ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

LPG crisis: ಕೆವೈಸಿ ಮಾಡಿಸದಿದ್ರೆ ಎಲ್‌ಪಿಜಿ ಸಿಲಿಂಡರ್‌ ಸಿಗಲ್ಲ!

ಮಾರ್ಚ್ 15ರಿಂದ ಬಯೋಮೆಟ್ರಿಕ್ ಆಧಾರ್ ದೃಢೀಕರಣ ಅಥವಾ ಕೆವೈಸಿ (KYC) ಮಾಡಿಸುವುದನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದೆ. ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ ಗ್ರಾಹಕರಿಗೆ ಮಾತ್ರ ಇನ್ನು ಮುಂದೆ ಎಲ್‌ಪಿಜಿ ಸೇವೆಗಳು ಮತ್ತು ಸಬ್ಸಿಡಿ ಸೌಲಭ್ಯಗಳು ದೊರೆಯಲಿವೆ.

ಕೆವೈಸಿ ಮಾಡಿಸದಿದ್ರೆ ಎಲ್‌ಪಿಜಿ ಸಿಲಿಂಡರ್‌ ಸಿಗಲ್ಲ!

ಸಾಂದರ್ಭಿಕ ಚಿತ್ರ -

ಹರೀಶ್‌ ಕೇರ
ಹರೀಶ್‌ ಕೇರ Mar 17, 2026 7:57 AM

ನವದೆಹಲಿ, ಮಾ.17: ಜಾಗತಿಕ ಮಟ್ಟದಲ್ಲಿ ಅಮೆರಿಕ-ಇಸ್ರೇಲ್ ಹಾಗೂ ಇರಾನ್ (iran israel war) ನಡುವಿನ ಸಂಘರ್ಷದಿಂದಾಗಿ ದೇಶದಲ್ಲಿ ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಯ (LPG crisis) ಉಂಟಾಗುವ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಎಲ್‌ಪಿಜಿ ಸಿಲಿಂಡರ್ ಬಳಕೆದಾರರಿಗೆ ಮಹತ್ವದ ಸೂಚನೆಯೊಂದನ್ನು ನೀಡಿದ್ದು, ಮಾರ್ಚ್ 15ರಿಂದ ಬಯೋಮೆಟ್ರಿಕ್ ಆಧಾರ್ ದೃಢೀಕರಣ ಅಥವಾ ಕೆವೈಸಿ (KYC) ಮಾಡಿಸುವುದನ್ನು ಕಡ್ಡಾಯಗೊಳಿಸಿದೆ.

ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಪ್ರಕಾರ, ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ ಗ್ರಾಹಕರಿಗೆ ಮಾತ್ರ ಇನ್ನು ಮುಂದೆ ಎಲ್‌ಪಿಜಿ ಸೇವೆಗಳು ಮತ್ತು ಸಬ್ಸಿಡಿ ಸೌಲಭ್ಯಗಳು ದೊರೆಯಲಿವೆ. ಗ್ರಾಹಕರು ಗ್ಯಾಸ್ ಏಜೆನ್ಸಿಗಳಿಗೆ ಅಲೆಯುವ ಬದಲು, ಮನೆಯಲ್ಲೇ ಕುಳಿತು ಮೊಬೈಲ್ ಆ್ಯಪ್ ಮೂಲಕ ಸುಲಭವಾಗಿ ಈ ಪ್ರಕ್ರಿಯೆ ಮುಗಿಸಲು ಅವಕಾಶ ಕಲ್ಪಿಸಲಾಗಿದೆ.

ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOCL), ಭಾರತ್ ಪೆಟ್ರೋಲಿಯಂ (BPCL) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ (HPCL) ಕಂಪನಿಗಳ ಎಲ್ಲಾ ಗ್ರಾಹಕರಿಗೂ ಈ ಹೊಸ ನಿಯಮ ಅನ್ವಯವಾಗಲಿದೆ.

LPG Cylinder Shortage: ಮುಂದಿನ ವಾರದೊಳಗೆ ಹೋಟೆಲ್‌ಗಳಿಗೆ ಎಲ್‌ಪಿಜಿ ಸಿಲಿಂಡರ್‌ ಪೂರೈಕೆ ಸುಗಮ: ಸಚಿವ ಕೆ.ಎಚ್‌.ಮುನಿಯಪ್ಪ

ಕೆವೈಸಿ ಪ್ರಕ್ರಿಯೆ ಮಾಡುವುದು ಹೇಗೆ?

ನಿಮ್ಮ ಮೊಬೈಲ್ ಮೂಲಕ ಕೆವೈಸಿ ಪೂರ್ಣಗೊಳಿಸಲು ಈ ಹಂತಗಳನ್ನು ಅನುಸರಿಸಿ:

ಲಿಂಕ್ ಅಥವಾ ಕ್ಯೂಆರ್ ಕೋಡ್: ಸರ್ಕಾರಿ ನೋಟಿಸ್‌ನಲ್ಲಿ ನೀಡಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಅಥವಾ ಅಧಿಕೃತ ವೆಬ್‌ಸೈಟ್ https://www.pmuy.gov.in/e&kyc.html ಮೂಲಕ ಪ್ರಕ್ರಿಯೆ ಆರಂಭಿಸಿ.

ಆ್ಯಪ್ ಡೌನ್‌ಲೋಡ್: ಮೊಬೈಲ್‌ನಲ್ಲಿ ‘Aadhaar FaceRD’ ಆ್ಯಪ್ ಜೊತೆಗೆ ನಿಮ್ಮ ಗ್ಯಾಸ್ ಕಂಪನಿಯ ಅಧಿಕೃತ ಆ್ಯಪ್ (IOCL, BPCL ಅಥವಾ HPCL) ಅನ್ನು ಡೌನ್‌ಲೋಡ್ ಮಾಡಿಕೊಳ್ಳಿ.

ಮುಖ ಚಹರೆ ಸ್ಕ್ಯಾನ್: ಕಂಪನಿಯ ಆ್ಯಪ್‌ನಲ್ಲಿ ನೀಡಲಾದ ಸೂಚನೆಗಳನ್ನು ಪಾಲಿಸಿ, ‘Aadhaar FaceRD’ ಆ್ಯಪ್ ಬಳಸಿ ನಿಮ್ಮ ಮುಖವನ್ನು ಸ್ಕ್ಯಾನ್ ಮಾಡುವ ಮೂಲಕ ಬಯೋಮೆಟ್ರಿಕ್ ದೃಢೀಕರಣ ನೀಡಿ.

ದೃಢೀಕರಣ: ಈ ಪ್ರಕ್ರಿಯೆ ಯಶಸ್ವಿಯಾದ ನಂತರ ನಿಮ್ಮ ಕೆವೈಸಿ ದೃಢೀಕರಣ ಪೂರ್ಣಗೊಳ್ಳುತ್ತದೆ.