋದಿ, ಈ ಕಠಿಣ ಸಂದರ್ಭಗಳಲ್ಲಿ ಸಂಯಮ, ಧೈರ್ಯ ಮತ್ತು ಬುದ್ಧಿವಂತಿಕೆಯನ್ನು ನೀವು ತೋರಿರುವುದು ಅತ್ಯಂತ ಶ್ಲಾಘನೀಯ. ಕಷ್ಟದ ಸಮಯದಲ್ಲಿ ಭಾರತವು ಯುಎಇ ಜೊತೆ ಹೆಗಲಿಗೆ ಹೆಗಲು ಕೊಟ್ಟು ನಿಲ್ಲುತ್ತದೆ ಎಂದು ತಿಳಿಸಿದರು.

ವಿದೇಶ ಪ್ರಯಾಣ ನಿರ್ಬಂಧಗಳ ಕುರಿತಾದ ವರದಿ ತಳ್ಳಿ ಹಾಕಿದ ಪ್ರಧಾನಿ ಮೋದಿ

ಹೊರ್ಮುಜ್ ಜಲ ಮಾರ್ಗವು ಪ್ರಾದೇಶಿಕ ಶಾಂತಿ, ಸ್ಥಿರತೆ ಮತ್ತು ಜಾಗತಿಕ ಇಂಧನ ಮತ್ತು ಆಹಾರ ಭದ್ರತೆಗೆ ನಿರ್ಣಾಯಕವಾಗಿದೆ. ಇದನ್ನು ಮುಕ್ತ, ಸುರಕ್ಷಿತವಾಗಿರಿಸುವುದು ಪ್ರಮುಖ ಆದ್ಯತೆಯಾಗಿದೆ. ಅಂತಾರಾಷ್ಟ್ರೀಯ ಕಾನೂನನ್ನು ನಾವು ಗೌರವಿಸಬೇಕು ಎಂದು ಎಂದು ಹೇಳಿದರು.