ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ್​ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Operation Sindoor: ಪಹಲ್ಗಾಮ್ ಬಲಿಪಶುಗಳಿಗೆ ನ್ಯಾಯ; ಆಪರೇಷನ್ ಸಿಂಧೂರ್ ಬಗ್ಗೆ ಭಾರತೀಯ ಸೇನೆ

ಏ. 22ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್ ಮೇಲೆ ದಾಳಿ ನಡೆಸಿ 26 ಪ್ರವಾಸಿಗರ ಹತ್ಯೆ ಮಾಡಿದ್ದ ಪಾಕಿಸ್ತಾನದ ವಿರುದ್ಧ ಭಾರತೀಯ ಸೇನೆ ಭರ್ಜರಿಯಾಗಿ ಸೇಡು ತೀರಿಸಿಕೊಂಡಿದೆ. ಭಾರತೀಯ ಸಶಸ್ತ್ರ ಪಡೆಗಳು ಆಪರೇಷನ್ ಸಿಂಧೂರ್‌ನ ಭಾಗವಾಗಿ, ಮೇ 7ರಂದು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ನಡೆಸಿದೆ.

ಪಹಲ್ಗಾಮ್ ಬಲಿಪಶುಗಳಿಗೆ ನ್ಯಾಯ; ಆಪರೇಷನ್ ಸಿಂಧೂರ್ ಬಗ್ಗೆ ಭಾರತೀಯ ಸೇನೆ

Profile Ramesh B May 7, 2025 4:14 AM

ಹೊಸದಿಲ್ಲಿ: ಏ. 22ರಂದು ಜಮ್ಮು ಕಾಶ್ಮೀರದ ಪಹಗ್ಲಾಮ್‌ ಮೇಲೆ ದಾಳಿ ನಡೆಸಿ 26 ಪ್ರವಾಸಿಗರನ್ನು ಹತ್ಯೆ ಮಾಡಿದ್ದ ಪಾಕಿಸ್ತಾನದ ವಿರುದ್ಧ ಭಾರತೀಯ ಸೇನೆ ಭರ್ಜರಿಯಾಗಿ ಸೇಡು ತೀರಿಸಿಕೊಂಡಿದೆ. ಭಾರತೀಯ ಸಶಸ್ತ್ರ ಪಡೆಗಳು ಆಪರೇಷನ್ ಸಿಂಧೂರ್‌ನ (Operation Sindoor) ಭಾಗವಾಗಿ, ಮೇ 7ರಂದು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ನಡೆಸಿದೆ. ಒಟ್ಟು 9 ಸ್ಥಳಗಳ ಮೇಲೆ ನಿಖರವಾದ ದಾಳಿಗಳು ನಡೆದಿವೆ. ಈ ಆಪರೇಷನ್‌ ಉಲ್ಲೇಖಿಸಿ ಭಾರತೀಯ ಸೇನೆ ʼನ್ಯಾಯವನ್ನು ಒದಗಿಸಲಾಗಿದೆʼ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದೆ.

ಈ ದಾಳಿಯನ್ನು ಭಯೋತ್ಪಾದಕ ಶಿಬಿರಗಳನ್ನು ಮಾತ್ರ ಗುರಿಯಾಗಿಸಿಕೊಂಡು ನಡೆಸಲಾಗಿದೆ ಎಂದು ಸೇನೆ ಮತ್ತು ಸರ್ಕಾರ ದೃಢಪಡಿಸಿದೆ. ಪಾಕಿಸ್ತಾನದ ಮಿಲಿಟರಿಗೆ ಸಂಬಂಧಿಸಿದಂತೆ ಯಾವುದೇ ಹಾನಿ ಉಂಟು ಮಾಡಿಲ್ಲ ಎಂದು ಸ್ಪಷ್ಟಪಡಿಸಿದೆ.



ಈ ಸುದ್ದಿಯನ್ನೂ ಓದಿ: Operation Sindoor; 12 ಭಯೋತ್ಪಾದಕರ ಹೊಡೆದುರುಳಿಸಿದ ಭಾರತ

ಗಡಿಯಾಚೆಗಿನ ಭಯೋತ್ಪಾದನಾ ಶಿಬಿರಗಳನ್ನು ಗುರಿಯಾಗಿಸಿಕೊಂಡು 9 ಉಗ್ರರ ತಾಣಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಸೇನೆಯ ಹೆಚ್ಚುವರಿ ಸಾರ್ವಜನಿಕ ಮಾಹಿತಿ ನಿರ್ದೇಶನಾಲಯವು ಮಾಹಿತಿ ನೀಡಿದೆ.

ʼʼಮುಖ್ಯವಾಗಿ ಪಾಕಿಸ್ತಾನದ ಸೈನ್ಯಕ್ಕೆ ಯಾವುದೇ ಹಾನಿಯಾಗಿಲ್ಲ. ಪಹಲ್ಗಾಮ್‌ ದಾಳಿಗೆ ಕಾರಣರಾದವರನ್ನು ಹೊಣೆಗಾರರನ್ನಾಗಿಸಿ ಆಪರೇಷನ್‌ ಸಿಂಧೂರ್‌ ಕಾರ್ಯಾಚರನೆ ನಡೆಸಲಾಗುತ್ತಿದೆʼʼ ಎಂದು ತಿಳಿಸಿದೆ.

ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ಉಗ್ರರು ನಡೆಸಿದ ದಾಳಿಯನನು ಖಂಡಿಸಿದ್ದ ಪ್ರಧಾನಿ ನರೇಂದ್ರ ಮೋದಿ ಇದರ ವಿರುದ್ಧ ಪ್ರತೀಕಾರ ತೆಗೆದುಕೊಳ್ಳುವುದಾಗಿ ತಿಳಿಸಿದ್ದರು. ಕೊಟ್ಟಿ, ಮುಜಾಫರ್‌ಬಾದ್‌, ಬಹವಲ್ಪುರ್‌ ಬಳಿ ಭಾರತೀಯ ಸೇನೆ ದಾಳಿ ನಡೆಸಿವೆ ಎಂಉ ಪಾಕ್‌ ವರದಿ ಮಾಡಿದೆ. ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಪಹಲ್ಗಾಮ್‌ ದಾಳಿಗೆ ನ್ಯಾಯ ಸಿಗುತ್ತದೆ ಎಂದು ಬರೆದುಕೊಂಡಿದ್ದಾರೆ.