ಕಾರ್ತಿಕೇಯ ಸಿಂಗ್ ಮಾನನಷ್ಟ ಮೊಕದ್ದಮೆ: ನ್ಯಾಯಾಲಯದಲ್ಲಿ ರಾಹುಲ್ ಗಾಂಧಿ ವಿಷಾದ
ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರ ಪುತ್ರ ಕಾರ್ತಿಕೇಯ ಸಿಂಗ್ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದ ಹೇಳಿಕೆಗೆ ಕಾಂಗ್ರೆಸ್ ಸಂಸದ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ವಿಷಾದ ವ್ಯಕ್ತಪಡಿಸಿ ಮಧ್ಯಪ್ರದೇಶ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ ಸಮನ್ಸ್ ಮತ್ತು ಮಾನನಷ್ಟ ಮೊಕದ್ದಮೆ ರದ್ದುಗೊಳಿಸುವಂತೆ ಮನವಿ ಮಾಡಿದರು.
-
ಮಧ್ಯಪ್ರದೇಶ: 2018ರ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಗೂ ಮೊದಲೇ ಕಾಂಗ್ರೆಸ್ ಸಂಸದ (Congress MP) ಮತ್ತು ಲೋಕಸಭೆಯ (Lok Sabha) ವಿರೋಧ ಪಕ್ಷದ ನಾಯಕ (Leader of Opposition) ರಾಹುಲ್ ಗಾಂಧಿ (Rahul Gandhi) ಅವರು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ (Union Minister Shivraj Singh Chouhan) ಅವರ ಪುತ್ರ ಕಾರ್ತಿಕೇಯ ಸಿಂಗ್ (Kartikeya Singh) ಅವರಿಗೆ ಆಗಿರುವ ಮಾನನಷ್ಟಕ್ಕೆ (defamation case) ವಿಷಾದ ಕೋರಿ ಮಧ್ಯಪ್ರದೇಶ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದರು. ತಮಗೆ ವಿರುದ್ಧ ನೀಡಲಾಗಿರುವ ಸಮನ್ಸ್ ಮತ್ತು ಮಾನನಷ್ಟ ಮೊಕದ್ದಮೆ ರದ್ದುಗೊಳಿಸುವಂತೆ ಮನವಿ ಮಾಡಿರುವ ಅವರು, ಕಾರ್ತಿಕೇಯ ಸಿಂಗ್ ಅವರನ್ನು ಅವಮಾನ ಮಾಡುವ ಉದ್ದೇಶವನ್ನು ತಾವು ಹೊಂದಿರಲಿಲ್ಲ ಎಂದು ತಿಳಿಸಿದ್ದಾರೆ.
ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರ ಪುತ್ರ ಕಾರ್ತಿಕೇಯ ಸಿಂಗ್ ಅವರು ರಾಹುಲ್ ಗಾಂಧಿ ವಿರುದ್ಧ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದ ಗುರುವಾರ ವಿಚಾರಣೆಗೂ ಮೊದಲೇ ರಾಹುಲ್ ಗಾಂಧಿ ಅವರು ವಿಷಾದ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು.
ಝಬುವಾದಲ್ಲಿ 2018ರ ಚುನಾವಣಾ ರಾಲಿ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ಪನಾಮ ಪೇಪರ್ಸ್ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ಕಾರ್ತಿಕೇಯ ಸಿಂಗ್ ಹೆಸರನ್ನು ಉಲ್ಲೇಖಿಸಿ ಆರೋಪ ಮಾಡಿದ್ದರು. ಇದು ತಮಗೆ ಮಾಡಿರುವ ಅವಮಾನ ಎಂದು ಪರಿಗಣಿಸಿ ಕಾರ್ತಿಕೇಯ ಸಿಂಗ್ ಅವರು ನ್ಯಾಯಾಲಯದಲ್ಲಿ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ಹೂಡಿದ್ದರು. ಈ ದೂರಿನ ಕುರಿತು ವಿಚಾರಣೆ ನಡೆಸಿದ ವಿಚಾರಣಾ ನ್ಯಾಯಾಲಯವು ರಾಹುಲ್ ಗಾಂಧಿಯವರಿಗೆ ಈ ಪ್ರಕರಣದಲ್ಲಿ ವೈಯಕ್ತಿಕವಾಗಿ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತು.
ಇದರ ಬಳಿಕ ಕಾಂಗ್ರೆಸ್ ಮುಖಂಡರು ಮಧ್ಯಪ್ರದೇಶ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಸಮನ್ಸ್ ಮತ್ತು ಮಾನನಷ್ಟ ಮೊಕದ್ದಮೆ ಎರಡನ್ನೂ ರದ್ದುಗೊಳಿಸುವಂತೆ ಕೋರಿದರು.
ವಕೀಲರ ಮೂಲಕ ಸಲ್ಲಿಸಿದ ರಾಹುಲ್ ಗಾಂಧಿ ಅವರು ಸಲ್ಲಿಸಿದ ಅರ್ಜಿಯಲ್ಲಿ ರಾಹುಲ್ ಗಾಂಧಿಯವರು ಕಾರ್ತಿಕೇಯ ಸಿಂಗ್ ಅವರನ್ನು ಅವಮಾನಿಸುವ ಉದ್ದೇಶವನ್ನು ಹೊಂದಿರಲಿಲ್ಲ. ಅವರು ಅವಮಾನವಾಗಿದೆ ಎಂದು ಪರಿಗಣಿಸಿದ್ದರೆ ಇದಕ್ಕಾಗಿ ವಿಷಾದ ವ್ಯಕ್ತಪಡಿಸುವುದಾಗಿ ತಿಳಿಸಿದ್ದಾರೆ ಎಂದು ನ್ಯಾಯಾಲಯ ಹೇಳಿದೆ.
ಈ ಅರ್ಜಿಯನ್ನು ಗುರುವಾರ ನ್ಯಾಯಮೂರ್ತಿ ಪ್ರಮೋದ್ ಕುಮಾರ್ ಅಗರ್ವಾಲ್ ಅವರ ಮುಂದೆ ಮಂಡಿಸಲಾಯಿತು. ಹೈಕೋರ್ಟ್ ನಿರ್ದೇಶನದಂತೆ ಅರ್ಜಿದಾರರು ಕೆಳ ನ್ಯಾಯಾಲಯದ ದಾಖಲೆಗಳನ್ನು ಸಹ ಹಾಜರುಪಡಿಸಿದರು. ವಿಚಾರಣೆಯ ಸಮಯದಲ್ಲಿ ದೂರುದಾರರ ಪರವಾಗಿ ವಕೀಲ ಸಂಕಲ್ಪ ಕೊಚ್ಚರ್ ಹಾಜರಾದರು.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ, ರಾಹುಲ್ ಗಾಂಧಿಯವರು ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಬಳಿಕ ಹಿಂದೆ ಸರಿಯುವುದು ಇದು ಹೊಸದೇನಲ್ಲ ಎಂದು ತಿಳಿಸಿದ್ದಾರೆ.
ಪಾಸ್‌ಪೋರ್ಟ್ ಪ್ರಯಾಣ ದಾಖಲೆ ಮಾತ್ರ, ಪೌರತ್ವ ಪುರಾವೆಯಲ್ಲ; ಗೊಂದಲಕ್ಕೆ ತೆರೆ ಎಳೆದ ಸರ್ಕಾರ
ಹಲವು ಬಾರಿ ಅವರು ಕ್ಷಮಿಸಿ ಎಂದು ಕೇಳಿದ್ದಾರೆ. ಅವರು ಎಷ್ಟು ಬಾರಿ ಕ್ಷಮೆಯಾಚಿಸಬೇಕಾಯಿತು, ವಿಷಾದ ವ್ಯಕ್ತಪಡಿಸಬೇಕಾಯಿತು ಅಥವಾ ತಮ್ಮ ಮಾನಹಾನಿಕರ ಮತ್ತು ಬೇಜವಾಬ್ದಾರಿ ಹೇಳಿಕೆಗಳನ್ನು ಹಿಂತೆಗೆದುಕೊಳ್ಳಬೇಕಾಯಿತು ಎಂಬುದನ್ನು ಲೆಕ್ಕವಿಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.