ಫೋಟೋ ಗ್ಯಾಲರಿ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Rahul Gandhi: ನ್ಯಾಷನಲ್ ಹೆರಾಲ್ಡ್ ಪ್ರಕರಣ; ರಾಹುಲ್, ಸೋನಿಯಾ ಗಾಂಧಿಗೆ ದೆಹಲಿ ಕೋರ್ಟ್ ನೋಟಿಸ್

ನ್ಯಾಷನಲ್ ಹೆರಾಲ್ಡ್ ಹಣ ವರ್ಗಾವಣೆ (National Herald Case) ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ ತನಿಖೆಯ ನಂತರ ದೆಹಲಿ ನ್ಯಾಯಾಲಯವು ಶುಕ್ರವಾರ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಔಪಚಾರಿಕ ನೋಟಿಸ್ ಜಾರಿ ಮಾಡಿದೆ.

ರಾಹುಲ್, ಸೋನಿಯಾ ಗಾಂಧಿಗೆ  ನೋಟಿಸ್ ನೀಡಿದ ದೆಹಲಿ ಕೋರ್ಟ್

Profile Vishakha Bhat May 2, 2025 4:14 PM

ನವದೆಹಲಿ: ನ್ಯಾಷನಲ್ ಹೆರಾಲ್ಡ್ (National Herald Case) ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ ತನಿಖೆಯ ನಂತರ ದೆಹಲಿ ನ್ಯಾಯಾಲಯವು ಶುಕ್ರವಾರ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ (Sonia gandhi) ಮತ್ತು ರಾಹುಲ್ ಗಾಂಧಿ (Rahul Gandhi) ಅವರಿಗೆ ಔಪಚಾರಿಕ ನೋಟಿಸ್ ಜಾರಿ ಮಾಡಿದೆ. ವಿಶೇಷ ನ್ಯಾಯಾಧೀಶ (ಪಿಸಿ ಕಾಯ್ದೆ) ವಿಶಾಲ್ ಗೋಗ್ನೆ ಅವರು ಸ್ಯಾಮ್ ಪಿತ್ರೋಡಾ, ಸುಮನ್ ದುಬೆ, ಸುನಿಲ್ ಭಂಡಾರಿ, ಮೆಸರ್ಸ್ ಯಂಗ್ ಇಂಡಿಯಾ ಮತ್ತು ಮೆಸರ್ಸ್ ಡೋಟೆಕ್ಸ್ ಮರ್ಚಂಡೈಸ್ ಪ್ರೈವೇಟ್ ಲಿಮಿಟೆಡ್ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಮೇ 8 ಕ್ಕೆ ನಿಗದಿಪಡಿಸಲಾಗಿದೆ.

ಏ. 12 ರಂದು ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ವಿರುದ್ಧದ ಹಣ ವರ್ಗಾವಣೆ ಪ್ರಕರಣದ ತನಿಖೆಯಲ್ಲಿ ಮುಟ್ಟುಗೋಲು ಹಾಕಿಕೊಂಡಿದ್ದ 661 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಜಾರಿ ನಿರ್ದೇಶನಾಲಯ ಶುಕ್ರವಾರ ನೋಟೀಸ್‌ ಜಾರಿ ಮಾಡಲಾಗಿತ್ತು. ಏಪ್ರಿಲ್ 11 ರಂದು, ಕೇಂದ್ರ ತನಿಖಾ ಸಂಸ್ಥೆ ದೆಹಲಿ, ಮುಂಬೈ ಮತ್ತು ಲಕ್ನೋದಲ್ಲಿನ ಆಸ್ತಿ ನೋಂದಣಿ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದೆ. ಅಲ್ಲಿ ಸೋನಿಯಾ ಮತ್ತು ರಾಹುಲ್ ಗಾಂಧಿ ಅವರ ಲಾಭದಾಯಕ ಒಡೆತನದ ಕಂಪನಿಯಾದ ಯಂಗ್ ಇಂಡಿಯನ್ ಸ್ವಾಧೀನಪಡಿಸಿಕೊಂಡಿರುವ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (AJL) ನ ಆಸ್ತಿಗಳಿವೆ.

ಈ ಸುದ್ದಿಯನ್ನೂ ಓದಿ: Caste Census: ಜಾತಿ ಗಣತಿ ನಿರ್ಧಾರ ಸ್ವಾಗತಿಸಿದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ; ಕೇಂದ್ರಕ್ಕೆ ಬೆಂಬಲ ನೀಡುವುದಾಗಿ ಘೋಷಣೆ

ಏನಿದು ಪ್ರಕರಣ?

2021ರಲ್ಲಿ ಪ್ರಾರಂಭವಾದ ಇಡಿ ತನಿಖೆಯು ಸುಬ್ರಮಣಿಯನ್ ಸ್ವಾಮಿ ಅವರು 2014ರಲ್ಲಿ ದೆಹಲಿ ನ್ಯಾಯಾಲಯದಲ್ಲಿ ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ಅವರ ಮೇಲೆ ದೂರು ಸಲ್ಲಿಸಿದ್ದರು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಇತರ ಹಿರಿಯ ಕಾಂಗ್ರೆಸ್ ನಾಯಕರು ಯಂಗ್ ಇಂಡಿಯನ್ ಮೂಲಕ 50 ಲಕ್ಷ ರೂ. ನಾಮಮಾತ್ರ ಮೊತ್ತಕ್ಕೆ ಎಜೆಎಲ್‌ನ 2,000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆಸ್ತಿಗಳನ್ನು ವಂಚನೆಯಿಂದ ಸ್ವಾಧೀನಪಡಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು. ಜಾರಿ ನಿರ್ದೇಶನಾಲಯದ ಪ್ರಕಾರ, ಎಜೆಎಲ್-ಯಂಗ್ ಇಂಡಿಯನ್ ನೆಟ್‌ವರ್ಕ್ ಅನ್ನು ನಕಲಿ ದೇಣಿಗೆಗಳ ಮೂಲಕ 18 ಕೋಟಿ ರೂ.ಗಳ ಅಕ್ರಮ ಹಣವನ್ನು, 38 ಕೋಟಿ ರೂ.ಗಳ ಮುಂಗಡ ಬಾಡಿಗೆ ಮತ್ತು ಜಾಹೀರಾತುಗಳ ಮೂಲಕ 29 ರೂ.ಗಳ ಅಕ್ರಮ ಹಣವನ್ನು ಸಂಗ್ರಹಿಸಲು ಬಳಸಲಾಗಿದೆ ಎಂದು ಆರೋಪಿಸಲಾಗಿದೆ.