S Jaishankar: ʼನಾವು ಎಂದಿಗೂ ದಾಳಿ ನಡೆಸಿಲ್ಲ, ನಮ್ಮ ಮೇಲೆ ದಾಳಿ ಮಾಡಿದವರನ್ನು ಬಿಡಲ್ಲʼ ; ಜೈಶಂಕರ್ ಸ್ವಷ್ಟನೆ
ಭಾರತ ಹಾಗೂ ಪಾಕಿಸ್ತಾನದ ನಡುವೆ (Operation Sindoor) ಉದ್ವಿಗ್ನತೆ ಹೆಚ್ಚಾಗಿದೆ. ಉಭಯ ದೇಶಗಳು ಸಂಪೂರ್ಣ ಯುದ್ಧ ಸನ್ನದ್ಧವಾಗಿದೆ. ಹೆಚ್ಚುತ್ತಿರುವ ಉದ್ವಿಗ್ನತೆಯ ಸಮಯದಲ್ಲಿ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರೊಂದಿಗೆ ಫೋನ್ ಕರೆ ಮೂಲಕ ಮಾತುಕತೆ ನಡೆಸಿದ್ದಾರೆ.


ನವದೆಹಲಿ: ಭಾರತ ಹಾಗೂ ಪಾಕಿಸ್ತಾನದ ನಡುವೆ (Operation Sindoor) ಉದ್ವಿಗ್ನತೆ ಹೆಚ್ಚಾಗಿದೆ. ಉಭಯ ದೇಶಗಳು ಸಂಪೂರ್ಣ ಯುದ್ಧ ಸನ್ನದ್ಧವಾಗಿದೆ. ಹೆಚ್ಚುತ್ತಿರುವ ಉದ್ವಿಗ್ನತೆಯ ಸಮಯದಲ್ಲಿ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರೊಂದಿಗೆ ಫೋನ್ ಕರೆ ಮೂಲಕ ಮಾತುಕತೆ ನಡೆಸಿದ್ದಾರೆ. ವಿದೇಶಾಂಗ ಸಚಿವರು ಸಂಭಾಷಣೆಯಲ್ಲಿ ಭಾರತ ಯಾರ ತಂಟೆಗೂ ಹೋಗುವುದಿಲ್ಲ, ಆದರೆ ನಮ್ಮ ತಂಟೆಗೆ ಬಂದರೆ ಯಾರನ್ನೂ ಉಳಿಸುವುದಿಲ್ಲ ಎಂದು ಪರೋಕ್ಷವಾಗಿ ಸಂಘರ್ಷವನ್ನು ಕೊನೆಗಾಣಿಸುವುದಿಲ್ಲ ಎಂದು ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಚಿವ, ನಮ್ಮ ಮೇಲೆ ದಾಳಿ ನಡೆಸಿದವರಿಗೆ ಅವರ ಭಾಷೆಯಲ್ಲಿಯೇ ನಾವು ಉತ್ತರಿಸಿದ್ದೇವೆ. ನಾವು ಜವಾಬ್ದಾರಿಯುತವಾಗಿ ನಡೆದುಕೊಂಡಿದ್ದೇವೆ ಎಂದು ಹೇಳಿದ್ದಾರೆ. ಇದಕ್ಕೂ ಮುನ್ನ, ರುಬಿಯೊ ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರೊಂದಿಗೆ ಮಾತನಾಡಿ, ಪಾಕಿಸ್ತಾನ ಮತ್ತು ಭಾರತ ಎರಡೂ ಉದ್ವಿಗ್ನತೆಯನ್ನು ಶಮನಗೊಳಿಸಲು ಮಾರ್ಗಗಳನ್ನು ಕಂಡುಕೊಳ್ಳುವಂತೆ ಒತ್ತಾಯಿಸಿದ್ದಾರೆ. ಭವಿಷ್ಯದಲ್ಲಿ ಉಂಟಾಗುವ ಸಮಸ್ಯೆಗಳ ಕುರಿತು ಅವರು ಅಸಿಮ್ ಮುನೀರ್ ಅವರೊಂದಿಗೆ ಮಾತುಕತೆ ನಡೆಸಿದರು.
ಶುಕ್ರವಾರ ರಾತ್ರಿ ಪಾಕಿಸ್ತಾನ ಮತ್ತೆ ಡ್ರೋನ್ ದಾಳಿಯನ್ನು ಪ್ರಾರಂಭಿಸಿದ್ದು, ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ. ರಕ್ಷಣಾ ಇಲಾಖೆ ಹಾಗೂ ವಿದೇಶಾಂಗ ಇಲಾಖೆ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಪಾಕಿಸ್ತಾನದ 4 ವಾಯುನೆಲೆಗಳನ್ನು ಭಾರತೀಯ ಸೇನೆ ಧ್ವಂಸಗೊಳಿಸಿದೆ ಎಂದು ಮಾಹಿತಿ ನೀಡಿದೆ. ಪಾಕಿಸ್ತಾನ ಸುಳ್ಳು ಮಾಹಿತಿ ನೀಡಿದ್ದು, ನಮ್ಮ ಯಾವುದೇ ವಾಯುನೆಲೆಗೆ ಯಾವುದೇ ಹಾನಿ ಸಂಭವಿಸಿಲ್ಲ ಎಂದು ರಕ್ಷಣಾ ಇಲಾಖೆ ತಿಳಿಸಿದೆ. ಭಾರತದ ಪಶ್ಚಿಮ ಗಡಿಗಳಲ್ಲಿ ಪಾಕಿಸ್ತಾನದ ಡ್ರೋನ್ ದಾಳಿ ಮತ್ತು ಇತರ ಯುದ್ಧಸಾಮಗ್ರಿಗಳ ದಾಳಿ ಮುಂದುವರೆದಿದೆ. ಇಂದು ಬೆಳಿಗ್ಗೆ ಸರಿಸುಮಾರು 5 ಗಂಟೆಗೆ, ಅಮೃತಸರದ ಖಾಸಾ ಕ್ಯಾಂಟ್ ಮೇಲೆ ಹಾರುತ್ತಿರುವ ಬಹು ಶತ್ರು ಶಸ್ತ್ರಸಜ್ಜಿತ ಡ್ರೋನ್‌ಗಳು ಕಂಡುಬಂದವು. ನಮ್ಮ ವಾಯು ರಕ್ಷಣಾ ಘಟಕಗಳು ಶತ್ರು ಡ್ರೋನ್‌ಗಳನ್ನು ತಕ್ಷಣವೇ ತೊಡಗಿಸಿಕೊಂಡು ನಾಶಪಡಿಸಿದವು" ಎಂದು ಭಾರತೀಯ ಸೇನೆ ತಿಳಿಸಿದೆ.
ಈ ಸುದ್ದಿಯನ್ನೂ ಓದಿ: ಪಾಕಿಸ್ತಾನದ 4 ಏರ್ ಬೇಸ್ ಉಡೀಸ್, ಭಾರತೀಯ ಸೇನೆ ಸರ್ವ ಸನ್ನದ್ಧ; ಸುದ್ದಿಗೋಷ್ಠಿಯಲ್ಲಿ ಸೇನೆ ಮಾಹಿತಿ
ಪಂಜಾಬ್, ರಾಜಸ್ಥಾನ ಹಾಗೂ ಗುಜರಾತಿನ ಭಾಗದಲ್ಲಿ ಡ್ರೋನ್‌ಗಳ ದಾಳಿ ಆಗಿದೆ. ಆದರೆ ಭಾರತದ S-400 (ಸುದರ್ಶನ ) ಅವುಗಳನ್ನು ತಡೆಹಿಡಿಯುವಲ್ಲಿ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಅಮೃತ ಸರದ ಬಳಿ ಡ್ರೋನ್ ಹಾಗೂ ಕ್ಷಿಪಣಿಗಳ ಅವಶೇಷಗಳು ಪತ್ತೆಯಾಗಿವೆ. ಪಂಜಾಬ್, ರಾಜಸ್ಥಾನ ಹಾಗೂ ಗುಜರಾತಿನ ಭಾಗದಲ್ಲಿ ಡ್ರೋನ್‌ಗಳ ದಾಳಿ ಆಗಿದೆ. ಆದರೆ ಭಾರತದ S-400 (ಸುದರ್ಶನ ) ಅವುಗಳನ್ನು ತಡೆಹಿಡಿಯುವಲ್ಲಿ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಅಮೃತ ಸರದ ಬಳಿ ಡ್ರೋನ್ ಹಾಗೂ ಕ್ಷಿಪಣಿಗಳ ಅವಶೇಷಗಳು ಪತ್ತೆಯಾಗಿವೆ.