ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bomb Threat: ನಾಗ್ಪುರ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ; ತೀವ್ರಗೊಂಡ ಶೋಧ ಕಾರ್ಯ

ನಾಗ್ಪುರ ವಿಮಾನ ನಿಲ್ದಾಣಕ್ಕೆ ಮಂಗಳವಾರ, ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಭದ್ರತಾ ಸಂಸ್ಥೆಗಳು ಬೃಹತ್ ಶೋಧ ಕಾರ್ಯಾಚರಣೆಯನ್ನು ಆರಂಭಿಸಿವೆ. ಇಂದು ಬೆಳಿಗ್ಗೆ 7:30 ರ ಸುಮಾರಿಗೆ ಬೆದರಿಕೆ ಹಾಕಲಾಗಿದೆ. ಐಇಡಿ (ಬಾಂಬ್) ಸಿಗರೇಟ್ ಪ್ಯಾಕೆಟ್ ಒಳಗೆ ಇರಿಸಲಾಗಿದ್ದು, ಯಾವುದೇ ಸಮಯದಲ್ಲಿ ಸ್ಫೋಟಗೊಳ್ಳಬಹುದು" ಎಂದು ಸಂದೇಶದಲ್ಲಿ ಹೇಳಲಾಗಿದೆ.

ನಾಗ್ಪುರ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

Profile Vishakha Bhat Jul 22, 2025 3:02 PM

ಮುಂಬೈ: ನಾಗ್ಪುರ ವಿಮಾನ ನಿಲ್ದಾಣಕ್ಕೆ ಮಂಗಳವಾರ, ಇಮೇಲ್ ಮೂಲಕ ಬಾಂಬ್ ಬೆದರಿಕೆ (Bomb Threat) ಬಂದಿದ್ದು, ಭದ್ರತಾ ಸಂಸ್ಥೆಗಳು ಬೃಹತ್ ಶೋಧ ಕಾರ್ಯಾಚರಣೆಯನ್ನು ಆರಂಭಿಸಿವೆ. ಇಂದು ಬೆಳಿಗ್ಗೆ 7:30 ರ ಸುಮಾರಿಗೆ ಬೆದರಿಕೆ ಹಾಕಲಾಗಿದೆ. ಐಇಡಿ (ಬಾಂಬ್) ಸಿಗರೇಟ್ ಪ್ಯಾಕೆಟ್ ಒಳಗೆ ಇರಿಸಲಾಗಿದ್ದು, ಯಾವುದೇ ಸಮಯದಲ್ಲಿ ಸ್ಫೋಟಗೊಳ್ಳಬಹುದು" ಎಂದು ಸಂದೇಶದಲ್ಲಿ ಹೇಳಲಾಗಿದೆ. ಇಡೀ ವಿಮಾನ ನಿಲ್ದಾಣವನ್ನು ಅಧಿಕಾರಿಗಳು ತಪಾಸಣೆಗೆ ಒಳಪಡಿಸಿದ್ದಾರೆ. ಇಮೇಲ್ ಸ್ವೀಕರಿಸಿದ ನಂತರ, ವಿಮಾನ ನಿಲ್ದಾಣ ಆಡಳಿತವು ಸೋಂಗಾವ್ ಪೊಲೀಸ್ ಠಾಣೆಗೆ ಮಾಹಿತಿ ನೀಡಿದೆ.

ಪೊಲೀಸರು, ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಮತ್ತು ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ವಿಮಾನ ನಿಲ್ದಾಣದಾದ್ಯಂತ ಸಂಪೂರ್ಣ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಇಲ್ಲಿಯವರೆಗೆ, ಯಾವುದೇ ಅನುಮಾನಾಸ್ಪದ ವಸ್ತು ಕಂಡುಬಂದಿಲ್ಲ. ತನಿಖೆ ಮುಂದುವರಿಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದಕ್ಕೂ ಮೊದಲು, ಜೂನ್ 25 ಮತ್ತು 26 ರಂದು ನಾಗ್ಪುರ ವಿಮಾನ ನಿಲ್ದಾಣಕ್ಕೆ ಎರಡು ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದವು.

ಗಿರ್ಗಾಂವ್‌ನ ಇಸ್ಕಾನ್ ದೇವಾಲಯಕ್ಕೆ ಬಾಂಬ್ ಬೆದರಿಕೆ

ಜುಲೈ 21 ರಂದು ಮುಂಬೈನ ಗಿರ್ಗಾಂವ್ ಪ್ರದೇಶದಲ್ಲಿರುವ ಇಸ್ಕಾನ್ ದೇವಾಲಯಕ್ಕೆ ಬಾಂಬ್ ಬೆದರಿಕೆ ಪತ್ರ ಕಳುಹಿಸಲಾಗಿತ್ತು, 16 ಗಂಟೆಗಳ ಒಳಗೆ ಕೆಲವು ಬೇಡಿಕೆಗಳನ್ನು ಈಡೇರಿಸದಿದ್ದರೆ ಐದು ಆರ್‌ಡಿಎಕ್ಸ್ ಬಾಂಬ್‌ಗಳನ್ನು ಬಳಸಿ ಆವರಣವನ್ನು ಸ್ಫೋಟಿಸಲಾಗುವುದು ಎಂದು ದುಷ್ಕೆರ್ಮಿಗಳು ಬೆದರಿಕೆ ಹಾಕಿದ್ದರು. ಇಮ್ಮಾನುಯೆಲ್_ಸೇಕರನ್" ಎಂಬ ಐಡಿಯಿಂದ ಈ ಬೆದರಿಕೆ ಇಮೇಲ್ ಕಳುಹಿಸಲಾಗಿದೆ. ಈ ಇಮೇಲ್‌ನಲ್ಲಿ, ತಮಿಳುನಾಡು ಮೂಲದ ಪೊಲೀಸ್ ಸಂಘಟನೆಯ ನಾಯಕ ದಿವಂಗತ ನೈನಾರ್ ದಾಸ್ ಅವರ ಶಿಫಾರಸುಗಳನ್ನು ತಮಿಳುನಾಡಿನ ಡಿಎಂಕೆ ಸರ್ಕಾರ ಜಾರಿಗೆ ತರಬೇಕೆಂದು ಕಳುಹಿಸುವವರು ಒತ್ತಾಯಿಸಿದ್ದಾರೆ ಎಂದು ವರದಿಯಾಗಿದೆ. ಹಾಗೆ ಮಾಡಲು ವಿಫಲವಾದರೆ, ದೇವಾಲಯವನ್ನು ಗುರಿಯಾಗಿಸಿಕೊಂಡು ಸ್ಫೋಟ ನಡೆಯಲಿದೆ ಎಂದು ಇಮೇಲ್ ಎಚ್ಚರಿಸಿತ್ತು.

ಈ ಸುದ್ದಿಯನ್ನೂ ಓದಿ: Bomb Threat: ಬೆಂಗಳೂರಿನ ಮತ್ತೊಂದು ಶಾಲೆಗೆ ಬಾಂಬ್‌ ಬೆದರಿಕೆ, ತೀವ್ರ ಪರಿಶೀಲನೆ

ಶಾಲೆಗೆ ಬಾಂಬ್‌ ಬೆದರಿಕೆ

ಬೆಂಗಳೂರಿನ (Bengaluru) ಪ್ರಮುಖ 40 ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ (Bomb Threat) ಬೆದರಿಕೆಯೊಡ್ಡಲಾಗಿತ್ತು. ಬೆಂಗಳೂರು ನಗರದ ಆರ್ ಆರ್ ನಗರ, ಕೆಂಗೇರಿ ಸೇರಿದಂತೆ ಒಟ್ಟು 40 ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ವಿಷಯ ತಿಳಿದ ತಕ್ಷಣ ಎಲ್ಲ ಶಾಲೆಗಳಿಗೆ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಅದೇ ರೀತಿಯಾಗಿ ದೆಹಲಿಯ ಒಟ್ಟು 10 ಶಾಲೆಗಳಲ್ಲಿ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದೆ.