ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಭಾರಿ ಮಳೆಯಿಂದ ಒಡಿಶಾದಲ್ಲಿ ಭೂಕುಸಿತ: 12 ಮಂದಿ ನಾಪತ್ತೆ

ಅರ್ನಾಬ್ ಚಂಡಮಾರುತದ ಪರಿಣಾಮ ನಿರಂತರ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಒಡಿಶಾದಲ್ಲಿ ಭೂಕುಸಿತ ಉಂಟಾಗಿದ್ದು, 12 ಮಂದಿ ನಾಪತ್ತೆಯಾಗಿದ್ದಾರೆ. ಶೋಧ ಕಾರ್ಯಾಚರಣೆಗಾಗಿ 170 ರಕ್ಷಣಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ದಕ್ಷಿಣ ಒಡಿಶಾದಲ್ಲಿ ಉಂಟಾಗಿರುವ ಪ್ರವಾಹವು ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯನ್ನು ಉಂಟು ಮಾಡಿದೆ.

ಒಡಿಶಾದಲ್ಲಿ ಭೂಕುಸಿತ: 12 ಮಂದಿ ನಾಪತ್ತೆ

ಸಂಗ್ರಹ ಚಿತ್ರ -

ಒಡಿಶಾ: ಭಾರಿ ಮಳೆಯ (heavy rain) ಪರಿಣಾಮ ಒಡಿಶಾದಲ್ಲಿ (Odisha) 12 ಮಂದಿ ನಾಪತ್ತೆಯಾಗಿದ್ದಾರೆ. ಅರ್ನಾಬ್ ಚಂಡಮಾರುತದ (Arnab cyclone) ಪರಿಣಾಮ ಕಳೆದ ಕೆಲವು ದಿನಗಳಿಂದ ದಕ್ಷಿಣ ಒಡಿಶಾದ (southern Odisha) ಕೆಲವು ಭಾಗಗಳಲ್ಲಿ ನಿರಂತರ ಮಳೆಯಾಗುತ್ತಿದೆ. ಗಂಜಾಂ ಮತ್ತು ಕಂಧಮಾಲ್ ಜಿಲ್ಲೆಗಳ ಗಡಿಯಲ್ಲಿರುವ ಗಿಡಿಪಬಾಲಿ ಗ್ರಾಮದಲ್ಲಿ ಉಂಟಾಗಿರುವ ಭೂಕುಸಿತದ (Landslide) ಪರಿಣಾಮ ನಾಪತ್ತೆಯಾಗಿರುವವರ ಶೋಧ ಕಾರ್ಯಾಚರಣೆಗಾಗಿ 170 ರಕ್ಷಣಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಆದರೆ ಇಲ್ಲಿ ಉಂಟಾಗಿರುವ ಪ್ರವಾಹವು ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯನ್ನುಂಟು ಮಾಡಿದೆ.

ಅರ್ನಾಬ್ ಚಂಡಮಾರುತದ ಪರಿಣಾಮ ಒಡಿಶಾದಲ್ಲಿ ಕಳೆದ ಕೆಲವು ದಿನಗಳಿಂದ ಒಡಿಶಾದ ಕೆಲವು ಭಾಗಗಳಲ್ಲಿ ನಿರಂತರ ಮಳೆಯಾಗುತ್ತಿದೆ. ಇದರ ಪರಿಣಾಮವಾಗಿ ಗಿಡಿಪಬಾಲಿ ಮತ್ತು ಕಂಧಮಾಲ್ ಜಿಲ್ಲೆಯಲ್ಲಿ ಶುಕ್ರವಾರ ಭೂಕುಸಿತ ಉಂಟಾಗಿದೆ. ಗಿಡಿಪಬಾಲಿಯಲ್ಲಿ ಉಂಟಾಗಿರುವ ಭೂಕುಸಿತದ ಪರಿಣಾಮ 12 ಮಂದಿ ನಾಪತ್ತೆಯಾಗಿದ್ದಾರೆ. ಕಂಧಮಾಲ್ ಜಿಲ್ಲೆಯಲ್ಲಿ ನಡೆದ ಇನ್ನೊಂದು ಘಟನೆಯಲ್ಲಿ ಒಂಬತ್ತು ತಿಂಗಳ ಮಗು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ.ಗಜಪತಿಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.

ಕುಟುಂಬಕ್ಕೆ ತಿಳಿಸದೆ ಲಂಡನ್‌ನಿಂದ ರಹಸ್ಯವಾಗಿ ಭಾರತಕ್ಕೆ ಮರಳಿದ ಮಹಿಳೆ ಶವವಾಗಿ ಪತ್ತೆ: ಫುಡ್ ಡೆಲಿವರಿ ವಹಿವಾಟಿನಿಂದ ಬಯಲಾಯ್ತು ರಹಸ್ಯ

ನಾಪತ್ತೆಯಾದವರನ್ನು ಪತ್ತೆಹಚ್ಚಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ಒಡಿಶಾ ವಿಪತ್ತು ತ್ವರಿತ ಕಾರ್ಯಾಚರಣೆ ಪಡೆ ಮತ್ತು ವಿಶೇಷ ಕಾರ್ಯಾಚರಣೆ ಗುಂಪಿನ ಒಟ್ಟು 170 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ವಿಶೇಷ ಪರಿಹಾರ ಆಯುಕ್ತ ರಾಜೇಶ್ ಪಿ. ಪಾಟೀಲ್ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಟ್ಟದ ಮೇಲಿರುವ ಈ ಗ್ರಾಮದಲ್ಲಿ 26 ಮಂದಿ ವಾಸಿಸುತ್ತಿದ್ದರು. ಇವರಲ್ಲಿ 13 ಮಂದಿ ಭೂಕುಸಿತದಿಂದ ಪಾರಾಗಿದ್ದಾರೆ. ಆದರೆ 13 ಮಂದಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರ ಪೈಕಿ ಒಬ್ಬರನ್ನು ಪತ್ತೆಹಚ್ಚಲಾಗಿದೆ. ಶುಕ್ರವಾರ ರಾತ್ರಿಯಿಂದಲೇ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದರು.

ಈ ಕುರಿತು ಸಾಮಾಜಿಕ ಮಾಧ್ಯಮದ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರು, ಭಾರಿ ಮಳೆಯಿಂದಾಗಿ ದಕ್ಷಿಣ ಒಡಿಶಾದ ನೂರಾರು ಗ್ರಾಮಗಳು ಪ್ರವಾಹದ ನೀರಿನಲ್ಲಿ ಮುಳುಗಿವೆ. ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ತೀವ್ರಗೊಳಿಸಲಾಗಿದೆ. ಇಲ್ಲಿನ ನಿವಾಸಿಗಳ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ತಿಳಿಸಿದರು.

ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಪರಿಹಾರ ಶಿಬಿರಗಳಲ್ಲಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲು ಆಡಳಿತ ಯಂತ್ರ ಮತ್ತು ರಕ್ಷಣಾ ತಂಡಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದರು.

ವಿರೋಧ ಪಕ್ಷದ ನಾಯಕ ನವೀನ್ ಪಟ್ನಾಯಕ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದು, ಅರ್ನಾಬ್ ಚಂಡಮಾರುತದ ಪರಿಣಾಮ ಒಡಿಶಾದ ಕಂಧಮಾಲ್ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದ ದುರಂತ ಘಟನೆಯಲ್ಲಿ ಅನೇಕರು ಪ್ರಾಣ ಕಳೆದುಕೊಂಡಿರುವುದು ಮತ್ತು ಇನ್ನೂ ಹಲವರು ನಾಪತ್ತೆಯಾಗಿರುವುದು ತೀವ್ರ ದುಃಖವನ್ನುಂಟು ಮಾಡಿದೆ. ಜನರನ್ನು ರಕ್ಷಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಹಾಗೂ ಜನಜೀವನವನ್ನು ಸಹಜ ಸ್ಥಿತಿಗೆ ತರಲು ನೆರವಾಗುವಂತೆ ನಾನು ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಪ್ರೀತಿ ನಿರಾಕರಿಸಿದ್ದಕ್ಕೆ ದ್ವೇಷ; ಶಾಲೆಯೊಳಗೆ ನುಗ್ಗಿ ಗರಗಸದಿಂದ ಬಾಲಕಿ ಮೇಲೆ ಹಲ್ಲೆ ಮಾಡಿದ ಯುವಕ

ಕಂಧಮಾಲ್ ಜಿಲ್ಲಾಧಿಕಾರಿ ವೇದ್‌ಭೂಷಣ್ ಅವರು ಪ್ರತಿಕ್ರಿಯಿಸಿ, ಗಿಡಿಪಬಾಲಿಯಲ್ಲಿ ಸಂಭವಿಸಿದ ಭೂಕುಸಿತದಿಂದ ಪಾರಾದ 13 ಜನರು ಕಂಧಮಾಲ್‌ನ ಜಿ. ಉದಯಗಿರಿ ಬಳಿಯ ಪರಿಹಾರ ಕೇಂದ್ರವೊಂದರಲ್ಲಿ ಆಶ್ರಯ ಪಡೆದಿದ್ದಾರೆ. ಇವರಲ್ಲಿ ಇಬ್ಬರು ಮಕ್ಕಳು ಕೂಡ ಇದ್ದಾರೆ. ನಾಪತ್ತೆಯಾಗಿರುವ 12 ಜನರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಮಳೆಯಿಂದ ಬಾಧಿತವಾದ ಜಿಲ್ಲೆಗಳಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.