ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

NEP Row: ಎನ್‌ಇಪಿ ವಿವಾದ; ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ

ಕೇಂದ್ರ ಸರ್ಕಾರ ಹಾಗೂ ತಮಿಳು ನಾಡು ಸರ್ಕಾರದ ನಡುವೆ ಇರುವ ಜಟಾಪಟಿ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ.‌ ತಮಿಳುನಾಡು (Tamilnadu) ಸರ್ಕಾರವು ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ರಾಷ್ಟ್ರೀಯ ಶಿಕ್ಷಣ ನೀತಿ (NEP) 2020 ಅನ್ನು ಜಾರಿಗೊಳಿಸುವುದಿಲ್ಲ ಎಂದು ಹೇಳಿದ ಮೇಲೆ ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಬೇಕಾದ ಹಣವನ್ನು ತಡೆಹಿಡಿದಿದೆ ಎಂದು ಆರೋಪಿಸಲಾಗಿದೆ.

ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ!

Profile Vishakha Bhat May 21, 2025 1:14 PM

ನವದೆಹಲಿ: ಕೇಂದ್ರ ಸರ್ಕಾರ ಹಾಗೂ ತಮಿಳು ನಾಡು ಸರ್ಕಾರದ ನಡುವೆ ಇರುವ ಜಟಾಪಟಿ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ.‌ ತಮಿಳುನಾಡು (Tamilnadu) ಸರ್ಕಾರವು ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ರಾಷ್ಟ್ರೀಯ ಶಿಕ್ಷಣ ನೀತಿ (NEP) 2020 ಅನ್ನು ಜಾರಿಗೊಳಿಸುವುದಿಲ್ಲ ಎಂದು ಹೇಳಿದ ಮೇಲೆ ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಬೇಕಾದ ಹಣವನ್ನು ತಡೆಹಿಡಿದಿದೆ ಎಂದು ಆರೋಪಿಸಿ ಸರ್ಕಾರ ಸುಪ್ರೀಂ ಕೋರ್ಟ್‌ (Suprime court) ಮೆಟ್ಟಿಲೇರಿದೆ.

ಸಮಗ್ರ ಶಿಕ್ಷಣ ಯೋಜನೆಯಡಿ ತಮಿಳುನಾಡಿಗೆ ನೀಡಬೇಕಾದ 2000 ಕೋಟಿಗೂ ಅಧಿಕ ಮೊತ್ತವನ್ನು ಬಿಡುಗಡೆ ಮಾಡಬೇಕಾಗಿ ತಮಿಳುನಾಡು ರಾಜ್ಯ ಸರ್ಕಾರ ಮನವಿ ಮಾಡಿದ್ದು, ಈ ಮೊತ್ತವನ್ನು ವಾರ್ಷಿಕ 6% ಬಡ್ಡಿಯೊಂದಿಗೆ ವಾಪಸ್ ಪಡೆಯುವಂತೆ ಕೋರ್ಟ್‌ಗೆ ಮನವಿ ಸಲ್ಲಿಸಲಾಗಿದೆ. ಸಮಗ್ರ ಶಿಕ್ಷಾ ಯೋಜನೆಯಡಿಯಲ್ಲಿ ಎನ್ಇಪಿ ಜಾರಿಗೆ ತಂದಿದ್ದ ಹಣವನ್ನು ತಡೆಹಿಡಿದ ಕೇಂದ್ರ ಸರ್ಕಾರದ ಕ್ರಮವನ್ನು "ಅಸಂವಿಧಾನಿಕ, ಕಾನೂನುಬಾಹಿರ, ಅನಿಯಂತ್ರಿತ ಮತ್ತು ಅಸಮಂಜಸ" ಎಂದು ಘೋಷಿಸುವಂತೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಅನ್ನು ಕೋರಿದೆ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರವು ರಾಷ್ಟ್ರೀಯ ಶಿಕ್ಷಣ ನೀತಿ 2020 ಹಾಗೂ ಪ್ರಧಾನಮಂತ್ರಿ ಶ್ರೀ ಶಾಲಾ ಯೋಜನೆ ತಮಿಳುನಾಡಿನಲ್ಲಿ ಜಾರಿಗೆ ತರುವುದಿಲ್ಲ ಎಂದು ತಿಳಿಸಿತ್ತು. ಅಷ್ಟೇ ಅಲ್ಲದೆ, ಶಿಕ್ಷಣ ಹಕ್ಕು ಕಾಯಿದೆ 2010ರ ಅಡಿಯಲ್ಲಿ ಕೇಂದ್ರ ಸರ್ಕಾರ ನೀಡಬೇಕಾದ ಅನುದಾನಗಳನ್ನು ಪ್ರತಿ ಶೈಕ್ಷಣಿಕ ವರ್ಷದ ಆರಂಭದೊಳಗೆ, ನಿಗದಿತ ಸಮಯಕ್ಕೆ ನೀಡಬೇಕಾಗಿ ಕೋರ್ಟ್‌ಗೆ ಮನವಿ ಮಾಡಲಾಗಿದೆ. ರಾಜ್ಯಕ್ಕೆ ನಿಧಿ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ಸಿಎಂ ಎಂ.ಕೆ. ಸ್ಟ್ಯಾಲಿನ್ ಈ ಹಿಂದೆ ಘೋಷಿಸಿದ್ದರು.

ತಮಿಳುನಾಡು ಸರ್ಕಾರವು ರಾಷ್ಟ್ರೀಯ ಶಿಕ್ಷಣ ನೀತಿಯ ಮೂಲಕ ಹಿಂದಿ ಹೇರಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದು, ಮೂರು ಭಾಷಾ ಸೂತ್ರವನ್ನು ವಿರೋಧಿಸಿ ಆಕ್ರೋಶ ವ್ಯಕ್ತಪಡಿಸಲಾಗಿದೆ ಎನ್ನಲಾಗಿದೆ. ಈಗಾಗಲೇ, ತಮಿಳುನಾಡು, ಕೇರಳ ಮತ್ತು ಪಶ್ಚಿಮ ಬಂಗಾಳದಲ್ಲಿ ಮೂರು ಭಾಷಾ ಸೂತ್ರವನ್ನು ಜಾರಿಗೊಳಿಸಲು ಕೇಳಿದ್ದ ಸಾರ್ವಜನಿಕರ ಅರ್ಜಿಯನ್ನು ಸುಪ್ರೀಂ ಕೋರ್ಟ್ ಖಂಡಿಸಿ ವಜಾ ಮಾಡಿತ್ತು.ನ್ಯಾಯಮೂರ್ತಿ ಜೆ.ಬಿ. ಪಾರ್ದಿವಾಲಾ ನೇತೃತ್ವದ ಪೀಠವು ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ನಿರಾಕರಿಸಿತು. ರಾಷ್ಟ್ರೀಯ ಶಿಕ್ಷಣ ನೀತಿ 2020 ರಂತಹ ನೀತಿಯನ್ನು ಅಳವಡಿಸಿಕೊಳ್ಳುವಂತೆ ನ್ಯಾಯಾಲಯವು ನೇರವಾಗಿ ರಾಜ್ಯವನ್ನು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ.

ಈ ಸುದ್ದಿಯನ್ನೂ ಓದಿ: K Annamalai: ತಮಿಳುನಾಡಿನಲ್ಲಿ ಡಿಎಂಕೆ ಸರ್ಕಾರ ಕಿತ್ತೊಗೆಯುವ ತನಕ ಚಪ್ಪಲಿ ಧರಿಸಲ್ಲ; ಬಿಜೆಪಿ ನಾಯಕ ಅಣ್ಣಾಮಲೈ ಪ್ರತಿಜ್ಞೆ

ನ್ಯಾಯಾಲಯವು (ನ್ಯಾಯಾಲಯ) ರಾಷ್ಟ್ರೀಯ ಶಿಕ್ಷಣ ನೀತಿ 2020 ರಂತಹ ನೀತಿಯನ್ನು ಅಳವಡಿಸಿಕೊಳ್ಳಲು ರಾಜ್ಯವನ್ನು ನೇರವಾಗಿ ಒತ್ತಾಯಿಸಲು ಸಾಧ್ಯವಿಲ್ಲ. ಆದಾಗ್ಯೂ, ರಾಷ್ಟ್ರೀಯ ಶಿಕ್ಷಣ ನೀತಿಗೆ ಸಂಬಂಧಿಸಿದ ರಾಜ್ಯದ ಕ್ರಮ ಅಥವಾ ನಿಷ್ಕ್ರಿಯತೆಯು ಯಾವುದೇ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿದರೆ ನ್ಯಾಯಾಲಯವು ಮಧ್ಯಪ್ರವೇಶಿಸಬಹುದು. ಈ ರಿಟ್ ಅರ್ಜಿಯಲ್ಲಿ ಈ ವಿಷಯವನ್ನು ಪರಿಶೀಲಿಸಲು ನಾವು ಪ್ರಸ್ತಾಪಿಸುವುದಿಲ್ಲ. ಅರ್ಜಿದಾರರು ತಾವು ಪ್ರತಿಪಾದಿಸಲು ಪ್ರಸ್ತಾಪಿಸಿರುವ ಕಾರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದರು.