S. Jaishankar: ಎಸ್ ಜೈಶಂಕರ್ ಜೊತೆ ಮಾರ್ಕೊ ರೂಬಿಯೊ ಮಾತುಕತೆ; ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ ಅಮೆರಿಕದ ಬೆಂಬಲ
ದಾಳಿ ಬಳಿಕ ಭಾರತ ಹಾಗೂ ಪಾಕಿಸ್ತಾನದ ನಡುವೆ ಯುದ್ಧದ ವಾತಾವರಣ ನಿರ್ಮಾಣವಾಗಿದೆ. ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ (Marco Rubio) ಗುರುವಾರ ವಿದೇಶಾಂಗ ಸಚಿವ ಎಸ್ ಜೈಶಂಕರ್ (S. Jaishankar) ಅವರೊಂದಿಗೆ ಮಾತನಾಡಿ, ಭಯೋತ್ಪಾದನೆಯ ವಿರುದ್ಧದ ಹೋರಾಟಕ್ಕೆ ಭಾರತದ ಜೊತೆ ನಿಲ್ಲುವುದಾಗಿ ಹೇಳಿದ್ದಾರೆ.


ವಾಷಿಂಗ್ಟನ್: ಏ. 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ (Pahalgam) ನಡೆದ ಭಯೋತ್ಪಾದಕ ದಾಳಿ ಬಳಿಕ ಭಾರತ ಹಾಗೂ ಪಾಕಿಸ್ತಾನದ ನಡುವೆ ಯುದ್ಧದ ವಾತಾವರಣ ನಿರ್ಮಾಣವಾಗಿದೆ. ಇದೀಗ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ (Marco Rubio) ಗುರುವಾರ ವಿದೇಶಾಂಗ ಸಚಿವ ಎಸ್ ಜೈಶಂಕರ್ (S. Jaishankar) ಅವರೊಂದಿಗೆ ಮಾತನಾಡಿ, ಭಯೋತ್ಪಾದನೆಯ ವಿರುದ್ಧದ ಹೋರಾಟಕ್ಕೆ ಭಾರತದ ಜೊತೆ ನಿಲ್ಲುವುದಾಗಿ ಹೇಳಿದ್ದಾರೆ. ಬುಧವಾರ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರೊಂದಿಗೆ ಮಾತನಾಡಿದ ರುಬಿಯೊ, ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಖಂಡಿಸುವ ಅಗತ್ಯವನ್ನು ಒತ್ತಿ ಹೇಳಿದರು.
ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಜೀವಹಾನಿಗೆ ರೂಬಿಯೊ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ದಕ್ಷಿಣ ಏಷ್ಯಾದಲ್ಲಿ "ಉದ್ವಿಗ್ನತೆಯನ್ನು ಕಡಿಮೆ ಮಾಡಲು" ಮತ್ತು ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿಕೊಳ್ಳಲು ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸುವಂತೆ ಭಾರತವನ್ನು ಕೇಳಿಕೊಂಡಿದ್ದಾರೆ. ಈ ಬಗ್ಗೆ ಅಮೆರಿಕದ ವಿದೇಶಾಂಗ ಇಲಾಖೆಯ ವಕ್ತಾರ ಟ್ಯಾಮಿ ಬ್ರೂಸ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ರೂಬಿಯೊ ಅವರು ಎಸ್ ಜೈಶಂಕರ್ ಅವರನ್ನು ಭೇಟಿಯಾದ ನಂತರ, ವಿದೇಶಾಂಗ ಸಚಿವರು ಎಕ್ಸ್ ಪೋಸ್ಟ್‌ನಲ್ಲಿ, " ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಗ್ಗೆ ಅಮೆರಿಕ ಕಾರ್ಯದರ್ಶಿ ರೂಬಿಯೊ ವೈ ಈಸ್ಟರ್‌ಡೇ ಅವರೊಂದಿಗೆ ಚರ್ಚಿಸಲಾಗಿದೆ ಎಂದು ಬರೆದುಕೊಂಡಿದ್ದಾರೆ.
ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಲಷ್ಕರ್-ಎ-ತೈಬಾ (ಎಲ್‌ಇಟಿ) ನ ಪ್ರತಿನಿಧಿ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ದಾಳಿಯ ಹೊಣೆಯನ್ನು ಹೊತ್ತುಕೊಂಡ ನಂತರ ಭಾರತ ಈ ದಾಳಿಗೆ ಪಾಕಿಸ್ತಾನವನ್ನು ದೂಷಿಸಿದೆ. ಆದರೆ ಪಾಕಿಸ್ತಾನ ತಮ್ಮ ಮೇಲಿನ ಆರೋಪವನ್ನು ತಳ್ಳಿ ಹಾಕಿದೆ. ಭಾರತದಲ್ಲಿನ ದಾಳಿಗೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಖಂಡಿಸಿದ್ದಾರೆ. ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡಲು ಅಮೆರಿಕ ಭಾರತದೊಂದಿಗೆ ನಿಲ್ಲಲಿದೆ ಎಂದು ಹೇಳಿಕೆಯನ್ನು ತಿಳಿಸಿದೆ.
ಈ ಸುದ್ದಿಯನ್ನೂ ಓದಿ: ಪಹಲ್ಗಾಮ್ ದಾಳಿಗೆ 4 ಮೊದಲೇ ಸ್ಥಳ ಪರಿಶೀಲಿಸಿದ್ದ ಉಗ್ರರು; ರೀಲ್ಸ್‌ನಲ್ಲಿ ಚಲನವಲನ ಸೆರೆ
ಭಾರತ ಪಾಕಿಸ್ತಾನದೊಂದಿಗೆ ಸಂಬಂಧವನ್ನು ಕೊನೆಗೊಳಿಸಿದೆ. ಈಗಾಗಲೇ ಭಾರತದಲ್ಲಿರುವ ಪಾಕಿಸ್ತಾನಿ ಪ್ರಜೆಗಳನ್ನು ಹೊರಹಾಕಲಾಗಿದೆ. ಸಿಂಧೂ ನದಿಯ ಒಪ್ಪಂದವನ್ನು ಭಾರತ ತಾತ್ಕಾಲಿಕವಾಗಿ ತಡೆ ಹಿಡಿದಿದೆ. ಈಗಾಗಲೇ ಉಭಯ ದೇಶಗಳು ಯುದ್ಧ ಸನ್ನದ್ಧವಾಗಿದ್ದು, ಗಡಿಯತ್ತ ಶಸ್ರ್ತಾಸ್ರ್ತಗಳ ಪೂರೈಕೆ ನಡೆದಿದೆ.