ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Narendra Modi: ಮೋದಿಯ ಒಂದೇ ಒಂದು ಕರೆ ಭದ್ರತಾ ಸಂಪುಟ ಸಭೆಯನ್ನೇ ಬಿಟ್ಟು ಬಂದ ಇಸ್ರೇಲ್ ಪ್ರಧಾನಿ

ಗಾಜಾದಲ್ಲಿ ಶಾಂತಿ ಸ್ಥಾಪನೆಗೆ ಒಪ್ಪಿಗೆ ಸೂಚಿಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹುಗೆ ಕರೆ ಮಾಡಿ ಅಭಿನಂದನೆ ತಿಳಿಸಿದರು. "ಎಲ್ಲಾ ಒತ್ತೆಯಾಳುಗಳ ಬಿಡುಗಡೆಗೆ ಮಾಡಿಕೊಂಡ ಒಪ್ಪಂದಕ್ಕೆ ಪ್ರಧಾನಿ ಮೋದಿ ಅವರು ಪ್ರಧಾನಿ ನೆತನ್ಯಾಹು ಅವರನ್ನು ಅಭಿನಂದಿಸಿದ್ದಾರೆ"

ನೆತನ್ಯಾಹುಗೆ ಮೋದಿ ಕರೆ; ಸಂಪುಟ ಸಭೆಯನ್ನೇ ಬಿಟ್ಟು ಬಂದ ಇಸ್ರೇಲ್ ಪ್ರಧಾನಿ

-

Vishakha Bhat Vishakha Bhat Oct 10, 2025 11:34 AM

ಟೆಲ್‌ ಅವೀವ್‌: ಗಾಜಾದಲ್ಲಿ ಶಾಂತಿ ಸ್ಥಾಪನೆಗೆ ಒಪ್ಪಿಗೆ ಸೂಚಿಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹುಗೆ (Netanyahu) ಕರೆ ಮಾಡಿ ಅಭಿನಂದನೆ ತಿಳಿಸಿದರು. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಇದೇ ವಿಷಯದ ಬಗ್ಗೆ ಮಾತನಾಡಿ, ಗಾಜಾ ಯುದ್ಧವನ್ನು ಕೊನೆಗೊಳಿಸಲು ಅವರ ಉದ್ದೇಶಿತ ಗಾಜಾ ಶಾಂತಿ ಯೋಜನೆಗೆ ಅಭಿನಂದನೆ ಸಲ್ಲಿಸಿದ ನಂತರ ಪ್ರಧಾನಿ ಮೋದಿ ಮತ್ತು ನೆತನ್ಯಾಹು ನಡುವಿನ ಈ ಸಂಭಾಷಣೆ ನಡೆದಿದೆ. ಗಾಜಾ ಶಾಂತಿ ಯೋಜನೆಯಡಿ ಕದನ ವಿರಾಮ ಮತ್ತು ಒತ್ತೆಯಾಳು ಬಿಡುಗಡೆ ಒಪ್ಪಂದದ ಕುರಿತು ಚರ್ಚಿಸುತ್ತಿದ್ದ ಭದ್ರತಾ ಸಂಪುಟ ಸಭೆಯನ್ನು ಸ್ಥಗಿತಗೊಳಿಸುವ ಮೂಲಕ ಇಸ್ರೇಲ್ ಪ್ರಧಾನಿ ನೆತನ್ಯಾಹು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದರು ಎಂದು ತಿಳಿದು ಬಂದಿದೆ.

"ಎಲ್ಲಾ ಒತ್ತೆಯಾಳುಗಳ ಬಿಡುಗಡೆಗೆ ಮಾಡಿಕೊಂಡ ಒಪ್ಪಂದಕ್ಕೆ ಪ್ರಧಾನಿ ಮೋದಿ ಅವರು ಪ್ರಧಾನಿ ನೆತನ್ಯಾಹು ಅವರನ್ನು ಅಭಿನಂದಿಸಿದ್ದಾರೆ" ಎಂದು ನೆತನ್ಯಾಹು ಅವರ ಕಚೇರಿಯ ಹೇಳಿಕೆ ತಿಳಿಸಿದೆ. ನಂತರ, ಪ್ರಧಾನಿ ಮೋದಿ ಅವರು X ನಲ್ಲಿ ಪೋಸ್ಟ್ ಮಾಡಿದ್ದು, "ಅಧ್ಯಕ್ಷ ಟ್ರಂಪ್ ಅವರ ಗಾಜಾ ಶಾಂತಿ ಯೋಜನೆಯಡಿಯಲ್ಲಿ ಆಗಿರುವ ಪ್ರಗತಿಗೆ ಅಭಿನಂದನೆ ಸಲ್ಲಿಸಲು ನನ್ನ ಸ್ನೇಹಿತ ಪ್ರಧಾನಿ ನೆತನ್ಯಾಹು ಅವರಿಗೆ ಕರೆ ಮಾಡಿದೆ. ಗಾಜಾದ ಜನರಿಗೆ ಒತ್ತೆಯಾಳುಗಳ ಬಿಡುಗಡೆ ಮತ್ತು ಮಾನವೀಯ ನೆರವಿನ ವರ್ಧಿತ ಒಪ್ಪಂದವನ್ನು ನಾವು ಸ್ವಾಗತಿಸುತ್ತೇವೆ. ಯಾವುದೇ ರೂಪದಲ್ಲಿ ಅಥವಾ ಅಭಿವ್ಯಕ್ತಿಯಲ್ಲಿ ಭಯೋತ್ಪಾದನೆಯನ್ನು ಜಗತ್ತಿನ ಎಲ್ಲಿಯೂ ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ.



ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಭಾರತದ ಪ್ರಧಾನಿಯೊಂದಿಗೆ ಮಾತನಾಡಿದ್ದಾರೆ. ಎಲ್ಲಾ ಒತ್ತೆಯಾಳುಗಳ ಬಿಡುಗಡೆಗೆ ಒಪ್ಪಂದ ಮಾಡಿಕೊಂಡಿದ್ದಕ್ಕಾಗಿ ನರೇಂದ್ರ ಮೋದಿ ಅವರು ಪ್ರಧಾನಿ ನೆತನ್ಯಾಹು ಅವರಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ" ಎಂದು ಇಸ್ರೇಲ್ ಪ್ರಧಾನಿ ಕಚೇರಿಯು X ನಲ್ಲಿ ಪೋಸ್ಟ್ ಮಾಡಿದೆ.

ಈ ಸುದ್ದಿಯನ್ನೂ ಓದಿ: Narendra Modi: ಗಾಜಾ-ಇಸ್ರೇಲ್‌ ಶಾಂತಿ ಒಪ್ಪಂದ ಸಕ್ಸಸ್‌; ಟ್ರಂಪ್‌ ಪ್ಲ್ಯಾನ್‌ಗೆ ಪ್ರಧಾನಿ ಮೋದಿ ಮೆಚ್ಚುಗೆ

ಕದನ ವಿರಾಮಕ್ಕೆ ಒಪ್ಪಿಗೆ

ಗಾಜಾದಲ್ಲಿ ಯುದ್ಧ ಕೊನೆಗೊಳಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರೂಪಿಸಿದ ಶಾಂತಿ ಸೂತ್ರಕ್ಕೆ ಇಸ್ರೇಲ್ ಕ್ಯಾಬಿನೆಟ್ ಒಪ್ಪಿಗೆ ಸೂಚಿಸಿದೆ. ಈ ಮೂಲಕ ಹಮಾಸ್ ಜೊತೆಗಿನ ಕದನ ವಿರಾಮಕ್ಕೆ ಇಸ್ರೇಲ್ ಅಧಿಕೃತ ಸಮ್ಮತಿ ನೀಡಿದೆ. ಇದು ಮಧ್ಯಪ್ರಾಚ್ಯವನ್ನು ಅಸ್ಥಿರಗೊಳಿಸಿದ ಎರಡು ವರ್ಷಗಳ ಭೀಕರ ಯುದ್ಧ ಕೊನೆಗೊಳಿಸುವತ್ತ ಇಟ್ಟ ಪ್ರಮುಖ ಹೆಜ್ಜೆಯಾಗಿದೆ. ಒತ್ತೆಯಾಳುಗಳನ್ನು ಬಿಡುಗಡೆ ಮಾಡುವ ಒಪ್ಪಂದವನ್ನು ಕ್ಯಾಬಿನೆಟ್ ಅನುಮೋದಿಸಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿಯು ಸಂಕ್ಷಿಪ್ತ ಹೇಳಿಕೆ ಬಿಡುಗಡೆ ಮಾಡಿದೆ.