ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Corona Virus: ದೆಹಲಿ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಕೊರೋನಾ ಹೆಚ್ಚಳ; ಬೆಡ್‌, ಆಕ್ಸಿಜನ್‌ ರೆಡಿ ಇಡಲು ಸರ್ಕಾರ ಸೂಚನೆ

ಕಳೆದ ಎರಡು ವರ್ಷಗಳ ಹಿಂದೆ ಜಗತ್ತನ್ನು ನಲುಗಿಸಿದ್ದ ಕೊರೋನಾ (Corona Virus) ಮಹಾಮಾರಿ ಇದೀಗ ಮತ್ತೆ ವಕ್ಕರಿಸಿದೆ. ದೆಹಲಿ, ಮಹಾರಾಷ್ಟ್ರ, ಕೇರಳ, ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳಲ್ಲಿ ಈ ತಿಂಗಳು ಹೊಸ ಪ್ರಕರಣಗಳು ವರದಿಯಾಗಿವೆ.

ದೆಹಲಿ, ಕೇರಳ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಕೊರೋನಾ ಹೆಚ್ಚಳ

Profile Vishakha Bhat May 24, 2025 3:07 PM

ನವದೆಹಲಿ: ಕಳೆದ ಎರಡು ವರ್ಷಗಳ ಹಿಂದೆ ಜಗತ್ತನ್ನು ನಲುಗಿಸಿದ್ದ ಕೊರೋನಾ ಮಹಾಮಾರಿ ಇದೀಗ ಮತ್ತೆ ವಕ್ಕರಿಸಿದೆ. ದೆಹಲಿ, ಮಹಾರಾಷ್ಟ್ರ, ಕೇರಳ, ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳಲ್ಲಿ ಈ ತಿಂಗಳು ಹೊಸ ಪ್ರಕರಣಗಳು ವರದಿಯಾಗಿವೆ. ರಾಷ್ಟ್ರ ರಾಜಧಾನಿಯಲ್ಲಿ ಮೂರು ವರ್ಷಗಳಲ್ಲಿ ಮೊದಲ ಬಾರಿಗೆ (23) ಕೊರೊನಾವೈರಸ್ ಪ್ರಕರಣಗಳು ವರದಿಯಾಗಿವೆ ಎಂದು ತಿಳಿದು ಬಂದಿದೆ. ಇಲ್ಲಿಯವರೆಗೆ ಯಾವುದೇ ಸಾವುಗಳು ವರದಿಯಾಗಿಲ್ಲ. ಬೆಂಗಳೂರಿನಲ್ಲಿ 35 ಮಂದಿಯಲ್ಲಿ ಕೋವಿಡ್‌ (corona virus) ಕಂಡುಬಂದಿರುವುದು ದೃಢವಾಗಿದೆ.

ದಕ್ಷಿಣ ಏಷ್ಯಾದಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳಕ್ಕೆ JN.1 ರೂಪಾಂತರದ ವೈರಸ್‌ ಕಾರಣ ಎಂದು ತಿಳಿದು ಬಂದಿದೆ. ಈ ಬಾರಿಯ ಕೊರೋನಾದ ಲಕ್ಷಣ ಅಷ್ಟೇನು ತೀವೃವಾಗಿರುವುದಿಲ್ಲ. ಜ್ವರ, ಮೂಗು ಸೋರುವಿಕೆ, ಗಂಟಲು ನೋವು, ತಲೆನೋವು, ಆಯಾಸ, ಬಳಲಿಕೆ ಮುಂತಾದ ಲಕ್ಷಣಗಳು ಸೇರಿವೆ. ಪ್ರಸ್ತುತ, ಕೋವಿಡ್-19 ಪರಿಸ್ಥಿತಿಯು ಹತೋಟಿಯಲ್ಲಿದ್ದು ಸಾರ್ವಜನಿಕರು ಅನಗತ್ಯ ಭಯಪಡುವ ಅಗತ್ಯವಿಲ್ಲ, ಆದರೆ ಎಚ್ಚರಿಕೆಯನ್ನು ವಹಿಸುವುದು ಅಗತ್ಯವಾಗಿದೆ. ಆದಾಗ್ಯೂ, ಸಾರ್ವಜನಿಕರು ಅದರಲ್ಲೂ ವಿಶೇಷವಾಗಿ ಗರ್ಭಿಣಿಯರು, ಮಕ್ಕಳು ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಮುಂಜಾಗ್ರತಾ ಕ್ರಮವಾಗಿ ಜನನಿಬಿಡ ಪ್ರದೇಶಗಳಿಗೆ ತೆರಳುವಾಗ ಮಾಸ್ಕ್ ಧರಿಸುವುದು ಸೂಕ್ತವಾಗಿದೆ. ಹಾಗೂ ಕೋವಿಡ್ ಸ್ವಚ್ಛತೆ, ಹ್ಯಾಂಡ್ ಸ್ಯಾನಿಟೈಸರ್ ನ ಬಳಕೆ ಇತ್ಯಾದಿಗಳನ್ನು ಪಾಲಿಸುವುದು ಅಗತ್ಯವಾಗಿದೆ.

ಈ ಸುದ್ದಿಯನ್ನೂ ಓದಿ: Corona Cases: ಬೆಂಗಳೂರಿನಲ್ಲಿ ಶುರುವಾಯ್ತು ಕೊರೋನಾ ಆತಂಕ; 9 ತಿಂಗಳ ಮಗುವಿಗೆ ಸೋಂಕು!

ಮುನ್ನೆಚ್ಚರಿಕಾ ಕ್ರಮವಾಗಿ ಸರ್ಕಾರವು ಆಸ್ಪತ್ರೆಗಳಲ್ಲಿ ಹಾಸಿಗೆಗಳು, ಆಮ್ಲಜನಕ ಸಿಲಿಂಡರ್‌ಗಳು, ಪರೀಕ್ಷಾ ಕಿಟ್‌ಗಳು ಮತ್ತು ಲಸಿಕೆಗಳ ಲಭ್ಯತೆಯನ್ನು ಕಾಯ್ದುಕೊಳ್ಳುವಂತೆ ನಿರ್ದೇಶಿಸಿದೆ. ಮೇ ತಿಂಗಳಲ್ಲಿ 273 ಕೋವಿಡ್ ಸೋಂಕುಗಳು ದಾಖಲಾಗಿದ್ದು, ಗರಿಷ್ಠ ಪ್ರಕರಣಗಳು ವರದಿಯಾಗಿವೆ, ಆದ್ದರಿಂದ ಆರೋಗ್ಯ ಸಚಿವರು ಎಲ್ಲಾ ಜಿಲ್ಲೆಗಳಲ್ಲಿ ಕಣ್ಗಾವಲು ಹೆಚ್ಚಿಸುವಂತೆ ನಿರ್ದೇಶನ ನೀಡಿದ್ದಾರೆ. ಆಂಧ್ರಪ್ರದೇಶ ಮಾಸ್ಕ್ ಕಡ್ಡಾಯಗೊಳಿಸಿದೆ. ಜನರ ಗುಂಪು, ಸಭೆ ಸಮಾರಂಭಗಳಲ್ಲಿ ಮಾಸ್ಕ್ ಹಾಕಿಕೊಳ್ಳಲು ಸಲಹೆ ನೀಡಲಾಗಿದ್ದು, ರೋಗ ಲಕ್ಷಣ ಇದ್ದರೆ ಟೆಸ್ಟ್ ಮಾಡಿಸಲು ಸಲಹೆ ನೀಡಲಾಗಿದೆ. ‌