ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Sofiya Qureshi: ಉಗ್ರರ ಸಹೋದರಿ... ಸೋಫಿಯಾ ಖುರೇಷಿ ವಿರುದ್ಧ ನಾಲಿಗೆ ಹರಿಬಿಟ್ಟ ಸಚಿವ

Controversial statement on Sofiya Qureshi: ಆಪರೇಷನ್‌ ಸಿಂದೂರ್‌, ಪಹಲ್ಗಾಮ್‌ ದಾಳಿ ಬಗ್ಗೆ ಮಾತನಾಡುತ್ತಾ ಸಚಿವ ಕುನ್ವರ್ ವಿಜಯ್ ಶಾ ಸೋಫಿಯಾ ಖುರೇಷಿ ಬಗ್ಗೆ ಆಕ್ಷೇಪನಾರ್ಹ ಹೇಳಿಕೆ ನೀಡಿದ್ದಾರೆ. ಸೋಫಿಯಾ ಖುರೇಷಿಯನ್ನು ಭಯೋತ್ಪಾದಕ ಸಹೋದರಿ ಎಂದು ಕರೆಯುವ ಮೂಲಕ ಭಾರೀ ವಿವಾದಕ್ಕೀಡಾಗಿದ್ದಾರೆ. ಅವರ ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದ್ದು, ಪ್ರತಿಪಕ್ಷಗಳು ಕಿಡಿಕಾರಿವೆ.

ಉಗ್ರರ ಸಹೋದರಿ... ಸೋಫಿಯಾ ಖುರೇಷಿ ವಿರುದ್ಧ ನಾಲಿಗೆ ಹರಿಬಿಟ್ಟ ಸಚಿವ

Profile Rakshita Karkera May 14, 2025 9:02 AM

ಇಸ್ಲಮಾಬಾದ್‌: ಪಾಕಿಸ್ತಾನ ಮತ್ತು ಪಾಕ್‌ ಆಕ್ರಮಿ ಕಾಶ್ಮೀರದಲ್ಲಿ ಉಗ್ರ ನೆಲೆಯನ್ನು ಗುರಿಯಾಗಿಸಿ ಸೇನೆ ನಡೆಸಿದ ಆಪರೇಷನ್‌ ಸಿಂದೂರ್‌(Operation Sindoor) ಬಳಿಕ ಮಾಧ್ಯಮಗೋಷ್ಠಿಗಳಲ್ಲಿ ಪ್ರಮುಖವಾಗಿ ಕಾಣಿಸಿಕೊಂಡ ಕರ್ನಲ್ ಸೋಫಿಯಾ ಖುರೇಷಿ(Sofiya Qureshi) ಬಗ್ಗೆ ಮಧ್ಯಪ್ರದೇಶದ ಸಚಿವರೊಬ್ಬರು ನಾಲಿಗೆ ಹರಿಬಿಟ್ಟು ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಆಪರೇಷನ್‌ ಸಿಂದೂರ್‌, ಪಹಲ್ಗಾಮ್‌ ದಾಳಿ ಬಗ್ಗೆ ಮಾತನಾಡುತ್ತಾ ಸಚಿವ ಕುನ್ವರ್ ವಿಜಯ್ ಶಾ ಸೋಫಿಯಾ ಖುರೇಷಿ ಬಗ್ಗೆ ಆಕ್ಷೇಪನಾರ್ಹ ಹೇಳಿಕೆ ನೀಡಿದ್ದಾರೆ. ಸೋಫಿಯಾ ಖುರೇಷಿಯನ್ನು ಭಯೋತ್ಪಾದಕ ಸಹೋದರಿ ಎಂದು ಕರೆಯುವ ಮೂಲಕ ಭಾರೀ ವಿವಾದಕ್ಕೀಡಾಗಿದ್ದಾರೆ. ಅವರ ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದ್ದು, ಪ್ರತಿಪಕ್ಷಗಳು ಕಿಡಿಕಾರಿವೆ.

ಮಹೌನಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ವಿಜಯ್‌ ಶಾ, ಉಗ್ರರು ಭೀಕರ ದಾಳಿ ಮಾಡುವ ಮಾಡುವ ಮೂಲಕ ನಮ್ಮ ಹೆಣ್ಣು ಮಕ್ಕಳ ಕುಂಕುಮ ಅಳಿಸಿದ್ದರು. ನಾವು ಅವರ ಸಹೋದರಿಯನ್ನೇ ಪಾಠ ಕಲಿಸು ಕಳುಹಿಸಿದೆವು. ಅವರು ಹಿಂದೂಗಳನ್ನು ವಿವಸ್ತ್ರಗೊಳಿಸಿ ಕೊಂದರು. ಇದಕ್ಕೆ ಪ್ರತಿಯಾಗಿ ಮೋದಿ ಜಿ ಅವರ ಸಹೋದರಿಯನ್ನೇ ಕಳುಹಿಸಿದರು. ನಮ್ಮ ಸಮುದಾಯದ ಸಹೋದರಿಯರನ್ನು ವಿಧವೆಯರನ್ನಾಗಿ ಮಾಡಿದರೆ, ನಿಮ್ಮ ಸಮುದಾಯದ ಸಹೋದರಿ ನಿಮ್ಮನ್ನು ವಿವಸ್ತ್ರಗೊಳಿಸುತ್ತಾರೆ ಎಂಬ ಸಂದೇಶವನ್ನು ಕಳುಹಿಸಲು ಮೋದಿ ಉಗ್ರರ ಸಮುದಾಯದ ಸಹೋದರಿಯನ್ನೇ ಕಳುಹಿಸಿದ್ದಾರೆ. ಇನ್ನು ಈ ಕಾರ್ಯಕ್ರಮದಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸಾವಿತ್ರಿ ಠಾಕೂರ್ ಸೇರಿದಂತೆ ಹಲವಾರು ಪ್ರಮುಖ ಬಿಜೆಪಿ ನಾಯಕರು ವೇದಿಕೆಯಲ್ಲಿದ್ದರು ಎಂದು ವರದಿಗಳು ತಿಳಿಸಿವೆ.

ವಿಜಯ್‌ ಶಾ ವಿಡಿಯೊ ಇಲ್ಲಿದೆ



ಈ ಸುದ್ದಿಯನ್ನೂ ಓದಿ:Pahalgam Terror Attack: ಪಹಲ್ಗಾಮ್‌ ಉಗ್ರರ ದಾಳಿ ರೂವಾರಿ ಶಹೀದ್‌ ಕುಟ್ಟೆ ಎನ್‌ಕೌಂಟರ್‌

ಬಿಜೆಪಿ ನಾಯಕನ ಹೇಳಿಕೆಯನ್ನು ಕಾಂಗ್ರೆಸ್ ತೀವ್ರವಾಗಿ ಟೀಕಿಸಿದೆ. ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಇದನ್ನು ಭಾರತೀಯ ಸಶಸ್ತ್ರ ಪಡೆಗಳಿಗೆ ಮಾಡಿದ ಅವಮಾನ ಎಂದು ಕರೆದಿದ್ದಾರೆ ಮತ್ತು ಶಾ ಅವರನ್ನು ತಕ್ಷಣ ಜಾರಿಗೆ ಬರುವಂತೆ ವಜಾಗೊಳಿಸಬೇಕೆಂದು ಆಗ್ರಹಿಸಿದರು. ಮಧ್ಯಪ್ರದೇಶದ ಬಿಜೆಪಿ ಸರ್ಕಾರದ ಸಚಿವರೊಬ್ಬರು ನಮ್ಮ ಧೈರ್ಯಶಾಲಿ ಮಗಳು ಕರ್ನಲ್ ಸೋಫಿಯಾ ಖುರೇಷಿ ಬಗ್ಗೆ ಅತ್ಯಂತ ಅವಮಾನಕರ, ನಾಚಿಕೆಗೇಡಿನ ಮತ್ತು ಅಸಭ್ಯ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಖರ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.



ಮಧ್ಯಪ್ರದೇಶದ ವಿರೋಧ ಪಕ್ಷದ ನಾಯಕ ಉಮಾಂಗ್ ಸಿಂಘರ್ ಎಕ್ಸ್‌ನಲ್ಲಿ ಪೋಸ್ಟ್‌ವೊಂದು ಮಾಡಿದ್ದು, ಸೇನಾ ಅಧಿಕಾರಿಗಳಿಗೆ ಯಾವುದೇ ಧರ್ಮವಿಲ್ಲ ಮತ್ತು ಅವರನ್ನು ಹಿಂದೂ ಅಥವಾ ಮುಸ್ಲಿಂ ಎಂದು ಗುರುತಿಸಲಾಗಿಲ್ಲ ಎಂದು ಹೇಳಿದರು. ಸೇನಾ ಅಧಿಕಾರಿಯ ಬಗ್ಗೆ ಸಚಿವ ವಿಜಯ್ ಶಾ ಅವರ ಹೇಳಿಕೆ ನಾಚಿಕೆಗೇಡಿನ ಸಂಗತಿ ಮಾತ್ರವಲ್ಲದೆ, ಸೇನೆ ಮತ್ತು ಮಹಿಳೆಯರಿಗೆ ಮಾಡಿದ ಅವಮಾನ. ಅದು ಸೇನಾ ಅಧಿಕಾರಿಯಾಗಿರಲಿ ಅಥವಾ ಸೈನಿಕನಾಗಿರಲಿ, ಅವರಿಗೆ ಯಾವುದೇ ಧರ್ಮವಿಲ್ಲ, ಅವರನ್ನು ಹಿಂದೂ ಅಥವಾ ಮುಸ್ಲಿಂ ಎಂದು ಪರಿಗಣಿಸಲಾಗುವುದಿಲ್ಲ. ದೇಶವೊಂದೇ ಅವರ ಧರ್ಮ ಎಂದು ಅವರು ಕಿಡಿ ಕಾರಿದರು.