ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಉತ್ತರ ಪ್ರದೇಶ ಮತದಾರರ ಪಟ್ಟಿಯಿಂದ 1.27 ಕೋಟಿ ಹಿಂದೂಗಳ ಹೆಸರು ನಾಪತ್ತೆ! ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶದ ಮತದಾರರ ಪಟ್ಟಿಯಿಂದ ಸುಮಾರು 1.27 ಕೋಟಿ ಹಿಂದೂ ಮತದಾರರ ಹೆಸರುಗಳು ನಾಪತ್ತೆಯಾಗಿವೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶನಿವಾರ ಗಂಭೀರ ಆರೋಪ ಮಾಡಿದ್ದಾರೆ. ಉತ್ತರ ಪ್ರದೇಶದ ಒಟ್ಟು ಜನಸಂಖ್ಯೆಯ ಅನುಪಾತಕ್ಕೆ ಹೋಲಿಸಿದರೆ ರಾಜ್ಯದಲ್ಲಿ ಕನಿಷ್ಠ 16 ಕೋಟಿ ಮತದಾರರು ಇರಬೇಕಿತ್ತು. ಆದರೆ ಪ್ರಸ್ತುತ ಮತದಾರರ ಪಟ್ಟಿಯಲ್ಲಿ ಕೇವಲ 13 ಕೋಟಿ ಮತದಾರರಿದ್ದಾರೆ ಎಂದು ತಿಳಿದು ಬಂದಿದೆ.

ಉತ್ತರ ಪ್ರದೇಶ ಮತದಾರರ ಪಟ್ಟಿಯಿಂದ 1.27 ಕೋಟಿ ಹಿಂದೂಗಳ ಹೆಸರು ನಾಪತ್ತೆ!

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Oct 31, 2026 4:21 PM

ಲಖನೌ: ಉತ್ತರ ಪ್ರದೇಶದ (Uttar Pradesh) ಮತದಾರರ ಪಟ್ಟಿಯಿಂದ ಸುಮಾರು 1.27 ಕೋಟಿ ಹಿಂದೂ ಮತದಾರರ ಹೆಸರುಗಳು ನಾಪತ್ತೆಯಾಗಿವೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಶನಿವಾರ ಗಂಭೀರ ಆರೋಪ ಮಾಡಿದ್ದಾರೆ. ಶುಕ್ರವಾರ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಬಗ್ಗೆ ಜಾಗರೂಕರಾಗಿರಬೇಕೆಂದು ಅವರು ಒತ್ತಾಯಿಸಿದರು.

ಉತ್ತರ ಪ್ರದೇಶದ ಒಟ್ಟು ಜನಸಂಖ್ಯೆಯ ಅನುಪಾತಕ್ಕೆ ಹೋಲಿಸಿದರೆ ರಾಜ್ಯದಲ್ಲಿ ಕನಿಷ್ಠ 16 ಕೋಟಿ ಮತದಾರರು ಇರಬೇಕಿತ್ತು. ಆದರೆ ಪ್ರಸ್ತುತ ಮತದಾರರ ಪಟ್ಟಿಯಲ್ಲಿ ಕೇವಲ 13 ಕೋಟಿ ಮತದಾರರಿದ್ದಾರೆ. ಆ ಮೂಲಕ ಸುಮಾರು 1.27 ಕೋಟಿ ಹಿಂದೂ ಮತದಾರರ ಹೆಸರುಗಳು ಪಟ್ಟಿಯಲ್ಲಿ ಸೇರ್ಪಡೆಯಾಗದೆ ಹೊರಗುಳಿದಿವೆ ಎಂದು ಸಿಎಂ ಯೋಗಿ ಆದಿತ್ಯನಾಥ್ ಪ್ರತಿಪಾದಿಸಿದ್ದಾರೆ.

ಪಂಚಾಯತ್ ಚುನಾವಣೆಯ ಮತದಾರರ ಪಟ್ಟಿಯಲ್ಲಿ ಹೆಸರಿದ್ದರೂ, ರಾಜ್ಯದ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಿಂದ ಸುಮಾರು 66 ಲಕ್ಷ ಜನರ ಹೆಸರುಗಳು ನಾಪತ್ತೆಯಾಗಿವೆ ಎಂದು ಅವರು ಆರೋಪಿಸಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಕಲ್ಯಾಣ ಯೋಜನೆಗಳ ನೇರ ಲಾಭ ಪಡೆಯುತ್ತಿರುವ ಸುಮಾರು 55 ಲಕ್ಷ ಅರ್ಹ ಫಲಾನುಭವಿಗಳ ಹೆಸರುಗಳು ಮತದಾರರ ಪಟ್ಟಿಯಲ್ಲೇ ಇಲ್ಲದಿರುವುದು ಬೆಳಕಿಗೆ ಬಂದಿದೆ.

ಉತ್ತರ ಪ್ರದೇಶದ ಚುನಾವಣೆಯಲ್ಲಿ Gen Z ಗಳೇ ಕಿಂಗ್‌ ಮೇಕರ್ಸ್‌? ಮತದಾರರ ಒಲವು ಯಾರತ್ತ, ಸಮೀಕ್ಷೆ ಹೇಳೋದೇನು?

ಮತದಾರರ ಕೊರತೆಯು ಮುಂಬರುವ ಚುನಾವಣೆಗಳಲ್ಲಿ, ಪ್ರಮುಖವಾಗಿ ನಗರಾಡಳಿತ ಸಂಸ್ಥೆಗಳ 28 ಕ್ಷೇತ್ರಗಳಲ್ಲಿ ಪಕ್ಷದ ಮೇಲೆ ಪರಿಣಾಮ ಬೀರಬಹುದು ಎಂದು ಎಚ್ಚರಿಸಿದ ಸಿಎಂ ರಾಜ್ಯದ ಪ್ರತಿಯೊಬ್ಬ ಸಂಸದರು, ಶಾಸಕರು ಮತ್ತು ಪಕ್ಷದ ಪದಾಧಿಕಾರಿಗಳು ಬೂತ್ ಮಟ್ಟದ ಅಧಿಕಾರಿಗಳೊಂದಿಗೆ (BLO) ಸಮನ್ವಯ ಸಾಧಿಸಬೇಕು. ಪ್ರತಿಯೊಂದು ಬೂತ್ ಮಟ್ಟದಲ್ಲಿ ತೀವ್ರ ಅಭಿಯಾನವನ್ನು ನಡೆಸಿ, ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರಿಸುವ ಜವಾಬ್ದಾರಿಯನ್ನು ಹೊರಬೇಕು ಎಂದು ಕಾರ್ಯಕರ್ತರಿಗೆ ತಿಳಿಸಿದ್ದಾರೆ.